Horoscope Today: ಈ ರಾಶಿಯವರ ಮಕ್ಕಳಿಗೆ ಕೂಡಿಬರಲಿದೆ ಕಂಕಣ ಭಾಗ್ಯ; ಧನಸ್ಸು, ಮಕರ, ಕುಂಭ, ಮೀನ ರಾಶಿಯವರ ದಿನ ಭವಿಷ್ಯ
Jan 04, 2024 05:10 AM IST
ಧನು, ಮಕರ, ಕುಂಬ, ಮೀನ ರಾಶಿಯವರ ದಿನ ಭವಿಷ್ಯ
4 ಜನವರಿ 2024 ರಾಶಿ ಭವಿಷ್ಯ: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ. ಧನಸ್ಸು, ಮಕರ, ಕುಂಭ, ಮೀನ ರಾಶಿಯವರಿಗೆ ಇಂದು ಏನು ಫಲ? ಇಂದಿನ ದಿನಭವಿಷ್ಯ ಇಲ್ಲಿದೆ. (4th January 2024 Daily Horoscope).
ಇಂದಿನ ರಾಶಿ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಪ್ರತಿದಿನ ಅಚ್ಚುಕಟ್ಟಾಗಿ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ.(4th January 2024 Daily Horoscope).
ತಾಜಾ ಫೋಟೊಗಳು
ಇಂದಿನ ಪಂಚಾಂಗ
ಶ್ರೀ ಶೋಭಕೃತುನಾಮ ಸಂವತ್ಸರ-ದಕ್ಷಿಣಾಯನ-ಹಿಮಂತ ಋತು-ಮಾರ್ಗಶಿರ ಮಾಸ-ಕೃಷ್ಣಪಕ್ಷ-ಗುರುವಾರ
ತಿಥಿ : ಅಷ್ಟಮಿ ಸಂಜೆ 06.05 ರವರೆಗೂ ಇರುತ್ತದೆ ನಂತರ ನವಮಿ ಆರಂಭವಾಗುತ್ತದೆ.
ನಕ್ಷತ್ರ : ಹಸ್ತ ನಕ್ಷತ್ರವು 02.32 ರವೆಗು ಇರುತ್ತದೆ ನಂತರ ಚಿತ್ತ ನಕ್ಷತ್ರ ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ 06.42
ಸೂರ್ಯಾಸ್ತ: ಸಂಜೆ 06.06
ರಾಹುಕಾಲ: ಮಧ್ಯಾಹ್ನ 01.30 ರಿಂದ 03.00
ಧನಸ್ಸು
ಕುಟುಂಬದ ಕೆಲಸ ಕಾರ್ಯಗಳು ಸುಗಮವಾಗಿ ಸಾಗುವುದರಿಂದ ಸಂತೋಷ ನೆಲೆಸಿರುತ್ತದೆ. ತಂದೆ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಎಣಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ. ಉನ್ನತ ಶ್ರೇಣಿಯಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ಮಕ್ಕಳ ಸಹಾಯದಿಂದ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ಗಳಿಸುವಿರಿ. ವಯಸ್ಸಿನ ಅಂತರ ಮರೆತು ಎಲ್ಲರೊಂದಿಗೆ ಪ್ರೀತಿಯಿಂದ ವರ್ತಿಸಿ. ವಿದ್ಯಾರ್ಥಿಗಳು ಆತಂಕದ ನಡುವೆಯೂ ವಿದ್ಯಾಭ್ಯಾಸದಲ್ಲಿ ಮೊದಲ ಸ್ಥಾನದಲ್ಲಿ ಇರುತ್ತಾರೆ. ಮಕ್ಕಳ ವಿವಾಹವು ನೆರವೇರುವ ಸಾಧ್ಯತೆಗಳಿವೆ. ಸಂಗೀತ ನಾಟ್ಯದಲ್ಲಿ ಹೆಚ್ಚಿನ ಶ್ರದ್ಧೆ ಉಂಟಾಗುತ್ತದೆ.
ಪರಿಹಾರ : ಹಸುವಿನ ಸೇವೆ ಮಾಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಿತ್ತಳೆ
ಮಕರ
ಕುಟುಂಬದಲ್ಲಿ ಆನಂದ ನೆಲೆಸಿರುತ್ತದೆ. ಮನೆಯನ್ನು ಅಲಂಕರಿಸಲು ಹೊಸ ಆಕರ್ಷಕ ಪದಾರ್ಥಗಳನ್ನು ಕೊಳ್ಳುವಿರಿ. ಅನಿರೀಕ್ಷಿತ ಹಣದ ಸಹಾಯ ಒದಗಿ ಬರುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಪ್ರಾಮುಖ್ಯತೆ ನಿಮ್ಮದಾಗುತ್ತದೆ. ಸಹೋದ್ಯೋಗಿಗಳ ನಡುವೆ ಅತಿ ಮುಖ್ಯವಾದ ಸ್ಥಾನವನ್ನು ಅಲಂಕರಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ನಿಧಾನಗತಿಯಾದರೂ ವಿದ್ಯಾಭ್ಯಾಸದಲ್ಲಿ ಮುಂದೆ ಇರುತ್ತಾರೆ. ನಿಧಾನದ ಮಾತುಕತೆ ಇರುವ ಕಾರಣ ವಾದ ವಿವಾದಗಳು ನಿಮ್ಮಿಂದ ದೂರ ಉಳಿಯುತ್ತವೆ. ಕುಟುಂಬದ ಆಸ್ತಿಯ ವಿವಾದವು ಕಾನೂನಿನ ಮೂಲಕ ಬಗೆಹರಿಯುತ್ತದೆ. ದುಡುಕಿ ಮಾತನಾಡಿದರೆ ವಿವಾದ ಎದುರಿಸಬೇಕಾಗುತ್ತದೆ. ಹಣದ ಕೊರತೆ ಕಂಡು ಬರುವುದಿಲ್ಲ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಹಳದಿ ಬಣ್ಣದ ವಸ್ತ್ರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಕೆಂಪು
ಕುಂಭ
ಕುಟುಂಬದಲ್ಲಿ ಅತಿ ಮುಖ್ಯ ಕೆಲಸಗಳು ನಡೆಯಲಿವೆ. ಪರಸ್ಪರ ಇರುವ ಆತ್ಮೀಯ ಮನೋಭಾವನೆ ಕೌಟುಂಬಿಕ ಸಮಸ್ಯೆಗಳನ್ನು ದೂರ ಮಾಡುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಯಾವುದೇ ವಿಚಾರವಾದರೂ ಯೋಚಿಸಿ ತೀರ್ಮಾನ ತೆಗೆದುಕೊಳ್ಳುವ ಕಾರಣ ತೊಂದರೆ ಇರದು. ವಿದ್ಯಾರ್ಥಿಗಳು ಹೆಚ್ಚಿನ ಪರಿಶ್ರಮದಿಂದ ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಪಾಲುದಾರಿಕೆಯ ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಆದಾಯ ದೊರೆಯುತ್ತದೆ. ಸೋದರಿಯಿಂದ ಹಣದ ಸಹಾಯ ದೊರೆಯುತ್ತದೆ. ಅತಿ ಮುಖ್ಯವಾದ ವಿಚಾರಗಳನ್ನು ರಹಸ್ಯವಾಗಿ ಇಡುವಿರಿ. ವಯಸ್ಸಿನ ಅಂತರವಿಲ್ಲದೆ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವಿರಿ. ಸಾಲವಾಗಿ ಹಣ ನೀಡುವುದಾಗಲಿ ಅಥವಾ ತೆಗೆದುಕೊಳ್ಳುವುದಾಗಲಿ ಮಾಡಿದರೆ ತೊಂದರೆ ಉಂಟಾಗುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಎಣ್ಣೆ ಕರ್ಪೂರವನ್ನು ನೀಡಿ ದಿನದ ಕೆಲಸ ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಹಳದಿ
ಮೀನ
ಕುಟುಂಬದಲ್ಲಿ ಇರುವ ಪರಸ್ಪರ ವಿಶ್ವಾಸ ಶಾಂತಿ ಸಂಯಮವನ್ನು ಉಂಟುಮಾಡುತ್ತದೆ. ಮಾಡುವ ತಪ್ಪನ್ನು ಮನ್ನಿಸುವ ಕಾರಣ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿವೆ. ಉದ್ಯೋಗದಲ್ಲಿ ಹಿರಿಯರ ಸಹಕಾರ ದೊರೆತು ಯಶಸ್ಸನ್ನು ಗಳಿಸುವಿರಿ. ಹೆಚ್ಚಿನ ಪ್ರಯತ್ನದಿಂದ ಉದ್ಯೋಗದಲ್ಲಿ ಉನ್ನತ ಸ್ಥಾನ ಲಭಿಸುತ್ತದೆ. ಬುದ್ಧಿವಂತಿಕೆಯಿಂದ ಮಾತುಗಳನ್ನಾಡುವ ಕಾರಣ ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸನ್ನು ಕಾಣುವಿರಿ. ಸ್ಥಿರವಾದ ಮನಸ್ಸಿನಿಂದ ಅಧ್ಯಯನದಲ್ಲಿ ತೊಡಗಿದರೆ ವಿದ್ಯಾರ್ಥಿಗಳು ವಿಶೇಷ ಪ್ರತಿಫಲ ಗಳಿಸುತ್ತಾರೆ. ಅನಾವಶ್ಯಕ ಯೋಚನೆ ಮಾಡುವುದನ್ನು ಬಿಡುವುದು ಒಳ್ಳೆಯದು. ಯಾವುದೇ ವಿವಾದಗಳು ಎದುರಾದರು ಮಾತಿನ ಬಲದಿಂದ ಪರಿಹರಿಸಬಲ್ಲಿರಿ. ಆತ್ಮೀಯರಿಗೆ ಹಣದ ಸಹಾಯ ಮಾಡಬೇಕಾಗುತ್ತದೆ.
ಪರಿಹಾರ : ಗರ್ಭಿಣಿಯರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸುವುದು.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಹಸಿರು ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).