logo
ಕನ್ನಡ ಸುದ್ದಿ  /  ಕ್ರಿಕೆಟ್  /  ಟೀಮ್ ಇಂಡಿಯಾ ವಿರುದ್ಧದ ಟಿ20ಐ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಶ್ರೀಲಂಕಾ; ನೂತನ ಕ್ಯಾಪ್ಟನ್ ನೇಮಕ

ಟೀಮ್ ಇಂಡಿಯಾ ವಿರುದ್ಧದ ಟಿ20ಐ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಶ್ರೀಲಂಕಾ; ನೂತನ ಕ್ಯಾಪ್ಟನ್ ನೇಮಕ

Prasanna Kumar P N HT Kannada

Jul 23, 2024 01:11 PM IST

google News

ಟೀಮ್ ಇಂಡಿಯಾ ವಿರುದ್ಧದ ಟಿ20ಐ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಶ್ರೀಲಂಕಾ; ನೂತನ ಕ್ಯಾಪ್ಟನ್ ನೇಮಕ

    • Charith Asalanka: ಟೀಮ್ ಇಂಡಿಯಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಗೆ ಶ್ರೀಲಂಕಾ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ವನಿಂದು ಹಸರಂಗ ಬದಲಿಗೆ ಚರಿತ್ ಅಸಲಂಕಾ ನೂತನ ನಾಯಕನಾಗಿ ನೇಮಕಗೊಂಡಿದ್ದಾರೆ.
ಟೀಮ್ ಇಂಡಿಯಾ ವಿರುದ್ಧದ ಟಿ20ಐ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಶ್ರೀಲಂಕಾ; ನೂತನ ಕ್ಯಾಪ್ಟನ್ ನೇಮಕ
ಟೀಮ್ ಇಂಡಿಯಾ ವಿರುದ್ಧದ ಟಿ20ಐ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಶ್ರೀಲಂಕಾ; ನೂತನ ಕ್ಯಾಪ್ಟನ್ ನೇಮಕ

ಟೀಮ್ ಇಂಡಿಯಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಗೆ ಶ್ರೀಲಂಕಾ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಸರಣಿಗೆ ನೂತನ ನಾಯಕನಾಗಿ ಬ್ಯಾಟರ್​ ಚರಿತ್ ಅಸಲಂಕಾ ಅವರು ನೇಮಕಗೊಂಡಿದ್ದಾರೆ. 2024ರ ಟಿ20 ವಿಶ್ವಕಪ್​​ನ ಗುಂಪು ಹಂತದಲ್ಲಿ ಶ್ರೀಲಂಕಾ ನಿರ್ಗಮಿಸಿದ ನಂತರ ಆಲ್​ರೌಂಡರ್​ ವನಿಂದು ಹಸರಂಗ ನಾಯಕತ್ವದಿಂದ ಕೆಳಗಿಳಿದಿದ್ದರು. ಇದೀಗ ಅವರ ಸ್ಥಾನಕ್ಕೆ ಅಸಲಂಕಾ ಅವರನ್ನು ನೇಮಿಸಲಾಗಿದೆ.

ಈ ವರ್ಷದ ಆರಂಭದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಎರಡು ಟಿ20ಐ ಪಂದ್ಯಗಳಲ್ಲಿ ಅಸಲಂಕಾ ಶ್ರೀಲಂಕಾ ತಂಡವನ್ನು ಮುನ್ನಡೆಸಿದ್ದರು. ಶ್ರೀಲಂಕಾ ಪ್ರವಾಸದಲ್ಲಿ 3 ಟಿ20ಐ ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿರುವ ಭಾರತ ತಂಡನ್ನು ಸೂರ್ಯಕುಮಾರ್​ ಯಾದವ್ ಮುನ್ನಡೆಸಲಿದ್ದಾರೆ. ಇದಕ್ಕೂ ಮುನ್ನ ಹಾರ್ದಿಕ್ ಪಾಂಡ್ಯ ನಾಯಕನಾಗಿದ್ದರು. ಆದರೆ, ಅವರ ಫಿಟ್ನೆಸ್ ಕಾರಣದಿಂದ ಕೆಳಗಿಳಿಸಲಾಗಿದೆ.

ಮಹೇಶ್ ತೀಕ್ಷಾಣ, ವನಿಂದು ಹಸರಂಗ, ದಿನೇಶ್ ಚಾಂಡಿಮಾಲ್, ದಸುನ್ ಶನಕ ಸೇರಿದಂತೆ ಹಿರಿಯ ಆಟಗಾರರು ಪ್ರಕಟಗೊಂಡಿರುವ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕುಸಾಲ್ ಮೆಂಡಿಸ್ ಏಕದಿನ ತಂಡವನ್ನು ಮುನ್ನಡೆಸಲಿದ್ದರೆ, ಧನಂಜಯ ಡಿ ಸಿಲ್ವಾ ಶ್ರೀಲಂಕಾದ ಟೆಸ್ಟ್ ನಾಯಕರಾಗಿದ್ದಾರೆ.

ಹಾಲಿ ಟಿ20ಐ ವಿಶ್ವ ಚಾಂಪಿಯನ್ ಆಗಿರುವ ಭಾರತ ತಂಡ ಕ್ಯಾಂಡಿಯ ಪಲ್ಲೆಕೆಲೆಯಲ್ಲಿ ಜುಲೈ 27ರ ಶನಿವಾರ 3 ಚುಟುಕು ಪಂದ್ಯಗಳ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಜುಲೈ 22ರ ಸೋಮವಾರ ಶ್ರೀಲಂಕಾಗೆ ಆಗಮಿಸಿತು. ಮೂರು ಪಂದ್ಯಗಳ ಏಕದಿನ ಸರಣಿ ಆಗಸ್ಟ್ 2 ರಿಂದ ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಸರಣಿಗೆ ಹಿರಿಯ ಕ್ರಿಕೆಟಿಗರು ತಂಡಕ್ಕೆ ಮರಳಲಿದ್ದಾರೆ.

ಟಿ20 ವಿಶ್ವಕಪ್ ಗೆಲುವಿನ ನಂತರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಟಿ20ಐ ಕ್ರಿಕೆಟ್​ಗೆ ವಿದಾಯ ಘೋಷಿಸಿದ್ದರು. ಅಲ್ಲದೆ, ರಾಹುಲ್ ದ್ರಾವಿಡ್ ಅವರ ಅಧಿಕಾವಧಿಯೂ ಮುಕ್ತಾಯಗೊಂಡಿತು. ಹೀಗಾಗಿ ಟಿ20ಐ ಕ್ರಿಕೆಟ್​ಗೆ ನೂತನ ನಾಯಕ ಮತ್ತು ಯುವ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ನೂತನ ಕೋಚ್ ಆಗಿ ಗೌತಮ್ ಗಂಭೀರ್​​ ನೇಮಕಗೊಂಡಿದ್ದು, ಇಲ್ಲಿಂದ ಭಾರತೀಯ ಚುಟುಕು ಕ್ರಿಕೆಟ್​ನಲ್ಲಿ ಹೊಸ ಯುಗ ಆರಂಭಗೊಳ್ಳಲಿದೆ.

ಟಿ20ಐ ಸರಣಿಗೆ ಶ್ರೀಲಂಕಾ ತಂಡ

ಚರಿತ್ ಅಸಲಂಕಾ (ನಾಯಕ), ಪಾಥುಮ್ ನಿಸ್ಸಾಂಕಾ, ಕುಸಾಲ್ ಪೆರೆರಾ, ಅವಿಷ್ಕಾ ಫರ್ನಾಂಡೊ, ಕುಸಾಲ್ ಮೆಂಡಿಸ್, ದಿನೇಶ್ ಚಾಂಡಿಮಾಲ್, ಕಮಿಂಡು ಮೆಂಡಿಸ್, ದಸುನ್ ಶನಕ, ವನಿಂದು ಹಸರಂಗ, ದುನಿತ್ ವೆಲ್ಲಾಲಗೆ, ಮಹೀಶ್ ತೀಕ್ಷಾಣ, ಚಮಿಂದು ವಿಕ್ರಮಸಿಂಘೆ, ಮಥೀಶಾ ಪತಿರಾನಾ, ನುವಾನ್ ತುಷಾರ, ದುಷ್ಮಂತ ಚಮೀರಾ ಮತ್ತು ಬಿನುರಾ ಫರ್ನಾಂಡೊ.

ಭಾರತ ಟಿ20ಐ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್ ಸಿರಾಜ್.

ಭಾರತ ಏಕದಿನ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ