logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಭಗವದ್ಗೀತೆ: ಮನುಷ್ಯನ ಜೀವನದ ಅನಿವಾರ್ಯ ಸತ್ಯವೆಂದರೆ ಸಾವು; ಶ್ರೀಕೃಷ್ಣನ ಮಾತಿನ ಅರ್ಥ ಹೀಗಿದೆ

ಭಗವದ್ಗೀತೆ: ಮನುಷ್ಯನ ಜೀವನದ ಅನಿವಾರ್ಯ ಸತ್ಯವೆಂದರೆ ಸಾವು; ಶ್ರೀಕೃಷ್ಣನ ಮಾತಿನ ಅರ್ಥ ಹೀಗಿದೆ

Raghavendra M Y HT Kannada

Aug 21, 2023 06:00 AM IST

google News

ಶ್ರೀಕೃಷ್ಣನು ಅರ್ಜುನನಿಗೆ ನೀಡಿದ ಧರ್ಮೋಪದೇಶದ ಸಾರವೇ ಭಗವದ್ಗೀತೆಯಾಗಿದೆ. ಎದುರಾಳಿ ಬಣದಿಂದ ತನ್ನ ಬಂಧುಗಳೊಂದಿಗೆ ಹೋರಾಡಲು ಅರ್ಜುನ ನಿರಾಕರಿಸಿದಾಗ ಶ್ರೀಕೃಷ್ಣ ಪಾಂಡವರಲ್ಲಿ ಒಬ್ಬನಾದ ಅರ್ಜುನನಿಗೆ ಈ ರೀತಿಯ ಉಪದೇಶ ನೀಡುತ್ತಾನೆ.

  • ಕುರುಕ್ಷೇತ್ರದ ಯುದ್ಧದಲ್ಲಿ ಕೃಷ್ಣನು ಅರ್ಜುನನಿಗೆ ನೀಡಿದ ಧರ್ಮೋಪದೇಶದ ಸಾರವೇ ಭಗವದ್ಗೀತೆ. ದೇವರ ಗೀತೆ ಎಂಬ ಅರ್ಥ ಬರುವ ಭಗವದ್ಗೀತೆ ವಿಶ್ವದಲ್ಲಿರುವ ಧರ್ಮಗ್ರಂಥಗಳಲ್ಲಿ ಒಂದಾಗಿದೆ. ಸತ್ಯದ ಮಾರ್ಗವನ್ನು ಅನುಸರಿಸುವುದು ಗೀತೆಯ ಅರ್ಥವಾಗಿದೆ. ಮನುಷ್ಯನ ಜೀವನದ ಅನಿವಾರ್ಯ ಸತ್ಯವೆಂದರೆ ಸಾವು ಎಂಬ ಶ್ರೀಕೃಷ್ಣ ಮಾತಿನ ಅರ್ಥ ತಿಳಿಯಿರಿ.

ಶ್ರೀಕೃಷ್ಣನು ಅರ್ಜುನನಿಗೆ ನೀಡಿದ ಧರ್ಮೋಪದೇಶದ ಸಾರವೇ ಭಗವದ್ಗೀತೆಯಾಗಿದೆ. ಎದುರಾಳಿ ಬಣದಿಂದ ತನ್ನ ಬಂಧುಗಳೊಂದಿಗೆ ಹೋರಾಡಲು ಅರ್ಜುನ ನಿರಾಕರಿಸಿದಾಗ ಶ್ರೀಕೃಷ್ಣ ಪಾಂಡವರಲ್ಲಿ ಒಬ್ಬನಾದ ಅರ್ಜುನನಿಗೆ ಈ ರೀತಿಯ ಉಪದೇಶ ನೀಡುತ್ತಾನೆ.
ಶ್ರೀಕೃಷ್ಣನು ಅರ್ಜುನನಿಗೆ ನೀಡಿದ ಧರ್ಮೋಪದೇಶದ ಸಾರವೇ ಭಗವದ್ಗೀತೆಯಾಗಿದೆ. ಎದುರಾಳಿ ಬಣದಿಂದ ತನ್ನ ಬಂಧುಗಳೊಂದಿಗೆ ಹೋರಾಡಲು ಅರ್ಜುನ ನಿರಾಕರಿಸಿದಾಗ ಶ್ರೀಕೃಷ್ಣ ಪಾಂಡವರಲ್ಲಿ ಒಬ್ಬನಾದ ಅರ್ಜುನನಿಗೆ ಈ ರೀತಿಯ ಉಪದೇಶ ನೀಡುತ್ತಾನೆ.

ಭಗವದ್ಗೀತೆಯಲ್ಲಿ (Bhagavadgita) ಶ್ರೀಕೃಷ್ಣ (Lord Krishna) ಹೀಗೆ ಹೇಳುತ್ತಾನೆ. ಮನುಷ್ಯನ ಜೀವನದಲ್ಲಿ ಎಂದೂ ಬದಲಾಗದ ಸತ್ಯವೆಂದರೆ ಅದು ಸಾವು. ಈ ಸತ್ಯ ಗೊತ್ತಿದ್ದರೂ ಮನುಷ್ಯ ಭಯಪಡುತ್ತಾನೆ. ಇದೇ ಭಯ ಆತನ ಸಂತೋಷವನ್ನು ಕಸಿದುಕೊಳ್ಳುತ್ತದೆ.

ತಾಜಾ ಫೋಟೊಗಳು

ನಾಳಿನ ದಿನ ಭವಿಷ್ಯ: ಅವಿವಾಹಿತರಿಗೆ ಮದುವೆಯಾಗುವ ಯೋಗವಿದೆ, ಆದಾಯದ ಹೊಸ ಮೂಲ ಹುಡುಕುವುದು ಅನಿವಾರ್ಯವಾಗಿರುತ್ತೆ

Nov 29, 2024 04:10 PM

ನಾಳಿನ ದಿನ ಭವಿಷ್ಯ: ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಉತ್ತಮ ಅವಕಾಶಗಳಿವೆ, ಹಣದ ಪರಿಸ್ಥಿತಿ ಬಲವಾಗಿರುತ್ತೆ

Nov 28, 2024 04:11 PM

Pradosh Vrat: ಪ್ರದೋಷ ವ್ರತದ ದಿನ ಬಟ್ಟೆ ಸೇರಿ ಯಾವ ವಸ್ತುಗಳನ್ನು ದಾನ ಮಾಡಿದರೆ ಶುಭಫಲಗಳು ಸಿಗುತ್ತವೆ

Nov 27, 2024 04:51 PM

ನಾಳಿನ ದಿನ ಭವಿಷ್ಯ: ನಿಮ್ಮ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತೆ, ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ

Nov 27, 2024 03:42 PM

ಲಕ್ಷ್ಮಿ ನಾರಾಯಣ ಯೋಗದಿಂದ ಈ ರಾಶಿಯವರಿಗೆ 2025 ರಲ್ಲಿ ಭಾರಿ ಅದೃಷ್ಟ; ಉತ್ತಮ ಉದ್ಯೋಗಾವಕಾಶ, ಹಣದ ಹರಿವು ಹೆಚ್ಚಾಗುತ್ತೆ

Nov 27, 2024 02:08 PM

2025ರಲ್ಲಿ ಈ 5 ರಾಶಿಯವರು ಆರ್ಥಿಕ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಹೆಚ್ಚು, ಈ ರಾಶಿಗಳಲ್ಲಿ ನೀವು ಇದ್ದೀರಾ ನೋಡಿ

Nov 27, 2024 01:20 PM

ಕೋಪ ಗೊಂದಲವನ್ನು ಉಂಟುಮಾಡುತ್ತದೆ ಮತ್ತು ಗೊಂದಲ ಬುದ್ದಿವಂತಿಕೆಯನ್ನು ನಾಶಪಡಿಸುತ್ತದೆ ಎಂದು ಶ್ರೀಕೃಷ್ಣ ಗೀತೆಯಲ್ಲಿ ಹೇಳಿದ್ದಾನೆ. ಬುದ್ದಿಯು ಕಾರ್ಯನಿರ್ವಹಿಸದಿದ್ದಾಗ, ತರ್ಕವು ನಾಶವಾಗುತ್ತದೆ, ವ್ಯಕ್ತಿಯೂ ನಾಶವಾಗುತ್ತಾನೆ. ಅದಕ್ಕಾಗಿಯೇ ಪ್ರತಿಯೊಬ್ಬ ವ್ಯಕ್ತಿಯು ತನ್ನ ಕೋಪವನ್ನು ಹೇಗೆ ನಿಯಂತ್ರಿಸಬೇಕೆಂದು ತಿಳಿದಿರಬೇಕು. ಕೋಪದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಯಾವಾಗಲೂ ತಪ್ಪಾಗಿರುತ್ತವೆ. ಆನಂತರ ವ್ಯಕ್ತಿ ತಾನು ಕೈಗೊಂಡ ತಪ್ಪು ನಿರ್ಧಾರಗಳಿಗೆ ವಿಷಾದಿಸುತ್ತಾನೆ.

ಜೀವನದಲ್ಲಿ ಮುಂದೆ ಬರಲು ನಿಮ್ಮ ಕೆಲಸವನ್ನು ಮಾಡುತ್ತಲೇ ಇರಿ

ಯಾವುದೇ ವ್ಯಕ್ತಿ ತನ್ನ ಕರ್ಮ ಮಾರ್ಗದಿಂದ ವಿಮುಖನಾಗಬಾರದು ಎಂದು ಶ್ರೀಕೃಷ್ಣ ಹೇಳಿದ್ದಾನೆ. ಕರ್ಮದಿಂದ ಮುಕ್ತಿ ಪಡೆದಾಗ ಮನುಷ್ಯ ತಾನು ನಡೆಯುವ ಮಾರ್ಗದಿಂದ ದಾರಿ ತಪ್ಪುತ್ತಾನೆ. ನೀವು ಜೀವನದಲ್ಲಿ ಮುಂದೆ ಬರಲು ಮತ್ತು ಜನಸಂದಣಿಯಿಂದ ಹೊರಗುಳಿಯಲು ಬಯಸಿದರೆ, ಯಾವಾಗಲೂ ನಿಮ್ಮ ಕೆಲಸವನ್ನು ಮಾಡುತ್ತಲೇ ಇರಿ.

ಪ್ರತಿಯೊಬ್ಬ ಮನುಷ್ಯನು ತನ್ನೊಳಗೆ ನೋಡಬೇಕೆಂದು ಭಗವದ್ಗೀತೆಯಲ್ಲಿ ಬರೆಯಲಾಗಿದೆ. ಆತ್ಮಜ್ಞಾನದ ಮೂಲಕವೇ ಒಬ್ಬ ವ್ಯಕ್ತಿಯು ತನ್ನ ಯೋಗ್ಯತೆ ಮತ್ತು ದೋಷಗಳನ್ನು ತಿಳಿಯುತ್ತಾನೆ. ಆತ್ಮಾವಲೋಕನವು ಒಬ್ಬ ವ್ಯಕ್ತಿಗೆ ಯಾವುದು ಸರಿ ಮತ್ತು ಯಾವುದು ತಪ್ಪು ಎಂದು ನಿರ್ಧರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಎಲ್ಲರೂ ಏಕಾಂಗಿಯಾಗಿ ಸ್ವಲ್ಪ ಸಮಯ ಕಳೆಯಬೇಕು ಮತ್ತು ಆತ್ಮಾಲೋಕನ ಮಾಡಿಕೊಳ್ಳಬೇಕು.

ಚಂಚಲದ ಮನಸ್ಸು ದುಃಖಕ್ಕೆ ಕಾರಣವಾಗುತ್ತೆ

ಮನಸ್ಸು ತುಂಬಾ ಚಂಚಲವಾಗಿರುತ್ತದೆ. ಇದು ದುಃಖಕ್ಕೆ ಮುಖ್ಯ ಕಾರಣಾವಾಗುತ್ತದೆ. ಗೀತೆಯಲ್ಲಿ ಹೇಳಿರುವ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯು ತನ್ನ ಮನಸ್ಸನ್ನು ನಿಯಂತ್ರಿಸಬೇಕು. ಮನಸ್ಸನ್ನು ನಿಯಂತ್ರಿಸುವ ವ್ಯಕ್ತಿ ಯಶಸ್ಸಿನ ಹಾದಿಯಲ್ಲಿ ಸಾಗುತ್ತಾನೆ. ಅಂತಹ ವ್ಯಕ್ತಿಯು ತನ್ನ ಕೆಲಸದ ಮೇಲೆ ಮಾತ್ರ ಕೇಂದ್ರೀಕರಿಸುತ್ತಾನೆ. ಗುರಿಯನ್ನು ಸುಲಭವಾಗಿ ಸಾಧಿಸುತ್ತಾನೆ.

ಮಹಾಭಾರತದ ಯುದ್ಧ ಆರಂಭಕ್ಕೂ ಮುನ್ನವೇ ಎದುರಾಳಿ ಬಣದಲ್ಲಿ ಇದ್ದ ತನ್ನ ಬಂಧುಗಳೊಂದಿಗೆ ಹೋರಾಡಲು ಅರ್ಜನ ನಿರಾಕರಿಸುತ್ತಾನೆ. ಆಗ ಶ್ರೀಕೃಷ್ಣನು ಪಾಂಡವರಲ್ಲಿ ಒಬ್ಬರಾದ ಅರ್ಜುನನಿಗೆ ಉಪದೇಶ ನೀಡುತ್ತಾನೆ.

ಅರ್ಜುನನ ಮುಂದೆ ಬೃಹತ್ ಸೈನ್ಯ ನಿಂತಿರುತ್ತದೆ. ಆ ಸೈನ್ಯದಲ್ಲಿರುವ ಸಾರಥಿಗಳಲ್ಲಿ ಈತನ ಚಿಕ್ಕಪ್ಪ, ತಾಯಿಯ ಅಣ್ಣ, ತಾತ ಹಾಗೂ ಸಹೋದರರು ಇರುತ್ತಾರೆ. ಈ ವೇಳೆ ಅರ್ಜುನ, ನಾನು ನನ್ನ ಸ್ವಂತ ಜನರನ್ನು ಹೇಗೆ ಕೊಲ್ಲುವುದು ಎಂದು ಮನಸ್ಸಿನಲ್ಲೇ ಯೋಚನೆ ಮಾಡಿ ಯುದ್ಧಭೂಮಿಯಲ್ಲಿ ತನ್ನ ಬಿಲ್ಲನ್ನು ಕೆಳಗೆ ಇಳಿಸುತ್ತಾನೆ. ಆಗ ಅರ್ಜುನನಿಗೆ ಶ್ರೀಕೃಷ್ಣ ಮೇಲಿನಂತೆ ಉಪದೇಶ ನೀಡುತ್ತಾನೆ. ಇತರರನ್ನು ಮೋಸ ಮಾಡುವವನು ತಾನೂ ಸ್ವತಃ ಮೋಸ ಹೋಡುತ್ತಾನೆ ಎನ್ನುವುದು ಶ್ರೀಕೃಷ್ಣನ ಮಾತು.

ಭಗವದ್ಗೀತೆಯಲ್ಲಿ 18 ಅಧ್ಯಾಯಗಳು, 720 ಶ್ಲೋಕಗಳನ್ನು ಹೇಳಲಾಗಿದೆ. ಇದರಲ್ಲಿನ ಧರ್ಮೋಪದೇಶಗಳು ಮನುಷ್ಯರನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಲು ಸಹಕಾರಿಯಾಗಿದೆ. ಇದರಲ್ಲಿನ ಅಂಶಗಳನ್ನು ಜೀವನದಲ್ಲಿ ಅವಳಡಿಸಿಕೊಂಡಾಗ ಶಾಂತಿ, ನೆಮ್ಮದಿ ಹಾಗೂ ಅನ್ಯೋನ್ಯವಾಗಿ ಬಾಳಿ ಬದುಕಬಹುದಾಗಿದೆ.

ವಿಭಾಗ

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ