logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಕೌಟುಂಬಿಕ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾರ್ಥಿಗಳಿಂದ ಉನ್ನತ ಮಟ್ಟದ ಸಾಧನೆ; ನಾಳೆಯ ದಿನ ಭವಿಷ್ಯ

Tomorrow Horoscope: ಕೌಟುಂಬಿಕ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾರ್ಥಿಗಳಿಂದ ಉನ್ನತ ಮಟ್ಟದ ಸಾಧನೆ; ನಾಳೆಯ ದಿನ ಭವಿಷ್ಯ

Rakshitha Sowmya HT Kannada

May 02, 2024 05:30 PM IST

ನಾಳೆಯ ದಿನ ಭವಿಷ್ಯ

  • 3rd May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.

ನಾಳೆಯ ದಿನ ಭವಿಷ್ಯ
ನಾಳೆಯ ದಿನ ಭವಿಷ್ಯ

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (3rd May 2024 Horoscope).

ತಾಜಾ ಫೋಟೊಗಳು

ವೃಷಭ ರಾಶಿಯಲ್ಲಿ ಬೃಹಸ್ಪತಿ ಅಸ್ತಂಗತ್ವ ಹಂತ; ಈ 3 ರಾಶಿಯವರಿಗೆ ಕೆಲವು ದಿನಗಳವರೆಗೆ ಗುರುಬಲ ಸಾಧ್ಯವಿಲ್ಲ

May 16, 2024 02:27 PM

ಇಂದು ಗಂಗಾ ಸಪ್ತಮಿ, ಶಿವನ ಜಟೆಯಿಂದ ಭೂಮಿಗೆ ಗಂಗೆ ಇಳಿದು ಬಂದ ದಿನ; ಈ ವಸ್ತುಗಳನ್ನು ದಾನ ಮಾಡಿದರೆ ಪುಣ್ಯ ಪ್ರಾಪ್ತಿ

May 14, 2024 08:48 AM

12 ವರ್ಷಗಳ ನಂತರ ವೃಷಭ ರಾಶಿಯಲ್ಲಿ ಗುರು ಶುಕ್ರ ಸಂಯೋಜನೆ; ಗಜಲಕ್ಷ್ಮಿ ಯೋಗದಿಂದ ಈ 3 ರಾಶಿಯವರಿಗೆ ಅದೃಷ್ಟದ ಮೇಲೆ ಅದೃಷ್ಟ

May 13, 2024 12:41 PM

Sun Transit: ಶೀಘ್ರದಲ್ಲೇ ಸೂರ್ಯ ಸಂಚಾರ; ಈ 3 ರಾಶಿಯವರಿಗೆ ಮೊದಲಿಗಿಂತಲೂ ಆರ್ಥಿಕ ಲಾಭ, ಉದ್ಯೋಗದಲ್ಲಿ ಪ್ರಗತಿ

May 11, 2024 03:03 PM

Jupiter Venus Conjunction: ಗುರು, ಶುಕ್ರ ಸಂಕ್ರಮಣ; ಈ 4 ರಾಶಿಯವರಿಗೆ ಅನಗತ್ಯ ಖರ್ಚುಗಳಿಂದ ಚಿಂತೆ, ಆರ್ಥಿಕ ಸಮಸ್ಯೆ ಸಾಧ್ಯತೆ

May 11, 2024 02:08 PM

ಮಾತಾ ನಾಸ್ತಿ, ಪಿತಾ ನಾಸ್ತಿ, ನಾಸ್ತಿ ಬಂಧುಃ: ಮೇ 12 ಶಂಕರ ಜಯಂತಿ ಶುಭಾಶಯ ಕೋರಲು ಇಲ್ಲಿವೆ ಕೆಲವು ಸಂದೇಶಗಳು

May 10, 2024 07:00 AM

ನಾಳೆಯ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಶುಕ್ರವಾರ

ತಿಥಿ : ದಶಮಿ ರಾತ್ರಿ 08.16 ರವರೆಗೂ ಇದ್ದು ನಂತರ ಏಕಾದಶಿ ಆರಂಭವಾಗುತ್ತದೆ.

ನಕ್ಷತ್ರ : ಶತಭಿಷ ನಕ್ಷತ್ರವು ರಾತ್ರಿ 09.22 ರವರೆಗೂ ಇದ್ದು ನಂತರ ಪೂರ್ವಾಭಾದ್ರ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 05.58

ಸೂರ್ಯಾಸ್ತ: ಸಂಜೆ 06.34

ರಾಹುಕಾಲ: 10.45 ರಿಂದ 12.19 ವರೆಗೆ

ರಾಶಿಫಲ

ಮೇಷ

ವಿಶ್ರಾಂತಿ ಇಲ್ಲದೆ ಕೆಲಸ ನಿರ್ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತಲ್ಲೀನರಾಗುತ್ತಾರೆ. ಆದ್ಯತೆಯ ಪ್ರಕಾರ ಉದ್ಯೋಗದ ಜವಾಬ್ದಾರಿಯನ್ನು ಪೂರೈಸುವಿರಿ. ಅಪರಿಚಿತರ ಸಹಾಯ ಸ್ನೇಹವಾಗಿ ಪರಿವರ್ತಿತಗೊಳ್ಳುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ನಿರೀಕ್ಷೆ ಇಲ್ಲದೆ ಹೋದರೂ ನಷ್ಟವಾಗದು.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಗುಲಾಬಿ

ವೃಷಭ

ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುವ ಕಾರಣ ಕುಟುಂಬದಲ್ಲಿ ನೆಮ್ಮದಿ ಇರುತ್ತದೆ. ಬಹುದಿನದಿಂದ ಅಪೂರ್ಣಗೊಂಡ ದೊಡ್ಡ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿನ ಒತ್ತಡ ಯಾವುದೆ ಪ್ರಭಾವ ಬೀರುವುದಿಲ್ಲ. ವಿದ್ಯಾರ್ಥಿಗಳು ಹಟ ಮತ್ತು ಸಿಡುಕಿನ ಸ್ವಭಾವವನ್ನು ಬೆಳೆಸಿಕೊಳ್ಳುತ್ತಾರೆ. ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗದು.

ಪರಿಹಾರ : ಜೇನು ಸೇವಿಸಿ ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ : ಬಿಳಿ ಬಣ್ಣ

ಮಿಥುನ

ಇಷ್ಟಪಟ್ಟ ಕೆಲಸ ಕಾರ್ಯಗಳೆಲ್ಲಾ ಕೈಗೂಡುವುದರಿಂದ ಸಂತೋಷಕ್ಕೆ ಮಿತಿ ಇರದು. ಉದ್ಯೋಗದಲ್ಲಿ ಉನ್ನತ ಮಟ್ಟ ತಲುಪುವಿರಿ. ವಿದ್ಯಾರ್ಥಿಗಳು ವಿಶೇಷ ಸೌಲಭ್ಯಗಳನ್ನು ಗಳಿಸುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಹಣ ಉಳಿಸಲು ವಿವಿಧ ಯೋಜನೆಯನ್ನು ಅವಲಂಬಿಸುವಿರಿ. ಹಣಕಾಸಿನ ವ್ಯವಹಾರದಲ್ಲಿ ಸ್ವಂತ ನಿರ್ಧಾರಗಳಿಗೆ ಬದ್ಧರಾಗುವಿರಿ.

ಪರಿಹಾರ : ಪುಟ್ಟ ಮಕ್ಕಳಿಗೆ ಬೆಣ್ಣೆನೀಡಿ ಇಂದಿನ ಕೆಲಸವನ್ನು ಆರಂಬಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ಬೂದು

ಕಟಕ

ಕುಟುಂಬದಲ್ಲಿನ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಾದ ಜವಾಬ್ದಾರಿ ನಿಮ್ಮದಾಗಲಿದೆ. ಅವಶ್ಯಕತೆ ಇದ್ದಲ್ಲಿ ಮಾತ್ರ ಹಣವನ್ನು ಖರ್ಚು ಮಾಡುವಿರಿ. ಎಲ್ಲರೊಂದಿಗೆ ಸಂತೋಷದಿಂದ ಬಾಳುವಿರಿ. ಉದ್ಯೋಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕೌಟುಂಬಿಕ ಸಮಸ್ಯೆಯನ್ನು ಸುಲಭವಾಗಿ ಬಗೆಹರಿಸುವಿರಿ. ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಯಶಸ್ಸು ಲಭಿಸುತ್ತದೆ.

ಪರಿಹಾರ : ಕೈ ಅಥವ ಕಾಲಿನಲ್ಲಿ ಕಪ್ಪು ದಾರವನ್ನು ಧರಿಸುವದರಿಂದ ಶುಭವಿರುತ್ತದೆ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಕಂದು

ಸಿಂಹ

ಕುಟುಂಬದ ಹಣಕಾಸಿನ ವ್ಯವಹಾರದ ಬಗ್ಗೆ ಎಚ್ಚರಿಕೆ ವಹಿಸುವಿರಿ. ಅನಿರೀಕ್ಷಿತ ವಾದ ವಿವಾದಗಳು ಒತ್ತಡಕ್ಕೆ ಕಾರಣವಾಗುತ್ತದೆ. ಕುಟುಂಬದವರ ನೆರವಿನಿಂದ ಕಷ್ಟ ನಷ್ಟದಿಂದ ಪಾರಾಗುವಿರಿ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳ ಸಹಕಾರ ದೊರೆಯಲಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಮುಂದಿರುತ್ತಾರೆ. ಸ್ವಂತ ವ್ಯಾಪಾರ ವ್ಯವಹಾರಗಳು ಸುಗಮವಾಗಿ ನಡೆಯುತ್ತವೆ.

ಪರಿಹಾರ : ಮನೆಯಲ್ಲಿರುವ ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಾಲನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ 9

ಅದೃಷ್ಟದ ದಿಕ್ಕು ಪೂರ್ವ

ಅದೃಷ್ಟದ ಬಣ್ಣ : ಕಪ್ಪು

ಕನ್ಯಾ

ಸಮಯಕ್ಕೆ ತಕ್ಕಂತೆ ವರ್ತಿಸುವಿರಿ. ಉದ್ಯೋಗದಲ್ಲಿ ಉನ್ನತ ಸ್ಥಾನ ಗಳಿಸುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ಯಾವುದೇ ಬದಲಾವಣೆ ಕಾಣದು. ಕುಟುಂಬದ ಧಾರ್ಮಿಕ ಕೆಲಸಗಳು ಸರಾಗವಾಗಿ ನಡೆಯುತ್ತವೆ. ವಿವಾಹದ ಮಾತುಕತೆ ಆರಂಭವಾಗುತ್ತದೆ. ಹೊಸ ವ್ಯಾಪಾರ ಆರಂಭಿಸುವ ಕನಸು ನನಸಾಗುತ್ತದೆ.

ಪರಿಹಾರ : ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ಮಾಡಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ : ತಿಳಿ ಹಸಿರು

ತುಲಾ

ಉದ್ಯೋಗದಲ್ಲಿ ಒತ್ತಡದ ಸನ್ನಿವೇಶ ಎದುರಾಗುತ್ತದೆ. ಸಹೋದ್ಯೋಗಿಗಳ ನಡುವೆ ಆತ್ಮೀಯತೆಯಿಂದ ವರ್ತಿಸುವಿರಿ. ಮಕ್ಕಳಿಗೆ ಸಂಬಂಧಿಸಿದ ವಸ್ತ್ರಗಳ ತಯಾರಿಕೆಯಲ್ಲಿ ನಿರತರಾಗುವಿರಿ. ಹೊಸ ಸ್ನೇಹಿತರ ಪರಿಚಯ ಜೀವನದ ಹಾದಿಯನ್ನು ಬದಲಿಸುತ್ತದೆ. ವ್ಯಾಪಾರ ವ್ಯವಹಾರಗಳ ವರಮಾನ ಕಡಿಮೆಯಾಗುತ್ತದೆ. ನಿರೀಕ್ಷೆಯಂತೆ ಕುಟುಂಬದ ಭೂವಿವಾದ ಕೊನೆಗೊಳ್ಳುತ್ತದೆ.

ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 7

ಅದೃಷ್ಟದ ದಿಕ್ಕು ನೈರುತ್ಯ

ಅದೃಷ್ಟದ ಬಣ್ಣ: ನಸು ಗೆಂಪು

ವೃಶ್ಚಿಕ

ನಿಮ್ಮಲ್ಲಿ ತಪ್ಪು ಅಭಿಪ್ರಾಯವು ಆತ್ಮೀಯರನ್ನು ದೂರ ಮಾಡಬಹುದು ಎಚ್ಚರಿಕೆ ಇರಲಿ. ವಿವಿಧ ಮೂಲಗಳಿಂದ ಹಣದ ಸಹಾಯ ದೊರೆಯುತ್ತದೆ. ಉದ್ಯೋಗದಲ್ಲಿ ಒತ್ತಡದ ಸನ್ನಿವೇಶ ಎದುರಾಗುತ್ತದೆ. ಕ್ರೀಡಾ ಮನೋಭಾವನೆಯಿಂದ ಸೋಲು ಗೆಲುವನ್ನು ಸ್ವೀಕರಿಸುವಿರಿ. ಬೇರೆಯವರಿಂದ ತೆಗೆದುಕೊಂಡ ಸಾಲದಿಂದ ಮುಕ್ತರಾಗುವಿರಿ. ಸ್ವಂತ ಮನೆಯ ಕನಸು ಸುಲಭವಾಗಿ ಕೈಗೂಡಲಿದೆ.

ಪರಿಹಾರ : ಸಾಧು ಸಂತರ ಆಶೀರ್ವಾದ ಪಡೆದು ದಿನದ ಕೆಲಸ ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ

ಧನಸ್ಸು

ಯಾವುದೇ ಕೆಲಸ ಕಾರ್ಯಗಳಲ್ಲಿ ನಿರ್ದಿಷ್ಟವಾದ ಹಾದಿಯಲ್ಲಿ ನಡೆಯಲಾಗುವುದಿಲ್ಲ. ನಿಮ್ಮೆಲ್ಲ ಕೆಲಸದಲ್ಲಿಯೂ ಮಕ್ಕಳ ಸಹಾಯ ಸಹಕಾರ ಇರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿಸಿದ ಫಲಿತಾಂಶಗಳು ದೊರೆಯದು. ಉನ್ನತ ಅಧಿಕಾರಿಗಳಾದಲ್ಲಿ ಯಾವುದೇ ತೊಂದರೆ ಉಂಟಾಗದು. ಉತ್ತಮ ವರಮಾನವನ್ನು ಕೇಂದ್ರವಾಗಿರಿಸಿಕೊಂಡು ಸಣ್ಣ ಪ್ರಮಾಣದ ಉದ್ದಿಮೆ ಆರಂಭಿಸುವಿರಿ.

ಪರಿಹಾರ : ಬೇವಿನ ಮರಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸುವುದು.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ

ಕುಟುಂಬದ ಆಧಾರ ಸ್ತಂಭವಾಗಿ ನಿಲ್ಲುವಿರಿ. ಆದರೆ ದುಡುಕಿನ ಮಾತುಕತೆ ಕೆಲವರನ್ನು ನಿಮ್ಮಿಂದ ದೂರ ಮಾಡುತ್ತದೆ. ವಾದ ವಿವಾದ ಇಚ್ಚಿಸುವುದಿಲ್ಲ. ಅವಿರತ ದುಡಿಯುವ ಕಾರಣ ದೈಹಿಕವಾಗಿ ದುರ್ಬಲರಾಗುವಿರಿ. ಕುಟುಂಬದ ಒಳಿತಿಗಾಗಿ ಧಾರ್ಮಿಕ ಕಾರ್ಯವನ್ನು ನಡೆಸುವಿರಿ. ಉದ್ಯೋಗದಲ್ಲಿನ ಸಮಸ್ಯೆಗಳು ಮರೆಯಾಗಲಿವೆ. ವಿದ್ಯಾರ್ಥಿಗಳು ಮಾತಿನಿಂದ ಎಲ್ಲರ ಮನಸ್ಸನ್ನು ಗೆಲ್ಲುತ್ತಾರೆ.

ಪರಿಹಾರ : ಮನೆ ಮುಂದಿನ ಒಣಗಿದ ಗಿಡಗಳನ್ನು ವಿಲೇವಾರಿ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 8

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಆಕಾಶ ನೀಲಿ

ಕುಂಭ

ನಿಮ್ಮ ಮನದಲ್ಲಿದ್ದ ಅನುಮಾನಕ್ಕೆ ಕೊನೆ ಸಿಗಲಿದೆ. ಉದ್ಯೋಗದ ಸತ್ಯಾಸತ್ಯತೆಗಳನ್ನು ಅರಿಯಲು ಪ್ರಯತ್ನಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯಕ್ಕೆ ಕೊರತೆ ಬಾರದು. ಉದ್ಯೋಗದಲ್ಲಿ ಬೇರೆಯವರನ್ನು ಅವಲಂಬಿಸಿರುವಿರಿ. ವಿದ್ಯಾರ್ಥಿಗಳು ವಿಶೇಷ ಸಾಧನೆಯ ಕಡೆ ಗಮನ ನೀಡುತ್ತಾರೆ. ದೊಡ್ಡ ಪ್ರಮಾಣದ ವ್ಯಾಪಾರವೊಂದನ್ನು ಆರಂಭಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಅಕ್ಕಿ ಬೆಳೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ನೀಲಿ

ಮೀನ

ಉದ್ಯೋಗದಲ್ಲಿನ ದೊಡ್ಡ ಪ್ರಮಾದವನ್ನು ಉತ್ತಮ ಪ್ರಯತ್ನದಿಂದ ದೂರ ಮಾಡುವಿರಿ. ಉತ್ತಮ ಅವಕಾಶ ದೊರೆವ ಕಾರಣ ಉದ್ಯೋಗವನ್ನು ಬದಲಾಯಿಸುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಸ್ಥಿರವಾದ ಆದಾಯ ಇರಲಿದೆ. ವಿದ್ಯಾರ್ಥಿಗಳು ಎಲ್ಲರಿಗೂ ಮಾದರಿಯಾಗಬಲ್ಲ ಕೆಲಸಗಳನ್ನು ಮಾಡಲಿದ್ದಾರೆ. ಎಲ್ಲರ ಜೊತೆ ಶಾಂತಿ ಸಂಯಮದಿಂದ ಮಾತನಾಡುವ ಕಾರಣ ಪ್ರೀತಿ ವಿಶ್ವಾಸ ದೊರೆಯುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಪೂಜಾ ದ್ರವ್ಯಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 2

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ನೇರಳೆ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ