logo
ಕನ್ನಡ ಸುದ್ದಿ  /  ರಾಶಿ ಭವಿಷ್ಯ  /  ಸ್ತ್ರೀ ವಾರ ಭವಿಷ್ಯ: ಕನ್ಯಾ ರಾಶಿಯವರಿಗೆ ಗೆಲುವೊಂದೇ ಗುರಿಯಾಗಿರುತ್ತೆ, ಸಿಂಹ ರಾಶಿಯವರು ಆತ್ಮವಿಶ್ವಾಸದಿಂದ ಸವಾಲುಗಳನ್ನು ಎದುರಿಸುತ್ತೀರಿ

ಸ್ತ್ರೀ ವಾರ ಭವಿಷ್ಯ: ಕನ್ಯಾ ರಾಶಿಯವರಿಗೆ ಗೆಲುವೊಂದೇ ಗುರಿಯಾಗಿರುತ್ತೆ, ಸಿಂಹ ರಾಶಿಯವರು ಆತ್ಮವಿಶ್ವಾಸದಿಂದ ಸವಾಲುಗಳನ್ನು ಎದುರಿಸುತ್ತೀರಿ

Raghavendra M Y HT Kannada

Published May 15, 2025 04:21 PM IST

google News

ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯ

  • ಸ್ತ್ರೀ ವಾರ ಭವಿಷ್ಯ: ಪ್ರತಿ ರಾಶಿಗೂ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಗಳನ್ನು ನೀಡುತ್ತವೆ. ಈ ವಾರ ಯಾವ ಮಹಿಳಾ ರಾಶಿಯವರಿಗೆ ಏನು ಫಲ? 1 ವಾರ ಭವಿಷ್ಯದ ವಿವರ ಇಲ್ಲಿದೆ.
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯ
ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯ

ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಕೆಲ ಮಹಿಳೆಯರು ಕೂಡ ತಮ್ಮ ಭವಿಷ್ಯವನ್ನು ನೋಡಿಕೊಳ್ಳುತ್ತಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮೇ 16ರ ಶುಕ್ರವಾರದಿಂದ 22ರ ಗುರುವಾರದವರೆಗೆ ಸಿಂಹ, ಕನ್ಯಾ, ತುಲಾ ಹಾಗೂ ವೃಶ್ಚಿಕ ರಾಶಿಯವರ ಸ್ತ್ರೀ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ತಾಜಾ ಫೋಟೊಗಳು

ನಾಳಿನ ದಿನ ಭವಿಷ್ಯ: ಮಿಥುನ ರಾಶಿಯವರಿಗೆ ಹಠಾತ್ ಆರ್ಥಿಕ ಲಾಭಗಳಿವೆ, ಧನು ರಾಶಿಯವರ ಒತ್ತಡ ಹೆಚ್ಚಾಗುತ್ತದೆ

May 29, 2025 04:21 PM

ನಾಳಿನ ದಿನ ಭವಿಷ್ಯ: ಕಟಕ ರಾಶಿಯವರ ಪ್ರಯತ್ನಗಳು ಯಶಸ್ವಿಯಾಗುತ್ತವೆ, ಧನು ರಾಶಿಯವರಿಗೆ ತೊಂದರೆಗಳು ದೂರಾಗಲಿವೆ

May 28, 2025 04:33 PM

ಹಿರಿಯರ ಜೊತೆ ವಾಗ್ವಾದ ತಪ್ಪಿಸಿ, ಅದೃಷ್ಟದ ದಿನ, ಆರೋಗ್ಯದ ಮೇಲೆ ಗಮನವಿರಲಿ; ನಾಳಿನ ದಿನಭವಿಷ್ಯ

May 27, 2025 04:09 PM

18 ವರ್ಷಗಳ ನಂತರ ಸೂರ್ಯ–ಕೇತುವಿನ ಸಂಯೋಗ, ಈ ರಾಶಿಯವರಿಗೆ ಆರ್ಥಿಕ ಲಾಭ, ಬಾಕಿ ಇರುವ ಎಲ್ಲಾ ಕೆಲಸಗಳು ಪೂರ್ಣಗೊಳ್ಳಲಿವೆ

May 27, 2025 12:56 PM

ಸಹೋದ್ಯೋಗಿಗಳೊಂದಿಗೆ ಭಿನ್ನಾಭಿಪ್ರಾಯ ಉಂಟಾಗಬಹುದು, ಅಡುಗೆಮನೆಯಲ್ಲಿ ಕೆಲಸ ಮಾಡುವಾಗ ಎಚ್ಚರ ವಹಿಸಿ; ನಾಳಿನ ದಿನಭವಿಷ್ಯ

May 26, 2025 03:50 PM

ನಾಳಿನ ದಿನ ಭವಿಷ್ಯ: ಮೀನ ರಾಶಿಯವರಿಗೆ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತೆ, ವೃಶ್ಚಿಕ ರಾಶಿಯವರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು

May 25, 2025 02:00 PM

ಸಿಂಹ ರಾಶಿ

ಎಲ್ಲರನ್ನು ಸಮಾನ ಭಾವನೆಯಿಂದ ಕಾಣುವಿರಿ. ಆತ್ಮವಿಶ್ವಾಸದಿಂದ ಎದುರಾಗುವ ಸವಾಲುಗಳನ್ನು ಗೆಲ್ಲುತ್ತೀರಿ. ಬೇರೆಯವರ ಮನಸ್ಸನ್ನು ಅರಿತು ಪ್ರೀತಿಯಿಂದ ವರ್ತಿಸುವಿರಿ. ಹಣಕಾಸಿನ ವಿಚಾರದಲ್ಲಿ ಉದಾರಿಗಳಾಗುವಿರಿ. ಇದರಿಂದ ಉತ್ತಮ ಆದಾಯವಿದ್ದರೂ ಹಣದ ಕೊರತೆ ಉಂಟಾಗುತ್ತದೆ. ಆತ್ಮೀಯರಿಗೆ ಸಹಾಯ ಮಾಡುವಿರಿ. ನಿಮ್ಮ ತೀರ್ಮಾನಗಳನ್ನು ಗೌರವಿಸದೆ ಹೋದಲ್ಲಿ ಕೋಪದಿಂದ ವರ್ತಿಸುವಿರಿ. ಪತಿಯೊಂದಿಗೆ ಆತ್ಮೀಯತೆಯಿಂದ ನಡೆದುಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ವಿಶೇಷ ಶುಭಫಲಗಳು ದೊರೆಯುತ್ತವೆ. ಮಕ್ಕಳ ಜೀವನದಲ್ಲಿ ಶುಭ ಘಟನೆಗಳು ನಡೆಯಲಿವೆ. ಉದ್ಯೋಗದಲ್ಲಿ ಉನ್ನತ ಹುದ್ದೆ ಲಭಿಸುತ್ತದೆ. ಹಠದ ಗುಣದಿಂದಾಗಿ ಕೆಲವೊಂದು ಅವಕಾಶಗಳು ಕೈತಪ್ಪಲಿವೆ. ಗುರು ಹಿರಿಯನ್ನು ಭೇಟಿ ಮಾಡುವಿರಿ. ಮನೆತನದ ಆಸ್ತಿಯ ತಗಾದೆಯಲ್ಲಿ ಗೆಲುವು ಸಾಧಿಸುವಿರಿ.

ಪರಿಹಾರ: ಧಾರ್ಮಿಕ ಕೇಂದ್ರಗಳಿಗೆ ಹಾಲು ಮೊಸರು ನೀಡಿ ದಿನದ ಕೆಲಸ ಆರಂಭಿಸಿ
ಅದೃಷ್ಟದ ಸಂಖ್ಯೆ: 1
ಅದೃಷ್ಟದ ದಿಕ್ಕು: ದಕ್ಷಿಣ
ಅದೃಷ್ಟದ ಬಣ್ಣ: ಹಸಿರು ಬಣ್ಣ

ಕನ್ಯಾ ರಾಶಿ

ಜೀವನದಲ್ಲಿ ಗೆಲುವೊಂದೇ ಗುರಿಯಾಗಿರುತ್ತದೆ. ಆದ್ದರಿಂದ ಸನ್ನಿವೇಶವನ್ನು ಆಧರಿಸಿ ತೆಗೆದುಕೊಳ್ಳುವ ತೀರ್ಮಾನಗಳನ್ನು ಬದಲಿಸುತ್ತೀರಿ. ಶಾಸ್ತ್ರ ಸಂಪ್ರದಾಯದಲ್ಲಿ ಆಸಕ್ತಿ ಇರುತ್ತದೆ. ಮಕ್ಕಳನ್ನು ಶಿಸ್ತಿನಿಂದ ಬೆಳೆಸುವಿರಿ. ಒಮ್ಮೆ ತೆಗೆದುಕೊಂಡ ನಿರ್ಧಾರಗಳನ್ನು ಬದಲಿಸುವಿರಿ. ಬೇರೆಯವರ ತಪ್ಪನ್ನು ಮನ್ನಿಸದೆ ಟೀಕಿಸುವಿರಿ. ಆದರೆ ಯಾರನ್ನು ಶಿಕ್ಷಿಸುವುದಿಲ್ಲ. ನಿಮ್ಮಲ್ಲಿರುವ ಪ್ರತಿಭೆಯನ್ನು ಎಲ್ಲರೂ ಮೆಚ್ಚುತ್ತಾರೆ. ನೀವಿಲ್ಲದೆ ಬಂಧು ಬಳಗದಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಎಲ್ಲರೂ ಮೆಚ್ಚುವಂತಹ ತೀರ್ಮಾನವನ್ನು ತೆಗೆದುಕೊಳ್ಳುವಿರಿ. ಆತ್ಮೀಯರಿಗೆ ಅವರ ಕೆಲಸ ಕಾರ್ಯದಲ್ಲಿ ಸಹಾಯ ಸಹಕಾರ ನೀಡುವಿರಿ. ಸಮಾಜ ಸೇವೆಯಲ್ಲಿ ಆಸಕ್ತಿ ಇರುತ್ತದೆ. ಉದ್ಯೋಗದಲ್ಲಿ ಯಾವುದೇ ವಿಶೇಷ ಕಂಡುಬರುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಪತಿಯೊಂದಿಗೆ ಪರಸ್ಪರ ಒಮ್ಮತದ ನಿರ್ಧಾರಕ್ಕೆ ಬರುವಿರಿ.

ಪರಿಹಾರ: ಗೋಶಾಲೆಗೆ ಧನಸಹಾಯ ಮಾಡಿದ ನಂತರ ದಿನದ ಕೆಲಸಗಳನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 5
ಅದೃಷ್ಟದ ದಿಕ್ಕು: ಪಶ್ಚಿಮ
ಅದೃಷ್ಟದ ಬಣ್ಣ: ನೀಲಿ ಬಣ್ಣ

ತುಲಾ ರಾಶಿ

ಸದಾ ಕಾಲ ಚಟುವಟಿಕೆಯಿಂದ ಇರುವಿರಿ. ನಿಮ್ಮಲ್ಲಿನ ಚುರುಕುತನದಿಂದ ವೇಗವಾಗಿ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಸರಿ ತಪ್ಪನ್ನು ಅರಿತು ನಿಮ್ಮ ಮನಸ್ಸನ್ನು ಮತ್ತು ಕಾರ್ಯವೈಖರಿಯನ್ನು ಬದಲಿಸುವಿರಿ. ದಾಂಪತ್ಯ ಜೀವನದಲ್ಲಿ ಶಾಂತಿ ನೆಮ್ಮದಿ ನೆಲೆಸಿರುತ್ತದೆ. ಕಲಾ ಮಾಧ್ಯಮದಲ್ಲಿ ಇರುವವರಿಗೆ ವಿಶೇಷ ಬೇಡಿಕೆ ಲಭ್ಯವಾಗುತ್ತದೆ. ಕಷ್ಟದ ಸಂದರ್ಭದಲ್ಲೂ ಅಚ್ಚುಕಟ್ಟಿನ ಜೀವನವನ್ನು ನಡೆಸುವಿರಿ. ಅತಿಯಾದ ಆಹಾರ ಸೇವನೆಯಿಂದ ಅನಾರೋಗ್ಯವಿರುತ್ತದೆ. ಸಂದಿಗ್ಧ ಸನ್ನಿವೇಶದಲ್ಲಿಯೂ ಧೈರ್ಯದಿಂದ ವರ್ತಿಸುವಿರಿ. ಅವಿವಾಹಿತರಿಗೆ ವಿವಾಹ ಯೋಗವಿದೆ. ಏಕಾಂತವಾಗಿರಲು ಬಯಸುವುದಿಲ್ಲ. ಸದಾಕಾಲ ಸ್ನೇಹಿತರ ಅಥವಾ ಬಂಧುಗಳ ಒಡನಾಟವಿರುತ್ತದೆ. ಸ್ವತಂತ್ರ ಜೀವನವನ್ನು ಇಷ್ಟಪಡುವಿರಿ. ದೀರ್ಘ ಕಾಲದ ಪ್ರವಾಸಕ್ಕೆ ತೆರಳುವಿರಿ. ಸತ್ಯ ನುಡಿಯುವಲ್ಲಿ ಸಂತಸವನ್ನು ಕಾಣುವಿರಿ.

ಪರಿಹಾರ: ಎಡಗೈಯಲ್ಲಿ ಬೆಳ್ಳಿ ಉಂಗುರವನ್ನು ಧರಿಸಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 9
ಅದೃಷ್ಟದ ದಿಕ್ಕು: ಉತ್ತರ
ಅದೃಷ್ಟದ ಬಣ್ಣ: ನೇರಳೆ ಬಣ್ಣ

ವೃಶ್ಚಿಕ ರಾಶಿ

ನಿಮ್ಮ ಮನಸ್ಸಿನ ಭಾವನೆಯನ್ನು ಬೇರೆಯವರಿಗೆ ತಿಳಿಸುವುದಿಲ್ಲ. ತೀರ್ಮಾನಗಳನ್ನು ಎಲ್ಲರೂ ಒಪ್ಪಲೇಬೇಕಾಗುತ್ತದೆ. ಕುಟುಂಬದಲ್ಲಿ ಅಧಿಕಾರ ಚಲಾಯಿಸುವಿರಿ. ಇದರಿಂದಾಗಿ ಯಾವುದೇ ವಿಚಾರದಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗುವುದಿಲ್ಲ. ಉದ್ಯೋಗದಲ್ಲಿ ಅಧಿಕಾರಿಗಳಿಗೆ ಸಮನಾದ ಸ್ಥಾನ ಮಾನ ಲಭಿಸುತ್ತದೆ. ಉತ್ತಮ ಆತ್ಮವಿಶ್ವಾಸ ಇರುತ್ತದೆ. ಜೀವನದಲ್ಲಿ ಸೋಲಲು ಇಷ್ಟಪಡುವುದಿಲ್ಲ. ಆದ್ದರಿಂದ ಸರಳವಾದ ಕೆಲಸ ಕಾರ್ಯಗಳನ್ನು ಮಾತ್ರ ಆಯ್ಕೆ ಮಾಡುವಿರಿ. ತಂದೆಯ ಬಗ್ಗೆ ವಿಶೇಷ ಪ್ರೀತಿ ಮತ್ತು ಕಾಳಜಿ ಇರುತ್ತದೆ. ಸ್ವಂತ ಉದ್ಧಿಮೆ ಸ್ಥಾಪಿಸುವ ಹಂಬಲ ಇರುತ್ತದೆ. ಸಣ್ಣ ಪುಟ್ಟ ವಿಚಾರಗಳಿಗೆ ಸಹ ಕೋಪಗೊಳ್ಳುವಿರಿ. ಮಕ್ಕಳ ವಿಚಾರದಲ್ಲಿ ಮೃದುದೋರಣೆ ತಾಳುವಿರಿ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಮಟ್ಟ ತಲುಪುವರು. ಸಮಾಜದಲ್ಲಿ ಗೌರವ ಪ್ರತಿಷ್ಠೆಯನ್ನು ಉಳಿಸಿಕಿಳ್ಳುವಿರಿ.

ಪರಿಹಾರ: ಕೆಂಪು ಹೂವಿನ ಗಿಡಕ್ಕೆ ನೀರನ್ನು ಹಾಕಿ ದಿನದ ಕೆಲಸವನ್ನು ಆರಂಭಿಸಿ
ಅದೃಷ್ಟದ ಸಂಖ್ಯೆ: 2
ಅದೃಷ್ಟದ ದಿಕ್ಕು: ಪೂರ್ವ
ಅದೃಷ್ಟದ ಬಣ್ಣ: ಗುಲಾಬಿ ಬಣ್ಣ

ಬರಹ: ಹೆಚ್‌. ಸತೀಶ್‌, ಜ್ಯೋತಿಷಿ, ಬೆಂಗಳೂರು

(ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ನಿರ್ದಿಷ್ಟ ರೀತಿಯಲ್ಲಿ ಕ್ರಮಬದ್ಧವಾಗಿ ಈ ಸ್ತ್ರೀ ವಾರ ರಾಶಿ ಭವಿಷ್ಯ ನೀಡಲಾಗಿದೆ. ಆದರೆ ಒಟ್ಟಾರೆಯಾಗಿ ಜ್ಯೋತಿಷ್ಯ ಎನ್ನುವುದು ನಂಬಿಕೆಯ ಮಾತು. ಓದುಗರ ನಂಬಿಕೆಯನ್ನು ಹಿಂದೂಸ್ತಾನ್ ಟೈಮ್ಸ್ ಕನ್ನಡ ಗೌರವಿಸುತ್ತದೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ).

ದೇವಾಲಯಗಳು, ಅಧ್ಯಾತ್ಮ, ದಿನ ಭವಿಷ್ಯ, ಗ್ರಹಗಳ ಸಂಚಾರ, ವಾಸ್ತು ಶಾಸ್ತ್ರ, ಪೂಜಾ ವಿಧಾನ, ವ್ರತ ವಿಧಾನ, ಹಬ್ಬ, ಸಂಸ್ಕೃತಿ, ಭಗವದ್ಗೀತೆ ಸೇರಿದಂತೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ಸಮಗ್ರ ಮಾಹಿತಿಗಾಗಿ 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ರಾಶಿ ಭವಿಷ್ಯ ವಿಭಾಗ ನೋಡಿ.

    ಹಂಚಿಕೊಳ್ಳಲು ಲೇಖನಗಳು