logo
ಕನ್ನಡ ಸುದ್ದಿ  /  ಕ್ರಿಕೆಟ್  /  Ipl 2024 Latest Updates: ಸಿಎಸ್‌ಕೆ Vs ಕೆಕೆಆರ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಬಲಿಷ್ಠ ತಂಡಗಳ ಕದನದ ಸಂಪೂರ್ಣ ವಿವರ

IPL 2024 Latest Updates: ಸಿಎಸ್‌ಕೆ vs ಕೆಕೆಆರ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್; ಬಲಿಷ್ಠ ತಂಡಗಳ ಕದನದ ಸಂಪೂರ್ಣ ವಿವರ

Jayaraj HT Kannada

Apr 08, 2024 07:17 PM IST

google News

ಸಿಎಸ್‌ಕೆ vs ಕೆಕೆಆರ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್

    • Indian Premier League 2024 Updates: ಐಪಿಎಲ್‌ 2024ರ ಆವೃತ್ತಿಯ 22ನೇ ಪಂದ್ಯದಲ್ಲಿ ಏಪ್ರಿಲ್ 8ರ ಸೋಮವಾರ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಸಿಎಸ್‌ಕೆ ತವರು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಪ್ರಸಕ್ತ ಆವೃತ್ತಿಯ ಮೂರನೇ ಪಂದ್ಯ ನಡೆಯುತ್ತಿದೆ. ಪಂದ್ಯದ ಲೇಟೆಸ್ಟ್ ಅಪ್ಡೇಟ್‌ ಇಲ್ಲಿದೆ.
ಸಿಎಸ್‌ಕೆ vs ಕೆಕೆಆರ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್
ಸಿಎಸ್‌ಕೆ vs ಕೆಕೆಆರ್ ಐಪಿಎಲ್ ಪಂದ್ಯದ ಲೇಟೆಸ್ಟ್ ಅಪ್ಡೇಟ್

ಐಪಿಎಲ್‌ 17ನೇ ಆವೃತ್ತಿಯಲ್ಲಿ ಏಪ್ರಿಲ್ 8ರ ಸೋಮವಾರ ಪಂದ್ಯಾವಳಿಯ 22ನೇ ಪಂದ್ಯ ನಡೆಯುತ್ತಿದೆ. ಚೆಪಾಕ್‌ ಮೈದಾನದಲ್ಲಿ ಆತಿಥೇಯ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಕ್ಕೆ ಟೂರ್ನಿಯ ಅಜೇಯ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ (CSK vs KKR) ಸವಾಲೆಸೆಯುತ್ತಿದೆ. ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೆಕೆಆರ್‌ ಟೂರ್ನಿಯಲ್ಲಿ ಅಜೇಯವಾಗಿ ಮುನ್ನಡೆಯುತ್ತಿದೆ. ಆಡಿದ ಮೂರೂ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಇದೇ ವೇಳೆ ಋತುರಾಜ್ ಗಾಯಕ್ವಾಡ್ ನೇತೃತ್ವದ ಹಾಲಿ ಚಾಂಪಿಯನ್ ಸಿಎಸ್‌ಕೆ ತಲಾ 2 ಗೆಲುವು ಹಾಗೂ ಸೋಲುಗಳನ್ನು ಸಮಾನವಾಗಿ ಸ್ವೀಕರಿಸಿದೆ. ಉಭಯ ತಂಡಗಳು ಕೂಡಾ ಆಲ್‌ರೌಂಡ್‌ ತಂಡವಾಗಿ ಬಲಿಷ್ಠ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಇಂದಿನ ಪಂದ್ಯ ರೋಚಕತೆ ಹೆಚ್ಚಿಸಿದೆ.

ಕೆಕೆಆರ್ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ; ತಂಡದಲ್ಲಿ ಬದಲಾವಣೆ

ಕೆಕೆಆರ್‌ ತಂಡದ ವಿರುದ್ಧ ಟಾಸ್‌ ಗೆದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಅತ್ತ ಕೆಕೆಆರ್‌ ಯಾವುದೇ ಬದಲಾವಣೆ ಮಾಡಿಲ್ಲ. ಉಭಯ ತಂಡಗಳ ಆಡುವ ಬಳಗ ನೋಡಲು ಇಲ್ಲಿ ಕ್ಲಿಕ್‌ ಮಾಡಿ.

ಕೋಲ್ಕತ್ತಾ ನೈಟ್​ ರೈಡರ್ಸ್ vs ಚೆನ್ನೈ ಸೂಪರ್​ ಕಿಂಗ್ಸ್ ಸಂಭಾವ್ಯ ಆಡುವ ಬಳಗ

17ನೇ ಆವೃತ್ತಿಯ ಐಪಿಎಲ್‌ನ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ ತಂಡಗಳು ಎದುರಾಗುತ್ತಿವೆ. ಮಹತ್ವದ ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 1, ಇಂಪ್ಯಾಕ್ಟ್‌ ಆಟಗಾರರ ವಿವರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸಿಎಸ್‌ಕೆ vs ಕೆಕೆಆರ್; ಚೆಪಾಕ್ ಪಿಚ್ ಹೇಗಿದೆ? ಕಡಲ ನಗರಿ ಚೆನ್ನೈ ಹವಾಮಾನ ಹೀಗಿದೆ

ಹ್ಯಾಟ್ರಿಕ್‌ ಸೋಲಿನಿಂದ ತಪ್ಪಿಸಿಕೊಳ್ಳಲು ಚೆನ್ನೈ ಸೂಪರ್ ಕಿಂಗ್ಸ್ ತಂಡವು ಬಲಿಷ್ಠ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಬೇಕಾಗಿದೆ. ತವರು ಮೈದಾನ ಚೆನ್ನೈನಲ್ಲಿ ನಡೆಯುತ್ತಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್ ಪಂದ್ಯದಲ್ಲಿ ಈ ಎರಡು ಪ್ರಬಲ ತಂಡಗಳು ಕಣಕ್ಕಿಳಿಯುತ್ತಿವೆ. ಪಂದ್ಯದ ಪಿಚ್‌, ಹವಾಮಾನ ವರದಿ ಹೀಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ