logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Ram Mandir: ಅಯೋಧ್ಯೆಯಲ್ಲಿ ಜ 22ಕ್ಕೆ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ; ಜ 1 ರಿಂದ 15ರ ತನಕ ಮನೆ ಮನೆಗೆ ಮಂತ್ರಾಕ್ಷತೆ: ವಿಹಿಂಪ

Ram Mandir: ಅಯೋಧ್ಯೆಯಲ್ಲಿ ಜ 22ಕ್ಕೆ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ; ಜ 1 ರಿಂದ 15ರ ತನಕ ಮನೆ ಮನೆಗೆ ಮಂತ್ರಾಕ್ಷತೆ: ವಿಹಿಂಪ

Umesh Kumar S HT Kannada

Jan 19, 2024 11:12 AM IST

google News

ಬೆಂಗಳೂರು ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಬುಧವಾರ (ಡಿ.27) ವಿಶ್ವ ಹಿಂದೂ ಪರಿಷತ್‌ನ ಬೆಂಗಳೂರು ಉತ್ತರ ವಿಭಾಗದ ಕಾರ್ಯದರ್ಶಿ ವೆಂಕಟೇಶ್‌, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರೀ ಅವರು ಅಯೋಧ್ಯೆಯ ರಾಮಮಂದಿರದ ಭಾವಚಿತ್ರ ಮತ್ತು ನಿವೇದನಾ ಪತ್ರಗಳನ್ನು ಬಿಡುಗಡೆ ಮಾಡಿದರು.

  • ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಗೆ ಮೊದಲು ವಿಶ್ವ ಹಿಂದೂ ಪರಿಷತ್, ಜನವರಿ 1ರಿಂದ 15ರ ತನಕ ಪವಿತ್ರ ಮಂತ್ರಾಕ್ಷತೆ, ಅಯೋಧ್ಯೆ ರಾಮಮಂದಿರದ ಭಾವಚಿತ್ರ ಮತ್ತು ನಿವೇದನಾ ಪತ್ರವನ್ನು ಮನೆ ಮನೆಗೆ ತಲುಪಿಸುವ ಅಭಿಯಾನವನ್ನು ನಡೆಸಲಿದೆ. 

ಬೆಂಗಳೂರು ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಬುಧವಾರ (ಡಿ.27) ವಿಶ್ವ ಹಿಂದೂ ಪರಿಷತ್‌ನ ಬೆಂಗಳೂರು ಉತ್ತರ ವಿಭಾಗದ ಕಾರ್ಯದರ್ಶಿ ವೆಂಕಟೇಶ್‌, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರೀ  ಅವರು ಅಯೋಧ್ಯೆಯ ರಾಮಮಂದಿರದ ಭಾವಚಿತ್ರ ಮತ್ತು ನಿವೇದನಾ ಪತ್ರಗಳನ್ನು ಬಿಡುಗಡೆ ಮಾಡಿದರು.
ಬೆಂಗಳೂರು ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಬುಧವಾರ (ಡಿ.27) ವಿಶ್ವ ಹಿಂದೂ ಪರಿಷತ್‌ನ ಬೆಂಗಳೂರು ಉತ್ತರ ವಿಭಾಗದ ಕಾರ್ಯದರ್ಶಿ ವೆಂಕಟೇಶ್‌, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರೀ ಅವರು ಅಯೋಧ್ಯೆಯ ರಾಮಮಂದಿರದ ಭಾವಚಿತ್ರ ಮತ್ತು ನಿವೇದನಾ ಪತ್ರಗಳನ್ನು ಬಿಡುಗಡೆ ಮಾಡಿದರು.

ಬೆಂಗಳೂರು: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22ರಂದು ರಾಮಲಲ್ಲಾ (ಬಾಲ ರಾಮ)ನ ಪ್ರಾಣಪ್ರತಿಷ್ಠೆ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಜನವರಿ 1ರಿಂದ 15ರ ತನಕ ಮನೆ ಮನೆಗೆ ಪವಿತ್ರ ಮಂತ್ರಾಕ್ಷತೆ, ರಾಮಮಂದಿರದ ಭಾವಚಿತ್ರ ಮತ್ತು ನಿವೇದನಾ ಪತ್ರಗಳನ್ನು ತಲುಪಿಸುವ ಕೆಲಸವನ್ನು ವಿಶ್ವ ಹಿಂದೂ ಪರಿಷತ್ ಕೈಗೊಳ್ಳಲಿದೆ.

ತಾಜಾ ಫೋಟೊಗಳು

ನಾಳಿನ ದಿನ ಭವಿಷ್ಯ: ಅವಿವಾಹಿತರಿಗೆ ಮದುವೆಯಾಗುವ ಯೋಗವಿದೆ, ಆದಾಯದ ಹೊಸ ಮೂಲ ಹುಡುಕುವುದು ಅನಿವಾರ್ಯವಾಗಿರುತ್ತೆ

Nov 29, 2024 04:10 PM

ನಾಳಿನ ದಿನ ಭವಿಷ್ಯ: ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಉತ್ತಮ ಅವಕಾಶಗಳಿವೆ, ಹಣದ ಪರಿಸ್ಥಿತಿ ಬಲವಾಗಿರುತ್ತೆ

Nov 28, 2024 04:11 PM

Pradosh Vrat: ಪ್ರದೋಷ ವ್ರತದ ದಿನ ಬಟ್ಟೆ ಸೇರಿ ಯಾವ ವಸ್ತುಗಳನ್ನು ದಾನ ಮಾಡಿದರೆ ಶುಭಫಲಗಳು ಸಿಗುತ್ತವೆ

Nov 27, 2024 04:51 PM

ನಾಳಿನ ದಿನ ಭವಿಷ್ಯ: ನಿಮ್ಮ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತೆ, ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ

Nov 27, 2024 03:42 PM

ಲಕ್ಷ್ಮಿ ನಾರಾಯಣ ಯೋಗದಿಂದ ಈ ರಾಶಿಯವರಿಗೆ 2025 ರಲ್ಲಿ ಭಾರಿ ಅದೃಷ್ಟ; ಉತ್ತಮ ಉದ್ಯೋಗಾವಕಾಶ, ಹಣದ ಹರಿವು ಹೆಚ್ಚಾಗುತ್ತೆ

Nov 27, 2024 02:08 PM

2025ರಲ್ಲಿ ಈ 5 ರಾಶಿಯವರು ಆರ್ಥಿಕ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಹೆಚ್ಚು, ಈ ರಾಶಿಗಳಲ್ಲಿ ನೀವು ಇದ್ದೀರಾ ನೋಡಿ

Nov 27, 2024 01:20 PM

ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಇಂದು (ಡಿ.27) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಜನವರಿ 1ರಿಂದ 15ರ ತನಕ ನಡೆಯುವ ಈ ಸಂಪರ್ಕ ಅಭಿಯಾನದಲ್ಲಿ ಕಾರ್ಯಕರ್ತರು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಎಲ್ಲ ಮನೆಗಳಿಗೆ ಈ ಪ್ರಸಾದವನ್ನು ತಲುಪಿಸಲಿದ್ದಾರೆ ಎಂದು ತಿಳಿಸಿದರು.

ಅಯೋಧ್ಯೆಯ ಶ್ರೀ ರಾಮ ಮಂದಿರ ನಿರ್ಮಾಣವು ಸುಮಾರು 500 ವರ್ಷಗಳ ಸುದೀರ್ಘ ಸಂಘರ್ಷದ ಫಲಶ್ರುತಿಯಾಗಿ ಮೂಡಿರುವಂಥದ್ದು. ಮೂರು ವರ್ಷಗಳ ಹಿಂದೆ ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದಲ್ಲಿ ಕೋಟ್ಯಂತರ ಶ್ರೀರಾಮ ಭಕ್ತರು ಸಮರ್ಪಣೆ ಮಾಡಿದ ಹಣದಿಂದಲೇ ಈಗ ರಾಮಮಂದಿರವು ನಿರ್ಮಾಣವಾಗಿದೆ. ಈಗ ರಾಮಮಂದಿರದಲ್ಲಿ ಶ್ರೀ ರಾಮನ ಪ್ರಾಣಪ್ರತಿಷ್ಠೆಯ ಸಂಭ್ರಮ. ಜನವರಿ 22ರಂದು ಈ ಕಾರ್ಯಕ್ರಮ ನಡೆಯಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಹೇಳಿದರು.

ಇದೀಗ ರಾಮಲಲ್ಲಾ ಪ್ರಾಣಪ್ರತಿಷ್ಠೆಗೂ ಮೊದಲೇ ದೇಶದ ಪ್ರತಿ ಮನೆಗೂ ಅಯೋಧ್ಯೆಯಿಂದ ಮಂತ್ರಾಕ್ಷತೆಯನ್ನು ತಲುಪಿಸುವ ಯೋಜನೆಯನ್ನು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರೂಪಿಸಿದೆ. ಈ ಮಹತ್ವದ ಕಾರ್ಯದ ಹೊಣೆಗಾರಿಕೆಯನ್ನು ವಿಶ್ವ ಹಿಂದೂ ಪರಿಷತ್ತಿಗೆ ವಹಿಸಿತ್ತು. ಅದರಂತೆ ವಿಶ್ವ ಹಿಂದೂ ಪರಿಷತ್ತು ಪರಿವಾರದ ಎಲ್ಲಾ ಸಂಘಟನೆಗಳು ಮತ್ತು ಶ್ರೀರಾಮ ಭಕ್ತರನ್ನು ಜೋಡಿಸಿಕೊಂಡು ಸಂಪರ್ಕ ಅಭಿಯಾನದ ಮೂಲಕ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆ, ರಾಮಮಂದಿರದ ಭಾವಚಿತ್ರ ಮತ್ತು ನಿವೇದನಾ ಪತ್ರಗಳನ್ನು ತಲುಪಿಸುವ ಯೋಜನೆಯನ್ನು ರೂಪಿಸುತ್ತಿದೆ ಎಂದು ನಾ. ತಿಪ್ಪೇಸ್ವಾಮಿ ವಿವರಿಸಿದರು.

ಜನವರಿ 22ರಂದು ದೇಶವಾಸಿಗಳು ಮಾಡಬೇಕಾದ್ದು ಇಷ್ಟು

ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠೆ ಆಗುವ ಸಮಯದಲ್ಲಿ ನಮ್ಮ ನಮ್ಮ ನಗರಗಳಲ್ಲಿ ಮತ್ತು ಗ್ರಾಮಗಳಲ್ಲಿರುವ ಮಂದಿರಗಳಲ್ಲಿ ವಿಶೇಷ ಸತ್ಸಂಗ ಮತ್ತು ಭಜನೆಗಳು ನಡೆಯಲಿವೆ. ಆಸುಪಾಸಿನಲ್ಲಿರುವ ಎಲ್ಲ ಹಿಂದೂಗಳು ಈ ಸತ್ಸಂಗಗಳಲ್ಲಿ ಪಾಲ್ಗೊಳ್ಳುವಂತೆ, ಅಲ್ಲಿಯೇ ವ್ಯವಸ್ಥೆ ಮಾಡಿರುವ ಪರದೆಯಲ್ಲಿ ಅಯೋಧ್ಯೆಯ ಕಾರ್ಯಕ್ರಮದ ನೇರಪ್ರಸಾರವನ್ನು ವೀಕ್ಷಿಸಬಹುದು.

ಅಂದು ಸಂಜೆ ಸೂರ್ಯಾಸ್ತದ ನಂತರ ಪ್ರತಿಯೊಂದು ಮನೆಯ ಮುಂದೆ ಕನಿಷ್ಠ ಐದು ದೀಪಗಳನ್ನು ಬೆಳಗಿ, ಅಯೋಧ್ಯೆಯ ಕಡೆ ಮುಖಮಾಡಿ ಆರತಿಯನ್ನು ಬೆಳಗಿ ದೀಪೋತ್ಸವದಲ್ಲಿ ಪಾಲ್ಗೊಳ್ಳುವಂತೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಮಸ್ತ ಹಿಂದೂ ಸಮಾಜಕ್ಕೆ ಕರೆ ನೀಡಿರುವುದಾಗಿ ನಾ. ತಿಪ್ಪೇಸ್ವಾಮಿಯವರು ವಿವರಿಸಿದರು.

ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರೀ ಈ ಸಂದರ್ಭದಲ್ಲಿ ಜತೆಗಿದ್ದರು.

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ