logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  Tomorrow Horoscope: ಪಾಲುದಾರಿಕೆ ವ್ಯವಹಾರದಲ್ಲಿ ಗೊಂದಲಗಳು ಎದುರಾಗಬಹುದು, ಆರೋಗ್ಯದ ಮೇಲೆ ಗಮನವಿರಲಿ; ನಾಳಿನ ದಿನ ಭವಿಷ್ಯ

Tomorrow Horoscope: ಪಾಲುದಾರಿಕೆ ವ್ಯವಹಾರದಲ್ಲಿ ಗೊಂದಲಗಳು ಎದುರಾಗಬಹುದು, ಆರೋಗ್ಯದ ಮೇಲೆ ಗಮನವಿರಲಿ; ನಾಳಿನ ದಿನ ಭವಿಷ್ಯ

HT Kannada Desk HT Kannada

Jan 17, 2024 06:50 PM IST

google News

ಜನವರಿ 17ರ ದಿನಭವಿಷ್ಯ

    • 18 January 2024 Horoscope: ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ- ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ನಿಮಗೆ ಫಲಾಫಲಗಳನ್ನು ನೀಡುತ್ತವೆ. ಇಂದು ಯಾವ ರಾಶಿಯವರಿಗೆ ಶುಭ..? ಯಾರಿಗೆ ಅಶುಭ..? ಎಂಬುದನ್ನು ನೋಡೋಣ, ಗುರುವಾರದ ದಿನಭವಿಷ್ಯ ಹೀಗಿದೆ..
ಜನವರಿ 17ರ ದಿನಭವಿಷ್ಯ
ಜನವರಿ 17ರ ದಿನಭವಿಷ್ಯ

ನಾಳೆಯ ರಾಶಿ ಭವಿಷ್ಯ: ʼನಾಳೆ ಏನಾಗುವುದೋ ಬಲ್ಲವರು ಯಾರು' ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು 'ದಿನ ಭವಿಷ್ಯ' ಹೇಗಿದೆ ಎಂದು ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಜ್ಯೋತಿಷ್ಯ ಶಾಸ್ತ್ರವನ್ನು ಸಾಂಪ್ರದಾಯಿಕವಾಗಿ ಅಭ್ಯಾಸ ಮಾಡಿರುವ ಹಿರಿಯ ಜ್ಯೋತಿಷಿ ಎಚ್. ಸತೀಶ್ ಎಲ್ಲ ರಾಶಿಗಳ ಭವಿಷ್ಯವನ್ನು ಶ್ರದ್ಧೆಯಿಂದ ಬರೆಯುತ್ತಾರೆ. ಈ ಮಾತನ್ನು ಒತ್ತಿ ಹೇಳಲು ಕಾರಣವಿದೆ. ಇದು ಜ್ಯೋತಿಷಿಯೇ ಬರೆಯುವ ರಾಶಿ ಭವಿಷ್ಯ. ನಿಮ್ಮ ನಂಬಿಕೆಗಳನ್ನು ನಾವು ಗೌರವಿಸುತ್ತೇವೆ. (Tomorrow Horoscope In Kannada, 18 January 2024)

ತಾಜಾ ಫೋಟೊಗಳು

ನಾಳಿನ ದಿನ ಭವಿಷ್ಯ: ಆರ್ಥಿಕ ವಿಚಾರದಲ್ಲಿ ಏರಿಳಿತಗಳನ್ನು ಕಾಣುತ್ತೀರಿ, ಸಂಗಾತಿಗೆ ಇಷ್ಟವಾಗದ ಯಾವುದೇ ಕೆಲಸ ಮಾಡಬೇಡಿ

Dec 16, 2024 03:08 PM

ಶೀಘ್ರದಲ್ಲೇ ಕುಂಭ ರಾಶಿಯಲ್ಲಿ ಶುಕ್ರ, ಶನಿ ಸಂಯೋಗ: ಡಿಸೆಂಬರ್‌ನಿಂದ ಈ 5 ರಾಶಿಯವರ ಜೀವನವೇ ಬದಲಾಗಲಿದೆ

Dec 15, 2024 09:24 PM

ನಾಳಿನ ದಿನ ಭವಿಷ್ಯ: ಹಣಕಾಸಿನ ವಿಷಯಗಳಲ್ಲಿ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳುತ್ತೀರಿ, ದೈಹಿಕ ಆರೋಗ್ಯದ ಬಗ್ಗೆ ಗಮನ ಕೊಡಿ

Dec 15, 2024 04:04 PM

ಧನು ರಾಶಿಗೆ ಸೂರ್ಯ ಸಂಚಾರ; ಈ 3 ರಾಶಿಯವರು ಭಾರಿ ಅದೃಷ್ಟವಂತರು, ಆದಾಯ ಮತ್ತು ಗೌರವ ಹೆಚ್ಚಾಗುತ್ತೆ

Dec 15, 2024 08:30 AM

ನಾಳಿನ ದಿನ ಭವಿಷ್ಯ: ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯ ವಾತಾವರಣ ಇರುತ್ತೆ, ವ್ಯವಹಾರದಲ್ಲಿ ಲಾಭ ಕಾಣುತ್ತೀರಿ

Dec 14, 2024 06:12 PM

ಬಾಬಾ ವಂಗಾ ಭವಿಷ್ಯ ವಾಣಿ 2025: ಹೊಸ ವರ್ಷ ಕಟಕ ಸೇರಿದಂತೆ ಈ 3 ರಾಶಿಯವರ ಜೀವನದಲ್ಲಿ ತರಲಿದೆ ಹರ್ಷ

Dec 14, 2024 04:04 PM

ನಾಳಿನ ಪಂಚಾಂಗ

ಶ್ರೀ ಶೋಭಕೃತುನಾಮ ಸಂವತ್ಸರ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಶುಕ್ಲಪಕ್ಷ, ಗುರುವಾರ

ತಿಥಿ: ಅಷ್ಟಮಿ ರಾತ್ರಿ 12.59 ರವರೆಗೂ ಇರುತ್ತದೆ. ಅನಂತರ ನವಮಿ ಆರಂಭವಾಗುತ್ತದೆ.

ನಕ್ಷತ್ರ: ರೇವತಿ ನಕ್ಷತ್ರವು ಬೆಳಿಗ್ಗೆ 8.16 ರವರೆಗೂ ಇರುತ್ತದೆ. ಅನಂತರ ಅಶ್ವಿನಿ ನಕ್ಷತ್ರ ಆರಂಭವಾಗುತ್ತದೆ.

ಸೂರ್ಯೋದಯ: ಬೆಳಿಗ್ಗೆ 6.45

ಸೂರ್ಯಾಸ್ತ: ಸಂಜೆ 6.13

ರಾಹುಕಾಲ: ಮಧ್ಯಾಹ್ನ 1.30 ರಿಂದ ಮಧ್ಯಾಹ್ನ 3.00

ರಾಶಿ ಫಲಗಳು

ಮೇಷ

ಸುಲಭವಾಗಿ ಯಾವುದೇ ಕೆಲಸ ನಡೆಯದು. ಚಿಕ್ಕಪುಟ್ಟ ವಿಚಾರವಾದರೂ ಕಡೆಗಣ್ಣಿನಿಂದ ನೋಡದಿರಿ. ವಿದ್ಯಾರ್ಥಿಗಳು ನಿರೀಕ್ಷಿತ ಮಟ್ಟವನ್ನು ತಲುಪಲಿದ್ದಾರೆ. ಆತುರದ ನಿರ್ಧಾರಗಳು ತೊಂದರೆಯನ್ನು ನೀಡಬಹುದು. ಭವಿಷ್ಯದ ದಿನಗಳಿಗಾಗಿ ಹಣವನ್ನು ಉಳಿಸುವ ಅವಶ್ಯಕತೆ ಕಂಡು ಬರುತ್ತದೆ.

ಪರಿಹಾರ: ಸಿಹಿಯನ್ನು ತಿಂದು ನೀರು ಕುಡಿದ ನಂತರ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 8

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ನೀಲಿ ಬಣ್ಣ

ವೃಷಭ

ಕುಟುಂಬದಲ್ಲಿ ಕೆಲವೊಂದು ಅಚ್ಚರಿಯ ಸಂಗತಿಗಳು ನಡೆಯಲಿವೆ. ಉದ್ಯೋಗದಲ್ಲಿ ಮುಖ್ಯವಾದ ಕೆಲಸ ಕಾರ್ಯಗಳಲ್ಲಿ ತಟಸ್ಥ ನಿಲುವನ್ನು ತೆಗೆದುಕೊಳ್ಳುವಿರಿ. ಅತಿಯಾದ ಸ್ವಾಭಿಮಾನದ ಕಾರಣ ಹಣಕಾಸಿನ ವಿಚಾರದಲ್ಲಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮನರಂಜನೆಗೆ ಹೆಚ್ಚಿನ ಒತ್ತು ಕೊಡುವ ಕಾರಣ ಕೆಲಸ ಕಾರ್ಯಗಳು ಅಪೂರ್ಣವಾಗಬಹುದು.

ಪರಿಹಾರ: ಬಿಳಿ ಹಸುವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 12

ಅದೃಷ್ಟದ ದಿಕ್ಕು : ಉತ್ತರ

ಅದೃಷ್ಟದ ಬಣ್ಣ : ನೇರಳೆ ಬಣ್ಣ

ಮಿಥುನ

ಎಲ್ಲರ ಮನಸ್ಸನ್ನು ಗೆಲ್ಲುವಂತಹ ವಾಕ್ಚಾತುರ್ಯ ನಿಮ್ಮಲ್ಲಿರುತ್ತದೆ. ಸಹನೆಯಿಂದ ಎದುರಾಗುವ ಸಮಸ್ಯೆಗಳನ್ನು ಗೆಲ್ಲುವಿರಿ. ವಿದ್ಯಾರ್ಥಿಗಳು ತಮ್ಮ ಕರ್ತವ್ಯದಲ್ಲಿ ಅಜೇಯರಾಗಿ ಮುಂದುವರೆಯುತ್ತಾರೆ. ದೃಢವಾದ ನಿಲುವನ್ನು ತೆಗೆದುಕೊಳ್ಳಲು ಪ್ರಯತ್ನಿಸಿ. ಸಂಪೂರ್ಣ ವಿಚಾರವನ್ನು ಅರಿಯದೆ ಯಾರೊಂದಿಗೂ ವೈಮನಸ್ಸು ಹೊಂದದಿರಿ.

ಪರಿಹಾರ: ಹಿರಿಯ ಸೋದರ ಅಥವಾ ಸೋದರಿಗೆ ಸಹಾಯ ಮಾಡಿ ದಿನದ ಕೆಲಸ ಆರಂಭಿಸಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ಈಶಾನ್ಯ

ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಕಟಕ

ಬುದ್ಧಿವಂತಿಕೆಯಿಂದ ಕುಟುಂಬದ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ. ತಾಳ್ಮೆಯಿಂದ ವೃತ್ತಿಯಲ್ಲಿ ಮುಂದುವರೆಯುವುದು ಒಳ್ಳೆಯದು. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಬಂಡವಾಳವನ್ನು ಹೂಡದಿರಿ. ಅವಿವಾಹಿತರಿಗೆ ವಿವಾಹ ನಿಶ್ಚಯವಾಗಬಹುದು. ಮುಂಚೆ ಗೊತ್ತು ಪಡಿಸಿದ್ದ ಪ್ರವಾಸವನ್ನು ಮಾಡಬೇಕಾಗುತ್ತದೆ.

ಪರಿಹಾರ : ಧಾರ್ಮಿಕ ಕೇಂದ್ರಕ್ಕೆ ಬಿಳಿ ಬಣ್ಣದ ಹೂಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 9

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ಬಿಳಿಬಣ್ಣ

ಸಿಂಹ

ಕುಟುಂಬದಲ್ಲಿ ಹಬ್ಬದ ವಾತಾವರಣವಿರುತ್ತದೆ. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗಿರುತ್ತದೆ. ಕುಟುಂಬದ ಹಿರಿಯರ ಜೊತೆ ಮನಸ್ತಾಪ ಉಂಟಾಗಬಹುದು. ಆಧುನಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದ ಉದ್ದಿಮೆಯನ್ನು ಆರಂಭಿಸುವ ಸಾಧ್ಯತೆಗಳಿವೆ. ಅಪಾಯದ ಕೆಲಸಗಳನ್ನು ನಿರ್ವಹಿಸುವ ಆಶಯ ಇರುತ್ತದೆ.

ಪರಿಹಾರ: ಬಿಳಿ ಹಸುಸಿವಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 1

ಅದೃಷ್ಟದ ದಿಕ್ಕು : ದಕ್ಷಿಣ

ಅದೃಷ್ಟದ ಬಣ್ಣ: ಬೂದುಬಣ್ಣ

ಕನ್ಯಾ

ಮನಸ್ಸಿಲ್ಲದೇ ಹೋದರು ಕೆಲಸ ಕಾರ್ಯಗಳನ್ನು ಮಾಡಲೇಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಈ ಕಾರಣದಿಂದಾಗಿ ಕೆಲವರ ಕೋಪಕ್ಕೆ ಗುರಿಯಾಗುವಿರಿ. ಸಹನೆಯಿಂದ ವರ್ತಿಸಿದಷ್ಟು ಒಳ್ಳೆಯದು. ಅಧಿಕಾರ ವರ್ಗದಲ್ಲಿರುವವರು ನೌಕರರ ಸಲಹೆಯನ್ನು ಸ್ವೀಕರಿಸುವುದು ಒಳ್ಳೆಯದು.

ಪರಿಹಾರ: ಬೆಳ್ಳಿಯ ಲೋಟದಲ್ಲಿ ಹಾಲು ಅಥವಾ ನೀರನ್ನು ಕುಡಿದು ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 4

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಂದುಬಣ್ಣ

ತುಲಾ

ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಮೊದಲ ಆದ್ಯತೆ ನೀಡುವಿರಿ. ವಿಶ್ರಾಂತಿಯನ್ನು ಬಯಸುವ ನೀವು ಉದ್ಯೋಗದಲ್ಲಿ ಹೆಚ್ಚಿನ ಆಸಕ್ತಿ ತೋರುವುದಿಲ್ಲ. ಮಹಿಳಾ ಉದ್ಯಮಿಗಳಿಗೆ ಅನಿರೀಕ್ಷಿತ ಧನಲಾಭ ಸಿಗಲಿದೆ. ಆತ್ಮೀಯರಿಂದ ಸ್ಫೂರ್ತಿ ದೊರೆಯುತ್ತದೆ. ಆದರೂ ಸ್ವತಂತ್ರವಾಗಿ ಕೆಲಸ ನಿರ್ವಹಿಸುವ ಆಸೆ ಮನದಲ್ಲಿರುತ್ತದೆ.

ಪರಿಹಾರ: ಕೆಂಪು ಬೆಲ್ಲದಿಂದ ಮಾಡಿದ ದ್ರವಾಹಾರವನ್ನು ಸೇವಿಸಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 10

ಅದೃಷ್ಟದ ದಿಕ್ಕು : ಪಶ್ಚಿಮ

ಅದೃಷ್ಟದ ಬಣ್ಣ: ಕಪ್ಪು ಬಣ್ಣ

ವೃಶ್ಚಿಕ

ಕೀರ್ತಿ ಪ್ರತಿಷ್ಠೆಗಾಗಿ ಕುಟುಂಬದ ಜವಾಬ್ದಾರಿ ವಹಿಸುವಿರಿ. ಉದ್ಯೋಗದಲ್ಲಿ ಅನಾವಶ್ಯಕ ವಾದ ವಿವಾದಗಳು ಎದುರಾಗಲಿವೆ. ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದ ವರ್ತಿಸಿ. ಏಕಾಂಗಿಯಾಗಿ ಹೋರಾಡುವ ಕಾರಣ ಹಲವು ಬದಲಾವಣೆಗಳು ಉಂಟಾಗುತ್ತವೆ. ಆಹಾರ ಸೇವನೆಯಲ್ಲಿ ಇತಿ ಮಿತಿ ಇರಲಿ.

ಪರಿಹರ: ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹೊಸ ಉಡುಗೆ ತೊಡುಗೆಯನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ: 2

ಅದೃಷ್ಟದ ದಿಕ್ಕು: ಉತ್ತರ

ಅದೃಷ್ಟದ ಬಣ್ಣ: ತಿಳಿಹಸಿರು ಬಣ್ಣ

ಧನಸ್ಸು

ಹಠದ ಬುದ್ದಿಯಿಂದ ಕುಟುಂಬದಲ್ಲಿ ಇದ್ದ ನೆಮ್ಮದಿಯ ವಾತಾವರಣ ಕಲುಷಿತಗೊಳ್ಳುತ್ತದೆ. ಸಂತಾನ ಲಾಭವಿದೆ. ಅವಿವಾಹಿತರಿಗೆ ವಿವಾಹದ ಮಾತುಕತೆ ನಡೆಯಬಹುದು. ವಿದ್ಯಾರ್ಥಿಗಳು ಕಲಿಕೆಯಲ್ಲಿ ಅಗ್ರಸ್ಥಾನ ಗಳಿಸುತ್ತಾರೆ. ಕುಟುಂಬದಲ್ಲಿನ ಖರ್ಚು ವೆಚ್ಚಗಳು ಹೆಚ್ಚುತ್ತವೆ. ತಾಯಿಯವರ ಆರೋಗ್ಯದಲ್ಲಿ ಏರಿಳಿತ ಕಂಡು ಬರುತ್ತದೆ.

ಪರಿಹಾರ: ಮನೆಯಲ್ಲಿರುವ ಸಾಕು ಪ್ರಾಣಿಗಳಿಗೆ ಆಹಾರ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 5

ಅದೃಷ್ಟದ ದಿಕ್ಕು : ಈಶಾನ್ಯ

ಅದೃಷ್ಟದ ಬಣ್ಣ: ನಸುಗೆಂಪು ಬಣ್ಣ

ಮಕರ

ಕುಟುಂಬದ ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗುವ ಕಾರಣ ಕುಟುಂಬದಲ್ಲಿ ಆತಂಕವಿರುತ್ತದೆ. ವೇತನದಲ್ಲಿ ಹೆಚ್ಚಳ ಉಂಟಾಗಬಹುದು. ಆಡುವ ಮಾತುಕತೆ ನಿಯಂತ್ರಣದಲ್ಲಿ ಇರಲಿ. ಆರೋಗ್ಯದಲ್ಲಿ ಏರಿಳಿತ ಕಾಣಬಹುದು. ಪಾಲುದಾರಿಕೆಯ ವ್ಯಾಪಾರ ಆರಂಭಿಸದಿರಿ. ಹಣಕಾಸಿನ ವ್ಯವಹಾರದಿಂದ ದೂರವಿರುವುದು ಒಳ್ಳೆಯದು.

ಪರಿಹಾರ: ಚಿಕ್ಕ ವಯಸ್ಸಿನ ಹೆಣ್ಣು ಮಕ್ಕಳಿಗೆ ಹಸಿರು ಬಣ್ಣದ ಬಟ್ಟೆಗಳನ್ನು ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ : 11

ಅದೃಷ್ಟದ ದಿಕ್ಕು : ಪೂರ್ವ

ಅದೃಷ್ಟದ ಬಣ್ಣ: ನೀಲಿ ಮಿಶ್ರಿತ ಬಿಳಿ ಬಣ್ಣ

ಕುಂಭ

ಕುಟುಂಬದ ಹಿರಿಯರಿಗೆ ಜವಾಬ್ದಾರಿಯು ಹೆಚ್ಚಲಿದೆ. ಅನಾವಶ್ಯಕವಾಗಿ ವಾದ ವಿವಾದದಲ್ಲಿ ತೊಡಗುವಿರಿ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಪ್ರಯತ್ನ ಪಡಬೇಕು. ಕುಟುಂಬದ ಸದಸ್ಯರ ಜೊತೆ ಮಾಡುವ ಪಾಲುಗಾರಿಕೆಯ ವ್ಯಾಪಾರ ಉತ್ತಮ ಲಾಭ ನೀಡುತ್ತದೆ.

ಪರಿಹಾರ: ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡಿ ದಿನದ ಕೆಲಸವನ್ನು ಆರಂಭಿಸಿ.

ಅದೃಷ್ಟದ ಸಂಖ್ಯೆ: 3

ಅದೃಷ್ಟದ ದಿಕ್ಕು: ದಕ್ಷಿಣ

ಅದೃಷ್ಟದ ಬಣ್ಣ: ಹೊಗೆಯ ಬಣ್ಣ

ಮೀನ

ಕುಟುಂಬದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳು ಕಂಡು ಬರುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಆಸಕ್ತಿ ಮತ್ತು ನಂಬಿಕೆ ಕಡಿಮೆಯಾಗುತ್ತದೆ. ಮಾತಿನಲ್ಲಿ ಮೋಡಿ ಮಾಡಬಲ್ಲರಿ. ಆರೋಗ್ಯದಲ್ಲಿ ತೊಂದರೆ ಕಂಡು ಬರುತ್ತದೆ.

ಪರಿಹಾರ : ಬಡ ರೋಗಿಗಳಿಗೆ ಹಣದ ಸಹಾಯ ಮಾಡಿ ದಿನದ ಕೆಲಸವನ್ನು ಆರಂಭಿಸಿರಿ.

ಅದೃಷ್ಟದ ಸಂಖ್ಯೆ : 6

ಅದೃಷ್ಟದ ದಿಕ್ಕು : ನೈರುತ್ಯ

ಅದೃಷ್ಟದ ಬಣ್ಣ: ಕಿತ್ತಳೆ ಬಣ್ಣ

ಜ್ಯೋತಿಷಿ: ಎಚ್‌. ಸತೀಶ್‌, ಬೆಂಗಳೂರು

ಮೊಬೈಲ್:‌ 8546865832

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ‘ಹಿಂದೂಸ್ತಾನ್ ಟೈಮ್ಸ್ ಕನ್ನಡ’ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ