logo
ಕನ್ನಡ ಸುದ್ದಿ  /  ಕ್ರಿಕೆಟ್  /  ಅಪ್ರಾಪ್ತೆ ಮೇಲೆ ಅತ್ಯಾಚಾರ; ನೇಪಾಳ ಕ್ರಿಕೆಟಿಗ ಸಂದೀಪ್ ಲಮಿಚಾನೆ ದೋಷಿ ಎಂದು ಸಾಬೀತು

ಅಪ್ರಾಪ್ತೆ ಮೇಲೆ ಅತ್ಯಾಚಾರ; ನೇಪಾಳ ಕ್ರಿಕೆಟಿಗ ಸಂದೀಪ್ ಲಮಿಚಾನೆ ದೋಷಿ ಎಂದು ಸಾಬೀತು

Jayaraj HT Kannada

Dec 29, 2023 10:52 PM IST

ಸಂದೀಪ್ ಲಮಿಚಾನೆ (File photo)

    • ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ದೋಷಿ ಎಂಬುದಾಗಿ ಕೋರ್ಟ್ ತೀರ್ಪು ನೀಡಿದೆ. ಮುಂದಿನ ವಿಚಾರಣೆಯಲ್ಲಿ ಕ್ರಿಕೆಟಿಗನಿಗೆ ಜೈಲು ಶಿಕ್ಷೆಯ ಪ್ರಮಾಣ ಪ್ರಕಟವಾಗಬೇಕಿದೆ.
ಸಂದೀಪ್ ಲಮಿಚಾನೆ (File photo)
ಸಂದೀಪ್ ಲಮಿಚಾನೆ (File photo) (AFP)

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಡಿ ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ (Sandeep Lamichhane) ದೋಷಿ ಎಂಬುದಾಗಿ ನ್ಯಾಯಾಲಯ ತೀರ್ಪು ನೀಡಿದೆ. ಐಪಿಎಲ್‌ನಲ್ಲೂ ಆಡಿರುವ ಲಮಿಚಾನೆ ವಿರುದ್ಧ ಡಿಸೆಂಬರ್‌ 29ರ ಶುಕ್ರವಾರ ಕಠ್ಮಂಡು ಜಿಲ್ಲಾ ನ್ಯಾಯಾಲಯವು ಅಪರಾಧಿ ಎಂಬುದಾಗಿ ತೀರ್ಪು ನೀಡಿದೆ.

ಟ್ರೆಂಡಿಂಗ್​ ಸುದ್ದಿ

ಮಳೆಯಿಂದ ಪಂದ್ಯ ರದ್ದು; ಎಲಿಮಿನೇಟರ್​​ನಲ್ಲಿ ಆರ್​​ಸಿಬಿಗೆ ರಾಜಸ್ಥಾನ್ ರಾಯಲ್ಸ್ ಎದುರಾಳಿ, ಪ್ಲೇಆಫ್​ ವೇಳಾಪಟ್ಟಿ ಹೀಗಿದೆ

ಆರ್​ಸಿಬಿ ಫೈನಲ್​ ಗೆದ್ದಂತೆ ಹಾರಾಡ್ತಿದೆ ಎಂದ ರಾಯುಡು; ಇವರಿಗೆ ಅರಗಿಸಿಕೊಳ್ಳೊಕೆ ಆಗ್ತಿಲ್ಲ ಎಂದ ಬೆಂಗಳೂರು ಮಾಜಿ ಆಟಗಾರ

ವಿರಾಟ್ ಕೊಹ್ಲಿಗೆ ಕರ್ನಾಟಕದ ನಂಟು; ಎರಡನೇ ತವರು ಬೆಂಗಳೂರಲ್ಲಿ ವಿರುಷ್ಕಾ ದಂಪತಿ ಓಡಾಡಿರುವ ಜಾಗಗಳಿವು

ಬ್ಯಾಟರ್‌ಗಳ ಅಬ್ಬರ; ಪಂಜಾಬ್‌ ಮಣಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ನೆಗೆದ ಸನ್‌ರೈಸರ್ಸ್‌ ಹೈದರಾಬಾದ್

ಕಳೆದ ವರ್ಷ ಆಗಸ್ಟ್‌ ತಿಂಗಳಲ್ಲಿ ಕಠ್ಮಂಡುವಿನ ಹೋಟೆಲ್ ಕೊಠಡಿಯಲ್ಲಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಲಮಿಚಾನೆ ಬಂಧಿಸಲಾಗಿತ್ತು. ಆ ಬಳಿಕ ಈ ವರ್ಷದ ಜನವರಿಯಲ್ಲಿ ನೇಪಾಳ ನ್ಯಾಯಾಲಯವು ಅವರನ್ನು ಬಿಡುಗಡೆ ಮಾಡಿತ್ತು.

ಇದೇ ಭಾನುವಾರ ಆರಂಭವಾದ ಅಂತಿಮ ಹಂತದ ವಿಚಾರಣೆ ಮುಕ್ತಾಯಗೊಂಡಿದ್ದು, ನ್ಯಾಯಾಧೀಶ ಶಿಶಿರ್ ರಾಜ್ ಧಾಕಲ್ ಅವರಿದ್ದ ಏಕಸದಸ್ಯ ಪೀಠವು, ಕ್ರಿಕಟಿಗನು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಈ ಕುರಿತು ಕಠ್ಮಂಡು ಪೋಸ್ಟ್ ವರದಿ ಮಾಡಿದೆ. ಸದ್ಯ ಶಿಕ್ಷೆಯ ಪ್ರಮಾಣ ಪ್ರಕಟಗೊಂಡಿಲ್ಲ. ಮುಂದಿನ ವಿಚಾರಣೆಯಲ್ಲಿ ಕ್ರಿಕೆಟಿಗನಿಗೆ ಜೈಲು ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ | ಆಸೀಸ್-ಪಾಕ್ ಪಂದ್ಯದ ವೇಳೆ ಲವರ್ಸ್ ರೊಮ್ಯಾನ್ಸ್; ಪ್ರೇಕ್ಷಕರಿಗೆ ಲೈವ್​​ಶೋ ಕೊಟ್ಟ ಕ್ಯಾಮೆರಾಮೆನ್, ವಿಡಿಯೋ ವೈರಲ್

ಜಾಮೀನಿನ ಮೇಲೆ ಹೊರಗಿದ್ದ ಕ್ರಿಕೆಟಿಗ

ಕಳೆದ ಜನವರಿ 12ರಂದು ಪಟಾನ್ ಹೈಕೋರ್ಟ್ ಕ್ರಿಕೆಟಿಗನನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿತ್ತು.‌ ಹೀಗಾಗಿ ಲಮಿಚಾನೆ ಜಾಮೀನಿನ ಮೇಲೆ ಹೊರಗಿದ್ದರು. 2022ರ ನವೆಂಬರ್ 4ರಂದು ಕಠ್ಮಂಡು ಜಿಲ್ಲಾ ನ್ಯಾಯಾಲಯವು ವಿಚಾರಣೆಯ ನಂತರ ಲಮಿಚಾನೆಯನ್ನು ಕೇಂದ್ರ ಕಾರಾಗೃಹಕ್ಕೆ ಕಳುಹಿಸಲು ಆದೇಶ ನೀಡಿತ್ತು. ಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಲಾಮಿಚಾನೆ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅಲ್ಲದೆ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಪ್ರಕರಣದ ಹಿನ್ನೆಲೆ

2022ರ ಆಗಸ್ಟ್ 21ರಂದು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ, ಕಠ್ಮಂಡು ಜಿಲ್ಲಾಧಿಕಾರಿಗಳ ಕಚೇರಿಯು ಲಮಿಚಾನೆ ವಿರುದ್ಧ ಪ್ರಕರಣ ದಾಖಲಿಸಿತ್ತು. ಸೆಪ್ಟೆಂಬರ್ 6ರಂದು ನೇಪಾಳದ ಗೌಶಾಲಾ ಮಹಾನಗರ ಪೊಲೀಸ್ ವೃತ್ತದಲ್ಲಿ ಅಪ್ರಾಪ್ತೆ ದೂರು ನೀಡಿದ್ದರು.

ಇದನ್ನೂ ಓದಿ | ಪೂಜಾರಗಿಂತ ಉತ್ತಮ ಬ್ಯಾಟರ್ ನಮ್ಮಲ್ಲಿ ಯಾರೂ ಇಲ್ಲ, ಅವರನ್ನು ಹೊರಗಿಡಲು ಕಾರಣ ಏನೆಂದೇ ಗೊತ್ತಿಲ್ಲ; ಹರ್ಭಜನ್

ನೇಪಾಳದ ಲೆಗ್ ಸ್ಪಿನ್ನರ್ ತಮ್ಮ ಗೂಗ್ಲಿ ಬೌಲಿಂಗ್‌ನಿಂದ ಕ್ರಿಕೆಟ್‌ ಲೋಕದಲ್ಲಿ ಹೆಸರು ಮಾಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಬಿಗ್ ಬ್ಯಾಷ್ ಲೀಗ್ (BBL), ಪಾಕಿಸ್ತಾನ್ ಸೂಪರ್ ಲೀಗ್ (PSL) ಸೇರಿದಂತೆ ಐಪಿಎಲ್‌ನಲ್ಲೂ ಆಡಿದ್ದಾರೆ. 2018ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಆಡುವ ಮೂಲಕ, ಐಪಿಎಲ್‌ಗೆ ಪದಾರ್ಪಣೆ ಮಾಡಿದ ನೇಪಾಳದ ಮೊದಲ ಕ್ರಿಕೆಟಿಗ ಎಂಬ ಖ್ಯಾತಿ ಪಡೆದಿದ್ದಾರೆ.

ವಿಡಿಯೋ ನೋಡಿ | ಕಾಟೇರ ಸಂಭ್ರಮ; ಬಿರಿಯಾನಿ ತಿಂದು ಕುಣಿದು ಕುಪ್ಪಳಿಸಿದ ಡಿ ಬಾಸ್ ಫ್ಯಾನ್ಸ್

For latest Cricket News, Live Score, IPL stay connected with HT Kannada

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ