logo
ಕನ್ನಡ ಸುದ್ದಿ  /  ಕ್ರಿಕೆಟ್  /  Yashasvi Jaiswal: ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್; ನೇಪಾಳ ವಿರುದ್ಧ ಭರ್ಜರಿ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

Yashasvi Jaiswal: ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್; ನೇಪಾಳ ವಿರುದ್ಧ ಭರ್ಜರಿ ಶತಕ ಸಿಡಿಸಿದ ಯಶಸ್ವಿ ಜೈಸ್ವಾಲ್

Raghavendra M Y HT Kannada

Oct 03, 2023 08:05 AM IST

ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳ ವಿರುದ್ಧ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಡಿಸಿದಿದ್ದಾರೆ.

  • ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳ ವಿರುದ್ಧ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳ ವಿರುದ್ಧ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಡಿಸಿದಿದ್ದಾರೆ.
ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ ಫೈನಲ್‌ನಲ್ಲಿ ನೇಪಾಳ ವಿರುದ್ಧ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಡಿಸಿದಿದ್ದಾರೆ.

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರಿಕೆಟ್ ಕ್ವಾರ್ಟರ್ (Asian Games Cricket) ಫೈನಲ್‌ನಲ್ಲಿ ಟೀಂ ಇಂಡಿಯಾದ (Team India) ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ನೇಪಾಳ ವಿರುದ್ಧ ಏಕಾಂಗಿ ಹೋರಾಟ ಮಾಡಿದ್ದು, ಭರ್ಜರಿ ಶತಕ ಸಡಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Video: ನಿದ್ದೆಗೆಟ್ಟು ಸಂಭ್ರಮಾಚರಣೆಯಲ್ಲಿ ಮುಳುಗಿದ ಆರ್‌ಸಿಬಿ ಫ್ಯಾನ್ಸ್; ಇದು ಗ್ರೇಟೆಸ್ಟ್‌ ಕಂಬ್ಯಾಕ್ ಎಂದು ಹರ್ಷೋದ್ಘಾರ

IPL 2024: ಅತಿ ಹೆಚ್ಚು ಸಿಕ್ಸ್ ಸೇರಿ ಆರ್‌ಸಿಬಿ-ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನಿರ್ಮಿಸಿದ ದಾಖಲೆಗಳಿವು

ಸತತ 6 ಸೋಲಿನಿಂದ ಸತತ 6 ಗೆಲುವಿನ ತನಕ; ಅಸಾಧ್ಯವನ್ನೂ ಸಾಧಿಸಿದ ಆರ್‌ಸಿಬಿ ಪ್ಲೇಆಫ್ ಹಾದಿಯೇ ರೋಚಕ

ಹೊಸ ಅಧ್ಯಾಯ ಆರಂಭ, ರೋಚಕ ಹಣಾಹಣಿಯಲ್ಲಿ ಗೆದ್ದು ಪ್ಲೇಆಫ್​ ಪ್ರವೇಶಿಸಿದ ಆರ್​ಸಿಬಿ; ಸೋತು ಹೊರಬಿದ್ದ ಸಿಎಸ್​ಕೆ

ಏಷ್ಯನ್ ಗೇಮ್ಸ್ ಕ್ರಿಕೆಟ್‌ನಲ್ಲಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಜೈಸ್ವಾಲ್ ಕೇವಲ 48 ಎಸೆತಗಳಿಂದ 8 ಬೌಂಡರಿ ಹಾಗೂ 7 ಅಮೋಘ ಸಿಕ್ಸರ್‌ಗಳ ನೆರವಿನಿಂದ 100 ರನ್ ಗಳಿಸಿದ್ದಾರೆ. ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನೂ ಬರೆದಿದ್ದಾರೆ.

ಜೈಸ್ವಾಲ್ ಅವರ ಸ್ಫೋಟಕ ಶತಕದ ನೆರವಿನಿಂದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಅಂತಿಮವಾಗಿ ಜೈಸ್ವಾನ್ 49 ಎಸೆತಗಳಿಂದ 8 ಬೌಂಡರಿ ಹಾಗೂ 7 ಸಿಕ್ಸರ್‌ಗಳ ಸೇರಿದಂತೆ 100 ರನ್ ಗಳಿಸಿ ದೀಪೇಂದ್ರ ಸಿಂಗ್ ಬೌಲಿಂಗ್‌ನಲ್ಲಿ ಔಟಾದರು.

ತಂಡದ ಮೊತ್ತವನ್ನ 200ರ ಗಡಿ ದಾಟಿಸಿದ ರಿಂಕು ಸಿಂಗ್, ಶಿವಂ ದುಬೆ

ನಾಯಕ ರುತುರಾಜ್ ಗಾಯಕ್ವಾಡ್ (25), ತಿಲಕ್ ವರ್ಮಾ (2), ಜಿತೇಶ್ ಶರ್ಮಾ (5) ನಿರಾಸೆ ಮೂಡಿಸಿದರೂ ಕೊನೆಯಲ್ಲಿ ಶಿವಂ ದುಬೆ (25) ಹಾಗೂ ರಿಂಕು ಸಿಂಗ್ 15 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಅಮೋಘ ಸಿಕ್ಸರ್‌ಗಳ ನೆರೆವಿನಿಂದ 37 ರನ್ ಗಳಿಸಿ ತಂಡದ ಮೊತ್ತವನ್ನು 200ಕ್ಕೆ ಹೆಚ್ಚಿಸಿದರು.

ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಎರಡು ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯಗಳನ್ನು ಆಡಿದ್ದು, 54.18 ಸ್ಟ್ರೈಕ್ ರೇಟ್‌ನಲ್ಲಿ

1 ಶತಕ, 1 ಅರ್ಧ ಶತಕ ಸೇರಿ 266 ರನ್ ಗಳಿಸಿದ್ದಾರೆ. 6 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಜೈಸ್ವಾಲ್ 165.71 ಸ್ಟ್ರೈಕ್ ರೇಟ್‌ನಲ್ಲಿ 1 ಶತಕ, 1 ಅರ್ಧ ಶತಕ ಸೇರಿ 232 ರನ್ ಗಳಿಸಿದ್ದಾರೆ.

ಐಪಿಎಲ್‌ನಲ್ಲಿ ಆರ್‌ಆರ್‌ ಪರ ಆರಂಭಿಕ ಬ್ಯಾಟರ್

ರಾಜಸ್ಥಾನ್ ರಾಯಲ್ಸ್ ಪರವಾಗಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲೂ ಆಡುತ್ತಿರುವ ಯಶಸ್ವಿ ಜೈಸ್ವಾಲ್ ಒಟ್ಟಾರೆಯಾಗಿ 37 ಐಪಿಎಲ್ ಪಂದ್ಯಗಳಿಂದ 148.73 ಸ್ಟ್ರೈಕ್ ರೇಟ್‌ನಲ್ಲಿ 1 ಶತಕ, 8 ಅರ್ಧ ಶತಕಗಳೊಂದಿಗೆ 1,172 ರನ್ ಬಾರಿಸಿದ್ದಾರೆ. ಜೈಸ್ವಾಲ್‌ಗೆ ಇನ್ನೂ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಆಡಲು ಅವಕಾಶ ಸಿಕ್ಕಿಲ್ಲ. ಇನ್ನಷ್ಟೇ ಪದಾರ್ಪಣೆ ಮಾಡಬೇಕಿದೆ.

For latest Cricket News, Live Score, IPL stay connected with HT Kannada

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ