Horoscope Today: ಈ ರಾಶಿಯವರಿಗೆ ಸಾಮರ್ಥ್ಯಕ್ಕೆ ತಕ್ಕಂಥ ಕೆಲಸ ದೊರೆಯುತ್ತದೆ; ಮೇಷ, ವೃಷಭ, ಮಿಥುನ, ಕಟಕ ರಾಶಿಭವಿಷ್ಯ
Jan 04, 2024 05:00 AM IST
4 ಜನವರಿ, ಗುರುವಾರದ ರಾಶಿ ಭವಿಷ್ಯ
4 ಜನವರಿ, ಗುರುವಾರದ ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಮೇಷ, ವೃಷಭ, ಮಿಥುನ, ಕಟಕ, ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4th January 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (4th January 2024 Daily Horoscope).
ತಾಜಾ ಫೋಟೊಗಳು
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ-ದಕ್ಷಿಣಾಯನ-ಹಿಮಂತ ಋತು-ಮಾರ್ಗಶಿರ ಮಾಸ-ಕೃಷ್ಣಪಕ್ಷ-ಗುರುವಾರ
ತಿಥಿ : ಅಷ್ಟಮಿ ಸಂಜೆ 06.05 ರವರೆಗೂ ಇರುತ್ತದೆ ನಂತರ ನವಮಿ ಆರಂಭವಾಗುತ್ತದೆ.
ನಕ್ಷತ್ರ : ಹಸ್ತ ನಕ್ಷತ್ರವು 02.32 ರವೆಗು ಇರುತ್ತದೆ ನಂತರ ಚಿತ್ತ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.42
ಸೂರ್ಯಾಸ್ತ: ಸಂಜೆ 06.06
ರಾಹುಕಾಲ: ಮಧ್ಯಾಹ್ನ 01.30 ರಿಂದ 03.00
ರಾಶಿ ಫಲಗಳು
ಮೇಷ
ಕುಟುಂಬದಲ್ಲಿ ಹಬ್ಬದ ವಾತಾವರಣ ಇರುತ್ತದೆ. ಪರಸ್ಪರ ಒಬ್ಬರನ್ನೊಬ್ಬರು ಗೌರವಿಸುವ ಕಾರಣ ಯಾವುದೇ ವಿವಾದ ಎದುರಾಗದು. ಉದ್ಯೋಗದಲ್ಲಿ ಎಚ್ಚರಿಕೆಯಿಂದ ತೀರ್ಮಾನ ತೆಗೆದುಕೊಳ್ಳಿ. ದುಡುಕಿದರೆ ತೊಂದರೆ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಬದಲಾವಣೆಗಳು ಎದುರಾಗಲಿವೆ. ಉತ್ತಮ ಆದಾಯ ಕಂಡು ಬರುತ್ತದೆ. ವಿದ್ಯಾರ್ಥಿಗಳು ಚುರುಕುತನದಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಅಪೂರ್ಣಗೊಂಡಿರುವ ಹಣಕಾಸಿನ ವ್ಯವಹಾರಗಳನ್ನು ಪೂರ್ಣಗೊಳಿಸಿ. ಆತ್ಮೀಯರೊಂದಿಗೆ ಮನಸ್ತಾಪ ಉಂಟಾಗುತ್ತದೆ. ಅಪರಿಚಿತರಿಂದ ಆಕಸ್ಮಿಕವಾಗಿ ಸಹಾಯ ಸಹಕಾರ ದೊರೆಯುತ್ತದೆ. ಕೋಪ ಕಡಿಮೆ ಮಾಡಿಕೊಳ್ಳಿ.
ಪರಿಹಾರ: ಮನೆಯಲ್ಲಿರುವ ಹಿರಿಯರಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಸಿರು ಬಣ್ಣ
ವೃಷಭ
ದಂಪತಿಗಳ ನಡುವಿನ ಮನಸ್ತಾಪವು ಕುಟುಂಬದಲ್ಲಿ ಗಂಭೀರತೆಯನ್ನು ಉಂಟುಮಾಡುತ್ತದೆ. ಉದ್ಯೋಗದಲ್ಲಿ ಯಾರೊಬ್ಬರ ಸಹಾಯವೂ ದೊರೆಯದೆ ಹೋದರೂ ಕೆಲಸ ಸಾಧಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅವಶ್ಯಕತೆ ಇರುವಷ್ಟು ಹಣ ದೊರೆಯುತ್ತದೆ. ಸ್ವಂತ ನಿರ್ಧಾರಗಳಿಗೆ ಬದ್ದರಾದರೂ ಬೇರೆಯವರ ಸಹಾಯ ಪಡೆಯುವುದು ಒಳ್ಳೆಯದು. ವಿದ್ಯಾರ್ಥಿಗಳು ಸಹಪಾಠಿಗಳ ಜೊತೆಗೂಡಿ ಅದ್ಯಯನದಲ್ಲಿ ಮುಂದುವರೆಯುವುದು ಒಳ್ಳೆಯದು. ಸೋಲು ಗೆಲುವನ್ನು ಸಮಾನ ಗತಿಯಲ್ಲಿ ತೆಗೆದುಕೊಳ್ಳುವ ಕಾರಣ ಹೊಸ ಅವಕಾಶಗಳು ಹೆಚ್ಚುತ್ತವೆ. ಅತಿಯಾಗಿ ಯೋಚಿಸದೆ ಬುದ್ಧಿವಂತಿಕೆಯಿಂದ ಕೆಲಸ ಕಾರ್ಯಗಳನ್ನು ಸಾಧಿಸಲು ಪ್ರಯತ್ನಿಸಿ. ಆತ್ಮೀಯರು ನಿಮ್ಮ ಬಗ್ಗೆ ತಪ್ಪು ಅಭಿಪ್ರಾಯಕ್ಕೆ ಬರಬಹುದು.
ಪರಿಹಾರ : ಕತ್ತಿನಲ್ಲಿ ಬೆಳ್ಳಿಯ ಸರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ನೀಲಿ
ಮಿಥುನ
ಕುಟುಂಬದಲ್ಲಿ ಒತ್ತಡದ ವಾತಾವರಣ ಎದುರಾಗುತ್ತದೆ. ಉದ್ಯೋಗದಲ್ಲಿ ದೃಢವಾದ ಮನಸ್ಸಿನಿಂದ ಕೆಲಸ ಕಾರ್ಯದಲ್ಲಿ ತೊಡಗಬೇಕು. ಸಹೋದ್ಯೋಗಿಗಳ ಸಹಾಯ ಸಹಕಾರ ಸದಾ ಕಾಲ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಮಾನಸಿಕ ಒತ್ತಡವಿದ್ದರೂ ವರಮಾನಕ್ಕೆ ತೊಂದರೆ ಇರುವುದಿಲ್ಲ. ವಿದ್ಯಾರ್ಥಿಗಳು ತದೇಕಚಿತ್ತದಿಂದ ಕಲಿಕೆಯಲ್ಲಿ ಮುಂದುವರೆಯಬೇಕು. ಜನ ಸೇವೆಯಲ್ಲಿ ಮುನ್ನಡೆಯುವಿರಿ. ದಿನ ಕಳೆದಂತೆ ಆದಾಯದಲ್ಲಿ ಹೆಚ್ಚಳ ಉಂಟಾಗುತ್ತದೆ. ಕುಟುಂಬದವರೊಂದಿಗೆ ಸಮಯ ಕಳೆಯಲು ಪ್ರಯತ್ನಿಸುವಿರಿ. ಆತ್ಮೀಯರೊಬ್ಬರ ಆಗಮನ ಕುಟುಂಬದಲ್ಲಿ ಸಂತಸ ಉಂಟುಮಾಡುತ್ತದೆ. ಆತ್ಮೀಯರಿಗೆ ನೀಡಿದ ಹಣ ಮರಳಿ ಕೈ ಸೇರುತ್ತದೆ.
ಪರಿಹಾರ : ಬೆಳ್ಳಿ ಲೋಟದಲ್ಲಿ ಹಾಲನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ನೇರಳೆ ಬಣ್ಣ
ಕಟಕ
ಕುಟುಂಬದಲ್ಲಿ ಆತ್ಮೀಯರ ಆಗಮನದಿಂದ ಸಂಭ್ರಮದ ವಾತಾವರಣ ಕಂಡುಬರುತ್ತದೆ. ಉದ್ಯೋಗದಲ್ಲಿ ಎದುರಾಗುವ ಕಷ್ಟಗಳನ್ನು ಎದುರಿಸಿ ನಿರೀಕ್ಷಿತ ಗುರಿ ತಲುಪುವಿರಿ. ಆದರೆ ಯಾವುದೇ ವಿಚಾರವಾದರೂ ಯೋಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು. ವ್ಯಾಪಾರ ವ್ಯವಹಾರಗಳು ಮಧ್ಯಮ ಗತಿಯ ಆದಾಯವನ್ನು ನೀಡುತ್ತದೆ. ಆತ್ಮೀಯರೊಂದಿಗೆ ಪಾಲುಗಾರಿಕೆಯ ವ್ಯಾಪಾರ ಆರಂಭಿಸುವ ಸೂಚನೆಗಳಿವೆ. ವಿದ್ಯಾರ್ಥಿಗಳು ಆತ್ಮೀಯರ ಸಹಾಯದಿಂದ ಕಲಿಕೆಯಲ್ಲಿ ಮೊದಲಿಗರಾಗುತ್ತಾರೆ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾದ ಕೆಲಸ ದೊರೆಯುತ್ತದೆ. ಅನಾವಶ್ಯಕವಾಗಿ ಪ್ರವಾಸ ಮಾಡಬೇಕಾಗಿ ಬರುತ್ತದೆ. ಯಾವುದೇ ವಿಚಾರದಲ್ಲಿ ಆತುರದ ನಿರ್ಣಯಗಳನ್ನು ತೆಗೆದುಕೊಳ್ಳದಿರಿ.
ಪರಿಹಾರ : ಕಪ್ಪು ನಾಯಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 10
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ : ಗುಲಾಬಿ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).