logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ವೃಷಭ ರಾಶಿ ಭವಿಷ್ಯ ಜು 30: ವಯಸ್ಸಾದವರಿಗೆ ಜೀರ್ಣಕ್ರಿಯೆಯಂಥ ಆರೋಗ್ಯ ಸಮಸ್ಯೆ ಕಾಡಬಹುದು, ಪ್ರೇಮಿಗಳಿಗೆ ಇಂದು ಉತ್ತಮ ದಿನ

ವೃಷಭ ರಾಶಿ ಭವಿಷ್ಯ ಜು 30: ವಯಸ್ಸಾದವರಿಗೆ ಜೀರ್ಣಕ್ರಿಯೆಯಂಥ ಆರೋಗ್ಯ ಸಮಸ್ಯೆ ಕಾಡಬಹುದು, ಪ್ರೇಮಿಗಳಿಗೆ ಇಂದು ಉತ್ತಮ ದಿನ

Rakshitha Sowmya HT Kannada

Jul 30, 2024 06:09 AM IST

google News

ವೃಷಭ ರಾಶಿ ಭವಿಷ್ಯ ಜು 30: ವಯಸ್ಸಾದವರಿಗೆ ಜೀರ್ಣಕ್ರಿಯೆಯಂಥ ಆರೋಗ್ಯ ಸಮಸ್ಯೆ ಕಾಡಬಹುದು, ಪ್ರೇಮಿಗಳಿಗೆ ಇಂದು ಉತ್ತಮ ದಿನ

  • Taurus Daily Horoscope 30 July 2024: ರಾಶಿಚಕ್ರಗಳಪೈಕಿ ಎರಡನೇಯದು ವೃಷಭ ರಾಶಿಚಕ್ರದ ಚಿಹ್ನೆ. ಜನನದ ಸಮಯದಲ್ಲಿ ಚಂದ್ರನು ವೃಷಭ ರಾಶಿಯಲ್ಲಿ ಸಾಗುತ್ತಿರುವ ಜನರ ರಾಶಿಯೇ ವೃಷಭ ರಾಶಿ. ಇಂದಿನ ವೃಷಭ ರಾಶಿಯವರ ಭವಿಷ್ಯದ ಪ್ರಕಾರ ಇಂದು ವಯಸ್ಸಾದವರಿಗೆ ಜೀರ್ಣಕ್ರಿಯೆ ಸಮಸ್ಯೆ ಕಾಡಬಹುದು. ಪ್ರೇಮಿಗಳು ತಮ್ಮ ಸಂಗಾತಿಯೊಂದಿಗೆ ಮಾತನಾಡುವಾಗ ಎಚ್ಚರ.

ವೃಷಭ ರಾಶಿ ಭವಿಷ್ಯ ಜು 30: ವಯಸ್ಸಾದವರಿಗೆ ಜೀರ್ಣಕ್ರಿಯೆಯಂಥ ಆರೋಗ್ಯ ಸಮಸ್ಯೆ ಕಾಡಬಹುದು, ಪ್ರೇಮಿಗಳಿಗೆ ಇಂದು ಉತ್ತಮ ದಿನ
ವೃಷಭ ರಾಶಿ ಭವಿಷ್ಯ ಜು 30: ವಯಸ್ಸಾದವರಿಗೆ ಜೀರ್ಣಕ್ರಿಯೆಯಂಥ ಆರೋಗ್ಯ ಸಮಸ್ಯೆ ಕಾಡಬಹುದು, ಪ್ರೇಮಿಗಳಿಗೆ ಇಂದು ಉತ್ತಮ ದಿನ

ವೃಷಭ ರಾಶಿ ಭವಿಷ್ಯ ಜುಲೈ 30: ಪ್ರೇಮ ಸಂಬಂಧದಲ್ಲಿ ಪ್ರಾಮಾಣಿಕತೆ ಇರಲಿ, ನಿಮ್ಮ ನಡುವಿನ ಎಲ್ಲಾ ಹಳೆಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಇದು ಉತ್ತಮ ಸಮಯ. ಕಚೇರಿಯಲ್ಲಿ ಎಲ್ಲವೂ ಸುಗಮವಾಗಿ ಸಾಗುತ್ತದೆ. ಸಂಪತ್ತು ಮತ್ತು ಆರೋಗ್ಯ ಎರಡೂ ಇಂದು ಚೆನ್ನಾಗಿರುತ್ತದೆ. ಅಂದ ಹಾಗೆ, ಎಲ್ಲ ರಾಶಿಗಳ ದಿನ ಭವಿಷ್ಯ ಹಿಂದೂಸ್ತಾನ್ ಟೈಮ್ಸ್ ಕನ್ನಡ ಜಾಲತಾಣದಲ್ಲಿದೆ. ನೀವು ಅದನ್ನೂ ಓದಬಹುದು.

ತಾಜಾ ಫೋಟೊಗಳು

ನಾಳಿನ ದಿನ ಭವಿಷ್ಯ: ಅವಿವಾಹಿತರಿಗೆ ಮದುವೆಯಾಗುವ ಯೋಗವಿದೆ, ಆದಾಯದ ಹೊಸ ಮೂಲ ಹುಡುಕುವುದು ಅನಿವಾರ್ಯವಾಗಿರುತ್ತೆ

Nov 29, 2024 04:10 PM

ನಾಳಿನ ದಿನ ಭವಿಷ್ಯ: ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಉತ್ತಮ ಅವಕಾಶಗಳಿವೆ, ಹಣದ ಪರಿಸ್ಥಿತಿ ಬಲವಾಗಿರುತ್ತೆ

Nov 28, 2024 04:11 PM

Pradosh Vrat: ಪ್ರದೋಷ ವ್ರತದ ದಿನ ಬಟ್ಟೆ ಸೇರಿ ಯಾವ ವಸ್ತುಗಳನ್ನು ದಾನ ಮಾಡಿದರೆ ಶುಭಫಲಗಳು ಸಿಗುತ್ತವೆ

Nov 27, 2024 04:51 PM

ನಾಳಿನ ದಿನ ಭವಿಷ್ಯ: ನಿಮ್ಮ ಕೆಲಸಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತೆ, ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ

Nov 27, 2024 03:42 PM

ಲಕ್ಷ್ಮಿ ನಾರಾಯಣ ಯೋಗದಿಂದ ಈ ರಾಶಿಯವರಿಗೆ 2025 ರಲ್ಲಿ ಭಾರಿ ಅದೃಷ್ಟ; ಉತ್ತಮ ಉದ್ಯೋಗಾವಕಾಶ, ಹಣದ ಹರಿವು ಹೆಚ್ಚಾಗುತ್ತೆ

Nov 27, 2024 02:08 PM

2025ರಲ್ಲಿ ಈ 5 ರಾಶಿಯವರು ಆರ್ಥಿಕ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಹೆಚ್ಚು, ಈ ರಾಶಿಗಳಲ್ಲಿ ನೀವು ಇದ್ದೀರಾ ನೋಡಿ

Nov 27, 2024 01:20 PM

ವೃಷಭ ರಾಶಿ ಪ್ರೇಮ ಭವಿಷ್ಯ (Taurus Love Horoscope)

ದಿನದ ಮೊದಲ ಭಾಗದಲ್ಲಿ ನಿಮ್ಮ ಹಾಗೂ ಸಂಗಾತಿಯ ನಡುವೆ ಸಣ್ಣ ಗೊಂದಲಗಳಿರುತ್ತವೆ. ಅವುಗಳನ್ನು ಪರಿಹರಿಸಲು ನೀವು ಪ್ರಯತ್ನ ಪಡಬೇಕು. ರೊಮ್ಯಾಂಟಿಕ್‌ ಡಿನ್ನರ್‌ಗೆ ನಿಮ್ಮ ಪ್ರೇಮಿಯನ್ನು ಕರೆದೊಯ್ಯಿರಿ. ಸಂಜೆ ಕೂಡಾ ನೀವು ಲಾಂಗ್‌ ರೈಡ್‌ ಹೋಗಿ. ಪ್ರೇಮಿಯೊಂದಿಗೆ ಸಂವಹನ ಮಾಡುವಾಗ ಎಚ್ಚರ. ಅವಿವಾಹಿತ ವೃಷಭ ರಾಶಿಯ ಮಹಿಳೆಯರು ತಮ್ಮ ಪ್ರೇಮಿಯೊಂದಿಗೆ ಸಮಯ ಕಳೆಯುವಾಗ ಜಾಗರೂಕರಾಗಿರಬೇಕು.

ವೃಷಭ ರಾಶಿ ವೃತ್ತಿ ಭವಿಷ್ಯ (Taurus Professional Horoscope)

ವೃತ್ತಿಪರ ಸಾಮರ್ಥ್ಯವನ್ನು ಸಾಬೀತುಪಡಿಸಲು ಹೆಚ್ಚಿನ ಅವಕಾಶಗಳು ನಿಮ್ಮ ಕಣ್ಣ ಮುಂದೆ ಬರಲಿದೆ. ತಂಡದಲ್ಲಿ ಕೆಲವರು ನಿಮ್ಮ ಜೊತೆ ಮನಸ್ತಾಪ ಹೊಂದಿರುತ್ತಾರೆ. ನಿಯಂತ್ರಣದಿಂದ ಹೊರ ಬರುವ ಮೊದಲು ಇದನ್ನು ಪರಿಹರಿಸಲು ಪ್ರಯತ್ನಿಸಿ. ಕಚೇರಿ ಕೆಲಸದ ನಿಮಿತ್ತ ಹೊರಗೆ ಪ್ರಯಾಣಿಸುವ ಸಾಧ್ಯತೆ ಇದೆ. ಗ್ರಾಹಕರನ್ನು ಮೆಚ್ಚಿಸಲು ಹೊಸ ಐಡಿಯಾಗಳನ್ನು ಮಾಡಬೇಕಿದೆ. ಬ್ಯಾಂಕರ್‌ಗಳು, ಅಕೌಂಟೆಂಟ್‌ಗಳು ಮತ್ತು ಹಣಕಾಸು ವ್ಯವಸ್ಥಾಪಕರು ಕೆಲಸದ ಸ್ಥಳದಲ್ಲಿ ಜಾಗರೂಕರಾಗಿಬೇಕು.

ವೃಷಭ ರಾಶಿಯ ಆರ್ಥಿಕ ಭವಿಷ್ಯ (Taurus Money Horoscope)

ಯಾವುದೇ ದೊಡ್ಡ ಆರ್ಥಿಕ ಅಡಚಣೆ ಇರುವುದಿಲ್ಲ. ಜೀವನದ ಬಗ್ಗೆ ಸಕಾರಾತ್ಮಕವಾಗಿರಿ ಮತ್ತು ಷೇರು ಮಾರುಕಟ್ಟೆ ಅಥವಾ ಊಹಾತ್ಮಕ ವ್ಯವಹಾರದಂಥ ಹೆಚ್ಚುವರಿ ಹೂಡಿಕೆಗಳಿಗಾಗಿ ಹೆಚ್ಚುವರಿ ಆದಾಯವನ್ನು ಬಳಸಿಕೊಳ್ಳಿ. ಕೆಲವು ಸ್ತ್ರೀಯರು ಇಂದು ಆಭರಣಗಳನ್ನು ಖರೀದಿಸುವರು. ದಿನದ ಎರಡನೇ ಭಾಗವು ಅಗತ್ಯವಿರುವ ಸ್ನೇಹಿತರಿಗೆ ಆರ್ಥಿಕವಾಗಿ ಸಹಾಯ ಮಾಡಲು ಒಳ್ಳೆಯದು. ಎಲ್ಲಾ ಸಾಲಗಳನ್ನು ಮರುಪಾವತಿಸಲು ಮತ್ತು ಹಣಕಾಸಿನ ಹೊಣೆಗಾರಿಕೆಗಳನ್ನು ಪರಿಹರಿಸಲು ಇಂದು ಉತ್ತಮ ಸಮಯ.

ವೃಷಭ ರಾಶಿಯ ಆರೋಗ್ಯ ಭವಿಷ್ಯ (Taurus Health Horoscope)

ನಿಮ್ಮ ಆರೋಗ್ಯವು ಉತ್ತಮ ಸ್ಥಿತಿಯಲ್ಲಿರುತ್ತದೆ. ದಿನದ ಎರಡನೇ ಭಾಗವು ಜಿಮ್‌ಗೆ ಸೇರಲು ಒಳ್ಳೆಯದು. ವಯಸ್ಸಾದವರಿಗೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಕಾಡಬಹುದು. ಜಂಕ್‌ ಫುಡ್‌ಗಳಿಂದ ದೂರ ಉಳಿಯಿರಿ. ವೈರಲ್ ಜ್ವರ, ಗಂಟಲು ನೋವು ಮತ್ತು ತಲೆನೋವು ಸಾಮಾನ್ಯವಾಗಿರುತ್ತದೆ. ನೀವು ದೂರಕ್ಕೆ ಪ್ರಯಾಣ ಮಾಡುವಂತಿದ್ದರೆ ನಿಮ್ಮ ಬಳಿ ಪ್ರಥಮ ಚಿಕಿತ್ಸೆ ಬಾಕ್ಸ್‌ ಕೊಂಡೊಯ್ಯಿರಿ.

ವೃಷಭ ರಾಶಿಯವರಿಗೆ ತಿಳಿದಿರಲೇಬೇಕಾದ ಮಾಹಿತಿಯಿದು

ವೃಷಭ ರಾಶಿಗೆ ಅಧಿಪತಿ: ಶುಕ್ರ, ವೃಷಭ ರಾಶಿಯವರಿಗೆ ಶುಭ ದಿನಾಂಕಗಳು: 5, 6, 15, 18, 19, 20, 25, 29. ವೃಷಭ ರಾಶಿಯವರಿಗೆ ಶುಭ ದಿನಗಳು: ಸೋಮವಾರ, ಬುಧವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರ. ವೃಷಭ ರಾಶಿಯವರಿಗೆ ಶುಭ ಸಂಖ್ಯೆಗಳು: 5, 6, 8. ವೃಷಭ ರಾಶಿಯವರಿಗೆ ಶುಭ ವರ್ಣ: ಪಿಂಕ್, ಹಸಿರು ಮತ್ತು ಬಿಳಿ. ವೃಷಭ ರಾಶಿಯವರಿಗೆ ಅಶುಭ ವರ್ಣ: ಕೆಂಪು ಮತ್ತು ಹಳದಿ. ವೃಷಭ ರಾಶಿಯವರಿಗೆ ಶುಭ ದಿಕ್ಕು: ದಕ್ಷಿಣ ಮತ್ತು ನೈರುತ್ಯ. ವೃಷಭ ರಾಶಿಯವರಿಗೆ ಶುಭ ತಿಂಗಳು: ಜನವರಿ 15 ರಿಂದ ಏಪ್ರಿಲ್15. ವೃಷಭ ರಾಶಿಯವರಿಗೆ ಶುಭ ಹರಳು: ಹಸಿರು ಪಚ್ಚೆ ಮತ್ತು ನೀಲಮಣಿ. ವೃಷಭ ರಾಶಿಯವರಿಗೆ ಶುಭ ರಾಶಿ: ಮಿಥುನ, ಕನ್ಯಾ ಮತ್ತು ಮಕರ. ವೃಷಭ ರಾಶಿಯವರಿಗೆ ಅಶುಭ ರಾಶಿ: ಕಟಕ, ಧನುಸ್ಸು ಮತ್ತು ಮೇಷ.

ವೃಷಭ ರಾಶಿಯವರಿಗೆ ಶುಭಫಲಕ್ಕಾಗಿ ಸರಳ ಪರಿಹಾರಗಳು

1) ಇಂದ್ರಾಕ್ಷಿ ಸ್ತೋತ್ರ: ಪ್ರತಿದಿನ ಶ್ರೀ ಇಂದ್ರಾಕ್ಷಿ ಸ್ತೋತ್ರ ಪಠಿಸುವುದರಿಂದ ಅಥವಾ ಕೇಳಿಸಿಕೊಳ್ಳುವುದರಿಂದ ಆತ್ಮಶಕ್ತಿಯು ಹೆಚ್ಚುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುತ್ತದೆ.

2) ಈ ದಾನಗಳಿಂದ ಶುಭ ಫಲ: ಬಿಳಿಬಣ್ಣದ ಬಟ್ಟೆ ಮತ್ತು ಗೋಧಿ ಅಥವಾ ರವೆಯನ್ನು ದಾನ ನೀಡುವುದರಿಂದ ಖರ್ಚುವೆಚ್ಚಗಳು ಕಡಿಮೆ ಆಗಲಿವೆ.

3) ದೇವಸ್ಥಾನ ಮತ್ತು ದೇವರ ಪೂಜೆ: ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಗೆ ಪಂಚಾಮೃತ ಅಭಿಷೇಕ ಮಾಡಿಸುವುದು ಕ್ಷೇಮಕರ. ಮನೆಯಲ್ಲಿಯೂ ಶ್ರೀ ಸತ್ಯನಾರಾಯಣ ಪೂಜೆ ಮಾಡಬಹುದು. ಹೂ ಬಿಡುವ ಗಿಡಗಳನ್ನು ಪೋಷಿಸಿದಲ್ಲಿ ಎಲ್ಲಾರೀತಿಯ ಸಮಸ್ಯೆಗಳು ದೂರವಾಗುತ್ತವೆ.

4) ಈ ಬಣ್ಣದ ಕರವಸ್ತ್ರ ಉಪಯೋಗಿಸಿ: ನೀಲಿ ಮತ್ತು ಹಸಿರು ಬಣ್ಣದ ಕರವಸ್ತ್ರ ಬಳಸಿದರೆ ನಿರೀಕ್ಷಿತ ಫಲಗಳು ದೊರೆಯಲಿವೆ.

ಗಮನಿಸಿ: ಇದು ವೈದಿಕ ಜ್ಯೋತಿಷ್ಯದ ಪದ್ಧತಿಯಲ್ಲಿ ಗೋಚಾರ ಆಧರಿಸಿದ ಬರಹ. ನಿಖರ ವಿವರ ಮತ್ತು ಸಮರ್ಪಕ ಪರಿಹಾರಗಳಿಗಾಗಿ ಓದುಗರು ತಮ್ಮ ಜನ್ಮಜಾತಕವನ್ನು ಸಹ ಪರಿಗಣಿಸಬೇಕು. ನಿಮ್ಮ ಕುಲಗುರುಗಳು ಅಥವಾ ಜ್ಯೋತಿಷಿಗಳ ಸಲಹೆ ಪಡೆಯಬೇಕು. ಇದು ನಂಬಿಕೆ ಮತ್ತು ಶಾಸ್ತ್ರವನ್ನು ಆಧರಿಸಿದ ಬರಹ. ಇದರಲ್ಲಿರುವ ಎಲ್ಲ ಅಂಶಗಳನ್ನೂ "ಹಿಂದೂಸ್ತಾನ್ ಟೈಮ್ಸ್ ಕನ್ನಡ" ಪುಷ್ಟೀಕರಿಸುವುದಿಲ್ಲ. ನಿಮ್ಮ ಸ್ವಂತ ವಿವೇಚನೆ ಬಳಸಿ ನಿರ್ಧಾರಗಳನ್ನು ತೆಗೆದುಕೊಳ್ಳಿ.

ದೇವಾಲಯಗಳು, ಆಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

 

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ