logo
ಕನ್ನಡ ಸುದ್ದಿ  /  ಕ್ರಿಕೆಟ್  /  ಚಾಂಪಿಯನ್ಸ್ ಟ್ರೋಫಿಗೆ ಹೈಬ್ರಿಡ್ ಮಾದರಿ ದೃಢಪಡಿಸಿದ ಐಸಿಸಿ; ಪಾಕಿಸ್ತಾನಕ್ಕೆ ಹೋಗಬೇಕಿಲ್ಲ ಭಾರತ

ಚಾಂಪಿಯನ್ಸ್ ಟ್ರೋಫಿಗೆ ಹೈಬ್ರಿಡ್ ಮಾದರಿ ದೃಢಪಡಿಸಿದ ಐಸಿಸಿ; ಪಾಕಿಸ್ತಾನಕ್ಕೆ ಹೋಗಬೇಕಿಲ್ಲ ಭಾರತ

Jayaraj HT Kannada

Dec 19, 2024 05:28 PM IST

google News

ಚಾಂಪಿಯನ್ಸ್ ಟ್ರೋಫಿಗೆ ಹೈಬ್ರಿಡ್ ಮಾದರಿ ದೃಢಪಡಿಸಿದ ಐಸಿಸಿ

    • Champions Trophy: ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯನ್ನು ಹೈಬ್ರಿಡ್‌ ಮಾದರಿಯಲ್ಲಿ ನಡೆಸಲಾಗುವುದು ಎಂದು ಐಸಿಸಿ ದೃಢಪಡಿಸಿದೆ.
ಚಾಂಪಿಯನ್ಸ್ ಟ್ರೋಫಿಗೆ ಹೈಬ್ರಿಡ್ ಮಾದರಿ ದೃಢಪಡಿಸಿದ ಐಸಿಸಿ
ಚಾಂಪಿಯನ್ಸ್ ಟ್ರೋಫಿಗೆ ಹೈಬ್ರಿಡ್ ಮಾದರಿ ದೃಢಪಡಿಸಿದ ಐಸಿಸಿ

2025ರಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯನ್ನು ಹೈಬ್ರಿಡ್‌ ಮಾದರಿಯಲ್ಲಿ ನಡೆಸಲಾಗುತ್ತದೆ ಎಂದು ಐಸಿಸಿ ಷ್ಪಷ್ಟಪಡಿಸಿದೆ. ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಟೂರ್ನಿಯ ಕೆಲವು ಪಂದ್ಯಗಳು ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಡಿಸೆಂಬರ್‌ 19ರ ಗುರುವಾರ ಪ್ರಕಟಿಸಿದೆ. ಇದು ಚಾಂಪಿಯನ್ಸ್‌ ಟ್ರೋಫಿ ಮಾತ್ರವಲ್ಲದೆ 2024-2027ರವರೆಗೆ ನಡೆಯುವ ಐಸಿಸಿ ಟೂರ್ನಿಗಳಿಗೂ ಅನ್ವಯವಾಗಲಿದೆ. ಆತಿಥ್ಯ ಕುರಿತ ಗೊಂದಲಗಳಿಂದಾಗಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಖ್ಯವಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಿನ್ನಾಭಿಪ್ರಾಯಗಳಿದ್ದು, ಉಭಯ ದೇಶಗಳ ಪಂದ್ಯಗಳು ತಟಸ್ಥ ಸ್ಥಳಗಳಲ್ಲಿ ನಡೆಯಲಿದೆ.

ಸದ್ಯ ಚಾಂಪಿಯನ್ಸ್‌ ಟ್ರೋಫಿ ಹೈಬ್ರಿಡ್‌ ಮಾದರಿಯಲ್ಲಿ ನಡೆಯುವುದು ಸ್ಪಷ್ಟವಾಗಿದ್ದು, ವೇಳಾಪಟ್ಟಿ ಬಿಡುಗಡೆಯಾಗಬೇಕಿದೆ. ಚಾಂಪಿಯನ್ಸ್‌ ಟ್ರೋಫಿ ಜೊತೆಗೆ ಭಾರತದಲ್ಲಿ ನಡೆಯಲಿರುವ 2025ರ ಮಹಿಳಾ ವಿಶ್ವಕಪ್ ಮತ್ತು ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ 2026ರ ಪುರುಷರ ಟಿ20 ವಿಶ್ವಕಪ್ ಸೇರಿದಂತೆ ಹಲವಾರು ಐಸಿಸಿ ಪಂದ್ಯಾವಳಿಗಳಿಗೂ ಇದೇ ನಿಯಮ ಅನ್ವಯಿಸುತ್ತದೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಭವಿಷ್ಯದ ಬಗ್ಗೆ ಹಲವು ಊಹಾಪೋಹಗಳು ಇದ್ದವು. ಭದ್ರತಾ ಕಾರಣಗಳಿಂದ ಪಾಕಿಸಾನಕ್ಕೆ ಭಾರತ ತಂಡವನ್ನು ಕಳುಹಿಸಲು ಬಿಸಿಸಿಐ ನಿರಾಕರಿಸಿತ್ತು. ಹೀಗಾಗಿ ಪಂದ್ಯಾವಳಿಯ ಸುಗಮ ನಿರ್ವಹಣೆಗೆ ಸಮಸ್ಯೆ ಹೆಚ್ಚಾಯಿತು. ಪಾಕಿಸ್ತಾನಕ್ಕೆ ಪ್ರಯಾಣಿಸದಿರಲು ಭದ್ರತಾ ಕಾಳಜಿಯೇ ಪ್ರಾಥಮಿಕ ಕಾರಣ ಎಂದು ಬಿಸಿಸಿಐ ಉಲ್ಲೇಖಿಸಿದೆ.

ಆಟಗಾರರ ಸುರಕ್ಷತೆಗೆ ಆದ್ಯತೆ

ಕ್ರಿಕೆಟ್‌ನ ಎರಡು ಬಲಿಷ್ಠ ತಂಡಗಳ ನಡುವೆ ದೀರ್ಘಕಾಲದ ರಾಜಕೀಯ ಉದ್ವಿಗ್ನತೆಯಿಂದಾಗಿ ಉಭಯ ರಾಷ್ಟ್ರಗಳ ನಡುವೆ ದ್ವಪಕ್ಷೀಯ ಸರಣಿ ನಡೆಯುತ್ತಿಲ್ಲ. ಹೀಗಾಗಿ ಆಟಗಾರರ ಸುರಕ್ಷತೆ ಮತ್ತು ಅಭಿಮಾನಿಗಳಿಗೆ ಸುಲಭವಾಗುವಂತೆ ತಟಸ್ಥ ಸ್ಥಳದ ವ್ಯವಸ್ಥೆ ಮಾಡಲಾಗುತ್ತಿದೆ.

ಚಾಂಪಿಯನ್ಸ್ ಟ್ರೋಫಿಯು ಮುಂದಿನ ವರ್ಷ ಫೆಬ್ರುವರಿ ಮತ್ತು ಮಾರ್ಚ್‌ ತಿಂಗಳಲ್ಲಿ ನಡೆಯಲಿದೆ. ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ಭಾರತ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿ ಆಡಲಿವೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ