logo
ಕನ್ನಡ ಸುದ್ದಿ  /  ಕ್ರಿಕೆಟ್  /  Explainer: ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಹೊರಬಿದ್ದ ನಂತರವೂ ಅಯ್ಯರ್ ಮತ್ತು ಕಿಶನ್ ಟೀಮ್‌ ಇಂಡಿಯಾ ಪರ ಆಡಬಹುದೇ?

Explainer: ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಹೊರಬಿದ್ದ ನಂತರವೂ ಅಯ್ಯರ್ ಮತ್ತು ಕಿಶನ್ ಟೀಮ್‌ ಇಂಡಿಯಾ ಪರ ಆಡಬಹುದೇ?

Jayaraj HT Kannada

Feb 28, 2024 08:25 PM IST

ಗುತ್ತಿಗೆ ಪಟ್ಟಿಯಿಂದ ಹೊರಬಿದ್ದ ನಂತರವೂ ಅಯ್ಯರ್ ಮತ್ತು ಕಿಶನ್ ಟೀಮ್‌ ಇಂಡಿಯಾ ಪರ ಆಡಬಹುದೇ

    • Shreyas Iyer Ishan Kishan: ಆಟಗಾರರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಆಟಗಾರರ ಕೇಂದ್ರೀಯ ಒಪ್ಪಂದ ಪಟ್ಟಿಯಿಂದ ಕೈಬಿಡಲಾಗಿದೆ. ಆದರೆ, ಅವರಿಬ್ಬರೂ ಮುಂದೆ ಭಾರತ ಕ್ರಿಕೆಟ್‌ ತಂಡದ ಪರ ಆಡಬಹುದೇ ಎಂಬ ಪ್ರಶ್ನೆ ಎದ್ದಿದೆ.
ಗುತ್ತಿಗೆ ಪಟ್ಟಿಯಿಂದ ಹೊರಬಿದ್ದ ನಂತರವೂ ಅಯ್ಯರ್ ಮತ್ತು ಕಿಶನ್ ಟೀಮ್‌ ಇಂಡಿಯಾ ಪರ ಆಡಬಹುದೇ
ಗುತ್ತಿಗೆ ಪಟ್ಟಿಯಿಂದ ಹೊರಬಿದ್ದ ನಂತರವೂ ಅಯ್ಯರ್ ಮತ್ತು ಕಿಶನ್ ಟೀಮ್‌ ಇಂಡಿಯಾ ಪರ ಆಡಬಹುದೇ

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಕೇಂದ್ರ ಗುತ್ತಿಗೆ ಪಟ್ಟಿಯಿಂದ ಟೀಮ್‌ ಇಂಡಿಯಾದ ಪ್ರಮುಖ ಆಟಗಾರರಾದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಕೈಬಿಟ್ಟಿದೆ. ಉಭಯ ಆಟಗಾರರು ರಣಜಿ ಟ್ರೋಫಿ ಪಂದ್ಯಗಳನ್ನು ಆಡಬೇಕೆಂದು ಬಿಸಿಸಿಐ ಬಯಸಿತ್ತು. ಈ ನಡುವೆ ಶ್ರೇಯಸ್‌ ಅಯ್ಯರ್‌ ಮುಂಬೈ ಪರ ರಣಜಿ ಸೆಮಿಫೈನಲ್‌ ಆಡುವ ನಿರ್ಧಾರವನ್ನೂ ಮಾಡಿದ್ದರು. ಆದರೆ, ಬಿಸಿಸಿಐ ಶಿಸ್ತಿನ ನಿರ್ಧಾರಕ್ಕೆ ಬಂದಿದೆ.

ಟ್ರೆಂಡಿಂಗ್​ ಸುದ್ದಿ

ಫಾಫ್ ಡು ಪ್ಲೆಸಿಸ್ ವಿವಾದಾತ್ಮಕ ರನೌಟ್, ವಿರಾಟ್ ಕೊಹ್ಲಿ ಅಚ್ಚರಿ; ಅಂಪೈರ್ಸ್ ವಿರುದ್ಧ ನೆಟ್ಟಿಗರ ಆಕ್ರೋಶ

IPL 2024: ನಿರ್ಣಾಯಕ ಪಂದ್ಯದಲ್ಲಿ ಕೊಹ್ಲಿ, ಫಾಫ್, ಪಾಟಿದಾರ್, ಗ್ರೀನ್ ಅಬ್ಬರ; ಸಿಎಸ್‌ಕೆಗೆ 219 ರನ್‌ಗಳ ಬೃಹತ್ ಗುರಿ ನೀಡಿದ ಆರ್‌ಸಿಬಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೂಪರ್‌ ಸಾಪರ್ಸ್‌ಗೆ ಕೆಲಸವಿಲ್ಲ; ಮಳೆ ಬಂದಾಗ ಪಿಚ್‌ಗೆ ಮಾತ್ರ ಟಾರ್ಪಲ್ ಹೊದಿಸುವ ಹಿಂದಿನ ಕಾರಣವಿದು

ನೋಡದೆಯೇ 98 ಮೀಟರ್​ ದೂರ ಸಿಕ್ಸರ್​ ಬಾರಿಸಿದ ವಿರಾಟ್ ಕೊಹ್ಲಿ; ಕಣ್ ಕಣ್ ಬಿಟ್ಟು ನೋಡಿದ ಎಂಎಸ್ ಧೋನಿ, VIDEO

ಬೆನ್ನು ಸೆಳೆತ ಇರುವುದಾಗಿ ಶ್ರೇಯಸ್ ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ಗೆ ತಿಳಿಸಿದ್ದರು. ಆದರೆ ಇದನ್ನು ಎನ್‌ಸಿಎ ಕ್ರೀಡಾ ವಿಜ್ಞಾನದ ಮುಖ್ಯಸ್ಥ ನಿತಿನ್ ಪಟೇಲ್ ನಿರಾಕರಿಸಿದ್ದಾರೆ. ತಮಿಳುನಾಡು ವಿರುದ್ಧದ ರಣಜಿ ಟ್ರೋಫಿ ಸೆಮಿಫೈನಲ್‌ ಪಂದ್ಯಕ್ಕೆ ಆಯ್ಕೆಗೆ ಲಭ್ಯವಿರುವುದಾಗಿ ಅಯ್ಯರ್‌ ಹೇಳಿದ್ದರು. ಆದರೆ ಅದಕ್ಕೂ ಮುನ್ನವೇ ಬಿಸಿಸಿಐ ಅವರನ್ನು ಗುತ್ತಿಗೆಯಿಂದ ಹೊರಗಿಟ್ಟಿದೆ. ಅತ್ತ ಪ್ರಥಮ ದರ್ಜೆ ಕ್ರಿಕೆಟ್‌ ಆಡುವಂತೆ ಇಶಾನ್ ಕಿಶನ್‌ಗೆ ಕೋಚ್ ರಾಹುಲ್ ದ್ರಾವಿಡ್ ಸಲಹೆ ನೀಡಿದ್ದರು. ಆದರೆ ಕಿಶನ್‌ ಐಪಿಎಲ್‌ ಪಂದ್ಯಾವಳಿಗೆ ಸಿದ್ಧತೆ ನಡೆಸಿದರು. ಇಬ್ಬರೂ ಕೂಡಾ ತಮ್ಮ ಗುತ್ತಿಗೆ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ | ಕೆಲವರಿಗೆ ಟೆಸ್ಟ್ ಕ್ರಿಕೆಟ್ ಆಡುವ ಸಾಮರ್ಥ್ಯವಿಲ್ಲ: ಐಪಿಎಲ್​ಗೆ ಗಮನ ಹರಿಸಿದ ಇಶಾನ್​ ವಿರುದ್ಧ ಸುನಿಲ್ ಗವಾಸ್ಕರ್ ಟೀಕೆ

ಟೀಮ್‌ ಇಂಡಿಯಾ ಪರ ಆಡಬಹುದೇ?

ಸದ್ಯ, ಏಕದಿನ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಆಡಿದ್ದ ಇಬ್ಬರು ಆಟಗಾರರನ್ನು ಆಟಗಾರರನ್ನು ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಹೊರಹಾಕಲಾಗಿದೆ. ಇದೀಗ ಈ ಇಬ್ಬರು ಆಟಗಾರರು ಮತ್ತೆ ಟೀಮ್‌ ಇಂಡಿಯಾ ಪರ ಆಡಲು ಸಾಧ್ಯವೇ ಎಂಬ ಪ್ರಶ್ನೆ ಎದ್ದಿದೆ. ಟೀಮ್ ಇಂಡಿಯಾ ಆಟಗಾರರ ವಾರ್ಷಿಕ ಒಪ್ಪಂದ ಪಟ್ಟಿಯಲ್ಲಿ ಸ್ಥಾನ ಇಲ್ಲದಿದ್ದರೂ, ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಭಾರತ ತಂಡದ ಪರ ಆಡಬಹುದೇ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಇದನ್ನೂ ಓದಿ | ಆಟಗಾರರ ವಾರ್ಷಿಕ ಒಪ್ಪಂದ ಪ್ರಕಟಿಸಿದ ಬಿಸಿಸಿಐ; ಇಶಾನ್-ಅಯ್ಯರ್​ಗೆ ಗೇಟ್​ಪಾಸ್, ಜಡೇಜಾ, ರಿಂಕು ಸೇರಿ ಹಲವರಿಗೆ ಬಡ್ತಿ

ಬಿಸಿಸಿಐ ಕೇಂದ್ರೀಯ ಒಪ್ಪಂದದಿಂದ ಕೈಬಿಡಟ್ಟರೂ, ಆ ಆಟಗಾರರು ಭಾರತದ ಪರ ಆಡಲು ಲಭ್ಯವಿರುತ್ತಾರೆ. ಭಾರತ ಕ್ರಿಕೆಟ್ ತಂಡಕ್ಕೆ ಆಟಗಾರರ ಆಯ್ಕೆಯು, ಆಯಾ ಆಟಗಾರರ ಪ್ರದರ್ಶನ ಮತ್ತು ಫಿಟ್ನೆಸ್ ಮೇಲೆ ನಿರ್ಧಾರವಾಗುತ್ತದೆ. ಬಿಸಿಸಿಐನ ವಾರ್ಷಿಕ ಗುತ್ತಿಗೆ ಪಟ್ಟಿಯಲ್ಲಿರುವವರು ಮಾತ್ರ ತಂಡಕ್ಕೆ ಆಯ್ಕೆಯಾಗಬೇಕು ಎಂದೇನಿಲ್ಲ. ಅದರ ಹೊರತಾಗಿಯೂ ಪ್ರದರ್ಶನದ ಆಧಾರದಲ್ಲಿ ಭಾರತ ತಂಡಕ್ಕೆ ಆಯ್ಕೆ ಮಾಡಬಹುದು.

ಆಟಗಾರರ ವಾರ್ಷಿಕ ಒಪ್ಪಂದದ ನೂತನ ಪಟ್ಟಿ

ಗ್ರೇಡ್ A+ (4 ಕ್ರಿಕೆಟಿಗರು): ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ (ಬಡ್ತಿ).

ಗ್ರೇಡ್ ಎ (6 ಕ್ರಿಕೆಟಿಗರು): ಆರ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಶುಭ್ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ.

ಗ್ರೇಡ್ ಬಿ (5 ಕ್ರಿಕೆಟಿಗರು): ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್.

ಗ್ರೇಡ್ ಸಿ (15 ಕ್ರಿಕೆಟಿಗರು): ರಿಂಕು ಸಿಂಗ್ (ಹೊಸ ಸೇರ್ಪಡೆ), ತಿಲಕ್ ವರ್ಮಾ (ಹೊಸ ಸೇರ್ಪಡೆ), ಋತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಕೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆಎಸ್ ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟೀದಾರ್ (ಹೊಸ ಸೇರ್ಪಡೆ).

For latest Cricket News, Live Score, IPL stay connected with HT Kannada

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ