logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Horoscope Today: ಹಟಮಾರಿತನದಿಂದ ಆತ್ಮೀಯ ಸ್ನೇಹಿತರನ್ನು ದೂರ ಮಾಡಿಕೊಳ್ಳುವಿರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

Horoscope Today: ಹಟಮಾರಿತನದಿಂದ ಆತ್ಮೀಯ ಸ್ನೇಹಿತರನ್ನು ದೂರ ಮಾಡಿಕೊಳ್ಳುವಿರಿ; ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ದಿನ ಭವಿಷ್ಯ

Rakshitha Sowmya HT Kannada

Apr 27, 2024 05:05 AM IST

google News

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಏಪ್ರಿಲ್‌ 27ರ ದಿನ ಭವಿಷ್ಯ

  • 27th ಏಪ್ರಿಲ್‌ 2024: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (27th April 2024 Daily Horoscope).

ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಏಪ್ರಿಲ್‌ 27ರ ದಿನ ಭವಿಷ್ಯ
ಸಿಂಹ, ಕನ್ಯಾ, ತುಲಾ, ವೃಶ್ಚಿಕ ರಾಶಿಯವರ ಏಪ್ರಿಲ್‌ 27ರ ದಿನ ಭವಿಷ್ಯ

ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (27th April 2024 Daily Horoscope).

ತಾಜಾ ಫೋಟೊಗಳು

ನಾಳಿನ ದಿನ ಭವಿಷ್ಯ: ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ ಇದೆ, ವ್ಯವಹಾರದಲ್ಲಿ ಸುಧಾರಣೆ ಕಂಡುಬರುತ್ತೆ

Dec 21, 2024 04:43 PM

24ನೇ ಜನವರಿ 2025ಕ್ಕೆ ಸೂರ್ಯ-ಬುಧ ಸಂಯೋಗದಿಂದ ಬುಧಾದಿತ್ಯ ರಾಜಯೋಗ: ರಾಶಿಯವರ ಜೀವನ ಆಗ ಪಾವನ, ಅದೃಷ್ಟವೋ ಅದೃಷ್ಟ

Dec 20, 2024 05:22 PM

ನಾಳಿನ ದಿನ ಭವಿಷ್ಯ: ನೀವು ಇಷ್ಟಪಡುವ ಜನರೊಂದಿಗೆ ಸಮಯ ಕಳೆಯುತ್ತೀರಿ, ಕೆಲಸಗಳು ಸುಗಮವಾಗಿ ನಡೆಯುತ್ತವೆ

Dec 20, 2024 03:29 PM

ಮಾಸ ಶಿವರಾತ್ರಿಯಿಂದ ಬದಲಾಗಲಿದೆ 3 ರಾಶಿಯವರ ಜೀವನ: ಮಾರ್ಗಶಿರ ಮಾಸದಲ್ಲಿ ಈ ವ್ರತವನ್ನು ಯಾವ ದಿನ ಆಚರಿಸಲಾಗುತ್ತದೆ?

Dec 19, 2024 06:44 PM

ಅಪರಿಚಿತ ವ್ಯಕ್ತಿಗಳನ್ನು ನಂಬಿ ಮೋಸ ಹೋಗದಿರಿ, ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ; ನಾಳಿನ ದಿನಭವಿಷ್ಯ

Dec 18, 2024 05:02 PM

Sun Transit: 2025ರಲ್ಲಿ ಮಕರ ರಾಶಿಗೆ ಸೂರ್ಯನ ಪ್ರವೇಶ; ಈ 3 ರಾಶಿಯವರಿಗೆ ಹೊಸ ವರ್ಷ ತರಲಿದೆ ಅದೃಷ್ಟ, ಇಷ್ಟಗಳೆಲ್ಲವೂ ನೆರವೇರುವ ಕಾಲ

Dec 18, 2024 10:14 AM

ಇಂದಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶನಿವಾರ

ತಿಥಿ : ತದಿಗೆ ಬೆಳಗ್ಗೆ 06.26 ರವರೆಗೂ ಇದ್ದು ನಂತರ ಚೌತಿ ಆರಂಭವಾಗಲಿದೆ.

ನಕ್ಷತ್ರ : ಜ್ಯೇಷ್ಠ ನಕ್ಷತ್ರವು ರಾತ್ರಿ 02.33 ರವರೆಗೂ ಇದ್ದು ನಂತರ ಮೂಲ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.57

ಸೂರ್ಯಾಸ್ತ: ಸಂಜೆ 06.32

ರಾಹುಕಾಲ: ಬೆಳಗ್ಗೆ 09.13 ರಿಂದ 10.47

ರಾಶಿಫಲ

ಸಿಂಹ

ಗೆಲ್ಲಲೇಬೇಕೆಂಬ ಹಟವಿರುತ್ತದೆ. ಆದರೆ ಆತ್ಮವಿಶ್ವಾಸದ ಕೊರತೆ ನಿಮ್ಮನ್ನು ಕಾಡುತ್ತದೆ. ಕುಟುಂಬದ ಹಿರಿಯರ ಸಹಾಯದಿಂದ ಉದ್ಯೋಗ ಲಭಿಸುತ್ತದೆ. ಉತ್ತಮ ಹಣ ಗಳಿಕೆಗಾಗಿ ಕುಟುಂಬದ ಸದಸ್ಯರ ಜೊತೆ ವ್ಯಾಪಾರವೊಂದನ್ನು ಆರಂಭಿಸುವಿರಿ. ತಾಳ್ಮೆಯಿಂದ ಅಧಿಕಾರಿಗಳೊಂದಿಗೆ ವರ್ತಿಸಿದರೆ ಉದ್ಯೋಗದಲ್ಲಿ ಯಾವುದೇ ತೊಂದರೆ ಉಂಟಾಗುವುದಿಲ್ಲ. ಅವಿವಾಹಿತರಿಗೆ ವಿವಾಹ ಯೋಗವಿದೆ. ಆತ್ಮೀಯರಿಗಾಗಿ ಸಂತೋಷಕೂಟ ಏರ್ಪಡಿಸುವಿರಿ. ಕುಟುಂಬಕ್ಕೆ ಸಂಬಂಧಿಸಿದ ಹಣದ ಸಮಸ್ಯೆ ಪರಿಹರಿಸುವಿರಿ. ಆರೋಗ್ಯದಲ್ಲಿ ಏರಿಳಿತ ಉಂಟಾಗಲಿದೆ. ಸಮಯದ ಅಭಾವದಿಂದ ಯೋಜಿಸಿದ ಪ್ರವಾಸವನ್ನು ರದ್ದುಪಡಿಸುವಿರಿ. ಅನಾವಶ್ಯಕ ಚಿಂತಿಸುವುದನ್ನು ಬಿಟ್ಟು ವರಮಾನವನ್ನು ಹೆಚ್ಚಿಸಿಕೊಳ್ಳಲು ಯೋಜನೆ ರೂಪಿಸುವಿರಿ.

ಪರಿಹಾರ : ಕುಟುಂಬದ ಹಿರಿಯರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ 5

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ : ಆಕಾಶ ನೀಲಿ

ಕನ್ಯಾ

ಸರಿ ತಪ್ಪನ್ನು ಗ್ರಹಿಸದೆ ದುಡುಕಿನ ನಿರ್ಧಾರ ತೆಗೆದುಕೊಳ್ಳುವಿರಿ. ನಿಮ್ಮ ರೀತಿ ನೀತಿ ಕುಟುಂಬದ ಸಮಸ್ಯೆಯನ್ನು ದೂರಮಾಡುತ್ತದೆ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆಪತ್ಕಾಲದಲ್ಲಿ ಪಡೆದಿದ್ದ ಹಣವನ್ನು ಮರುಪಾವತಿ ಮಾಡುವಿರಿ. ಕುಟುಂಬದವರ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ. ಬಹು ಕಾಲದ ನಂತರ ಆತ್ಮೀಯರನ್ನು ಭೇಟಿ ಮಾಡುವಿರಿ. ಖ್ಯಾತ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ಮನದಲ್ಲಿರುವ ನೋವು ಮತ್ತು ಬೇಸರವನ್ನು ದೂರ ಮಾಡಲು ಸಂಬಂಧಿಕರ ಮನೆಗೆ ತೆರಳುವಿರಿ. ಕಲಾವಿದರಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಬೇರೆಯವರ ತಪ್ಪನ್ನು ಟೀಕಿಸಿ ಮಾತನಾಡುವಿರಿ.

ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ರಕ್ತದ ಬಣ್ಣ

ತುಲಾ

ಗೃಹಿಣಿಯರ ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ. ಆತುರದಿಂದ ಕೆಲಸ ಕಾರ್ಯದಲ್ಲಿ ಮುಂದುವರೆದರೆ ತೊಂದರೆ ಉಂಟಾಗುತ್ತದೆ. ಯಾವುದೇ ಕೆಲಸ ಕಾರ್ಯ ಆಗಮಿಸುವ ಮೊದಲು ಉತ್ತಮ ಯೋಜನೆ ರೂಪಿಸಿ. ಪ್ರಯಾಣಕ್ಕಾಗಿ ಗಳಿಸಿದ ಬಹುತೇಕ ಹಣ ವೆಚ್ಚವಾಗುತ್ತದೆ. ಕುಟುಂಬದ ಸದಸ್ಯರ ಸಹಕಾರದಿಂದ ಹಣಕಾಸಿನ ಕೊರತೆ ಕಡಿಮೆಯಾಗಲಿದೆ. ಅತಿಯಾದ ನಿರೀಕ್ಷೆ ಬೇಸರ ಉಂಟುಮಾಡುತ್ತದೆ. ಕ್ರೀಡಾಮನೋಭಾವನೆಯಿಂದ ಮುಂದುವರೆಯುವುದು ಒಳ್ಳೆಯದು. ಸಂಗಾತಿಯೊಡನೆ ಉತ್ತಮ ಅನುಬಂಧ ಇರಲಿದೆ. ಮಕ್ಕಳ ವಿಚಾರದಲ್ಲಿ ಯಾವುದೇ ಯೋಚನೆ ಇರುವುದಿಲ್ಲ. ತಪ್ಪನ್ನು ಅರಿತ ಮಕ್ಕಳು ಸರಿಯಾದ ಹಾದಿಯಲ್ಲಿ ನಡೆಯುತ್ತಾರೆ. ಉನ್ನತ ವಿದ್ಯಾಭ್ಯಾಸದ ಕನಸು ಸುಲಭವಾಗಿ ನನಸಾಗಲಿದೆ. ಖರ್ಚು ವೆಚ್ಚದ ಮೇಲೆ ಇತಿಮಿತಿ ಇರಲಿ.

ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಎಲೆ ಹಸಿರು

ವೃಶ್ಚಿಕ

ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಸುಲಭವಾಗಿ ಬದಲಿಸುವುದಿಲ್ಲ. ವಯಸ್ಸಿನ ಅಂತರವಿಲ್ಲದೆ ಎಲ್ಲರನ್ನೂ ಗೌರವ ಭಾವನೆಯಿಂದ ಕಾಣುವಿರಿ. ಹಟದ ಸ್ವಭಾವದಿಂದ ಕೆಲವರು ನಿಮ್ಮಿಂದ ದೂರವಾಗಬಹುದು. ಎದುರಾಗುವ ಕಷ್ಟ ನಷ್ಟಗಳನ್ನು ಎದುರಿಸಿ ಕೈಹಿಡಿದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ಮನಸ್ಸಿಗೆ ಮುದ ನೀಡುವ ಸಂದೇಶವೊಂದು ಬರಲಿದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಪಾಲುದಾರಿಕೆ ವ್ಯಾಪಾರದಲ್ಲಿ ನಂಬಿಕೆ ಇರುವುದಿಲ್ಲ. ಬಿಡುವಿಲ್ಲದ ಕೆಲಸದ ನಡುವೆಯೂ ಸಂಗಾತಿ ಮತ್ತು ಮಕ್ಕಳೊಂದಿಗೆ ಸಂತಸದಿಂದ ಇರುವಿರಿ. ಸಂಗೀತ ಮತ್ತು ಇತರ ಸಾಂಪ್ರದಾಯಿಕ ಕಲೆಗಳಲ್ಲಿ ಆಸಕ್ತಿ ಮೂಡುತ್ತದೆ.

ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಕೇಸರಿ ಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

 

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ