Babar Azam: ವಿಶ್ವದಾಖಲೆ ಬರೆದ ಬಾಬರ್ ಅಜಮ್; ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ
By Prasanna Kumar P N Aug 08, 2023
Hindustan Times Kannada
ಶ್ರೀಲಂಕಾದಲ್ಲಿ ನಡೆಯುತ್ತಿರುವ ಲಂಕಾ ಪ್ರೀಮಿಯರ್ ಲೀಗ್ನ 10ನೇ ಪಂದ್ಯದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಭರ್ಜರಿ ಶತಕ ಸಿಡಿಸಿ ಟಿ20 ಕ್ರಿಕೆಟ್ನಲ್ಲಿ ವಿಶೇಷ ದಾಖಲೆ ಬರೆದಿದ್ದಾರೆ.
ಗಾಲೆ ಟೈಟಾನ್ಸ್ ಎದುರಿನ ಪಂದ್ಯದಲ್ಲಿ ಕೊಲಂಬೊ ಸ್ಟ್ರೈಕರ್ಸ್ ಪರ ಇನಿಂಗ್ಸ್ ಆರಂಭಿಸಿದ ಬಾಬರ್, ಕೇವಲ 57 ಎಸೆತಗಳಲ್ಲಿ ಶತಕ ಚಚ್ಚಿದರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ 10ನೇ ಸೆಂಚುರಿ ಬಾರಿಸಿದ 2ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಈ ದಾಖಲೆಯ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ದಿಗ್ಗಜ ಕ್ರಿಸ್ ಗೇಲ್ ಮೊದಲ ಸ್ಥಾನದಲ್ಲಿದ್ದಾರೆ. ಗೇಲ್ ಈವರೆಗೂ 455 ಟಿ20 ಇನಿಂಗ್ಸ್ಗಳಲ್ಲಿ 22 ಶತಕ ಸಿಡಿಸಿದ್ದಾರೆ.
254 ಟಿ20 ಇನಿಂಗ್ಸ್ಗಳಲ್ಲಿ 10 ಶತಕ ಸಿಡಿಸಿರುವ ಬಾಬರ್, ಈ ದಾಖಲೆಯ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಗೇಲ್ ಬಳಿಕ ಟಿ20 ಕ್ರಿಕೆಟ್ನಲ್ಲಿ 10 ಶತಕ ಬಾರಿಸಿದ 2ನೇ ಬ್ಯಾಟರ್ ಎನಿಸಿದ್ದಾರೆ.
ಮೂರನೇ ಸ್ಥಾನದಲ್ಲಿ ಭಾರತದ ವಿರಾಟ್ ಕೊಹ್ಲಿ ಇದ್ದು, 357 ಟಿ20 ಇನಿಂಗ್ಸ್ಗಳಲ್ಲಿ 8 ಶತಕ ಸಿಡಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಅಧಿಕ ಶತಕ ಸಿಡಿಸಿದ ದಾಖಲೆ ಹೊಂದಿದ್ದಾರೆ.
ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಈ ದಾಖಲೆಯ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. 355 ಟಿ20 ಇನಿಂಗ್ಸ್ಗಳಲ್ಲಿ ವಾರ್ನರ್ 8 ಶತಕ ಸಿಡಿಸುವಲ್ಲಿ ಯಶಸ್ಸು ಕಂಡಿದ್ದಾರೆ.
ಆಸ್ಟ್ರೇಲಿಯಾದ ಮಾಜಿ ನಾಯಕ ಆರೋನ್ ಫಿಂಚ್, 376 ಟಿ20 ಇನಿಂಗ್ಸ್ಗಳ ಪೈಕಿ 8 ಶತಕ ಬಾರಿಸಿದವರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಇದ್ದಾರೆ.