logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  30 ವರ್ಷಗಳ ನಂತರ ಸೂರ್ಯ-ಶನಿಯ ಸಂಗಮ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ? ಇಲ್ಲಿದೆ ವಿವರ

30 ವರ್ಷಗಳ ನಂತರ ಸೂರ್ಯ-ಶನಿಯ ಸಂಗಮ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ? ಇಲ್ಲಿದೆ ವಿವರ

Reshma HT Kannada

Feb 18, 2024 12:47 PM IST

google News

30 ವರ್ಷಗಳ ನಂತರ ಸೂರ್ಯ-ಶನಿಯ ಸಂಗಮ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

    • 30 ವರ್ಷಗಳ ನಂತರ ಕುಂಭ ರಾಶಿಯಲ್ಲಿ ಸೂರ್ಯ ಹಾಗೂ ಶನಿದೇವ ಭೇಟಿಯಾಗಲಿದ್ದಾರೆ. ಇದರಿಂದ ಕೆಲವು ರಾಶಿಯವರ ಬದುಕಿನಲ್ಲಿ ಅನಿರೀಕ್ಷಿತ ತಿರುವುಗಳು ಎದುರಾಗಲಿದೆ. ಹಾಗಾದ್ರೆ ಇದರಿಂದ ಯಾವ ರಾಶಿಗೆ ಶುಭ, ಯಾರಿಗೆ ಅಶುಭ, ದೋಷ ಪರಿಹಾರ ಏನು ಮಾಡಬೇಕು ಇಲ್ಲಿದೆ ವಿವರ.
30 ವರ್ಷಗಳ ನಂತರ ಸೂರ್ಯ-ಶನಿಯ ಸಂಗಮ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?
30 ವರ್ಷಗಳ ನಂತರ ಸೂರ್ಯ-ಶನಿಯ ಸಂಗಮ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ಶನಿದೇವನು ಗ್ರಹಗಳ ತೀರ್ಪುಗಾರ. ಅವನು ಕರ್ಮದ ಪ್ರಕಾರ ಪ್ರತಿಫಲವನ್ನು ನೀಡುತ್ತಾನೆ. ಆದ್ದರಿಂದಲೇ ಆತನನ್ನು ಕರ್ಮಫಲದಾತ ಎಂದೂ ಕರೆಯುತ್ತಾರೆ. ಎರಡೂವರೆ ವರ್ಷಗಳಿಗೊಮ್ಮೆ ಶನಿಯು ತನ್ನ ರಾಶಿಚಕ್ರವನ್ನು ಬದಲಾಯಿಸುತ್ತಾನೆ. 2024ರಲ್ಲಿ, ಶನಿಯು ಕುಂಭರಾಶಿಯಲ್ಲಿ ಇರಲಿದ್ದಾನೆ.

ತಾಜಾ ಫೋಟೊಗಳು

ನಾಳಿನ ದಿನ ಭವಿಷ್ಯ: ಅವಿವಾಹಿತರಿಗೆ ಮದುವೆಯಾಗುವ ಯೋಗವಿದೆ, ಆದಾಯದ ಹೊಸ ಮೂಲ ಹುಡುಕುವುದು ಅನಿವಾರ್ಯವಾಗಿರುತ್ತೆ

Nov 29, 2024 04:10 PM

ನಾಳಿನ ದಿನ ಭವಿಷ್ಯ: ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಉತ್ತಮ ಅವಕಾಶಗಳಿವೆ, ಹಣದ ಪರಿಸ್ಥಿತಿ ಬಲವಾಗಿರುತ್ತೆ

Nov 28, 2024 04:11 PM

Pradosh Vrat: ಪ್ರದೋಷ ವ್ರತದ ದಿನ ಬಟ್ಟೆ ಸೇರಿ ಯಾವ ವಸ್ತುಗಳನ್ನು ದಾನ ಮಾಡಿದರೆ ಶುಭಫಲಗಳು ಸಿಗುತ್ತವೆ

Nov 27, 2024 04:51 PM

ನಾಳಿನ ದಿನ ಭವಿಷ್ಯ: ನಿಮ್ಮ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತೆ, ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ

Nov 27, 2024 03:42 PM

ಲಕ್ಷ್ಮಿ ನಾರಾಯಣ ಯೋಗದಿಂದ ಈ ರಾಶಿಯವರಿಗೆ 2025 ರಲ್ಲಿ ಭಾರಿ ಅದೃಷ್ಟ; ಉತ್ತಮ ಉದ್ಯೋಗಾವಕಾಶ, ಹಣದ ಹರಿವು ಹೆಚ್ಚಾಗುತ್ತೆ

Nov 27, 2024 02:08 PM

2025ರಲ್ಲಿ ಈ 5 ರಾಶಿಯವರು ಆರ್ಥಿಕ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಹೆಚ್ಚು, ಈ ರಾಶಿಗಳಲ್ಲಿ ನೀವು ಇದ್ದೀರಾ ನೋಡಿ

Nov 27, 2024 01:20 PM

ಸೂರ್ಯನು ಕೂಡ ಸದ್ಯದಲ್ಲೇ ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಗ್ರಹಗಳ ರಾಜನೆಂದು ಪರಿಗಣಿಸಲ್ಪಟ್ಟಿರುವ ಸೂರ್ಯನು ಫೆಬ್ರವರಿ 13 ರಂದು ಮಕರ ರಾಶಿಯನ್ನು ತೊರೆದು ಕುಂಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಮಾರ್ಚ್ 14, 2024 ರವರೆಗೆ ಮಕರದಲ್ಲೇ ಇರುತ್ತಾನೆ. ಸುಮಾರು 30 ವರ್ಷಗಳ ನಂತರ, ತಂದೆ ಮತ್ತು ಮಗ ಕುಂಭ ರಾಶಿಯಲ್ಲಿ ಭೇಟಿಯಾಗಲಿದ್ದಾರೆ. ಇದು ಅನೇಕ ರಾಶಿಚಕ್ರ ಚಿಹ್ನೆಗಳಿಗೆ ಮಂಗಳಕರವಾಗಿರುತ್ತದೆ ಮತ್ತು ಇತರರಿಗೆ ಕಷ್ಟವನ್ನು ತರುತ್ತದೆ. ಸಿಂಹ ಮತ್ತು ಧನು ರಾಶಿಯ ಜೊತೆಗೆ ಯಾವ ರಾಶಿಚಕ್ರದ ಚಿಹ್ನೆಗಳು ಅವರಿಗೆ ಅದೃಷ್ಟವನ್ನು ತರುತ್ತವೆ ಎಂಬುದನ್ನು ಕಂಡುಹಿಡಿಯೋಣ.

ಸಿಂಹ

ಕುಂಭ ರಾಶಿಯಲ್ಲಿ ಸೂರ್ಯ ಮತ್ತು ಶನಿ ಗ್ರಹಗಳ ಸಂಯೋಜನೆಯಿಂದಾಗಿ ವೈವಾಹಿಕ ಜೀವನದಲ್ಲಿನ ಸಮಸ್ಯೆಗಳು ದೂರವಾಗುತ್ತವೆ. ಪ್ರೇಮ ಸಂಬಂಧ ಮಧುರವಾಗಿರುತ್ತದೆ. ಕಷ್ಟದ ಸಮಯದಲ್ಲಿ ನಿಮ್ಮ ಸಂಗಾತಿಯನ್ನು ಬೆಂಬಲಿಸಲು ಪ್ರಯತ್ನಿಸಿ. ವೃತ್ತಿಪರ ಜೀವನದಲ್ಲಿ ಉತ್ತಮ ಪ್ಯಾಕೇಜ್‌ನೊಂದಿಗೆ ಹೊಸ ಉದ್ಯೋಗ ಪಡೆಯಲಿದ್ದೀರಿ. ಉದ್ಯೋಗದ ನಿರೀಕ್ಷೆಯಲ್ಲಿರುವವರು ಸಂದರ್ಶನದಲ್ಲಿ ಯಶಸ್ವಿಯಾಗುತ್ತಾರೆ. ಸಮಾಜದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಹಣ ಗಳಿಸಲು ಹೊಸ ಅವಕಾಶಗಳು ಬರಲಿವೆ. ವ್ಯಾಪಾರ ವಿಸ್ತರಣೆಗೆ ಉತ್ತಮ ಸಮಯ.

ಧನು ರಾಶಿ

ಸೂರ್ಯನು ಕುಂಭ ರಾಶಿಗೆ ಪ್ರವೇಶಿಸಿವುದರಿಂದ ಧನು ರಾಶಿಯವರಿಗೆ ಸಾಕಷ್ಟು ಪ್ರಯೋಜನವಾಗಲಿದೆ. ಉದ್ಯೋಗ ಮತ್ತು ವ್ಯವಹಾರಿಕ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ಸಂಪತ್ತು ವೃದ್ಧಿಯಾಗಲಿದೆ. ವ್ಯಾಪಾರ ಲಾಭವಿದೆ. ಉದ್ಯೋಗ ಮತ್ತು ವ್ಯಾಪಾರಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಯಾಗುತ್ತದೆ. ಬಂಧುಗಳ ನೆರವಿನಿಂದ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ.

ಕುಂಭ ರಾಶಿ

ತಂದೆ ಮತ್ತು ಮಗ (ಸೂರ್ಯ-ಶನಿ) ಇಬ್ಬರೂ ಈ ರಾಶಿಯಲ್ಲಿ ಸಂಧಿಸುತ್ತಿದ್ದಾರೆ. ಪರಿಣಾಮವಾಗಿ ಕುಂಭ ರಾಶಿಯವರಿಗೆ ಮಿಶ್ರ ಫಲ ದೊರೆಯಲಿದೆ. ಹೊಸ ಯೋಜನೆಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಿ. ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಮತ್ತು ಬೌದ್ಧಿಕ ಕೆಲಸದಲ್ಲಿ ಅಪಾರ ಯಶಸ್ಸನ್ನು ಸಾಧಿಸಲಿದ್ದೀರಿ. ಹಿಂದಿನ ಹೂಡಿಕೆಗಳಿಂದ ನೀವು ಉತ್ತಮ ಆದಾಯವನ್ನು ಪಡೆಯುತ್ತೀರಿ. ಹಣದ ಹರಿವಿನ ಹೊಸ ಮಾರ್ಗಗಳು ಸುಗಮವಾಗಲಿವೆ. ಸಂಪತ್ತು ಹೆಚ್ಚಾಗುವ ಸಾಧ್ಯತೆಗಳಿವೆ. ಕುಟುಂಬ ಸದಸ್ಯರೊಂದಿಗೆ ಧಾರ್ಮಿಕ ಸ್ಥಳಕ್ಕೆ ಹೋಗಿ.

ಮಿಥುನ ರಾಶಿ

ಮಿಥುನ ರಾಶಿಯವರ ದಾಂಪತ್ಯ ಜೀವನ ಚೆನ್ನಾಗಿರುತ್ತದೆ. ಸಂಪತ್ತಿನ ಯೋಗ ಸಿಗಲಿದೆ. ಸಂತೋಷ ಉಕ್ಕಿ ಹರಿಯುತ್ತದೆ. ಸೂರ್ಯ ಮತ್ತು ಶನಿ ಸಂಯೋಜನೆಯು ಮಕರ ರಾಶಿಯವರಿಗೆ ಹಠಾತ್ ಆರ್ಥಿಕ ಲಾಭವನ್ನು ತರುತ್ತದೆ.

ಈ ರಾಶಿಯವರು ಎಚ್ಚರದಿಂದಿರಿ

ಫೆಬ್ರವರಿಯಲ್ಲಿ ಶನಿಯ ಪ್ರಭಾವ ಹೆಚ್ಚಿರುತ್ತದೆ. ಈ ಪರಿಸ್ಥಿತಿಯಲ್ಲಿ, ಕೆಲವು ರಾಶಿಯ ಜನರು ಸ್ವಲ್ಪ ಜಾಗರೂಕರಾಗಿರಬೇಕು. ಮೇಷ ರಾಶಿ ಮತ್ತು ವೃಷಭ ರಾಶಿಯ ಜನರು ಶನಿಯ ಪ್ರಭಾವದಿಂದ ಹಠಾತ್ ಆರ್ಥಿಕ ನಷ್ಟವನ್ನು ಅನುಭವಿಸುವ ಸಾಧ್ಯತೆಯಿದೆ. ಈ ಸಮಯದಲ್ಲಿ ಕನ್ಯಾ ರಾಶಿಯವರು ತಮ್ಮ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಕಚೇರಿ ಮತ್ತು ವ್ಯಾಪಾರ ಸ್ಥಳದಲ್ಲಿ ಸಮಸ್ಯೆಗಳು ಎದುರಾಗಬಹುದು. ನೀವು ಶನಿಯ ಕೆಟ್ಟ ಪರಿಣಾಮವನ್ನು ಕಡಿಮೆ ಮಾಡಲು ಬಯಸಿದರೆ, ಈ ರಾಶಿಗಳ ಜಾತಕರು ಶನಿ ಪರಿಹಾರಗಳನ್ನು ಅನುಸರಿಸುವುದು ಉತ್ತಮ.

(ಗಮನಿಸಿ: ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ ʼಹಿಂದೂಸ್ತಾನ್ ಟೈಮ್ಸ್ ಕನ್ನಡʼ ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.)

(This copy first appeared in Hindustan Times Kannada website. To read more like this please logon to kannada.hindustantimes.com )

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ