Sarfaraz Khan: ಕೆಎಲ್ ರಾಹುಲ್ ಅಲಭ್ಯ; ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್‌ಗೆ ಸರ್ಫರಾಜ್ ಖಾನ್ ಪದಾರ್ಪಣೆ
Feb 13, 2024 10:31 AM IST
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್‌ಗೆ ಸರ್ಫರಾಜ್ ಖಾನ್ ಪದಾರ್ಪಣೆ
- Sarfaraz Khan: ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಸರ್ಫರಾಜ್ ಖಾನ್ ಪದಾರ್ಪಣೆ ಮಾಡಲಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿರುವ ಸರ್ಫರಾಜ್ ಅವರಿಗೆ, ಟೀಮ್ ಇಂಡಿಯಾ ಬಾಗಿಲು ತೆರೆದಿದೆ. ಅತ್ತ ಕೆಎಲ್ ರಾಹುಲ್ ರಾಜ್‌ಕೋಟ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.
ರಾಜ್‌ಕೋಟ್‌ನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ (India vs England 3rd Test) ಪಂದ್ಯಕ್ಕೆ ಕೆಎಲ್ ರಾಹುಲ್ (KL Rahul) ಅಲಭ್ಯರಾಗಿದ್ದಾರೆ. ಈಗಾಗಲೇ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಬಲ ಕಳೆದುಕೊಂಡಿರಯವ ರೋಹಿತ್ ಶರ್ಮಾ ಪಡೆಯು, ಮುಂದಿನ ಪಂದ್ಯಕ್ಕೂ ಮುನ್ನ ಮತ್ತಷ್ಟು ಅನುಭಿಗಳ ಸೇವೆಯನ್ನು ಕಳೆದುಕೊಳ್ಳುತ್ತಿದೆ. ಅತ್ತ ಆಲ್‌ರೌಡರ್ ರವೀಂದ್ರ ಜಡೇಜಾ ತಂಡಕ್ಕೆ ಮರಳಿದ್ದರೂ, ಆಡುವ ಬಳಗದ ಆಯ್ಕೆಗೆ ಲಭ್ಯರಿರುವುದು ಇನ್ನಷ್ಟೇ ಖಚಿತವಾಗಬೇಕಿದೆ.
ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ರಾಹುಲ್ ಹಾಗೂ ಜಡೇಜಾ ಗೈರು ಹಾಜರಾಗಿದ್ದರು. ಇದೀಗ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಜನವರಿ 15ರ ಗುರುವಾರ ಆರಂಭವಾಗಲಿರುವ 3ನೇ ಟೆಸ್ಟ್ ಪಂದ್ಯದಲ್ಲಿಯೂ ಭಾರತ ಆಡುವ ಬಳಗದಲ್ಲಿ ಮತ್ತಷ್ಟು ಬದಲಾವಣೆಗಳಾಗಲಿವೆ.
ಇದನ್ನೂ ಓದಿ | ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್‌ನಿಂದ ಕೆಎಲ್ ರಾಹುಲ್ ಔಟ್; ರಾಜ್‌ಕೋಟ್ ಪಂದ್ಯಕ್ಕೆ ಮತ್ತೋರ್ವ ಕನ್ನಡಿಗ ಆಯ್ಕೆ
3ನೇ ಟೆಸ್ಟ್ ಪಂದ್ಯಕ್ಕೂ ಮುಂಚಿತವಾಗಿ ಮಾಧ್ಯಮ ಸಲಹೆ ಹಂಚಿಕೊಂಡಿರುವ ಬಿಸಿಸಿಐ, ರಾಹುಲ್ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ವಿಫಲರಾಗಿದ್ದಾರೆ ಎಂದು ಬಹಿರಂಗಪಡಿಸಿದೆ. ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಶೇಕಡಾ 90ರಷ್ಟು ಫಿಟ್‌ನೆಸ್ ಸಾಧಿದ್ದಾರೆ. ಅಲ್ಲದೆ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ಪ್ರಗತಿ ಸಾಧಿಸುತ್ತಿದ್ದಾರೆ ಎಂದು ಹೇಳಿದೆ.
ರಾಹುಲ್ ಸಂಪೂರ್ಣ ಫಿಟ್ ಆಗಲು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಕರ್ನಾಟಕದ ಬ್ಯಾಟರ್ ದೇವದತ್ ಪಡಿಕ್ಕಲ್ ಅವರನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ಐಪಿಎಲ್ 2023ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಪಡಿಕ್ಕಲ್, ಮುಂದಿನ ಆವೃತ್ತಿಯಲ್ಲಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೇರಿಕೊಂಡಿದ್ದಾರೆ. ಪಡಿಕ್ಕಲ್ ಆರ್‌ಸಿಬಿ ತಂಡದ ಮೂಲಕ ಐಪಿಎಲ್ ಪದಾರ್ಪಣೆ ಮಾಡಿದ್ದರು.
ಸರ್ಫರಾಜ್ ಖಾನ್ ಪದಾರ್ಪಣೆ
ಅತ್ತ ಇಂಗ್ಲೆಂಡ್ ವಿರುದ್ಧದ 4 ಮತ್ತು 5ನೇ ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ಗೆ ರಾಹುಲ್ ವಾಪಸಾಗುವ ನಿರೀಕ್ಷೆಯಿದೆ. ಹೀಗಾಹಿ 3ನೇ ಟೆಸ್ಟ್ ಪಂದ್ಯಕ್ಕೆ ರಾಹುಲ್ ಬದಲಿಗೆ ದೇವದತ್ ಪಡಿಕ್ಕಲ್ ಅವರನ್ನು ಆಯ್ಕೆ ಸಮಿತಿ ಆಯ್ಕೆ ಮಾಡಲಾಗಿದೆ. ಅತ್ತ ದ 3ನೇ ಟೆಸ್ಟ್ ಪಂದ್ಯದಲ್ಲಿ ಮುಂಬೈ ಬ್ಯಾಟರ್ ಸರ್ಫರಾಜ್ ಖಾನ್ ಭಾರತ ಪರ ಪದಾರ್ಪಣೆ ಮಾಡಲಿದ್ದಾರೆ.
ಇದನ್ನೂ ಓದಿ | ಕೆಎಸ್ ಭರತ್ ಬದಲಿಗೆ ಯುವ ಆಟಗಾರನಿಗೆ ಅವಕಾಶ; ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್‌ಗೆ ಧ್ರುವ್ ಜುರೆಲ್ ಪದಾರ್ಪಣೆ ಸಾಧ್ಯತೆ
“ಸರ್ಫರಾಜ್ ಖಾನ್ ಪದಾರ್ಪಣೆ ಮಾಡಲಿದ್ದಾರೆ. ಕೆಎಲ್ ರಾಹುಲ್ ಟೆಸ್ಟ್‌ನಿಂದ ಹೊರಗುಳಿದಿರುವುದರಿಂದ, ಸರ್ಫರಾಜ್ ತಮ್ಮ ಮೊದಲ ಪಂದ್ಯ ಆಡಲಿದ್ದಾರೆ,” ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ದೇಶೀಯ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿರುವ ಸರ್ಫರಾಜ್ ಅವರಿಗೆ, ಟೀಮ್ ಇಂಡಿಯಾ ಬಾಗಿಲು ತೆರೆದಿದೆ. ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್‌ಗೆ ಆಯ್ಕೆಯಾದ ಅವರು, ದೇಶೀಯ ಕ್ರಿಕೆಟ್‌ನಲ್ಲಿ ಆಡಿದ 45 ಪ್ರಥಮ ದರ್ಜೆ ಪಂದ್ಯಗಳಲ್ಲಿ 69.85ರ ಸರಾಸರಿಯಲ್ಲಿ 3,912 ರನ್ ಗಳಿಸಿದ್ದಾರೆ. ಇದರಲ್ಲಿ 14 ಶತಕಗಳು ಮತ್ತು 11 ಅರ್ಧಶತಕಗಳು ಸೇರಿವೆ. ರೆಡ್-ಬಾಲ್ ಸ್ವರೂಪದಲ್ಲಿ ಸರ್ಫರಾಜ್ 70.48ರ ಸ್ಟ್ರೈಕ್ ರೇಟ್ ಹೊಂದಿದ್ದಾರೆ.
ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್‌ಗೆ ಭಾರತ ಸಂಭಾವ್ಯ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ಸರ್ಫರಾಜ್ ಖಾನ್, ರಜತ್ ಪಾಟೀದಾರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ | ಸಹರಾನ್, ಮುಶೀರ್, ಲಿಂಬಾನಿ...; ಅಂಡರ್ 19 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾಗೆ ಸಿಕ್ಕ 5 ಸ್ಟಾರ್ ಆಟಗಾರರು
(This copy first appeared in Hindustan Times Kannada website. To read more like this please logon to kannada.hindustantimes.com)