logo
ಕನ್ನಡ ಸುದ್ದಿ  /  ಕ್ರಿಕೆಟ್  /  ಭಾರತದ ಎದುರಿನ ಮೊದಲ ಪಂದ್ಯಕ್ಕೂ ಮುನ್ನ ಆಸೀಸ್​ಗೆ ಭಾರಿ ಹಿನ್ನಡೆ; ಇಬ್ಬರು ಸ್ಟಾರ್ ಆಟಗಾರರೇ ಔಟ್

ಭಾರತದ ಎದುರಿನ ಮೊದಲ ಪಂದ್ಯಕ್ಕೂ ಮುನ್ನ ಆಸೀಸ್​ಗೆ ಭಾರಿ ಹಿನ್ನಡೆ; ಇಬ್ಬರು ಸ್ಟಾರ್ ಆಟಗಾರರೇ ಔಟ್

Prasanna Kumar P N HT Kannada

Sep 21, 2023 10:21 PM IST

google News

ಆಸ್ಟ್ರೇಲಿಯಾ ಕ್ರಿಕೆಟ್ ತಂಡ.

    • Mitchell Starc & Glenn Maxwell: ಟೀಮ್ ಇಂಡಿಯಾ ಎದುರಿನ ಮೊದಲ ಏಕದಿನ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಗ್ಲೇನ್​ ಮ್ಯಾಕ್ಸ್​ವೆಲ್ ಮತ್ತು ಮಿಚೆಲ್ ಸ್ಟಾರ್ಕ್​ ಅಲಭ್ಯರಾಗಲಿದ್ದಾರೆ.
ಆಸ್ಟ್ರೇಲಿಯಾ ಕ್ರಿಕೆಟ್ ತಂಡ.
ಆಸ್ಟ್ರೇಲಿಯಾ ಕ್ರಿಕೆಟ್ ತಂಡ.

ಸೆಪ್ಟೆಂಬರ್​ 22ರ ಶುಕ್ರವಾರದಿಂದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ (India vs Australia) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಪಂದ್ಯಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತವಾಗಿದೆ. ಮೊಹಾಲಿಯಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೆ ಪ್ರಮುಖ ಆಟಗಾರರು ಇಬ್ಬರು ಅಲಭ್ಯರಾಗಲಿದ್ದಾರೆ.

ಏಕದಿನ ವಿಶ್ವಕಪ್​ ಟೂರ್ನಿಗೂ (ODI World Cup 2023) ಮುನ್ನ ಈ ಸರಣಿ ಉಭಯ ತಂಡಗಳಿಗೆ ಪೂರ್ವಸಿದ್ಧತೆಯ ಭಾಗವಾಗಿದೆ. ಆದರೆ ಅದಕ್ಕೂ ಮುನ್ನವೇ ಗಾಯದ ಕಾರಣ, ಆಸಿಸ್ ತಂಡದ ವೇಗಿ ಮಿಚೆಲ್ ಸ್ಟಾರ್ಕ್ (Mitchell Starc) ಮತ್ತು ಆಲ್​ರೌಂಡರ್​ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ನಾಯಕ ಪ್ಯಾಟ್ ಕಮಿನ್ಸ್ (Pat Cummins)​ ಸ್ಪಷ್ಟನೆ ನೀಡಿದ್ದಾರೆ.

ವೇಗಿ ಮಿಚೆಲ್ ಸ್ಟಾರ್ಕ್ ಆಶಸ್​ ಸರಣಿ ವೇಳೆ ಭುಜದ ಗಾಯದ ಸಮಸ್ಯೆಗೆ ಒಳಗೊಂಡಿದ್ದು, ಆ ಬಳಿಕ ಯಾವುದೇ ಕಣಕ್ಕಿಳಿದಿಲ್ಲ. ಈಗ ಸಂಪೂರ್ಣ ಚೇತರಿಸಿಕೊಂಡಿದ್ದು, ಭಾರತದ ವಿರುದ್ಧ ಸರಣಿಗೆ ಬಂದಿದ್ದಾರೆ. ಆದರೆ ತೊಡೆ ಸಂದು ನೋವಿನ ಸಮಸ್ಯೆ ಹೊಂದಿರುವ ಕಾರಣ ಮುನ್ನಚ್ಚರಿಕೆ ಕಾರಣ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಗ್ಲೆನ್ ಮ್ಯಾಕ್ಸ್​ವೆಲ್ ಸಹ ಇತ್ತೀಚೆಗೆ ಗಾಯದಿಂದ ಫಿಟ್​​ ಆಗಿದ್ದಾರೆ. ಸಂಪೂರ್ಣ ಚೇತರಿಸಿಕೊಂಡಿದ್ದರೂ ಮೊದಲ ಪಂದ್ಯಕ್ಕೆ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದಾರೆ. ದಕ್ಷಿಣ ಆಫ್ರಿಕಾ ಎದುರಿನ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ಸ್ಟೀವ್ ಸ್ಮಿತ್ ಹಾಗೂ ಪ್ಯಾಟ್ ಕಮಿನ್ಸ್ ತಂಡಕ್ಕೆ ಮರಳಿದ್ದು, ಭಾರತ ವಿರುದ್ಧದ 3 ಪಂದ್ಯಗಳಲ್ಲೂ ಕಣಕ್ಕಿಳಿಯಲಿದ್ದಾರೆ.

3 ಪಂದ್ಯಗಳ ಏಕದಿನ ಸರಣಿ ವೇಳಾಪಟ್ಟಿ

  • ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 23, 2023)
  • 2ನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
  • 3ನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023)

ಭಾರತ ವಿರುದ್ಧದ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಸೀನ್ ಅಬಾಟ್, ಅಲೆಕ್ಸ್ ಕೇರಿ, ನಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹೇಜಲ್​​ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಸ್ವೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಆ್ಯಡಮ್ ಜಂಪಾ.

ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾವೇ ಮೊದಲ ಎದುರಾಳಿ

ಭಾರತದಲ್ಲಿ ಅಕ್ಟೋಬರ್ 5 ರಿಂದ ಆರಂಭವಾಗುವ ಏಕದಿನ ವಿಶ್ವಕಪ್​​ನಲ್ಲಿ ಭಾರತ ತಂಡಕ್ಕೆ ಮೊದಲ ಎದುರಾಳಿ ಆಸ್ಟ್ರೇಲಿಯಾ ತಂಡ ಎಂಬುದು ವಿಶೇಷ. ಅಕ್ಟೋಬರ್ 8ರಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ರೋಹಿತ್ ಪಡೆ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಹಾಗಾಗಿ ಈ ಪಂದ್ಯಕ್ಕೂ ಮುನ್ನ ಉಭಯ ತಂಡಗಳು 3 ಪಂದ್ಯಗಳ ಏಕದಿನ ಸರಣಿ ಆಡುತ್ತಿದ್ದು, ಪೂರ್ವ ಸಿದ್ಧತೆಯ ಭಾಗವಾಗಿದೆ.

ಮೊದಲ 2 ಏಕದಿನ ಪಂದ್ಯಗಳಿಗೆ ಭಾರತ ತಂಡ

ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

3ನೇ ಏಕದಿನ ಪಂದ್ಯಕ್ಕೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭ್ಮನ್​ ಗಿಲ್​, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್*, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ