logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Capricorn Astrology In 2024: ದಾಂಪತ್ಯ ಸಮಸ್ಯೆ ದೂರ, ನೀರಿರುವ ಸ್ಥಳಗಳಲ್ಲಿ ತೊಂದರೆ, ಉದ್ಯೋಗದಲ್ಲಿ ಬದಲಾವಣೆ; ಮಕರ ರಾಶಿಯ ವರ್ಷ ಭವಿಷ್ಯ

Capricorn Astrology in 2024: ದಾಂಪತ್ಯ ಸಮಸ್ಯೆ ದೂರ, ನೀರಿರುವ ಸ್ಥಳಗಳಲ್ಲಿ ತೊಂದರೆ, ಉದ್ಯೋಗದಲ್ಲಿ ಬದಲಾವಣೆ; ಮಕರ ರಾಶಿಯ ವರ್ಷ ಭವಿಷ್ಯ

HT Kannada Desk HT Kannada

Dec 18, 2023 07:00 AM IST

google News

2024ರ ಮಕರ ರಾಶಿಯ ಭವಿಷ್ಯ

    • Capricorn Horoscope in 2024: ಹೊಸ ನಿರೀಕ್ಷೆಗಳೊಂದಿಗೆ ಹೊಸ ವರ್ಷ ಆಗಮನವಾಗುತ್ತಿದೆ. ಕಷ್ಟ, ನೋವುಗಳು ದೂರವಾಗಿ ಹೊಸ ವರ್ಷದಲ್ಲಿ ಹೊಸ ಜೀವನ, ಸುಖ, ಸಂತೋಷ ನೆಲೆಸಲಿ ಎಂದು ಎಲ್ಲರೂ ಬಯಸುತ್ತಿದ್ದಾರೆ. ಹೊಸ ವರ್ಷ ದ್ವಾದಶ ರಾಶಿಗಳ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ? ಮಕರ ರಾಶಿಯ ವರ್ಷ ಭವಿಷ್ಯ ಹೀಗಿದೆ.
2024ರ ಮಕರ ರಾಶಿಯ ಭವಿಷ್ಯ
2024ರ ಮಕರ ರಾಶಿಯ ಭವಿಷ್ಯ

2024ರ ಮಕರ ರಾಶಿ ವರ್ಷ ಭವಿಷ್ಯ: ಬದಲಾವಣೆ ಜಗದ ನಿಯಮ ಎಂಬ ಮಾತಿದೆ. ದಿನ ಉರುಳುತ್ತಿದ್ದಂತೆ ಎಲ್ಲರ ಜೀವನದಲ್ಲಿ ಸಾಕಷ್ಟು ಬದಲಾವಣೆ ಉಂಟಾಗಲಿದೆ. ಉದ್ಯೋಗ, ವ್ಯಾಪಾರ, ವಿದ್ಯಾಭ್ಯಾಸ, ವೈಯಕ್ತಿಕ ಜೀವನ ಉತ್ತವಾಗಿರಲಿ ಎಂದು ಎಲ್ಲರೂ ಬಯಸುತ್ತಾರೆ. ಈ ಆಸೆ ಆಕ್ಷಾಂಕ್ಷೆಗಳ ನಡುವೆ ಹೊಸ ವರ್ಷ ಆಗಮನವಾಗುತ್ತಿದೆ. 2024ರಲ್ಲಿ ಗ್ರಹಗತಿಗಳ ಸ್ತಾನ ಪಲ್ಲಟದೊಂದಿಗೆ ದ್ವಾದಶ ರಾಶಿಗಳ ಜೀವನದಲ್ಲಿ ಮಹತ್ತರ ಬದಲಾವಣೆಗಳಾಗುತ್ತವೆ. 2024 ವರ್ಷ ಭವಿಷ್ಯವನ್ನು ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರಸ್ತುತಪಡಿಸುತ್ತಿದ್ದಾರೆ. ಮಕರ ರಾಶಿಯವರ ವರ್ಷ ಭವಿಷ್ಯ ಹೀಗಿದೆ.

ತಾಜಾ ಫೋಟೊಗಳು

ನಾಳಿನ ದಿನ ಭವಿಷ್ಯ: ಅವಿವಾಹಿತರಿಗೆ ಮದುವೆಯಾಗುವ ಯೋಗವಿದೆ, ಆದಾಯದ ಹೊಸ ಮೂಲ ಹುಡುಕುವುದು ಅನಿವಾರ್ಯವಾಗಿರುತ್ತೆ

Nov 29, 2024 04:10 PM

ನಾಳಿನ ದಿನ ಭವಿಷ್ಯ: ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಉತ್ತಮ ಅವಕಾಶಗಳಿವೆ, ಹಣದ ಪರಿಸ್ಥಿತಿ ಬಲವಾಗಿರುತ್ತೆ

Nov 28, 2024 04:11 PM

Pradosh Vrat: ಪ್ರದೋಷ ವ್ರತದ ದಿನ ಬಟ್ಟೆ ಸೇರಿ ಯಾವ ವಸ್ತುಗಳನ್ನು ದಾನ ಮಾಡಿದರೆ ಶುಭಫಲಗಳು ಸಿಗುತ್ತವೆ

Nov 27, 2024 04:51 PM

ನಾಳಿನ ದಿನ ಭವಿಷ್ಯ: ನಿಮ್ಮ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತೆ, ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ

Nov 27, 2024 03:42 PM

ಲಕ್ಷ್ಮಿ ನಾರಾಯಣ ಯೋಗದಿಂದ ಈ ರಾಶಿಯವರಿಗೆ 2025 ರಲ್ಲಿ ಭಾರಿ ಅದೃಷ್ಟ; ಉತ್ತಮ ಉದ್ಯೋಗಾವಕಾಶ, ಹಣದ ಹರಿವು ಹೆಚ್ಚಾಗುತ್ತೆ

Nov 27, 2024 02:08 PM

2025ರಲ್ಲಿ ಈ 5 ರಾಶಿಯವರು ಆರ್ಥಿಕ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಹೆಚ್ಚು, ಈ ರಾಶಿಗಳಲ್ಲಿ ನೀವು ಇದ್ದೀರಾ ನೋಡಿ

Nov 27, 2024 01:20 PM

ಕಷ್ಟಪಟ್ಟು ದುಡಿಯುವ ಕೈಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಆರ್ಥಿಕ ಪರಿಸ್ಥಿತಿಯು ನಿಧಾನ ಗತಿಯಲ್ಲಿ ಅಭಿವೃದ್ಧಿ ಹೊಂದಲಿದೆ. ಯಾವುದೇ ವ್ಯತ್ಯಾಸಗಳು ಕಂಡು ಬಂದರು ಅದು ಕೇವಲ ನಿಮ್ಮ ನೆಪ ಮಾತ್ರ. ಸರಿಯಾದ ತೀರ್ಮಾನಗಳನ್ನು ಕೈಗೊಳ್ಳಿರಿ. ಕಷ್ಟಪಟ್ಟು ದುಡಿಯಲು ಹಿಂಜರಿಯುವುದಿಲ್ಲ. ಆದರೆ ಯಾವುದೇ ವಿಚಾರದಲ್ಲಿಯೂ ಬೇಗನೆ ತೀರ್ಮಾನಗಳನ್ನು ತೆಗೆದುಕೊಳ್ಳುವುದಿಲ್ಲ. ಮಾತನಾಡಲು ಆರಂಭಿಸಿದರೆ ಬೇರೆಯವರಿಗೆ ಬೇಸರವಾಗುವಷ್ಟು ಮಾತನಾಡುವಿರಿ. ಯಾವುದೇ ಒತ್ತಡದ ಸನ್ನಿವೇಶದಲ್ಲಿಯೂ ಸೂಕ್ತವಾದ ತೀರ್ಮಾನಗಳನ್ನು ತೆಗೆದುಕೊಳ್ಳಬಲ್ಲಿರಿ.

ದಾಂಪತ್ಯದಲ್ಲಿ ಇದ್ದ ತೊಂದರೆ ಮರೆಯಾಗುತ್ತದೆ. ಸೋಲು ಗೆಲುವನ್ನು ಸಮಾನವಾಗಿ ಕಂಡರೂ ಮನದಲ್ಲಿಯೇ ಯೋಚನೆಗೆ ಒಳಗಾಗುವಿರಿ. ಆದಾಯವಿಲ್ಲದ ಯಾವುದೇ ಕೆಲಸವನ್ನು ಮಾಡಲು ಒಪ್ಪುವುದಿಲ್ಲ . ಸೋದರನ ಜೊತೆಯಲ್ಲಿ ಅನಾವಶ್ಯಕವಾಗಿ ವಾದ ವಿವಾದ ಉಂಟಾಗುತ್ತದೆ. ಕುಟುಂಬದ ಪ್ರತಿಯೊಂದು ವಿಚಾರದಲ್ಲಿಯೂ ನಿಮ್ಮ ತೀರ್ಮಾನವೇ ಅಂತಿಮವಾಗುತ್ತದೆ. ವರ್ಷದ ಮೊದಲ ಮೂರು ತಿಂಗಳು ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ನಡೆಯಲಿವೆ. ಆದರೆ ವರ್ಷದ ದ್ವಿತೀಯ ಭಾಗದಲ್ಲಿ ಕೆಲಸ ಕಾರ್ಯಗಳು ಸುಲಭಗತಿಯಲ್ಲಿ ನಡೆಯಲಿದೆ. ಹಣದ ಬಗ್ಗೆ ಆಸೆ ಇರುವುದಿಲ್ಲ. ಆದರೆ ಹಣ ಗಳಿಸುವ ಅವಕಾಶವನ್ನು ಬೇರೆಯವರ ಹಣಕಾಸಿನ ವಿವಾದದಿಂದ ದೂರ ಉಳಿಯಲು ಪ್ರಯತ್ನಿಸುವಿರಿ.

ಕುಟುಂಬದ ಪ್ರಮುಖ ಜವಾಬ್ದಾರಿಯನ್ನು ಸುಲಭವಾಗಿ ನಿರ್ವಹಿಸುವಿರಿ. ಸೋದರ ಅಥವಾ ಸೋದರಿಯು ಮನೆ ಕೊಳ್ಳುವ ಅಥವಾ ಕಟ್ಟುವ ಕೆಲಸದಲ್ಲಿ ಹಣಕಾಸಿನ ನೆರವನ್ನು ನೀಡುವಿರಿ. ಪುರಾತನ ಕಾಲದ ಧಾರ್ಮಿಕ ಕೇಂದ್ರ ಒಂದರ ಪುನರುಜ್ಜೀವನ ಕಾರ್ಯದಲ್ಲಿ ಭಾಗಿಯಾಗುವಿರಿ. ಸೋದರಿಯ ಕೌಟುಂಬಿಕ ಜೀವನದಲ್ಲಿ ಇದ್ದ ವಿವಾದವನ್ನು ಪರಿಹರಿಸುವಿರಿ. ಹೊಸ ಬಗೆಯ ವಿಚಾರಗಳಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ. ತಾಯಿಯವರ ಆರೋಗ್ಯದಲ್ಲಿ ಚೇತರಿಕೆ ಕಾಣಬಹುದು. ಅವಿವಾಹಿತರಿಗೆ ವಿವಾಹವಾಗುವ ಕಾಲ ಒದಗಿ ಬರಲಿದೆ. ಸಂತಾನ ಲಾಭವಿದೆ. ವಿದ್ಯಾರ್ಥಿಗಳು ಕಷ್ಟಪಡದೆ ತಮ್ಮ ಮನದ ಗುರಿಯನ್ನು ತಲುಪುತ್ತಾರೆ. ತಾಂತ್ರಿಕ ಪರಿಣತಿ ಪಡೆದವರಿಗೆ ವಿದೇಶದಲ್ಲಿ ಉದ್ಯೋಗದ ಅವಕಾಶ ದೊರೆಯುತ್ತದೆ.

ಅನವಶ್ಯಕವಾಗಿ ಬೇರೆಯವರ ಹಣಕಾಸಿನ ವ್ಯವಹಾರದಲ್ಲಿ ಪ್ರವೇಶಿಸುವುದಿಲ್ಲ. ಕೈ ಹಿಡಿದ ಕೆಲಸ ಕಾರ್ಯಗಳೆಲ್ಲದರಲ್ಲೂ ಯಶಸ್ಸನ್ನು ಗಳಿಸಬೇಕೆಂಬ ಹಠವಿರುತ್ತದೆ. ಆರೋಗ್ಯದ ಬಗ್ಗೆ ಗಮನ ನೀಡಲು ಪ್ರಯತ್ನಿಸಿರಿ. ದೈಹಿಕ ವ್ಯಾಯಾಮದಿಂದ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ನಿಮ್ಮ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುವ ಮಂದಿಯ ಬಗ್ಗೆ ಎಚ್ಚರಿಕೆ ಇರಲಿ. ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ದುಡುಕುತನದ ಮಾತುಕತೆ ದೊಡ್ಡ ವಿವಾದವನ್ನು ಸೃಷ್ಟಿಸಬಹುದು.

ಸಂಗಾತಿಯ ಪ್ರೀತಿ ಮತ್ತು ವಿಶ್ವಾಸವನ್ನು ಗಳಿಸುವಲ್ಲಿ ಯಶಸ್ವಿಯಾಗುವಿರಿ. ಸಂಗಾತಿಗೆ ಅತಿಯಾದ ಕೋಪದ ಗುಣ ಇರುತ್ತದೆ. ಆದರೆ ನಿಮ್ಮಲ್ಲಿರುವ ಮೋಡಿ ಮಾಡಬಲ್ಲಂತಹ ಮಾತುಕತೆ ಎಲ್ಲರ ಮನಸ್ಸನ್ನು ಸುಲಭವಾಗಿ ಗೆಲ್ಲುತ್ತದೆ. ನೀರಿರುವ ಸ್ಥಳಗಳಲ್ಲಿ ತೊಂದರೆ ಉಂಟಾಗಬಹುದು. ಕಲುಷಿತ ನೀರಿನ ಸೇವನೆಯಿಂದ ಸೋಂಕು ಉಂಟಾಗಬಹುದು. ಆದ್ದರಿಂದ ಮನೆಯಾಚೆಗೆ ಸೇವಿಸುವ ತಿಂಡಿ ಪದಾರ್ಥಗಳ ಬಗ್ಗೆ ಎಚ್ಚರಿಕೆ ವಹಿಸಿ. ಇರುವ ವಾಹನವನ್ನು ವಿಲೇವಾರಿ ಮಾಡಿ ಹೊಸ ವಾಹನ ಕೊಳ್ಳುವ ಆಸೆ ಈಡೇರಲಿದೆ. ದಂಪತಿಗಳ ನಡುವೆ ಪರಸ್ಪರ ಪ್ರೀತಿ ವಿಶ್ವಾಸ ಹೆಚ್ಚಲಿದೆ.

ಮೇ ತಿಂಗಳ ನಂತರ ಉದ್ಯೋಗದಲ್ಲಿ ಬದಲಾವಣೆಗಳು ಉಂಟಾಗಲಿವೆ. ಉದ್ಯೋಗವನ್ನು ಬದಲಿಸಬೇಕೆಂಬ ಆಸೆ ಇದ್ದಲ್ಲಿ ಅದು ಸುಲಭವಾಗಿ ಈಡೇರುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಕೇವಲ ಶಿಕ್ಷಣವಲ್ಲದೆ ಕ್ರೀಡಾ ಸ್ಪರ್ಧೆಗಳಲ್ಲಿಯೂ ಉತ್ತಮ ಸಾಧನೆ ಮಾಡಲಿದ್ದಾರೆ. ಮಹಿಳೆಯರಿಗೆ ಆಗಸ್ಟ್ ನಂತರ ವಿಶೇಷವಾದಂತಹ ಶುಭಫಲಗಳು ದೊರೆಯಲಿವೆ. ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ಅವಕಾಶ ದೊರೆಯುತ್ತದೆ. ಒಟ್ಟಾರೆ ಈ ವರ್ಷದಲ್ಲಿ ಶ್ರದ್ಧೆ ಮತ್ತು ಹೆಚ್ಚಿನ ಗಮನದಿಂದ ಮಾಡುವ ಎಲ್ಲಾ ಕೆಲಸ ಕಾರ್ಯಗಳು ಯಶಸ್ಸನ್ನು ಗಳಿಸುತ್ತದೆ.ಆದರೆ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ.

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ