logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಅವಶ್ಯಕತೆಗೆ ತಕ್ಕಂತೆ ಹಣ ಖರ್ಚು, ಸರಳ ಜೀವನವನ್ನು ಇಷ್ಟಪಡುತ್ತೀರಿ; ನಾಳೆಯ ದಿನ ಭವಿಷ್ಯ

Tomorrow Horoscope: ಅವಶ್ಯಕತೆಗೆ ತಕ್ಕಂತೆ ಹಣ ಖರ್ಚು, ಸರಳ ಜೀವನವನ್ನು ಇಷ್ಟಪಡುತ್ತೀರಿ; ನಾಳೆಯ ದಿನ ಭವಿಷ್ಯ

Raghavendra M Y HT Kannada

May 10, 2024 05:22 PM IST

google News

ಮೇ 11ರ ದಿನ ಭವಿಷ್ಯ ಇಂದೇ ತಿಳಿಯಿರಿ.

    • 11th May 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ನಾಳೆ ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.
ಮೇ 11ರ ದಿನ ಭವಿಷ್ಯ ಇಂದೇ ತಿಳಿಯಿರಿ.
ಮೇ 11ರ ದಿನ ಭವಿಷ್ಯ ಇಂದೇ ತಿಳಿಯಿರಿ.

ನಾಳೆಯ ದಿನ ಭವಿಷ್ಯ: 'ನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (11th May 2024 Horoscope)

ತಾಜಾ ಫೋಟೊಗಳು

2025ರ ಹೊಸ ವರ್ಷದ ಮೊದಲ ವಾರದಿಂದಲೇ ಈ ರಾಶಿಯವರಿಗೆ ಬಂಪರ್; ಧನ ಯೋಗ, ಇತರರಿಂದ ಬೆಂಬಲ ಸೇರಿ ಹಲವು ಪ್ರಯೋಜನ

Dec 22, 2024 08:14 AM

ನಾಳಿನ ದಿನ ಭವಿಷ್ಯ: ಉದ್ಯೋಗದಲ್ಲಿ ಬದಲಾವಣೆಯ ಸಾಧ್ಯತೆ ಇದೆ, ವ್ಯವಹಾರದಲ್ಲಿ ಸುಧಾರಣೆ ಕಂಡುಬರುತ್ತೆ

Dec 21, 2024 04:43 PM

24ನೇ ಜನವರಿ 2025ಕ್ಕೆ ಸೂರ್ಯ-ಬುಧ ಸಂಯೋಗದಿಂದ ಬುಧಾದಿತ್ಯ ರಾಜಯೋಗ: ರಾಶಿಯವರ ಜೀವನ ಆಗ ಪಾವನ, ಅದೃಷ್ಟವೋ ಅದೃಷ್ಟ

Dec 20, 2024 05:22 PM

ನಾಳಿನ ದಿನ ಭವಿಷ್ಯ: ನೀವು ಇಷ್ಟಪಡುವ ಜನರೊಂದಿಗೆ ಸಮಯ ಕಳೆಯುತ್ತೀರಿ, ಕೆಲಸಗಳು ಸುಗಮವಾಗಿ ನಡೆಯುತ್ತವೆ

Dec 20, 2024 03:29 PM

ಮಾಸ ಶಿವರಾತ್ರಿಯಿಂದ ಬದಲಾಗಲಿದೆ 3 ರಾಶಿಯವರ ಜೀವನ: ಮಾರ್ಗಶಿರ ಮಾಸದಲ್ಲಿ ಈ ವ್ರತವನ್ನು ಯಾವ ದಿನ ಆಚರಿಸಲಾಗುತ್ತದೆ?

Dec 19, 2024 06:44 PM

ಅಪರಿಚಿತ ವ್ಯಕ್ತಿಗಳನ್ನು ನಂಬಿ ಮೋಸ ಹೋಗದಿರಿ, ತಾಯಿಯ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ; ನಾಳಿನ ದಿನಭವಿಷ್ಯ

Dec 18, 2024 05:02 PM

ನಾಳಿನ ಪಂಚಾಂಗ

ಶ್ರೀ ಕ್ರೋಧಿನಾಮ ಸಂವತ್ಸರ-ಉತ್ತರಾಯನ-ವಸಂತ ಋತು-ವೈಶಾಖ ಮಾಸ-ಶುಕ್ಲಪಕ್ಷ-ಶನಿವಾರ

ತಿಥಿ: ಚೌತಿ ರಾ. 04.10 ರವರೆಗು ಇರುತ್ತದೆ. ಆನಂತರ ಪಂಚಮಿ ಆರಂಭವಾಗುತ್ತದೆ.

ನಕ್ಷತ್ರ: ಮೃಗಶಿರ ನಕ್ಷತ್ರವು ಹ. 12.15 ರವರೆಗು ಇರುತ್ತದೆ. ಆನಂತರ ಆರ್ದ್ರೆ ನಕ್ಷತ್ರವು ಆರಂಭವಾಗುತ್ತದೆ.

ಸೂರ್ಯೋದಯ: ಬೆಳಗ್ಗೆ 5.54

ಸೂರ್ಯಾಸ್ತ: ಸಂಜೆ 6.35

ರಾಹುಕಾಲ: ಬೆಳಗ್ಗೆ 9.09 ರಿಂದ ಬೆ.10.44

ಮೇಷ ರಾಶಿ

ಒಳ್ಳೆಯ ಭಾವನೆಯಿಂದ ದಿನವನ್ನು ಆರಂಭಿಸುವಿರಿ. ಪ್ರಸಕ್ತ ಸನ್ನಿವೇಶಕ್ಕೆ ಹೊಂದಿಕೊಂಡು ಜೀವನದ ರೀತಿಯನ್ನು ಬದಲಿಸುವಿರಿ. ಎಲ್ಲರಲ್ಲಿಯೂ ಸಹಕಾರದ ಮನೋಭಾವನೆ ತೋರುವಿರಿ. ಹೊಸ ಮನೆಯನ್ನು ಕೊಳ್ಳಲು ಯೋಚನೆ ಮಾಡುವಿರಿ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ಒಮ್ಮೆ ತೆಗೆದುಕೊಂಡ ನಿರ್ಧಾರವನ್ನು ಬದಲಿಸುವುದಿಲ್ಲ. ಉದ್ಯೋಗದ ಕ್ಷೇತ್ರದಲ್ಲಿನ ಬದಲಾವಣೆಗಳಿಗೆ ಹೊಂದುಕೊಂಡು ನಡೆಯುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹಿನ್ನೆಡೆಯ ಸಾಧ್ಯತೆಗಳಿವೆ. ಷೇರುಪೇಟೆಯಿಂದ ಲಾಭ ಪಡೆಯುತ್ತೀರಿ.

ಪರಿಹಾರ: ಕಣ್ಣಿನ ತೊಂದರೆ ಇರುವವರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ಮಣ್ಣಿನ ಬಣ್ಣ

ವೃಷಭ ರಾಶಿ

ನಿಮ್ಮ ಮನಸ್ಸಿಗೆ ಸರಿ ಎನಿಸುವ ಕೆಲಸ ಕಾರ್ಯಗಳನ್ನು ಮಾಡಲಿಚ್ಚಿಸುವಿರಿ. ನಂಬಿದವರ ಆಸೆ ಆಕಾಂಕ್ಷೆಗಳನ್ನು ಪೂರೈಸಲು ಪ್ರಯತ್ನಿಸುವಿರಿ. ಉದ್ಯೋಗದಲ್ಲಿ ಎಲ್ಲರ ಜೊತೆ ಸ್ನೇಹದಿಂದ ನಡೆದುಕೊಳ್ಳುವಿರಿ. ಸರಳ ಜೀವನವನ್ನು ಇಷ್ಟಪಡುವಿರಿ. ಅವಶ್ಯಕತೆಗೆ ತಕ್ಕಂತೆ ಹಣವನ್ನು ಖರ್ಚು ಮಾಡುವಿರಿ. ಆತ್ಮೀಯರಿಂದ ಹಣದ ಸಹಾಯ ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಇರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶವೂ ದೊರೆಯುತ್ತದೆ. ಆತ್ಮವಿಶ್ವಾಸದಿಂದ ವಿವಾದದಿಂದ ಪಾರಾಗುವಿರಿ. ಸಂಗಾತಿಯ ಜೊತೆಯಲ್ಲಿ ವಿದೇಶ ಪ್ರಯಾಣ ಮಾಡುವಿರಿ.

ಪರಿಹಾರ: ತಾಮ್ರದ ನಾಣ್ಯವನ್ನು ಖಾಕಿದಾರದಲ್ಲಿ ಕತ್ತಿನಲ್ಲಿ ಧರಿಸಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಕೆಂಪು ಬಣ್ಣ

ಮಿಥುನ ರಾಶಿ

ಕೆಲಸವನ್ನು ಬದಲಾಯಿಸುವ ನಿರ್ಧಾರದಿಂದಲೇ ದಿನವನ್ನು ಆರಂಭಿಸುವಿರಿ. ಅನಾವಶ್ಯಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವಿರಿ. ಸಮಾಧಾನಕರ ಆದಾಯ ಇರುತ್ತದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣ ನೆಲೆಸಿರುತ್ತದೆ. ಉದ್ಯೋಗದಲ್ಲಿ ಆರೋಗ್ಯಕರ ಬದಲಾವಣೆಗಳು ದೊರೆಯುತ್ತದೆ. ವ್ಯಾಪಾರ ವ್ಯವಹಾರಗಳ ಆದಾಯದಲ್ಲಿ ಕೊರತೆ ಉಂಟಾಗುತ್ತದೆ. ವಿದ್ಯಾರ್ಥಿಗಳಿಗೆ ದ್ವಂದ್ವ ಮನಸ್ಸಿರುತ್ತದೆ. ಮನದಲ್ಲಿ ಆತಂಕವಿದ್ದರೂ ಕಲಿಕೆಯಲ್ಲಿ ಹಿಂದೆ ಉಳಿಯುವುದಿಲ್ಲ. ಏಕಾಂಗಿತನವನ್ನು ಬಯಸುವಿರಿ. ಮಕ್ಕಳ ಜೊತೆಯಲ್ಲಿ ಕಿರು ಪ್ರವಾಸ ಕೈಗೊಳ್ಳುವಿರಿ. ಅವಿವಾಹಿತರಿಗೆ ವಿವಾಹವಾಗುವ ಯೋಗವಿದೆ. ಸಮಾಜದಲ್ಲಿ ಉತ್ತಮ ಗೌರವ ದೊರೆಯುತ್ತದೆ.

ಪರಿಹಾರ: ಬೆಲ್ಲದಿಂದ ಮಾಡಿದ ಆಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಕಟಕ ರಾಶಿ

ಎಲ್ಲರನ್ನೂ ಒಂದೇ ದೃಷ್ಠಿಯಲ್ಲಿ ನೋಡುವ ಬುದ್ಧಿ ನಿಮ್ಮಲ್ಲಿ ಇರುತ್ತದೆ. ಕುಟುಂಬದಲ್ಲಿ ಸುಖ ಸಂತೋಷದ ವಾತಾವರಣ ಕಂಡುಬರುತ್ತದೆ. ಸೋಮಾರಿತನ ನಿಮ್ಮ ಮಕ್ಕಳನ್ನು ಕಾಡಲಿದೆ. ಸದಾ ಕಾಲ ಯಾವುದಾರೊಂದು ಕೆಲಸ ಕಾರ್ಯಗಳನ್ನು ಮಾಡುತ್ತಲೇ ಇರುವಿರಿ. ಉದ್ಯೋಗದಲ್ಲಿ ಅತಿ ಮುಖ್ಯವಾದ ಬದಲಾವಣೆ ಕಾಣಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ಕಂಡು ಬರುತ್ತದೆ. ವಿದ್ಯಾರ್ಥಿಗಳು ಛಲದಿಂದ ವಿದ್ಯಾಭ್ಯಾಸದಲ್ಲಿ ಮುಂದುವರೆಯುತ್ತಾರೆ. ಸಂತಾನ ಲಾಭವಿದೆ. ಆತ್ಮೀಯರ ಜೀವನದ ಉನ್ನತಿಗೆ ಕಾರಣರಾಗುವಿರಿ.

ಪರಿಹಾರ: ಸೋದರರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 4

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಹಳದಿ ಬಣ್ಣ

ಸಿಂಹ ರಾಶಿ

ಸಂತೋಷ ತರುವ ಘಟನೆಗಳು ಕುಟುಂಬದಲ್ಲಿ ನಡೆಯಲಿವೆ. ಕೈ ಹಿಡಿದ ಕೆಲಸ ಕಾರ್ಯಗಳು ಯಶಸ್ವಿ ಆಗಲಿವೆ. ವಿಶ್ರಾಂತಿಯನ್ನು ಲೆಕ್ಕಿಸದೆ ನಿಮ್ಮ ಕರ್ತವ್ಯವನ್ನು ಪೂರೈಸುವಿರಿ. ಸುಲಭವಾಗಿ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ. ಹೆಚ್ಚಿನ ಕಾಲವನ್ನು ಸ್ವಂತ ಕೆಲಸ ಕಾರ್ಯಗಳಿಗೆ ಮೀಸಲಿಡುವಿರಿ. ಕಾರಣವಿಲ್ಲದೆ ಹೋದರೂ ಕೋಪ ಬೇಗನೆ ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಯಾರನ್ನೂ ಸುಲಭವಾಗಿ ನಂಬುವುದಿಲ್ಲ. ಉದ್ಯೋಗದಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ದೊರೆಯುತ್ತದೆ. ಸ್ನೇಹಿತರು ಮತ್ತು ಬಂಧುಗಳು ನಿಮ್ಮ ವಿಶ್ವಾಸ ಗಳಿಸಲು ಹಾತೊರೆಯುತ್ತಾರೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ಮತ್ತು ಹಣ ಗಳಿಕೆ ಇರುತ್ತದೆ.

ಪರಿಹಾರ: ಮಕ್ಕಳಿಗೆ ಗೋಧಿ ಮತ್ತು ಬೆಲ್ಲದಿಂದ ತಯಾರಿಸಿದ ಸಿಹಿ ತಿಂಡಿಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಹಸಿರು ಬಣ್ಣ

ಕನ್ಯಾ ರಾಶಿ

ಆರೋಗ್ಯದಲ್ಲಿ ಪ್ರಗತಿ ಇರುತ್ತದೆ. ಮಾನಸಿಕ ಒತ್ತಡ ಮರೆಯಾಗಿ ಕೆಲಸ ಕಾರ್ಯಗಳಲ್ಲಿ ಉನ್ನತಿ ಉಂಟಾಗುತ್ತದೆ. ಕೆಲಸ ಕಾರ್ಯಗಳಲ್ಲಿ ಧನಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ಮಕ್ಕಳಿಗೆ ಓದಿನಲ್ಲಿ ಆಸಕ್ತಿ ಕಡಿಮೆಯಾಗಿ ಮನರಂಜನೆಯತ್ತ ಮನಸ್ಸು ಜಾರುವುದು. ಅನಿರೀಕ್ಷಿತ ಧನಲಾಭ ಉಂಟಾಗುತ್ತದೆ. ಹಣದ ಕೊರತೆ ಕಡಿಮೆಯಾಗುತ್ತದೆ. ದೂರದ ಬಂಧು ಬಳಗದವರೊಂದಿಗೆ ಉತ್ತಮ ಬಾಂಧವ್ಯ ಉಂಟಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿನ ವರಮಾನ ಹೆಚ್ಚುತ್ತದೆ.

ಪರಿಹಾರ: ಇರುವೆಗಳಿಗೆ ಆಹಾರ ಧಾನ್ಯವನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ನೀಲಿ ಬಣ್ಣ

ತುಲಾ ರಾಶಿ

ಕಷ್ಟದ ವೇಳೆ ಆತ್ಮೀಯರು ತಾವಾಗಿಯೇ ಸಹಾಯಕ್ಕೆ ಬರುತ್ತಾರೆ. ಕುಟುಂಬದಲ್ಲಿ ಆಶಾದಾಯಕ ಬದಲಾವಣೆಗಳು ಹೊಸ ಆಶಾಭಾವನೆ ಮೂಡಿಸುತ್ತಾರೆ. ಕೆಲಸ ಕಾರ್ಯಗಳಲ್ಲಿನ ಅಡಚಣೆಗಳನ್ನು ಸುಲಭವಾಗಿ ನಿವಾರಿಸಿಕೊಳ್ಳುವಿರಿ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಿರೀಕ್ಷಿತ ವರಮಾನ ದೊರೆಯುತ್ತದೆ. ಬೇಸರ ಕಳೆಯಲು ಸ್ನೇಹಿತರ ಮನೆಗೆ ತೆರಳುವಿರಿ. ಸಂಗಾತಿಯೊಂದಿಗೆ ಯಾತ್ರಾಸ್ಥಳಕ್ಕೆ ತೆರಳುವಿರಿ. ವಿದ್ಯಾರ್ಥಿಗಳು ಒತ್ತಡದ ನಡುವೆಯೂ ತಮ್ಮ ಕರ್ತವ್ಯದಲ್ಲಿ ಮುಂದಿರುತ್ತಾರೆ.

ಪರಿಹಾರ: ತಾಯಿಯವರಿಗೆ ಸಿಹಿತಿಂಡಿ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 5

ಅದೃಷ್ಟದ ದಿಕ್ಕು: ಪೂರ್ವ

ಅದೃಷ್ಟದ ಬಣ್ಣ: ನೇರಳೆಬಣ್ಣ

ವೃಶ್ಚಿಕ ರಾಶಿ

ಅನಿರೀಕ್ಷಿತ ಫಲಿತಾಂಶಗಳು ಕುಟುಂಬದ ಸಂತೋಷವನ್ನು ಕಾಪಾಡುತ್ತದೆ. ಆತ್ಮೀಯರ ಸಹಾಯದಿಂದ ಹೊಸ ವ್ಯಾಪಾರವನ್ನು ಆರಂಭಿಸುವಿರಿ. ಕುಟುಂಬದಲ್ಲಿ ಪರಸ್ಪರ ಸಹಕಾರದ ಮನೋಭಾವನೆ ಕಂಡುಬರುತ್ತದೆ. ಮನದ ದುಗುಡವನ್ನು ಮರೆತು ಸಂತೋಷದಿಂದ ಬಾಳುವಿರಿ. ಹಣಕಾಸಿನ ಕೊರತೆಯಿಂದ ಮನಸ್ಸಿಗೆ ಬೇಸರ ಮೂಡುತ್ತದೆ. ಉದ್ಯೋಗದಲ್ಲಿ ಸ್ನೇಹಮಯ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪ್ರಗತಿ ಕಂಡು ಬರುತ್ತದೆ. ಹಣದ ಕೊರತೆ ಇದ್ದಲ್ಲಿ ಆತ್ಮೀಯರಿಗೆ ನೀಡಿದ್ದ ಹಣ ಮರಳಿ ಕೈ ಸೇರುವುದು.

ಪರಿಹಾರ: ಪಕ್ಷಿಗಳಿಗೆ ಆಹಾರವನ್ನು ನೀಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಧನಸ್ಸು ರಾಶಿ

ನಿಮ್ಮದಲ್ಲದ ಜವಾಬ್ದಾರಿಗಳನ್ನು ಒಪ್ಪಿಕೊಳ್ಳುವಿರಿ. ಕೆಲಸ ಕಾರ್ಯಗಳ ನಡುವೆ ವಿಶ್ರಾಂತಿಯನ್ನು ಮರೆಯುವುದಿಲ್ಲ. ಬಹು ಮುಖ್ಯವಾದ ತಿರುವೊಂದು ಕುಟುಂಬದಲ್ಲಿ ಗೋಚರಿಸುತ್ತದೆ. ಆರೋಗ್ಯವು ಜೀವನದಲ್ಲಿ ಬಲು ಮುಖ್ಯ ಎಂಬುದನ್ನು ಮರೆಯದಿರಿ. ಕುಟುಂಬದಲ್ಲಿ ಸಹಾಯ ಸಹಕಾರ ಸದಾ ನಿಮಗೆ ದೊರೆಯಲಿದೆ. ಉದ್ಯೋಗದಲ್ಲಿ ಬದಲಾವಣೆಯೊಂದು ನಿಮ್ಮ ವ್ಯಕ್ತಿತ್ವವನ್ನು ಬದಲಿಸುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ವಿದ್ಯಾರ್ಥಿಗಳು ಒತ್ತಡವನ್ನು ಮರೆತು ಕಲಿಕೆಯಲ್ಲಿ ಮುಂದುವರೆಯುತ್ತಾರೆ. ಅವಿವಾಹಿತರಿಗೆ ವಿವಾಹ ಯೋಗವಿದೆ.

ಪರಿಹಾರ: ಸಿಹಿಯನ್ನು ತಿಂದು ನೀರನ್ನು ಕುಡಿದ ನಂತರ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ನೈರುತ್ಯ

ಅದೃಷ್ಟದ ಬಣ್ಣ: ಬಿಳಿ ಬಣ್ಣ

ಮಕರ ರಾಶಿ

ಅನರ್ಥದ ಮಾತಿನಿಂದಾಗಿ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಲಿವೆ. ಆದಾಯದಲ್ಲಿ ದಿಢೀರ್ ಹೆಚ್ಚಳ ಕಂಡುಬರುತ್ತದೆ. ಕ್ರಿಯಾಶೀಲತೆಯಿಂದ ಜೀವನದಲ್ಲಿ ಅಭಿವೃದ್ಧಿಯನ್ನು ಗಳಿಸುವಿರಿ. ಮಕ್ಕಳು ಹೊಂದಾಣಿಕೆಯ ಬುದ್ದಿಯನ್ನು ಬೆಳೆಸಿಕೊಳ್ಳುವುದು ಒಳ್ಳೆಯದು. ಹೆಚ್ಚಿನ ಪ್ರಯತ್ನದಿಂದ ಮಾತ್ರ ಕೆಲಸವನ್ನು ಪೂರ್ಣಗೊಳಿಸುವಿರಿ. ಉದ್ಯೋಗದಲ್ಲಿ ಯಾವುದೇ ತೊಂದರೆ ಎದುರಾಗದು. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಾಗುವುದಿಲ್ಲ. ವ್ಯವಸಾಯದಲ್ಲಿ ಉತ್ತಮ ಆದಾಯ ದೊರೆಯುತ್ತದೆ.

ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 6

ಅದೃಷ್ಟದ ದಿಕ್ಕು: ಪಶ್ಚಿಮ

ಅದೃಷ್ಟದ ಬಣ್ಣ: ಬೂದು ಬಣ್ಣ

ಕುಂಭ ರಾಶಿ

ಶಾಂತಿ ಸಂಯಮದಿಂದ ಬಾಳುವುದು ಒಳ್ಳೆಯದು. ಕುಟುಂಬದಲ್ಲಿ ಅಸಮಾಧಾನದ ವಾತಾವರಣ ತುಂಬಿರುತ್ತದೆ. ಉದ್ಯೋಗದಲ್ಲಿ ಯಶಸ್ಸು ದೊರೆಯುತ್ತದೆ. ಸ್ವಂತ ವ್ಯಾಪಾರ ವ್ಯವಹಾರಗಳಲ್ಲಿ ನಷ್ಟವಾಗದು. ಯಂತ್ರೋಪಕರಣಗಳ ಅಥವಾ ವಾಹನಗಳ ವ್ಯಾಪಾರದಲ್ಲಿ ವಿಶೇಷ ಹಣಗಳಿಕೆ ಕಂಡುಬರುತ್ತದೆ. ಕಲಾವಿದರಿಗೆ ಸುಖಮಯ ಜೇವನ ಇರುತ್ತದೆ. ದೊರೆವ ಅವಕಾಶಗಳನ್ನು ಸರಿಯಾಗಿ ಬಳಸಬೇಕು. ಪಾಲುಗಾರಿಕೆ ವ್ಯಾಪಾರವನ್ನು ಆರಂಭಿಸಿ ಯಶಸ್ಸನ್ನು ಗಳಿಸುವಿರಿ. ಕಮಿಷನ್ ಆಧಾರಿತ ವೃತ್ತಿ ಬಲು ಸೂಕ್ತ. ಸದರಿ ಇರುವ ಮನೆಯನ್ನು ಬದಲಾಯಿಸುವಿರಿ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 9

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ಮೀನ ರಾಶಿ

ದೇಹದಲ್ಲಿ ನೀರಿನ ಅಂಶ ಹೆಚ್ಚಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಕುಟುಂಬದಲ್ಲಿ ಉತ್ತಮ ಬಾಂಧವ್ಯ ಉಂಟಾಗುವ ಸಾಧ್ಯತೆಗಳು ಇವೆ. ತಪ್ಪು ಮಾಹಿತಿ ಯಿಂದಾಗಿ ಸೋದರರ ಜೊತೆಯಲ್ಲಿ ವಾಗ್ವಾದ ಉಂಟಾಗುತ್ತದೆ. ಅರಮನೆಸ್ಸಿನಿಂದ ಆರಂಭಿಸಿದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಗಳಿಸುತ್ತಾರೆ. ಬೇರೆಯವರ ಮನಸ್ಸಿಗೆ ನೋವಾಗದಂತೆ ಮಾತನಾಡುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಆಕಸ್ಮಿಕ ಧನ ಲಾಭವಿದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 7

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಕೇಸರಿಬಣ್ಣ

ಬರಹ: ಎಚ್‌. ಸತೀಶ್, ಜ್ಯೋತಿಷಿ

ಮೊಬೈಲ್: 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ