Horoscope Today: ಆದಾಯ ಮೀರಿದ ಖರ್ಚು, ವಾಹನ ಓಡಿಸುವಾಗ ಎಚ್ಚರಿಕೆ ಅಗತ್ಯ: ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ
Apr 23, 2024 05:05 AM IST
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿ ಭವಿಷ್ಯ
23rd ಏಪ್ರಿಲ್ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (23rd April 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (23rd April 2024 Daily Horoscope).
ತಾಜಾ ಫೋಟೊಗಳು
ಇಂದಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಶುಕ್ಲಪಕ್ಷ-ಮಂಗಳವಾರ
ತಿಥಿ : ಹುಣ್ಣಿಮೆ ರಾತ್ರಿ 04.01 ರವರೆಗು ಇರುತ್ತದೆ ನಂತರ ಪಾಡ್ಯ ಆರಂಭವಾಗುತ್ತದೆ.
ನಕ್ಷತ್ರ : ಚಿತ್ತಾ ನಕ್ಷತ್ರವು ರಾತ್ರಿ 09.35 ರವರೆಗೂ ಇರುತ್ತದೆ ನಂತರ ಸ್ವಾತಿ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.06
ಸೂರ್ಯಾಸ್ತ: ಸಂಜೆ 06.32
ರಾಹುಕಾಲ : ಮಧ್ಯಾಹ್ನ 03.29 ರಿಂದ ಸಂಜೆ05.03
ರಾಶಿಫಲ
ಸಿಂಹ
ಕುಟುಂಬದಲ್ಲಿ ಒಮ್ಮತ ಅಭಿಪ್ರಾಯಗಳು ವ್ಯಕ್ತವಾಗುತ್ತದೆ. ಅಪೂರ್ಣಗೊಂಡ ಕೆಲಸಗಳನ್ನು ಪೂರ್ಣಗೊಳಿಸಲು ನಿರ್ಧರಿಸುವಿರಿ. ಉದ್ಯೋಗದಲ್ಲಿ ಕಾರ್ಯದಕ್ಷತೆಯ ಕಾರಣದಿಂದ ಉನ್ನತ ಸ್ಥಾನ ಮಾನವನ್ನು ಗಳಿಸುವಿರಿ. ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ವಿದ್ಯಾರ್ಥಿಗಳ ಮುಗ್ಧ ವರ್ತನೆ ವಿಧ್ಯಾಭ್ಯಾಸದಲ್ಲಿ ಎದುರಾಗುವ ಸಮಸ್ಯೆಯನ್ನು ದೂರಮಾಡುತ್ತದೆ. ಒಳ್ಳೆಯ ಪರಿಸರವನ್ನು ಅರಸಿ ಸಂಗಾತಿಯೊಂದಿಗೆ ಪ್ರವಾಸಕ್ಕೆ ತೆರಳುವಿರಿ. ಇತರರ ಸಮಸ್ಯೆಗಳಿಗೆ ತಕ್ಕ ಪರಿಹಾರವನ್ನು ನೀಡುವ ಸಾಮರ್ಥ್ಯ ತೋರುವಿರಿ. ಮಿತಿ ಮೀರಿದ ಖರ್ಚು ಬೇಸರಕ್ಕೆ ಕಾರಣವಾಗಲಿದೆ. ವಯೋವೃದ್ಧರಿಗೆ ಸಹಾಯ ಮಾಡಲಿದ್ದೀರಿ.
ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ 11
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ : ಕೆಂಪು ಬಣ್ಣ
ಕನ್ಯಾ
ಆರೋಗ್ಯ ಕಾಪಾಡಿಕೊಳ್ಳಲು ವ್ಯಾಯಾಮದ ಆಶ್ರಯ ಪಡೆಯುವಿರಿ. ಕುಟುಂಬದಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ. ವ್ಯಾಪಾರ ವ್ಯವಹಾರದಲ್ಲಿ ಆದಾಯ ಮೀರಿದ ಖರ್ಚು ವೆಚ್ಚಗಳು ಇರುತ್ತವೆ. ವಿದ್ಯಾರ್ಥಿಗಳು ಮನರಂಜನೆ ಮತ್ತು ಆಟದಿಂದ ಮನಸ್ಸನ್ನು ಹಗುರ ಮಾಡಿಕೊಳ್ಳಲಿದ್ದಾರೆ. ಉದ್ಯಮದಲ್ಲಿ ಉಂಟಾಗುವ ಬದಲಾವಣೆಯಿಂದಾಗಿ ಆರ್ಥಿಕ ಲಾಭ ಹೆಚ್ಚುತ್ತದೆ. ಕಷ್ಟದ ಕಾಲದಲ್ಲಿ ಸಂಗಾತಿಯ ಬೆಂಬಲ ದೊರೆಯುತ್ತದೆ. ಪುರಾತನಕಾಲದ ವಸ್ತುಗಳ ಮಾರಾಟದಿಂದ ಆದಾಯ ಗಳಿಸುವಿರಿ. ಮನೆಯಲ್ಲಿರುವ ವಯೋವೃದ್ಧರ ಸಹಾಯ ದೊರೆಯುತ್ತದೆ.
ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಕಿತ್ತಳೆ
ತುಲಾ
ಆತ್ಮೀಯರ ಆಗಮನ ಕುಟುಂಬದಲ್ಲಿ ಸಂತಸ ಉಂಟು ಮಾಡುತ್ತದೆ. ನಿಮ್ಮ ರೀತಿ ನೀತಿ ಮಕ್ಕಳ ಮೇಲೆ ಗಮನಾರ್ಹ ಪ್ರಭಾವ ಬೀರಲಿದೆ. ಉದ್ಯೋಗದಲ್ಲಿ ಅಧಿಕಾರಿಗಳ ಪ್ರೋತ್ಸಾಹ ಹೊಸ ಹುಮ್ಮಸ್ಸು ತುಂಬುತ್ತದೆ. ವಿದ್ಯಾರ್ಥಿಗಳು ತಮ್ಮ ವಯಸ್ಸಿನ ಗುಂಪಿನ ನಾಯಕರಾಗಿ ಹೊರ ಹೊಮ್ಮುವಿರಿ. ಮನರಂಜನೆಗಾಗಿ ಹೆಚ್ಚಿನ ಖರ್ಚಾಗುತ್ತದೆ. ಎದುರಾಗುವ ಸಮಸ್ಯೆಯನ್ನು ಬುದ್ಧಿವಂತಿಕೆಯಿಂದ ಎದುರಿಸಬಲ್ಲಿರಿ. ಸಿಡುಕಿನ ವರ್ತನೆ ಕುಟುಂಬದಲ್ಲಿ ಅಸಮಾಧಾನವನ್ನು ಉಂಟು ಮಾಡುತ್ತದೆ. ಹೊಸ ಪಾಲುದಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಮನೆಯ ಮುಖ್ಯ ಕೆಲಸವೊಂದನ್ನು ಸುಲಭವಾಗಿ ಪೂರ್ಣಗೊಳಿಸುವಿರಿ. ಆರೋಗ್ಯ ಬಗ್ಗೆ ಗಮನ ಇರಲಿ.
ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ಹಳದಿ ಬಣ್ಣ
ವೃಶ್ಚಿಕ
ಕುಟುಂಬದಲ್ಲಿ ಮಕ್ಕಳ ಯಶಸ್ಸು ಸಂತಸದ ವಾತಾವರಣ ಉಂಟಾಗುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಜೊತೆ ಅಮೂಲ್ಯವಾದ ವಿಚಾರಗಳನ್ನು ಹಂಚಿಕೊಳ್ಳುವಿರಿ. ಕುಟುಂಬದಲ್ಲಿನ ಮಗುವಿನ ಆರೋಗ್ಯದಲ್ಲಿ ಏರಿಳಿತ ಕಂಡುಬರುತ್ತದೆ. ವಿದ್ಯಾರ್ಥಿಗಳು ಭಾವನಾತ್ಮಕ ವ್ಯಕ್ತಿತ್ವದಿಂದ ಎಲ್ಲರ ಗಮನ ಸೆಳೆಯುತ್ತಾರೆ. ಹಣಕಾಸಿನ ಕೊರೆತೆ ಕಡಿಮೆ ಆಗುತ್ತದೆ. ಒತ್ತಡಕ್ಕೆ ಮಣಿದು ಹಣವನ್ನು ವ್ಯರ್ಥವೆನಿಸುವ ವಿಚಾರಗಳಿಗೆ ಖರ್ಚು ಮಾಡುವಿರಿ. ವಂಶಾಧಾರಿತ ಉದ್ಯೋಗ ಅಥವ ವ್ಯಾಪಾರದಲ್ಲಿ ಪ್ರಗತಿ ದೊರೆಯಲಿದೆ. ಪ್ರಾಣಿ ಪಕ್ಷಿಗಳಬಗ್ಗೆ ಅನುಕಂಪ ಇರಲಿದೆ. ವಾಹನದಿಂದ ತೊಂದರೆ ಇರಬಹುದು ಎಚ್ಚರಿಕೆ ಇರಲಿ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಹಸಿರು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).