ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಸಂಗಾತಿ ಜೊತೆಗೆ ಹಣಕಾಸಿನ ವಿಚಾರವಾಗಿ ವಿವಾದ, ಕುಟುಂಬದ ಹಿರಿಯರಿಗೆ ಅನಾರೋಗ್ಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Horoscope Today: ಸಂಗಾತಿ ಜೊತೆಗೆ ಹಣಕಾಸಿನ ವಿಚಾರವಾಗಿ ವಿವಾದ, ಕುಟುಂಬದ ಹಿರಿಯರಿಗೆ ಅನಾರೋಗ್ಯ; ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

Rakshitha Sowmya HT Kannada

Apr 27, 2024 05:00 AM IST

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

  • 27th ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (27th April 2024 Daily Horoscope).

ಮೇಷ, ವೃಷಭ, ಮಿಥುನ, ಕಟಕ ರಾಶಿಫಲ
ಮೇಷ, ವೃಷಭ, ಮಿಥುನ, ಕಟಕ ರಾಶಿಫಲ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (27th April 2024 Daily Horoscope).

ತಾಜಾ ಫೋಟೊಗಳು

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

May 14, 2024 08:48 AM

12 ವರ್ಷಗಳ ನಂತರ ವೃಷಭ ರಾಶಿಯಲ್ಲಿ ಗುರು ಶುಕ್ರ ಸಂಯೋಜನೆ; ಗಜಲಕ್ಷ್ಮಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟದ ಮೇಲೆ ಅದೃಷ್ಟ

May 13, 2024 12:41 PM

Sun Transit: ಶೀಘ್ರದಲ್ಲೇ ಸೂರ್ಯ ಸಂಚಾರ; ಈ 3 ರಾಶಿಯವರಿಗೆ ಮೊದಲಿಗಿಂತಲೂ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ

May 11, 2024 03:03 PM

Jupiter Venus Conjunction: ಗುರು, ಶುಕ್ರ ಸಂಕ್ರಮಣ; ಈ 4 ರಾಶಿಯವರಿಗೆ ಅನಗತ್ಯ ಖರ್ಚುಗಳಿಂದ ಚಿಂತೆ, ಆರ್ಥಿಕ ಸಮಸ್ಯೆ ಸಾಧ್ಯತೆ

May 11, 2024 02:08 PM

ಮಾತಾ ನಾಸ್ತಿ, ಪಿತಾ ನಾಸ್ತಿ, ನಾಸ್ತಿ ಬಂಧುಃ: ಮೇ 12 ಶಂಕರ ಜಯಂತಿ ಶುಭಾಶಯ ಕೋರಲು ಇಲ್ಲಿವೆ ಕೆಲವು ಸಂದೇಶಗಳು

May 10, 2024 07:00 AM

ಶನಿ ಸಂಕ್ರಮಣದಿಂದ ರೂಪುಗೊಳ್ಳಲಿದೆ ಶಶ ರಾಜಯೋಗ; 2025ವರೆಗೆ ಈ ಮೂರೂ ರಾಶಿಯವರಿಗೆ ಹೋದಲೆಲ್ಲಾ ಹಿಂಬಾಲಿಸಲಿದೆ ಅದೃಷ್ಟ

May 09, 2024 08:25 AM

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ : ತದಿಗೆ ಬೆಳಗ್ಗೆ 06.26 ರವರೆಗೂ ಇದ್ದು ನಂತರ ಚೌತಿ ಆರಂಭವಾಗಲಿದೆ.

ನಕ್ಷತ್ರ : ಜ್ಯೇಷ್ಠ ನಕ್ಷತ್ರವು ರಾತ್ರಿ 02.33 ರವರೆಗೂ ಇದ್ದು ನಂತರ ಮೂಲ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಬೆಳಗ್ಗೆ 09.13 ರಿಂದ 10.47

ರಾಶಿಫಲ

ಮೇಷ

ಹೊಸ ಚೈತನ್ಯದಿಂದ ದಿನದ ಕೆಲಸಗಳನ್ನು ಆರಂಭಿಸುವಿರಿ. ಏಕಾಗ್ರಚಿತ್ತತೆಯಿಂದ ಆರಂಭಿಸಿದ ಕೆಲಸವನ್ನು ಪೂರ್ಣಗೊಳಿಸುವಿರಿ. ನಿಮ್ಮಲ್ಲಿನ ಕಾರ್ಯ ದಕ್ಷತೆ ಎಲ್ಲರಿಗೂ ಮಾದರಿಯಾಗಲಿದೆ. ಕಷ್ಟಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿ ಕಂಡುಬರುತ್ತದೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಮಕ್ಕಳು ಏಳಿಗೆ ಕಾಣುತ್ತಾರೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ನಿಮ್ಮ ಮನದಲ್ಲಿರುವ ಆಶೋತ್ತರಗಳು ಕೈಗೂಡಲಿವೆ. ಸಂಗಾತಿಯೊಂದಿಗೆ ಹಣಕಾಸಿನ ವಿಚಾರದಲ್ಲಿ ವಾದ ವಿವಾದಗಳು ಇರಲಿವೆ. ಆರೋಗ್ಯದಲ್ಲಿನ ಧನಾತ್ಮಕ ಬದಲಾವಣೆಗಳು ನೆಮ್ಮದಿಯನ್ನು ತರುತ್ತದೆ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಕಾಣುವುದಿಲ್ಲ.

ಪರಿಹಾರ : ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನಸುಗೆಂಪು

ವೃಷಭ

ನೀವು ಸಂತೋಷವಾಗಿರುವುದಲ್ಲವೇ ಬೇರೆಯವರ ಸಂತಸಕ್ಕೂ ಕಾರಣರಾಗುವಿರಿ. ಆತುರ ಪಡದೆ ಕೆಲಸ ಕಾರ್ಯಗಳನ್ನು ನಿರ್ವಹಿಸಿದರೆ ಯಶಸ್ಸು ಖಂಡಿತ. ಸ್ನೇಹಿತರಿಂದ ದೊರೆಯುವ ಸಹಾಯ ಸಹಕಾರ ಸೋಲನ್ನು ದೂರ ಮಾಡುತ್ತದೆ. ಕೋಪ ಕಡಿಮೆ ಮಾಡಿಕೊಂಡು ಸಹನೆಯಿಂದ ವರ್ತಿಸಿರಿ. ಸಂಗಾತಿಯ ಪ್ರೀತಿ ವಿಶ್ವಾಸ ಆತ್ಮಶಕ್ತಿಯನ್ನು ಹೆಚ್ಚಿಸುತ್ತದೆ. ನಿಮ್ಮ ಕಾರ್ಯ ಕುಶಲತೆಗೆ ತಕ್ಕಂತೆ ಉದ್ಯೋಗ ದೊರೆಯುತ್ತದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಉನ್ನತ ಅಧ್ಯಯನದ ಬಗ್ಗೆ ಗಮನ ಹರಿಸುತ್ತಾರೆ. ಖರ್ಚು ವೆಚ್ಚಗಳ ಮೇಲೆ ಹಿಡಿತವಿರಲಿ. ಕುಟುಂಬದ ವಿಚಾರದಲ್ಲಿ ಅತಿಯಾಗಿ ಭಾವುಕರಾಗಿ ವರ್ತಿಸುವಿರಿ. ಕುಟುಂಬದ ಹಿರಿಯರನ್ನು ಭೇಟಿ ಮಾಡಲು ಊರಿಗೆ ತೆರಳುವಿರಿ. ಅಗತ್ಯಕ್ಕೆ ಹೊಂದಿಕೊಂಡು ಹಣ ಸಂಪಾದಿಸಬಲ್ಲಿರಿ. ಮಕ್ಕಳೊಂದಿಗೆ ಸಂಯಮದಿಂದ ವರ್ತಿಸಲು ಪ್ರಯತ್ನಿಸಿ.

ಪರಿಹಾರ : ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 4

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ : ನೀಲಿ ಮಿಶ್ರಿತ ಬಿಳಿ

ಮಿಥುನ

ಪರಿಶುದ್ಧ ಆಹಾರ ಸೇವಿಸಿದರೆ ಉತ್ತಮ ಆರೋಗ್ಯ ದೊರೆಯುತ್ತದೆ. ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ ದೈಹಿಕ ವ್ಯಾಯಾಮ ಆರಂಭಿಸುವಿರಿ. ಹಣಕಾಸಿನ ಕೊರತೆ ಕಂಡು ಬರುತ್ತದೆ. ಸಮಯ ಬಂದಾಗ ಸೋದರ ಅಥವಾ ಸೋದರಿಯಿಂದ ಹಣದ ಸಹಾಯ ದೊರೆಯುತ್ತದೆ. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಗಮನ ವಹಿಸಿ. ದಂಪತಿಗಳ ನಡುವೆ ಉತ್ತಮ ಬಾಂಧವ್ಯ ಮೂಡುತ್ತದೆ. ಒಮ್ಮೆ ತೆಗೆದುಕೊಂಡ ನಿರ್ಧಾರಗಳಿಗೆ ಬದ್ಧರಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳಿಗೆ ಹೊಂದಿಕೊಂಡು ನಡೆಯುವಿರಿ. ಮನಸ್ಸಿನಲ್ಲಿ ಧನಾತ್ಮಕ ಚಿಂತನೆಗಳು ಇರುವ ಕಾರಣ ನೆಮ್ಮದಿ ಇರುತ್ತದೆ.

ಪರಿಹಾರ : ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಕಟಕ

ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಬಾಳುವಿರಿ. ಸಹನೆಯಿಂದ ಕೆಲಸ ನಿರ್ವಹಿಸುವ ಕಾರಣ ಸುಲಭವಾಗಿ ಯಶಸ್ಸನ್ನು ಗಳಿಸುವಿರಿ. ಕುಟುಂಬದಲ್ಲಿ ಎದುರಾಗುವ ಸಮಸ್ಯೆಯನ್ನು ವಿವೇಚನೆಯಿಂದ ಪರಿಹರಿಸುವಿರಿ. ಹಣಕಾಸಿನ ವಿಚಾರದಲ್ಲಿ ಆಪ್ತ ಸ್ನೇಹಿತರೊಂದಿಗೆ ಮನಸ್ತಾಪ ಉಂಟಾಗುತ್ತದೆ. ನಿರಾಸಕ್ತಿ ನಿಮ್ಮನ್ನು ಕಾಡುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳಿಂದ ತೊಂದರೆ ಉಂಟಾಗಬಹುದು. ಕಿರಿಕಿರಿಯ ಸನ್ನಿವೇಶದಲ್ಲಿ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರಯತ್ನಿಸಿ. ಮಕ್ಕಳೊಂದಿಗೆ ಸಂತೋಷದಿಂದ ಸಮಯ ಕಳೆಯುವಿರಿ. ಸಂಗಾತಿಯಿಂದ ಸಮಾಜದಲ್ಲಿ ಉನ್ನತ ಸ್ಥಾನಮಾನ ದೊರೆಯುತ್ತದೆ. ಕುಟುಂಬದ ಸದಸ್ಯರ ಜೊತೆಯಲ್ಲಿ ಯಾತ್ರಾಸ್ಥಳಕ್ಕೆ ಭೇಟಿ ನೀಡುವಿರಿ. ಬಂಧು-ಬಳಗದವರೊಂದಿಗೆ ಉತ್ತಮ ಬಾಂಧವ್ಯ ಉಂಟಾಗುತ್ತದೆ. ಹಣಕಾಸಿನ ಯೋಜನೆಯಲ್ಲಿ ಹಣ ವಿನಿಯೋಗಿಸುವಿರಿ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಬೂದು

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ