logo
ಕನ್ನಡ ಸುದ್ದಿ  /  ಕ್ರಿಕೆಟ್  /  128 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌; 2028ರ ಕ್ರೀಡಾಕೂಟಕ್ಕೆ ಅಧಿಕೃತ ಸೇರ್ಪಡೆಗೆ ಇನ್ನೊಂದೇ ಹೆಜ್ಜೆ

128 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌; 2028ರ ಕ್ರೀಡಾಕೂಟಕ್ಕೆ ಅಧಿಕೃತ ಸೇರ್ಪಡೆಗೆ ಇನ್ನೊಂದೇ ಹೆಜ್ಜೆ

Jayaraj HT Kannada

Oct 10, 2023 10:37 PM IST

ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆಗೆ ಒಂದೇ ಹೆಜ್ಜೆ ಬಾಕಿ

    • ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಪಂದ್ಯಗಳು ನಡೆಯಲು ಒಂದು ಹೆಜ್ಜೆ ಮಾತ್ರ ಬಾಕಿ ಉಳಿದಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅನುಮೋದನೆ ಸಿಕ್ಕ ಬೆನ್ನಲ್ಲೇ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಪಂದ್ಯಗಳನ್ನು ನೋಡಬಹುದು.
ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆಗೆ ಒಂದೇ ಹೆಜ್ಜೆ ಬಾಕಿ
ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆಗೆ ಒಂದೇ ಹೆಜ್ಜೆ ಬಾಕಿ (AFP)

ಈಗಾಗಲೇ ಕಾಮನ್‌ವೆಲ್ತ್‌ ಕ್ರೀಡಾಕೂಟ ಹಾಗೂ ಏಷ್ಯನ್‌ ಗೇಮ್ಸ್‌ಗೆ ಕ್ರಿಕೆಟ್‌ ಅಧಿಕೃತವಾಗಿ ಸೇರ್ಪಡೆಗೊಂಡಿದೆ. ಇದೀಗ ವಿಶ್ವದ ಅದ್ಧೂರಿ ಕ್ರೀಡಾಕೂಟ ಒಲಿಂಪಿಕ್ಸ್‌ನಲ್ಲಿ ಜಂಟಲ್‌ಮೆನ್‌ ಗೇಮ್ ಕ್ರಿಕೆಟ್‌ ಪಂದ್ಯಗಳನ್ನು ಕಣ್ತುಂಬಿಕೊಳ್ಳುವ ಕಾಲ ಸನ್ನಿಹಿತವಾಗಿದೆ. 2028ರಲ್ಲಿ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ‌ (2028 Los Angeles Olympics) ಕ್ರಿಕೆಟ್ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ.

ಟ್ರೆಂಡಿಂಗ್​ ಸುದ್ದಿ

ಆರ್​ಸಿಬಿ ಆಟಗಾರರಿಗೆ ಹ್ಯಾಂಡ್​ಶೇಕ್ ಮಾಡದೆ ಮೈದಾನ ತೊರೆದ ಎಂಎಸ್ ಧೋನಿ; ಮಾಹಿ ಹುಡುಕುತ್ತಾ ಹೊರಟ ವಿರಾಟ್ ಕೊಹ್ಲಿ

ಅಂದು ಟೀಕಿಸಿದವರಿಂದಲೇ ಇಂದು ಶಹಬ್ಬಾಷ್‌ಗಿರಿ; ಟ್ರೋಲ್‌ಗಳಿಗೆ ಕುಗ್ಗದೆ ಆರ್‌ಸಿಬಿ ಅದೃಷ್ಟವನ್ನೇ ಬದಲಿಸಿದ ಯಶ್ ದಯಾಳ್

RCB Hosa Adhyaya: ಸಿಎಸ್​ಕೆ ವಿರುದ್ಧ ಪರಾಕ್ರಮ ಮೆರೆದು ಪ್ಲೇಆಫ್ ಹೆಬ್ಬಾಗಿಲು ದಾಟಲು ಪ್ರಮುಖ 6 ಕಾರಣಗಳು

ಬೆಂಗಳೂರು ಬೀದಿಗಳಲ್ಲಿ ರಾತ್ರಿ 1.30ಕ್ಕೂ ವಿರಾಟ್‌ ಫ್ಯಾನ್ಸ್‌ ಹರ್ಷೋದ್ಘಾರ; ವಿಡಿಯೋ ಹಂಚಿಕೊಂಡು ನೀವೇ ಬೆಸ್ಟ್‌ ಎಂದ ಆರ್‌ಸಿಬಿ

ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಪಂದ್ಯಗಳು ನಡೆಯಲು ಒಂದು ಹೆಜ್ಜೆ ಮಾತ್ರ ಬಾಕಿ ಉಳಿದಿದೆ. ಅಕ್ಟೋಬರ್ 15-16ರಂದು ಮುಂಬೈ ನಗರದಲ್ಲಿ ನಿಗದಿಪಡಿಸಲಾಗಿರುವ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (IOC-International Olympic Committee)ಯ 141ನೇ ಸಭೆಯಲ್ಲಿ ಈ ಕುರಿತ ಪ್ರಸ್ತಾವನೆಗೆ ಅನುಮೋದನೆ ಸಿಗಬೇಕಿದೆ. ಇಲ್ಲಿ ಅನುಮೋದನೆ ಸಿಕ್ಕ ಬಳಿಕ ಒಲಿಂಪಿಕ್ಸ್‌ಗೆ ಕ್ರಿಕೆಟ್‌ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದೆ.

ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನ ಸಂಘಟನಾ ಸಮಿತಿಯು, ಐಒಸಿಗೆ ಈ ಕುರಿತು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ. 2028ರ ಕ್ರೀಡಾಕೂಟಕ್ಕೆ ಟಿ20 ಸ್ವರೂಪದಲ್ಲಿ ಕ್ರಿಕೆಟ್ ಮತ್ತು ಇತರ ನಾಲ್ಕು ಕ್ರೀಡೆಗಳನ್ನು ಶಿಫಾರಸು ಮಾಡಿದೆ ಎಂದು ಸಂಘಟನಾ ಸಮಿತಿ ತಿಳಿಸಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಕೂಡ ಇದನ್ನು ದೃಢಪಡಿಸಿದೆ. ಅಲ್ಲದೆ ಈ ನಡೆಯು ಕುರಿತು ಸಂತಸ ವ್ಯಕ್ತಪಡಿಸಿದೆ.

ಐಸಿಸಿ ಸಂತಸ

“ಅಮೆರಿಕದಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ಗೆ ಕ್ರಿಕೆಟ್ ಅನ್ನು ಶಿಫಾರಸು ಮಾಡಿರುವುದು ನಮಗೆ ಸಂತೋಷ ತಂದಿದೆ. ಇದು ಅಂತಿಮ ನಿರ್ಧಾರವಲ್ಲವಾದರೂ, ಒಂದು ಶತಮಾನದ ನಂತರ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ನೋಡುವ ನಿಟ್ಟಿನಲ್ಲಿ ಇದು ಬಹಳ ಮಹತ್ವದ ಹೆಗ್ಗುರುತಾಗಿದೆ” ಎಂದು ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಪ್ರತಿಕ್ರಿಯೆ ನೀಡಿದ್ದಾರೆ.

1900ರ ಒಲಿಂಪಿಕ್ಸ್‌ನಲ್ಲಿ ನಡೆದಿದ್ದು ಕ್ರಿಕೆಟ್

ಕೊನೆಯ ಬಾರಿಗೆ 1900ರಲ್ಲಿ ನಡೆದ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಪಂದ್ಯ ನಡೆದಿತ್ತು. ಎರಡು ತಂಡಗಳು ಮಾತ್ರ ಆ ಸಮಯದಲ್ಲಿ ಒಲಿಂಪಿಕ್ಸ್‌ನಲ್ಲಿ ಆಡಿದ್ದವು. ಅದಾದ ಬಳಿಕ ಜಾಗತಿಕ ಕ್ರೀಡಾಕೂಟದಲ್ಲಿ ಇದುವರೆಗೆ ಕ್ರಿಕೆಟ್‌ ಪಂದ್ಯಗಳು ನಡೆದಿಲ್ಲ. ಇದೀಗ 128 ವರ್ಷಗಳ ಬಳಿಕ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಪಂದ್ಯಗಳು ನಡೆಯುವ ಸಾಧ್ಯತೆ ಇದೆ.

2028ರ ಒಲಿಂಪಿಕ್ಸ್‌ಗೂ ಮುನ್ನ 2024ರಲ್ಲಿ ಕ್ರೀಡಾಕೂಟ ನಡೆಯಲಿದೆ. ಫ್ರಾನ್ಸ್‌ನ ರಾಜಧಾನಿ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಪಂದ್ಯಗಳು ಇರುವುದಿಲ್ಲ.

For latest Cricket News, Live Score, IPL stay connected with HT Kannada

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ