logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಶಿಕ್ಷಣ ಭವಿಷ್ಯ 2025: ತುಲಾ ರಾಶಿಯವರಿಗೆ ವರ್ಷದ ಮೊದಲಾರ್ಧ ಸಮಸ್ಯೆ, ಶಿಕ್ಷಕರಿಂದ ಮಾರ್ಗದರ್ಶನ ಪಡೆದರೆ ಧನಸ್ಸು ರಾಶಿಯವರಿಗೆ ಯಶಸ್ಸು

ಶಿಕ್ಷಣ ಭವಿಷ್ಯ 2025: ತುಲಾ ರಾಶಿಯವರಿಗೆ ವರ್ಷದ ಮೊದಲಾರ್ಧ ಸಮಸ್ಯೆ, ಶಿಕ್ಷಕರಿಂದ ಮಾರ್ಗದರ್ಶನ ಪಡೆದರೆ ಧನಸ್ಸು ರಾಶಿಯವರಿಗೆ ಯಶಸ್ಸು

Rakshitha Sowmya HT Kannada

Dec 02, 2024 02:10 PM IST

google News

ತುಲಾ, ವೃಶ್ಚಿಕ, ಧನಸ್ಸು ರಾಶಿಯ ಶಿಕ್ಷಣ ಭವಿಷ್ಯ 2025

  • Education Horoscope 2025: ಜ್ಯೋತಿಷ್ಯದ ಪ್ರಕಾರ ಗ್ರಹಗಳು ಶಿಕ್ಷಣದ ವಿಚಾರದಲ್ಲೂ ಪ್ರಭಾವ ಬೀರುತ್ತದೆ. ಹೊಸ ವರ್ಷದಲ್ಲಿ ದ್ವಾದಶ ರಾಶಿಗಳ ವಿದ್ಯಾರ್ಥಿಗಳ ಮೇಲೆ ಗ್ರಹಗಳು ಹೇಗೆ ಪ್ರಭಾವ ಬೀರುತ್ತವೆ ನೋಡೋಣ. ತುಲಾ, ವೃಶ್ಚಿಕ, ಧನಸ್ಸು ರಾಶಿ ವಿದ್ಯಾರ್ಥಿಗಳ ಶಿಕ್ಷಣ ಭವಿಷ್ಯ 2025.

ತುಲಾ, ವೃಶ್ಚಿಕ, ಧನಸ್ಸು ರಾಶಿಯ ಶಿಕ್ಷಣ ಭವಿಷ್ಯ 2025
ತುಲಾ, ವೃಶ್ಚಿಕ, ಧನಸ್ಸು ರಾಶಿಯ ಶಿಕ್ಷಣ ಭವಿಷ್ಯ 2025 (PC: Canva)

ಶಿಕ್ಷಣ ಭವಿಷ್ಯ 2025: ಮಕ್ಕಳಿಗೆ 3 ವರ್ಷ ತುಂಬುತ್ತಿದ್ದಂತೆ ವಿದ್ಯಾಭ್ಯಾಸಕ್ಕಾಗಿ ಶಾಲೆಗೆ ಸೇರಿಸುತ್ತೇವೆ. ವಿದ್ಯೆ ಪ್ರತಿಯೊಬ್ಬರಿಗೂ ಬಹಳ ಅವಶ್ಯಕ. ಮಕ್ಕಳಿಗೆ ವಿದ್ಯೆ ಒಲಿಯಬೇಕು. ಶಿಕ್ಷಣದಲ್ಲಿ ಅವರು ಸಾಧನೆ ಮಾಡಿ ಒಳ್ಳೆ ಕೆಲಸ ಸಂಪಾದಿಸಬೇಕು ಎನ್ನುವುದು ಪ್ರತಿಯೊಬ್ಬ ಪೋಷಕರ ಕನಸು. ಆದರೆ ಕೆಲವೊಮ್ಮೆ ಎಷ್ಟೇ ಪ್ರಯತ್ನಿಸಿದರೂ ಕೆಲವರಿಗೆ ವಿದ್ಯೆ ಹತ್ತುವುದಿಲ್ಲ. ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕೂಡಾ ಗ್ರಹಗತಿಗಳು ಪ್ರಮುಖ ಪಾತ್ರ ವಹಿಸುತ್ತವೆ.

ತಾಜಾ ಫೋಟೊಗಳು

ಗಜಲಕ್ಷ್ಮಿ ರಾಜಯೋಗ; 2025 ರಲ್ಲಿ ಈ ರಾಶಿಯವರಿಗೆ ಸಾಲದ ಹೊರೆ ಕಡಿಮೆಯಾಗುತ್ತೆ, ಹಣದ ಕೊರತೆಯೇ ಇರಲ್ಲ

Dec 02, 2024 12:37 PM

Jupiter Transit: ಮಿಥುನ ರಾಶಿಗೆ ಗುರು ಪ್ರವೇಶದ ಅದೃಷ್ಟ: ಈ ರಾಶಿಯವರು ಆರ್ಥಿಕ ಸವಾಲುಗಳನ್ನು ಗೆದ್ದು ಹಣಕಾಸಿನ ಲಾಭ ಪಡೆಯುತ್ತಾರೆ

Dec 01, 2024 05:50 PM

Love Marriage: ಲವ್ ಮ್ಯಾರೇಜ್ ಮಾಡಿಕೊಳ್ಳುವ ಪ್ಲಾನ್ ಇದಿಯಾ? ಈ ಗ್ರಹಗಳ ಆಶೀರ್ವಾದ ಇದ್ದರೆ ಜೀವನದಲ್ಲಿ ಖುಷಿಯಾಗಿ ಇರುತ್ತೀರಿ

Dec 01, 2024 05:05 PM

ನಾಳಿನ ದಿನ ಭವಿಷ್ಯ: ವೃತ್ತಿ ಜೀವನದಲ್ಲಿ ಸವಾಲುಗಳು ಹೆಚ್ಚಾಗುತ್ತವೆ, ಮನೆಯಲ್ಲಿ ಸಂತೋಷ, ಶಾಂತಿ ಕಾಪಾಡಿಕೊಳ್ಳಲು ವಿವಾದಗಳನ್ನು ತಪ್ಪಿಸಿ

Dec 01, 2024 04:26 PM

Venus Transit: ಡಿಸೆಂಬರ್ 2 ರಿಂದ ಈ 3 ರಾಶಿಯವರ ಶುಕ್ರದೆಸೆ ಶುರು ನೋಡಿ, ಉದ್ಯೋಗದಲ್ಲಿ ಉನ್ನತಿ, ಆದಾಯ ವೃದ್ಧಿ, ಒಟ್ಟಿನಲ್ಲಿ ಅದೃಷ್ಟವಂತರು

Nov 30, 2024 06:55 PM

ಧನು ರಾಶಿಯಲ್ಲಿ ಸೂರ್ಯ ಸಂಚಾರ; ಈ 4 ರಾಶಿಚಕ್ರದವರು ಭಾರಿ ಅದೃಷ್ಟವಂತರು, ಶೀಘ್ರದಲ್ಲೇ ಕೈ ಸೇರಲಿದೆ ಧನ ಸಂಪತ್ತು, ಸುಖ ಸಂತೋಷಕ್ಕೂ ಇಲ್ಲ ಕೊರತೆ

Nov 30, 2024 05:54 PM

ಮತ್ತೊಂದು ಹೊಸ ವರ್ಷ ಬರುತ್ತಿದೆ. ಶಿಕ್ಷಣದ ವಿಷಯದಲ್ಲಿ 2025 ವರ್ಷ ನಿಮಗೆ ಹೇಗಿರುತ್ತದೆ? ನಿಮ್ಮ ಉನ್ನತ ಶಿಕ್ಷಣದ ಕನಸು ಈ ವರ್ಷ ಯಶಸ್ವಿಯಾಗುವುದೇ? ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಕನಸು ಈಡೇರುವುದೇ? ನೀವು ಅದರಲ್ಲಿ ಯಶಸ್ವಿಯಾಗುತ್ತೀರಾ ಅಥವಾ ಇಲ್ಲವೇ? ದ್ವಾದಶ ರಾಶಿಗಳ ಶಿಕ್ಷಣ ಭವಿಷ್ಯ ಇಲ್ಲಿದೆ.

ತುಲಾ, ವೃಶ್ಚಿಕ, ಧನಸ್ಸು ರಾಶಿಯ ಶಿಕ್ಷಣ ಭವಿಷ್ಯ 2025

 

ತುಲಾ ರಾಶಿ

ಈ ರಾಶಿಗೆ ಸೇರಿದ ವಿದ್ಯಾರ್ಥಿಗಳು 2025 ರಲ್ಲಿ ಹೆಚ್ಚು ಶ್ರಮಿಸಿದರೆ, ಈ ಅವಧಿಯಲ್ಲಿ ಅವರು ಸೂಕ್ತ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ವರ್ಷದ ಮೊದಲಾರ್ಧ ವಿದ್ಯಾಭ್ಯಾಸ ಅಷ್ಟು ಉತ್ತಮವಾಗಿಲ್ಲದಿರಬಹುದು. ಆದರೆ ವರ್ಷದ ದ್ವಿತೀಯಾರ್ಧದಲ್ಲಿ, ವಿಶೇಷವಾಗಿ ಮೇ ಮಧ್ಯದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ಪಡೆಯಬಹುದು. ವಿದೇಶದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಈ ವರ್ಷ ಅನುಕೂಲಕರ ಫಲಿತಾಂಶಗಳನ್ನು ಪಡೆಯುತ್ತಾರೆ. ಧರ್ಮ ಆಧ್ಯಾತ್ಮಿಕತೆಗೆ ಸಂಬಂಧಿಸಿದ ಶಿಕ್ಷಣ ಪಡೆಯುತ್ತಿರುವವರು ಮೇ 2025 ರ ನಂತರ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ಮೇ 2025 ರ ನಂತರ ಐದನೇ ಮನೆಯಲ್ಲಿ ರಾಹು ಸಂಕ್ರಮಣವು ಪ್ರಾಥಮಿಕ ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆಯನ್ನು ಉಂಟುಮಾಡಬಹುದು. ಇದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಮತ್ತೆ ಗಮನ ಕಳೆದುಕೊಳ್ಳುತ್ತಾರೆ. ಓದಿನ ಕಡೆ ಅಸಡ್ಡೆ ತೋರದೆ, ಅನಾವಶ್ಯಕವಾಗಿ ಬೇರೆಡೆ ಗಮನ ಹರಿಸದೆ ವಿದ್ಯಾಭ್ಯಾಸದ ಕಡೆ ಗಮನ ಹರಿಸಿದರೆ ಯಶಸ್ಸು ಸಾಧ್ಯ.

ವೃಶ್ಚಿಕ ರಾಶಿ

ವೃಶ್ಚಿಕ ರಾಶಿಯವರಿಗೆ ಶನಿ ಪ್ರಭಾವದಿಂದ ಮಾರ್ಚ್ 2025 ರವರೆಗೆ ಆರೋಗ್ಯ ಸಮಸ್ಯೆ ಕಾರಣ ವಿದ್ಯಾಭ್ಯಾಸದ ಕಡೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಇದು ಅವರ ಅಧ್ಯಯನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಅದರ ಹೊರತಾಗಿ ವೃಶ್ಚಿಕ ರಾಶಿಯವರು 2025 ರಲ್ಲಿ ಅನುಕೂಲಕರ ಫಲಿತಾಂಶಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ತಮ್ಮ ಅಧ್ಯಯನಕ್ಕೆ ಹೆಚ್ಚಿನ ಸಮಯವನ್ನು ನೀಡಬೇಕು. ಇದರಿಂದ ಅವರು ಬಯಸಿದ ಫಲಿತಾಂಶಗಳನ್ನು ಸಾಧಿಸಬಹುದು. ಸಂಶೋಧನಾ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಥಿಗಳು ಮೇ ಮಧ್ಯದ ನಂತರ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ.

ಧನು ರಾಶಿ

ವರ್ಷದ ಆರಂಭದಿಂದ ಮೇ ಮಧ್ಯದವರೆಗೆ, ಗುರುವು ಧನು ರಾಶಿಯ 5 ಮನೆಯಲ್ಲಿ ಸಾಗುತ್ತಾನೆ ಮತ್ತು ಈ ಕಾರಣದಿಂದಾಗಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುವ ಹೆಚ್ಚಿನ ಸಾಧ್ಯತೆಗಳಿವೆ. ಅಲ್ಲದೆ ಮೇ ಮಧ್ಯದ ನಂತರ, ಗುರುವು ಎಲ್ಲಾ ಧನು ರಾಶಿ ವಿದ್ಯಾರ್ಥಿಗಳಿಗೆ ಅನುಕೂಲಕರ ಫಲಿತಾಂಶಗಳನ್ನು ನೀಡುತ್ತದೆ. ಆದರೆ ಶನಿ ಮತ್ತು ರಾಹು ಸಂಕ್ರಮಣವು ಅಧ್ಯಯನದಲ್ಲಿ ಏಕಾಗ್ರತೆ ಕಾಪಾಡಿಕೊಳ್ಳುವಲ್ಲಿ ಕೆಲವೊಂದು ಸಮಸ್ಯೆಗಳನ್ನು ಉಂಟುಮಾಡಬಹುದು. ಇದರಿಂದ ಅಧ್ಯಯನದಲ್ಲಿ ಆಸಕ್ತಿ ಕಡಿಮೆ ಆಗಬಹುದು. ವಿದ್ಯಾಭ್ಯಾಸದಲ್ಲಿ ಯಶಸ್ಸು ಪಡೆಯಬೇಕೆಂದರೆ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಬೇಕು. ಅಗತ್ಯವಿರುವ ಯಾರಿಗಾದರೂ ಸಹಾಯ ಮಾಡಬೇಕು. ಇದರಿಂದ ಶಿಕ್ಷಣದಲ್ಲಿ ಯಶಸ್ಸು ಪಡೆಯಬಹುದು.

ಗಮನಿಸಿ: ಇದು ಪ್ರಚಲಿತದಲ್ಲಿರುವ ಧಾರ್ಮಿಕ ನಂಬಿಕೆಗಳನ್ನು ಆಧರಿಸಿದ ಬರಹ. ಓದುಗರಿಗೆ ಮಾಹಿತಿ ನೀಡುವ ಉದ್ದೇಶದಿಂದಷ್ಟೇ ಪ್ರಕಟಿಸಲಾಗಿದೆ.

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ