Tomorrow Horoscope: ಆದಾಯಕ್ಕೆ ಮೀರಿದ ಖರ್ಚಿನಿಂದ ಚಿಂತೆ ಕಾಡಲಿದೆ, ಪ್ರಾಣಿಗಳಿಂದ ತೊಂದರೆ ಎದುರಾಗಬಹುದು, ಎಚ್ಚರ; ನಾಳಿನ ಭವಿಷ್ಯ
Apr 21, 2024 05:37 PM IST
ಏಪ್ರಿಲ್ 22ರ ದಿನಭವಿಷ್ಯ
- 22nd April 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.
ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (22nd April 2024 Horoscope).
ತಾಜಾ ಫೋಟೊಗಳು
ನಾಳಿನ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲಪಕ್ಷ, ಸೋಮವಾರ
ತಿಥಿ: ಚತುರ್ದಶಿ ರಾತ್ರಿ 2.24 ರವರೆಗೂ ಇರುತ್ತದೆ. ಅನಂತರ ಹುಣ್ಣಿಮೆ ಆರಂಭವಾಗುತ್ತದೆ.
ನಕ್ಷತ್ರ: ಹಸ್ತ ನಕ್ಷತ್ರವು ಸಂಜೆ 7.19 ರವರೆಗೂ ಇರುತ್ತದೆ. ಅನಂತರ ಚಿತ್ತಾ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಿಗ್ಗೆ 6.04
ಸೂರ್ಯಾಸ್ತ: ಸಂಜೆ 6.32
ರಾಹುಕಾಲ: ಬೆಳಿಗ್ಗೆ 7.41 ರಿಂದ ಬೆಳಿಗ್ಗೆ 9.14
ಮೇಷ
ನಿಮ್ಮ ಪ್ರಯತ್ನದಿಂದಾಗಿ ತಾಯಿಯವರ ಕಷ್ಟವೊಂದು ದೂರವಾಗಲಿದೆ. ಸಂದಿಗ್ದದ ಪರಿಸ್ಠಿತಿಯಲ್ಲೂ ಶಾಂತಿಯಿಂದ ವರ್ತಿಸುವಿರಿ. ದಂಪತಿಗಳ ನಡುವೆ ಅನಾವಶ್ಯಕ ವಿರಸವಿರುತ್ತದೆ. ಸರ್ಕಾರದ ಅನುದಾನದಲ್ಲಿ ವ್ಯಾಪಾರವೊಂದನ್ನು ಆರಂಭಿಸುವಿರಿ. ಮಕ್ಕಳಿಗೆ ಸಂಬಂಧಿಸಿದಂತೆ ಸಿಹಿ ಸುದ್ದಿಯೊಂದು ಬರಲಿದೆ. ಬಿಡುವಿಲ್ಲದ ದುಡಿಮೆಯಿಂದ ನೆಮ್ಮದಿ ಕಡಿಮೆ ಆಗಲಿದೆ.
ಪರಿಹಾರ: ಪೂರ್ವಿಕರ ಮನೆಯಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ: 12
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ
ವೃಷಭ
ಮಾಡದ ತಪ್ಪಿಗೆ ಉದ್ಯೋಗ ಬದಲಿಸುವ ತೀರ್ಮಾನ ಮಾಡುವಿರಿ. ಕೆಲಸ ಕಾರ್ಯಗಳಲ್ಲಿ ಆಸಕ್ತಿ ಕಳೆದುಕೊಳ್ಳುವಿರಿ. ನಿಮ್ಮಲ್ಲಿನ ಭಯದ ಗುಣ ಮಾನಸಿಕ ಒತ್ತಡಕ್ಕೆ ಕಾರಣವಾಗಲಿದೆ. ಮನದಲ್ಲಿ ವೈರಾಗ್ಯ ಭಾವನೆ ಮೂಡುತ್ತದೆ. ಪಾರ ವ್ಯವಹಾರಗಳಲ್ಲಿ ಕಡಿಮೆ ವರಮಾನ ಇರುತ್ತದೆ. ಜನಸೇವೆಯ ಹಂಬಲ ಈಡೇರುತ್ತದೆ.
ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ದೀಪದ ಎಣ್ಣೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 3
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ : ಹಳದಿ ಬಣ್ಣ
ಮಿಥುನ
ನಿಮ್ಮಲ್ಲಿನ ಒಳ್ಳೆಯತನವನ್ನು ದುರ್ಬಳಕೆ ಮಾಡಿಕೊಳ್ಳುವ ಜನರನ್ನು ಗಮನಿಸಿ. ಹಠದ ಗುಣದಿಂದ ತಪ್ಪಾದ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಸ್ವಂತ ಉದ್ಧಿಮೆ ನಡೆಸುವವರು ಆದಾಯದ ಜೊತೆ ಕೀರ್ತಿ ಪ್ರತಿಷ್ಠೆಯನ್ನು ಗಳಿಸುತ್ತಾರೆ. ಅತಿಯಾದ ಯೋಚನೆ ಮಾಡದಿರಿ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಪರಿಹಾರ: ತಾಯಿ ಆಶೀರ್ವಾದ ಪಡೆದು ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಹಸಿರು ಬಣ್ಣ
ಕಟಕ
ಸ್ವಂತ ಪ್ರತಿಭೆಯನ್ನು ನಂಬುವಿರಿ. ಆಹಾರಕ್ಕೆ ಸಂಬಂಧಿಸಿದ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯುತ್ತದೆ. ತಾನಾಗಿಯೇ ಬಂದ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವಿರಿ. ದಂಪತಿಗಳ ನಡುವೆ ವೈಮನಸ್ಸು ಇರುತ್ತದೆ. ವಯೋವೃದ್ದರಲ್ಲಿ ಅನುಕಂಪಕ್ಕಿಂತ ಗೌರವ ಹೆಚ್ಚಾಗಿರುತ್ತದೆ. ಆರೋಗ್ಯದ ಬಗ್ಗೆ ಗಮನ ಇರಲಿ.
ಪರಿಹಾರ: ಕುಟುಂಬದ ಹಿರಿಯರ ಮಾರ್ಗದರ್ಶನದಲ್ಲಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ನೀಲಿ ಬಿಳಿ
ಸಿಂಹ
ನಿಮ್ಮಲ್ಲಿನ ಆತ್ಮವಿಶ್ವಾಸ ಕೆಲಸ ಕಾರ್ಯವನ್ನು ಜಯದತ್ತ ನಡೆಸುತ್ತದೆ. ಕೆಲಸ ನಡುವೆ ವಿಶ್ರಾಂತಿಯನ್ನೂ ಪಡೆಯುವುದಿಲ್ಲ. ಕುಟುಂಬದ ಆಸ್ತಿಯೊಂದು ನಿಮ್ಮ ಪಾಲಿಗೆ ದೊರೆಯುತ್ತದೆ. ನಿಮ್ಮ ಸಂಗಾತಿಯ ಮನಸ್ಸನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ವಿದ್ಯಾರ್ಥಿಗಳು ವಿಶೇಷವಾದ ಸೌಲಭ್ಯಗಳನ್ನು ಪಡೆಯುತ್ತಾರೆ.
ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ : ನೇರಳೆ ಬಣ್ಣ
ಕನ್ಯಾ
ಬೇರೆಯವರು ಮಾಡಿದ ಕೆಲಸವನ್ನು ಟೀಕಿಸುವಿರಿ. ಉಪಯೋಗವಿಲ್ಲದ ಕೆಲಸ ಕಾರ್ಯಗಳಲ್ಲಿ ವೇಳೆಯನ್ನು ಕಳೆಯುವಿರಿ. ಕಲಾವಿದರಾದಲ್ಲಿ ಒಳ್ಳೆಯ ಅವಕಾಶಗಳು ದೊರೆಯಲಿವೆ. ಅಧಿಕಾರಿಗಳು ವಿವಾದವೊಂದನ್ನು ಎದುರಿಸಬೇಕಾಗುತ್ತದೆ. ದುಡುಕಿಗೆ ಕೋಪಕ್ಕೆ ಬುದ್ಧಿ ಕೊಡಬೇಡಿ. ಅನಿರೀಕ್ಷಿತ ಧನಲಾಭವಿರುತ್ತದೆ.
ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ಗುಲಾಬಿ ಬಣ್ಣ
ತುಲಾ
ಸಮಯ ಸಂದರ್ಭಕ್ಕೆ ಹೊಂದಿಕೊಂಡು ನಡೆದುಕೊಳ್ಳುವಿರಿ. ವೈಭವದ ಜೀವನ ನಡೆಸುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಲಾಭವಿರುತ್ತದೆ. ನಿಮ್ಮ ಮಧ್ಯಸ್ಥಿಕೆಯ ಕಾರಣ ಕುಟುಂಬದ ಹಣಕಾಸಿನ ವಿವಾದವೊಂದು ಸುಖಾಂತ್ಯಗೊಳ್ಳುತ್ತದೆ. ಶಾಂತಿ ಸಹನೆಯಿಂದ ಎಲ್ಲರೊಂದಿಗೆ ನಡೆದುಕೊಳ್ಳುವಿರಿ.
ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು: ಈಶಾನ್ಯ
ಅದೃಷ್ಟದ ಬಣ್ಣ: ಬಿಳಿ ಬಣ್ಣ
ವೃಶ್ಚಿಕ
ಯಂತ್ರ ಸಂಬಂಧೀ ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ದೊರೆಯಲಿದೆ. ಹೊಸ ಪಾಲುದಾರಿಕೆ ವ್ಯಾಪಾರವನ್ನು ಆರಂಭಿಸುವಿರಿ. ಅನಿರೀಕ್ಷಿತ ಧನಾಗಮವಿದೆ. ವೃತ್ತಿಜೀವನದಲ್ಲಿ ಅಸೂಯೆ ಪಡುವ ಜನರಿರುತ್ತಾರೆ. ಒತ್ತಡಕ್ಕೆ ಮಣಿದು ವೃತ್ತಿಯನ್ನು ಬದಲಾಯಿಸುವಿರಿ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದನ್ನು ನಡೆಸಿ ಕೊಡುವಿರಿ.
ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಬೂದುಬಣ್ಣ
ಧನಸ್ಸು
ಕಷ್ಟದ ಸನ್ನಿವೇಶವನ್ನು ಬುದ್ಧಿವಂತಿಕೆಯಿಂದ ಸಮರ್ಥವಾಗಿ ಎದುರಿಸುವಿರಿ. ವಿದ್ಯಾರ್ಥಿಗಳು ವಿಶೇಷವಾದ ಸಾಧನೆಯನ್ನು ಮಾಡಲಿದ್ದಾರೆ. ಕುಟುಂಬದ ಹಿರಿಯರಿಂದ ಹಣದ ಸಹಾಯ ದೊರೆಯುತ್ತದೆ. ಬೋಧನಾ ಸಿಬ್ಬಂದಿಗಳಿಗೆ ನಿರೀಕ್ಷಿತ ಫಲಿತಾಂಶಗಳು ದೊರೆಯುತ್ತವೆ.
ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ: 8
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ: ಕಂದು ಬಣ್ಣ
ಮಕರ
ಸೋದರನ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ. ಸಣ್ಣ ಪುಟ್ಟ ಕೆಲಸಗಳಿಗೂ ಬೇರೆಯವರ ಸಹಾಯ ಬೇಕೆನಿಸುತ್ತದೆ. ಭೂವಿವಾದದಲ್ಲಿ ನಿಮಗೆ ಜಯ ಲಭಿಸುತ್ತದೆ. ವ್ಯಾಪಾರದಲ್ಲಿ ಲಾಭವಿರುತ್ತದೆ. ಕುಟುಂಬದಲ್ಲಿ ಮಂಗಳಕಾರ್ಯವೊಂದನ್ನು ನೆರವೇರಿಸುವಿರಿ. ಮಾತು ಕಡಿಮೆ ಮಾಡಿ ಮಾಡಬೇಕಾದ ಕೆಲಸಗಳ ಬಗ್ಗೆ ಗಮನ ನೀಡಿ. ಅನಾವಶ್ಯಕ ಚಿಂತೆ ಮಾಡುವಿರಿ.
ಪರಿಹಾರ: ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಕಪ್ಪು ಬಣ್ಣ
ಕುಂಭ
ಸೋದರ ಅಥವಾ ಸೋದರಿಯ ಪಾಲುದಾರಿಕೆಯಲ್ಲಿ ಭೂ ವ್ಯವಹಾರವನ್ನು ಮಾಡುವಿರಿ. ಆತ್ಮವಿಶ್ವಾಸದ ಕೊರತೆಯ ಕಾರಣ ತಪ್ಪು ನಿರ್ಧಾರವನ್ನು ಕೈಗೊಳ್ಳುವಿರಿ. ಗಾಯಕರು ಮತ್ತು ಸಂಗೀತಗಾರರು ವಿಶೇಷವಾದ ಗೌರವವನ್ನು ಪಡೆಯುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಹಿನ್ನೆಡೆ ಇರುತ್ತದೆ. ಮನ:ಶಾಸ್ತ್ರವನ್ನು ಓದುವವರಿಗೆ ವಿಶೇಷವಾದ ಅನುಕೂಲವಿದೆ.
ಪರಿಹಾರ: ತಾಯಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ
ಮೀನ
ಆತ್ಮವಿಶ್ವಾಸದಿಂದ ಆಡುವ ಮಾತಿನಲ್ಲಿ ವಿಶೇಷವಾದ ಶಕ್ತಿ ಇರುತದೆ. ಕಣ್ಣಿನ ದೋಷವಿರುತ್ತದೆ. ಅವಿವಾಹಿತರಿಗೆ ವಿವಾಹಯೋಗವಿದೆ. ಹೊಸ ವಿಚಾರಗಳ ಬಗ್ಗೆ ಅಧ್ಯಯನ ಮಾಡುವಿರಿ. ಸರ್ಕಾರದಿಂದ ವಿಶೇಷ ಧನಸಹಾಯ ದೊರೆಯುತ್ತದೆ. ಹೊಟ್ಟೆಗೆ ಸಂಬಂಧಿಸಿದ ದೋಷ ನಿಮ್ಮನ್ನು ಕಾಡಲಿದೆ. ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಿರಿ.
ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ : ಕೆಂಪು ಬಣ್ಣ
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).