ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರು ಕುಡಿಯುವುದರಿಂದಾಗುವ 7 ಅದ್ಭುತ ಪ್ರಯೋಜನಗಳು
By Reshma
Nov 06, 2024
Hindustan Times
Kannada
ಅಡುಗೆಯ ಪರಿಮಳ ಹೆಚ್ಚಿಸುವ ಕೊತ್ತಂಬರಿ ಕಾಳು ಹಾಗೂ ಕೊತ್ತಂಬರಿ ಸೊಪ್ಪು ಎರಡೂ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ
ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರನ್ನು ಕುಡಿಯುವುದರಿಂದಾಗುವ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ಹಲವರಿಗೆ ತಿಳಿದಿಲ್ಲ
ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಇದು ಚಯಾಪಚಯವನ್ನು ಹೆಚ್ಚಿಸುತ್ತದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ
ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ಕೊತ್ತಂಬರಿ ನೀರು ಕುಡಿಯುವುದರಿಂದ ತೂಕ ಕಡಿಮೆಯಾಗುತ್ತದೆ. ಇದು ದೇಹವನ್ನು ನಿರ್ವಿಷಗೊಳಿಸುತ್ತದೆ
ನೀವು ಆಸಿಡಿಟಿಯಿಂದ ಬಳಲುತ್ತಿದ್ದರೆ ತಪ್ಪದೇ ಕೊತ್ತಂಬರಿ ನೀರು ಕುಡಿಯಬೇಕು. ಇದು ತಂಪಾಗಿಸುವ ಗುಣವನ್ನು ಹೊಂದಿದೆ. ಆ್ಯಸಿಡಿಟಿ ನಿವಾರಣೆಗೆ ಸಹಾಯ ಮಾಡುತ್ತದೆ
ಕೊತ್ತಂಬರಿ ನೀರು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಇದು ಮಧುಮೇಹಿಗಳಿಗೂ ಉತ್ತಮ
ಥೈರಾಯಿಡ್ ಸಮಸ್ಯೆಯಿಂದ ಬಳಲುತ್ತಿರುವವರು ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ನೀರು ಕುಡಿಯವುದರಿಂದ ಪರಿಹಾರ ಸಿಗುತ್ತದೆ
ಕೊತ್ತಂಬರಿ ನೀರು ಕುಡಿಯುವುದರಿಂದ ದೃಷ್ಟಿ ಸುಧಾರಿಸುತ್ತದೆ
ಕೊತ್ತಂಬರಿ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಚರ್ಮ ಸುಧಾರಿಸುತ್ತದೆ. ಅಲ್ಲದೇ ಮೊಡವೆ, ತುರಿಕೆಯಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ.
ಈ ಸುದ್ದಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ತಜ್ಞರನ್ನು ಸಂಪರ್ಕಿಸಿ.
ನಿತ್ಯ ಖುಷಿಯಾಗಿರಬೇಕೆಂದರೆ ಇಷ್ಟು ಮಾಡಿ ಸಾಕು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ