logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸಂಖ್ಯಾಶಾಸ್ತ್ರ ಸಂಖ್ಯೆ 7: ವಿಶೇಷ ವ್ಯಕ್ತಿಯೊಬ್ಬರನ್ನು ಭೇಟಿಯಾಗಲಿದ್ದೀರಿ, ಧಾರ್ಮಿಕ ಪ್ರವಾಸದಿಂದ ಮನಸ್ಸಿಗೆ ಶಾಂತಿ; 2025 ಭವಿಷ್ಯ

ಸಂಖ್ಯಾಶಾಸ್ತ್ರ ಸಂಖ್ಯೆ 7: ವಿಶೇಷ ವ್ಯಕ್ತಿಯೊಬ್ಬರನ್ನು ಭೇಟಿಯಾಗಲಿದ್ದೀರಿ, ಧಾರ್ಮಿಕ ಪ್ರವಾಸದಿಂದ ಮನಸ್ಸಿಗೆ ಶಾಂತಿ; 2025 ಭವಿಷ್ಯ

Rakshitha Sowmya HT Kannada

Nov 28, 2024 05:21 PM IST

google News

ರಾಡಿಕ್ಸ್‌ ಸಂಖ್ಯೆ 7 ಸಂಖ್ಯಾಶಾಸ್ತ್ರ ಭವಿಷ್ಯ 2025

  • Numerology Horoscope 2025: ಜನ್ಮ ದಿನಾಂಕ ಆಧರಿಸಿ ಭವಿಷ್ಯ, ದೋಷ, ಪರಿಹಾರದ ಬಗ್ಗೆ ಹೇಳುವಂತೆ ಸಂಖ್ಯಾಶಾಸ್ತ್ರದಲ್ಲಿ ಕೂಡಾ ಜನ್ಮದಿನಾಂಕವನ್ನು ಆಧರಿಸಿ ಭವಿಷ್ಯವನ್ನು ನಿರ್ಧರಿಸಲಾಗುತ್ತದೆ. 1 ರಿಂದ 9 ವರೆಗೆ ವಿವಿಧ ರಾಡಿಕ್ಸ್‌ಗೆ ಸೇರಿದ ಜನರು 2025ರಲ್ಲಿ ಯಾವ ರೀತಿ ಫಲಗಳನ್ನು ಪಡೆಯುತ್ತಾರೆ? ರಾಡಿಕ್ಸ್‌ ನಂಬರ್‌ 7ರ ಮುಂದಿನ ವರ್ಷದ ಭವಿಷ್ಯ ಹೇಗಿದೆ ನೋಡೋಣ.

 ರಾಡಿಕ್ಸ್‌ ಸಂಖ್ಯೆ 7 ಸಂಖ್ಯಾಶಾಸ್ತ್ರ ಭವಿಷ್ಯ 2025
ರಾಡಿಕ್ಸ್‌ ಸಂಖ್ಯೆ 7 ಸಂಖ್ಯಾಶಾಸ್ತ್ರ ಭವಿಷ್ಯ 2025 (PC; Canva)

ಸಂಖ್ಯಾಶಾಸ್ತ್ರ ಸಂಖ್ಯೆ 7: ವರ್ಷ ಮುಗಿಯುತ್ತಾ ಬಂತು. ಮೊನ್ನೆ ಮೊನ್ನೆಯಷ್ಟೇ ಹೊಸ ವರ್ಷ ಆಚರಿಸಿದಂತೆ ಇದೆ. ಇನ್ನು 1 ತಿಂಗಳು ಕಳೆದರೆ ಮತ್ತೊಂದು ವರ್ಷಕ್ಕೆ ಕಾಲಿಡುತ್ತೇವೆ. ಹೊಸ ವರ್ಷ ಹತ್ತಿರ ಬರುತ್ತಿದ್ದಂತೆ ಮನಸ್ಸಿನಲ್ಲಿ ನಾನಾ ಪ್ರಶ್ನೆಗಳು ಕಾಡತೊಡಗುತ್ತವೆ. ಈ ವರ್ಷ ನಮಗೆ ಸುಖವೋ, ದುಃಖವೋ ಅಥವಾ ಸಾಮಾನ್ಯವಾಗಿರುವುದಾ? ಏನೆಲ್ಲಾ ಬದಲಾವಣೆಗಳು ನಮ್ಮ ಜೀವನದಲ್ಲಿ ಉಂಟಾಗುತ್ತದೆ? ಈಗ ಎದುರಿಸುತ್ತಿರುವ ಸಮಸ್ಯೆಗಳು ಪರಿಹಾರವಾಗುವುದೋ ಇಲ್ಲವೋ? ಉದ್ಯೋಗ, ವೃತ್ತಿ, ಹಣಕಾಸು, ಸಂಬಂಧ, ಆರೋಗ್ಯ ಹೇಗಿರುತ್ತದೆ? ಈ ಎಲ್ಲಾ ಗೊಂದಲಗಳಿಗೂ ಉತ್ತರ ಇಲ್ಲಿದೆ. 2025 ರಲ್ಲಿ ರಾಡಿಕ್ಸ್‌ ನಂಬರ್‌ 7 ಜನರ ಭವಿಷ್ಯ ಈ ರೀತಿ ಇದೆ.

ತಾಜಾ ಫೋಟೊಗಳು

ನಾಳಿನ ದಿನ ಭವಿಷ್ಯ: ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಉತ್ತಮ ಅವಕಾಶಗಳಿವೆ, ಹಣದ ಪರಿಸ್ಥಿತಿ ಬಲವಾಗಿರುತ್ತೆ

Nov 28, 2024 04:11 PM

Pradosh Vrat: ಪ್ರದೋಷ ವ್ರತದ ದಿನ ಬಟ್ಟೆ ಸೇರಿ ಯಾವ ವಸ್ತುಗಳನ್ನು ದಾನ ಮಾಡಿದರೆ ಶುಭಫಲಗಳು ಸಿಗುತ್ತವೆ

Nov 27, 2024 04:51 PM

ನಾಳಿನ ದಿನ ಭವಿಷ್ಯ: ನಿಮ್ಮ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತೆ, ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ

Nov 27, 2024 03:42 PM

ಲಕ್ಷ್ಮಿ ನಾರಾಯಣ ಯೋಗದಿಂದ ಈ ರಾಶಿಯವರಿಗೆ 2025 ರಲ್ಲಿ ಭಾರಿ ಅದೃಷ್ಟ; ಉತ್ತಮ ಉದ್ಯೋಗಾವಕಾಶ, ಹಣದ ಹರಿವು ಹೆಚ್ಚಾಗುತ್ತೆ

Nov 27, 2024 02:08 PM

2025ರಲ್ಲಿ ಈ 5 ರಾಶಿಯವರು ಆರ್ಥಿಕ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಹೆಚ್ಚು, ಈ ರಾಶಿಗಳಲ್ಲಿ ನೀವು ಇದ್ದೀರಾ ನೋಡಿ

Nov 27, 2024 01:20 PM

ನಾಳಿನ ದಿನ ಭವಿಷ್ಯ: ನೀವು ಈ ರಾಶಿಯವರಾಗಿದ್ದರೆ ವ್ಯವಹಾರದಲ್ಲಿ ಲಾಭದಿಂದ ನಿಮ್ಮ ಆದಾಯ ಹೆಚ್ಚಾಗುತ್ತೆ, ಅನಗತ್ಯ ಕೋಪ ಮತ್ತು ವಾದಗಳನ್ನ ತಪ್ಪಿಸಿ

Nov 26, 2024 03:49 PM

ಸಂಖ್ಯಾಶಾಸ್ತ್ರದ ಪ್ರಕಾರ, ನಿಮ್ಮ ಜನ್ಮ ದಿನಾಂಕವನ್ನು ಒಟ್ಟುಗೂಡಿಸಿದಾಗ ಬರುವ ಸಂಖ್ಯೆಯೇ ನಿಮ್ಮ ಅದೃಷ್ಟ ಸಂಖ್ಯೆಯಾಗುತ್ತದೆ. ಇದನ್ನು ರಾಡಿಕ್ಸ್‌ ನಂಬರ್‌ ಎಂದು ಕರೆಯಲಾಗುತ್ತದೆ.

ಕೇತುವಿಗೆ ಸಂಬಂಧಿಸಿದ ರಾಡಿಕ್ಸ್‌ ನಂಬರ್‌ 7

ನೀವು ಯಾವುದೇ ತಿಂಗಳ 7, 16 ಅಥವಾ 25 ರಂದು ಜನಿಸಿದರೆ, ನಿಮ್ಮ ಮೂಲ ಸಂಖ್ಯೆ 7 ಆಗಿರುತ್ತದೆ. ಈ ಸಂಖ್ಯೆ ಕೇತುವನ್ನು ಪ್ರತಿನಿಧಿಸುತ್ತದೆ. ಇದರಿಂದ ನೀವು ವಿಬಿನ್ನ ವ್ಯಕ್ತಿತ್ವವನ್ನು ಹೊಂದಲಿದ್ದೀರಿ. ನೀವು ಎಲ್ಲರನ್ನೂ ಸಂತೋಷವಾಗಿಡಲು ಪ್ರಯತ್ನಿಸುತ್ತೀರಿ, ಆದರೆ ಕೆಲವರು ನಿಮ್ಮ ಭಾವನೆಗಳನ್ನು ನೋಯಿಸುವ ಸಾಧ್ಯತೆ ಇದೆ. ಇಂಥ ವ್ಯಕ್ತಿಗಳಿಂದ ನೀವು ಬಹಳ ದೂರವಿರಬೇಕು.

ಸಂಖ್ಯಾಶಾಸ್ತ್ರದ ಜಾತಕ 2025ರ ಪ್ರಕಾರ ನೀವು ಮುಂದಿನ ವರ್ಷ ನೀವು ಇರುವ ಸ್ಥಳವನ್ನು ಬಿಟ್ಟು ಪರ ಊರಿಗೆ ಹೋಗಿ ಉದ್ಯೋಗದಲ್ಲಿ ಯಶಸ್ಸು ಸಾಧಿಸಲಿದ್ದೀರಿ. ನೀವು ಹೊಸ ಸ್ಥಳಗಳಿಗೆ ಭೇಟಿ ನೀಡುವ ಮತ್ತು ಹೊಸ ವಿಷಯಗಳನ್ನು ಕಲಿಯುವ ಅಭ್ಯಾಸವನ್ನು ಬೆಳೆಸಿಕೊಳ್ಳಬಹುದು. ನಿಮ್ಮ ವ್ಯಕ್ತಿತ್ವದಿಂದಲೇ ಮತ್ತೊಬ್ಬರಿಗೆ ನೀವು ನಿಗೂಢ ವ್ಯಕ್ತಿಯಾಗಿ ಕಾಣಿಸಬಹುದು. ಸಾಮಾನ್ಯವಾಗಿ ನಿಮ್ಮನ್ನು ಎಲ್ಲರಿಂದ ಸುಲಭವಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ.

ಹೊಸ ವಿಷಯಗಳನ್ನು ಕಲಿಯುವಿರಿ

2025 ರಲ್ಲಿ ನೀವು 7, 9, 1, 6, ಮತ್ತು 5 ಸಂಖ್ಯೆಯ ವ್ಯಕ್ತಿಗಳಿಂದ ಬಹಳ ಪ್ರಭಾವಿತರಾಗುತ್ತೀರಿ. ಈ ವರ್ಷ ಸಂಖ್ಯೆ 1 ನಿಮಗೆ ಸರಾಸರಿ ಫಲಿತಾಂಶಗಳನ್ನು ನೀಡಬಹುದಾದರೂ, ಸಂಖ್ಯೆ 9 ನಿಮಗೆ ಅನುಕೂಲಕರವಾಗಿಲ್ಲ. ನೀವು ಸಂಖ್ಯೆ 5 ಮತ್ತು 6 ರಿಂದ ಧನಾತ್ಮಕ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ಆದಾಗ್ಯೂ, ಈ ವರ್ಷದ ಅತ್ಯಂತ ಮಹತ್ವದ ಸಂಖ್ಯೆ, 7, ಸಂಪೂರ್ಣವಾಗಿ ನಿಮ್ಮ ಪರವಾಗಿ ಇರುತ್ತದೆ. ಈ ವರ್ಷ ನಿಮ್ಮ ಕಾರ್ಯಕ್ಷಮತೆಯು ನಿಮ್ಮನ್ನು ಯಶಸ್ವಿ ವ್ಯಕ್ತಿಯನ್ನಾಗಿ ಮಾಡುತ್ತದೆ. 2025ರಲ್ಲಿ ನೀವು ಬಹಳಷ್ಟು ಹೊಸ ವಿಷಯಗಳನ್ನು ಕಲಿಯಲಿದ್ದೀರಿ. ನಿಮ್ಮ ಸುತ್ತಮುತ್ತ ಇರುವ ಜನರಲ್ಲಿ ಅಸಲಿ ಯಾರು ನಕಲಿ ಯಾರು ಎಂಬುದು ತಿಳಿಯುತ್ತದೆ.

ಈ ವರ್ಷ ನಿಮ್ಮ ಗುರಿ ಏನು ಎಂಬುದನ್ನು ನಿರ್ಧರಿಸಲು ನಿಮಗೆ ಸಾಧ್ಯವಾಗುತ್ತದೆ. ನೀವು ಧಾರ್ಮಿಕ ಪ್ರವಾಸಗಳಿಗೆ ಹೋಗಬಹುದು. ಜೀವನದ ಬಗ್ಗೆ ಹೆಚ್ಚಿನ ಜ್ಞಾನವಿರುವ ವ್ಯಕ್ತಿಯೊಬ್ಬರ ಪರಿಚಯವಾಗಲಿದೆ. ಇದರಿಂದ ನೀವು ಇನ್ನಷ್ಟು ಕಲಿತು ಸಾಧನೆ ಮಾಡಲು ಅನುಕೂಲಕರವಾಗಿದೆ. ಮುಂದಿನ ವರ್ಷ ನಿಮಗೆ ಮಿಶ್ರ ಫಲಿತಾಂಶವಿದೆ. ಮದುವೆ ಮತ್ತು ಪ್ರಣಯ ಸಂಬಂಧಗಳಿಗೆ ಸಂಬಂಧಿಸಿದಂತೆ ನೀವು ಉತ್ತಮ ಫಲಗಳನ್ನು ಪಡೆಯಲಿದ್ದೀರಿ. ನೀವು ವಿದ್ಯಾರ್ಥಿಯಾಗಿದ್ದರೆ ಧನಾತ್ಮಕ ಫಲಿತಾಂಶಗಳನ್ನು ಪಡೆಯಲಿದ್ದೀರಿ.

ಪರಿಹಾರ: ಗಣಪತಿ ಅಥರ್ವಶೀರ್ಷವನ್ನು ನಿಯಮಿತವಾಗಿ ಪಠಿಸಿ. ಪ್ರತಿ ಮಂಗಳವಾರ, ಸುಂದರಕಾಂಡವನ್ನು ಪಠಿಸಿ. ನವರಾತ್ರಿಯ ಸಮಯದಲ್ಲಿ, ಪುಟ್ಟ ಹೆಣ್ಣು ಮಕ್ಕಳನ್ನು ಪೂಜಿಸಿ ಮತ್ತು ಅವರ ಆಶೀರ್ವಾದ ಪಡೆಯಿರಿ.

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ