Tomorrow Horoscope: ದಿಢೀರ್ ಅನಾರೋಗ್ಯ ಕಾಡಲಿದೆ, ಭೂ ವ್ಯವಹಾರದಲ್ಲಿ ವಿವಾದ ಎದುರಿಸುವಿರಿ; ನಾಳೆಯ ದಿನ ಭವಿಷ್ಯ
May 07, 2024 05:30 PM IST
ದಿಢೀರ್ ಅನಾರೋಗ್ಯ ಕಾಡಲಿದೆ, ಭೂ ವ್ಯವಹಾರದಲ್ಲಿ ವಿವಾದ ಎದುರಿಸುವಿರಿ; ನಾಳೆಯ ದಿನ ಭವಿಷ್ಯ
8th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ನಾಳೆಯ ದಿನ ಭವಿಷ್ಯ ಹೀಗಿದೆ.
ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (8th May 2024 Horoscope).
ತಾಜಾ ಫೋಟೊಗಳು
ನಾಳೆಯ ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯಣ-ವಸಂತ ಋತು-ಚೈತ್ರ ಮಾಸ-ಕೃಷ್ಣಪಕ್ಷ-ಬುಧವಾರ
ತಿಥಿ: ಅಮಾವಾಸ್ಯೆ ಬೆಳಗ್ಗೆ 08.42 ರವರೆಗೂ ಇದ್ದು ನಂತರ ಪಾಡ್ಯ ಆರಂಭವಾಗುತ್ತದೆ.
ನಕ್ಷತ್ರ: ಭರಣಿ ನಕ್ಷತ್ರವು 01.49 ರವರೆಗೂ ಇದ್ದು ನಂತರ ಕೃತ್ತಿಕಾ ನಕ್ಷತ್ರವು ಆರಂಭವಾಗುತ್ತದೆ.
ಸೂರ್ಯೋದಯ: ಬೆಳಗ್ಗೆ05.56
ಸೂರ್ಯಾಸ್ತ: ಸಂಜೆ 06.35
ರಾಹುಕಾಲ: 12.20 ರಿಂದ 01.55
ರಾಶಿಫಲ
ಮೇಷ
ಅವಶ್ಯಕತೆ ಇದ್ದಷ್ಟು ಮಾತನಾಡಿ. ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿ ಪಡೆಯುವಿರಿ. ಮನೆಯ ಹಣದ ಅವಶ್ಯಕತೆ ಹೆಚ್ಚುವ ಕಾರಣ ಮಾನಸಿಕ ನೆಮ್ಮದಿ ಇರುವುದಿಲ್ಲ. ಕಷ್ಟಪಷ್ಟು ಕೂಡಿಟ್ಟ ಹಣವನ್ನು ಖರ್ಚು ಮಾಡುವಿರಿ. ವಿದ್ಯಾರ್ಥಿಗಳ ಸಾಧನೆ ಕುಟುಂಬದಲ್ಲಿ ಸಂತಸ ಮೂಡಿಸುತ್ತದೆ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ತೋರುವಿರಿ. ಮಕ್ಕಳಿಗೆ ಬೆಳ್ಳಿ ಅಥವ ಚಿನ್ನದ ಒಡವೆಗಳ ಉಡುಗೊರೆ ನೀಡುವಿರಿ.
ಪರಿಹಾರ : ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 12
ಅದೃಷ್ಟದ ದಿಕ್ಕು : ನೈರುತ್ಯ
ಅದೃಷ್ಟದ ಬಣ್ಣ: ಆಕಾಶ ನೀಲಿ
ವೃಷಭ
ಖರ್ಚು ಹೆಚ್ಚಾಗುವ ಕಾರಣ ಆದಾಯದಲ್ಲಿ ಕೊರತೆ ಕಂಡು ಬರುತ್ತದೆ. ಉದ್ಯೋಗದಲ್ಲಿ ಉಂಟಾಗುವ ಬದಲಾವಣೆಗಳು ಹೊಸ ಆಸೆಗೆ ಕಾರಣವಾಗುತ್ತದೆ. ಹಿರಿಯರ ಆರೋಗ್ಯದಲ್ಲಿ ಸಮಸ್ಯೆ ಎದುರಾಗದು. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚುತ್ತದೆ. ಕುಟುಂಬದಲ್ಲಿ ಶಾಂತಿ ಸಾಮರಸ್ಯ ನೆಲೆಸಿರುತ್ತದೆ. ವಿದೇಶ ಪ್ರಯಾಣ ಯೋಗವಿದೆ.
ಪರಿಹಾರ : ಹೆಣ್ಣು ಮಕ್ಕಳಿಗೆ ಹೊಸ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ 3
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ : ಕೆಂಪು
ಮಿಥುನ
ದೃಢವಾದ ತೀರ್ಮಾನವನ್ನು ತೆಗೆದುಕೊಂಡಲ್ಲಿ ಯಾವುದೇ ತೊಂದರೆ ಎದುರಾಗದು. ಕುಟುಂಬದಲ್ಲಿ ಪ್ರೀತಿ ವಿಶ್ವಾಸದ ವಾತಾವರಣವಿರುತ್ತದೆ. ಸ್ವಂತಕ್ಕಾಗಿ ಹೆಚ್ಚಿನ ಹಣ ಖರ್ಚಾಗಲಿದೆ. ಬಡವರಿಗೆ ನೀಡುವಷ್ಟು ಹಣ ಉಳಿಸಲು ಯಶಸ್ವಿಯಾಗುವಿರಿ. ಉದ್ಯೋಗದಲ್ಲಿ ಸಾಧಾರಣ ಪ್ರಗತಿ ಕಂಡು ಬರುತ್ತದೆ. ಹೆಚ್ಚಿನ ಪ್ರಯತ್ನದಿಂದ ಮಾತ್ರ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ.
ಪರಿಹಾರ : ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಎಲೆ ಹಸಿರು
ಕಟಕ
ಅವಸರದ ನಿರ್ಧಾರಗಳು ನಿಮ್ಮ ಸಾಧನೆಗೆ ಅಡ್ಡಗಾಲಾಗುತ್ತದೆ. ಕೆಲಸ ಕಾರ್ಯದ ಬಗ್ಗೆ ಕೀಳರಿಮೆ ಇರುವುದಿಲ್ಲ. ಸಮಾಜದಲ್ಲಿ ಉನ್ನತ ಗೌರವ ದೊರೆಯುತ್ತವೆ. ಕುಟುಂಬದಲ್ಲಿ ಸ್ನೇಹಮಯ ವಾತಾವರಣವಿರುತ್ತದೆ. ಸಂಗಾತಿಯೊಡನೆ ಸುಖಮಯ ಜೀವನ ನಡೆಸುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಕಂಡು ಬಾರದು. ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆಯ ಬಗ್ಗೆ ವಿಶ್ವಾಸವಿರುತ್ತದೆ.
ಪರಿಹಾರ : ನೆರೆ ಹೊರೆಯ ಮಕ್ಕಳಿಗೆ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 1
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ಕೇಸರಿ
ಸಿಂಹ
ಅದೃಷ್ಟವಶಾತ್ ಹಣದ ತೊಂದರೆ ದೂರವಾಗಲಿದೆ. ತಪ್ಪು ಗ್ರಹಿಕೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿ ತಪ್ಪು ನಿರ್ಧಾರ ತೆಗೆದುಕೊಳ್ಳುವಿರಿ. ಉದ್ಯೋಗದಲ್ಲಿ ಪ್ರತಿಯೊಂದು ವಿಚಾರಗಳು ನಿಮ್ಮ ನಿರೀಕ್ಷೆಯಂತೆ ನಡೆಯುತ್ತವೆ. ಉತ್ತಮ ನಾಯಕತ್ವದ ಗುಣದ ಕಾರಣ ಎಲ್ಲರ ಮನ ಗೆಲ್ಲುವಿರಿ. ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೆ ಅಭ್ಯಾಸದಲ್ಲಿ ನಿರತರಾಗುತ್ತಾರೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ: 4
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ : ಮಣ್ಣಿನ ಬಣ್ಣ
ಕನ್ಯಾ
ಟೀಕೆ ಮತ್ತು ಪ್ರಶಂಸೆಗಳನ್ನು ಸಮಾನವಾಗಿ ಸ್ವೀಕರಿಸುವಿರಿ. ಎದುರಾಗುವ ಸಮಸ್ಯೆಯನ್ನು ಸುಲಭವಾಗಿ ಗೆಲ್ಲಬಲ್ಲಿರಿ. ದಿಢೀರನೆ ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ. ಉದ್ಯೋಗದಲ್ಲಿ ಏರುಪೇರು ಇದ್ದರೂ ಬುದ್ಧಿವಂತಿಕೆಯಿಂದ ಪಾರಾಗುವಿರಿ. ಆದಾಯ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಬಂಡವಾಳ ತೊಡಗಿಸಿಕೊಳ್ಳುವಿರಿ.
ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 7
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಕೆಂಪು
ತುಲಾ
ಉದ್ಯೋಗದಲ್ಲಿ ವಿಶೇಷವಾದ ಬದಲಾವಣೆ ನಿಮಗೆ ಅನುಕೂಲಕರವಾಗಿರುತ್ತದೆ. ಉತ್ತಮ ಆದಾಯ ಇಲ್ಲದೇ ಹೋದರು ಹಣದ ತೊಂದರೆ ಬಾರದು. ಹಿರಿಯ ಅಧಿಕಾರಿಗಳ ಅಣತಿಯಂತೆ ನೌಕರರ ಗುಂಪಿನ ನಾಯಕತ್ವ ವಹಿಸುವಿರಿ. ವಿದ್ಯಾರ್ಥಿಗಳು ಮಾನಸಿಕ ಒತ್ತಡಕ್ಕೆ ಮಣಿಯದೆ ವಿಶೇಷ ಸಾಧನೆ ಮಾಡಲಿದ್ದಾರೆ. ಭೂವ್ಯವಹಾರದಲ್ಲಿ ಹೇರಳ ಲಾಭವಿದೆ. ಸಂತೋಷ ಕೂಟವೊದರಲ್ಲಿ ಅತಿಥಿಗಳಾಗಿ ಭಾಗಿಯಾಗುವಿರಿ.
ಪರಿಹಾರ : ಬಲಗೈಯಲ್ಲಿ ಬೆಳ್ಳಿಯ ಕೈಕಡಗ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 2
ಅದೃಷ್ಟದ ದಿಕ್ಕು: ನೈರುತ್ಯ
ಅದೃಷ್ಟದ ಬಣ್ಣ: ಕಿತ್ತಳೆ
ವೃಶ್ಚಿಕ
ನೇರವಾಗಿ ನಿಷ್ಠುರದ ಮಾತಾಡುವ ಕಾರಣ ಕುಟುಂಬದಲ್ಲಿ ವಾತಾವರಣದಲ್ಲಿ ಸಂಧಿಗ್ದತೆ ಉಂಟಾಗುತ್ತದೆ. ದಿಟ್ಟತನದಿಂದ ಉದ್ಯೋಗದ ವಿರೋಧಿಗಳನ್ನು ಗೆದ್ದು ಪ್ರತಿಷ್ಠಿತ ಸ್ಥಾನಮಾನ ಗಳಿಸುವಿರಿ. ವಿದ್ಯಾರ್ಥಿಗಳು ವಿದ್ಯಾರ್ಜನೆಯ ಬಗ್ಗೆ ಹೆಚ್ಚಿನ ಗಮನ ನೀಡಲಿದ್ದಾರೆ. ಸಂಗಾತಿಯ ಹೆಸರಿನಲ್ಲಿ ಮಾಡುತ್ತಿರುವ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ.
ಪರಿಹಾರ : ಬೆಳ್ಳಿಯ ಉಂಗುರ ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 5
ಅದೃಷ್ಟದ ದಿಕ್ಕು : ಪಶ್ಚಿಮ
ಅದೃಷ್ಟದ ಬಣ್ಣ: ಹಳದಿ
ಧನಸ್ಸು
ಕುಟುಂಬದವರ ಹೊಂದಾಣಿಕೆಯ ಬುದ್ಧಿ ಮನಸ್ಸಿಗೆ ಸಂತೋಷ ನೀಡುತ್ತದೆ. ಕುಟುಂಬದ ಕೆಲಸ ಕಾರ್ಯಗಳ ಜವಾಬ್ದಾರಿ ನಿಮ್ಮದಾಗುತ್ತದೆ. ಸಂತಸದಿಂದ ಸಂಗಾತಿ ಮತ್ತು ಮಕ್ಕಳ ಜೊತೆ ಸಂತಸದ ಕ್ಷಣಗಳನ್ನು ಕಳೆಯುವಿರಿ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸುಲಭವಾಗಿ ಖರ್ಚು ಮಾಡುವುದಿಲ್ಲ. ಕುಟುಂಬದ ಸದಸ್ಯರಿಂದ ಖರ್ಚಿನ ಪಾಲು ದೊರೆಯುತ್ತದೆ. ಉದ್ಯೋಗದಲ್ಲಿನ ಸಮಸ್ಯೆಗಳು ಕ್ರಮೇಣವಾಗಿ ಮರೆಯಾಗಲಿವೆ.
ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬೆಲ್ಲ ಮತ್ತು ಉಪ್ಪು ನೀಡಿ ದಿನದ ಕೆಲಸ ಆರಂಭಿಸಿ.
ಅದೃಷ್ಟದ ಸಂಖ್ಯೆ : 8
ಅದೃಷ್ಟದ ದಿಕ್ಕು : ಉತ್ತರ
ಅದೃಷ್ಟದ ಬಣ್ಣ: ಹಸಿರು
ಮಕರ
ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ದೊರೆಯುತ್ತದೆ. ವಿದ್ಯಾರ್ಥಿಗಳು ಆತಂಕ ಬಿಟ್ಟು ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಸ್ವತಂತ್ರವಾಗಿ ನಿರ್ವಹಿಸುವ ವ್ಯಾಪಾರ ವ್ಯವಹಾರ ಒಳ್ಳೆಯದು. ಪಾಲುಗಾರಿಕೆಯಲ್ಲಿ ಹಣದ ವ್ಯವಹಾರವನ್ನು ಆರಂಭಿಸಿ ಉತ್ತಮ ಆದಾಯ ಗಳಿಸುವಿರಿ. ಭೂ ವ್ಯವಹಾರದಲ್ಲಿ ವಿವಾದ ಎದುರಿಸುವಿರಿ. ಚರ್ಮದ ವಸ್ತುಗಳನ್ನು ಬಳಸದೆ ಇದ್ದಲ್ಲಿ ಶುಭ ಫಲಗಳು ದೊರೆಯುತ್ತವೆ.
ಪರಿಹಾರ : ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ.
ಅದೃಷ್ಟದ ಸಂಖ್ಯೆ : 3
ಅದೃಷ್ಟದ ದಿಕ್ಕು : ಈಶಾನ್ಯ
ಅದೃಷ್ಟದ ಬಣ್ಣ: ನೀಲಿ
ಕುಂಭ
ಹಣಕಾಸಿನ ವಿಚಾರದಲ್ಲಿ ಯಾರ ಬಲವಂತಕ್ಕೂ ನೀವು ಒಪ್ಪುವುದಿಲ್ಲ. ಉದ್ಯೋಗದಲ್ಲಿ ಎದುರಾಗುವ ಸಮಸ್ಯೆಗಳನ್ನು ಎದುರಿಸಿ ಉನ್ನತ ಫಲವನ್ನು ಪಡೆಯುವಿರಿ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯ ದೊರೆಯುತ್ತದೆ. ವಿದ್ಯಾರ್ಥಿಗಳು ತಮ್ಮ ವಯಸ್ಸಿನ ಗುಂಪಿನ ನಾಯಕತ್ವ ದೊರೆಯುತ್ತದೆ. ಕುಟುಂಬದ ಹಿರಿಯರ ಆರೋಗ್ಯದಲ್ಲಿ ತೊಂದರೆ ಉಂಟಾಗಬಹುದು.
ಪರಿಹಾರ : ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 6
ಅದೃಷ್ಟದ ದಿಕ್ಕು : ಪೂರ್ವ
ಅದೃಷ್ಟದ ಬಣ್ಣ: ಗುಲಾಬಿ
ಮೀನ
ಕುಟುಂಬಕ್ಕೆ ಸಂಬಂಧಿಸಿದಂತೆ ತ್ವರಿತಗತಿಯಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳುವಿರಿ. ನಿಧಾನವಾದಷ್ಟು ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಕುಟುಂಬದವರ ಸಹಾಯ ದೊರೆಯುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭವಿದೆ. ವಿದ್ಯಾರ್ಥಿಗಳು ಕಷ್ಟವೆನಿಸಿದರೂ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಚಂಚಲದ ಸ್ವಭಾವದಿಂದ, ದೊರೆಯುವ ಅವಕಾಶವನ್ನು ಕಳೆದುಕೊಳ್ಳಬಹುದು.
ಪರಿಹಾರ : ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.
ಅದೃಷ್ಟದ ಸಂಖ್ಯೆ : 9
ಅದೃಷ್ಟದ ದಿಕ್ಕು : ದಕ್ಷಿಣ
ಅದೃಷ್ಟದ ಬಣ್ಣ : ಹಸಿರು
ಬರಹ: ಎಚ್. ಸತೀಶ್, ಜ್ಯೋತಿಷಿ
ಮೊಬೈಲ್: 8546865832
(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).