logo
ಕನ್ನಡ ಸುದ್ದಿ  /  ಕ್ರಿಕೆಟ್  /  Icc Odi World Cup 2023: ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳು, ಸ್ಥಳ, ಸಮಯ, ಲೈವ್ ಸ್ಟ್ರೀಮಿಂಗ್ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ

ICC ODI World Cup 2023: ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳು, ಸ್ಥಳ, ಸಮಯ, ಲೈವ್ ಸ್ಟ್ರೀಮಿಂಗ್ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ

Raghavendra M Y HT Kannada

Sep 28, 2023 03:21 PM IST

google News

ಐಸಿಸಿ ವಿಶ್ವಕಪ್ ಅಧಿಕೃತ ಆರಂಭಕ್ಕೆ ಕೆಲವೇ ದಿನಗಳು ಬಾಕಿದ್ದು, ಸೆಪ್ಟೆಂಬರ್ 29 ರಿಂದ ಅಭ್ಯಾಸ ಪಂದ್ಯಗಳು ನಡೆಯಲಿವೆ.

  • ಐಸಿಸಿ ಏಕದಿನ ವಿಶ್ವಕಪ್‌ನ ಅಭ್ಯಾಸ ಪಂದ್ಯಗಳು ನಾಳೆಯಿಂದ (ಸೆಪ್ಟೆಂಬರ್ 29, ಶುಕ್ರವಾರ) ಆರಂಭವಾಗಲಿದೆ. ಅಭ್ಯಾಸ ಪಂದ್ಯಗಳ ವೇಳಾಪಟ್ಟಿಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಐಸಿಸಿ ವಿಶ್ವಕಪ್ ಅಧಿಕೃತ ಆರಂಭಕ್ಕೆ ಕೆಲವೇ ದಿನಗಳು ಬಾಕಿದ್ದು, ಸೆಪ್ಟೆಂಬರ್ 29 ರಿಂದ ಅಭ್ಯಾಸ ಪಂದ್ಯಗಳು ನಡೆಯಲಿವೆ.
ಐಸಿಸಿ ವಿಶ್ವಕಪ್ ಅಧಿಕೃತ ಆರಂಭಕ್ಕೆ ಕೆಲವೇ ದಿನಗಳು ಬಾಕಿದ್ದು, ಸೆಪ್ಟೆಂಬರ್ 29 ರಿಂದ ಅಭ್ಯಾಸ ಪಂದ್ಯಗಳು ನಡೆಯಲಿವೆ.

ಬೆಂಗಳೂರು: ಐಸಿಸಿ ಪುರುಷರ ಏಕದಿನ ವಿಶ್ವಕಪ್‌ (ICC ODI World Cup 2023) ಅಕ್ಟೋಬರ್ 5 ರಿಂದ ಆರಂಭವಾಗಲಿದ್ದು, ನಾಳೆಯಿಂದ (ಸೆಪ್ಟೆಂಬರ್ 29, ಶುಕ್ರವಾರ) ಅಭ್ಯಾಸ ಪಂದ್ಯಗಳು (ICC ODI World Cup Warm up Matches) ನಡೆಯಲಿವೆ.

ಈ ಮೆಗಾ ಟೂರ್ನಿಗಾಗಿ ಈಗಾಗಲೇ 10 ತಂಡಗಳು ಭಾರತಕ್ಕೆ (India) ಬಂದಿಳಿದಿವೆ. 'ಟೀಂ ಇಂಡಿಯಾ (Team India) ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಇಂಗ್ಲೆಂಡ್ (England) ವಿರುದ್ಧ ಆಡಲಿದೆ. ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್‌ಲ್ಯಾಂಡ್ ವಿರುದ್ಧ ಆಡಳಿದೆ. ವಿಶ್ವಕಪ್‌ಗಾಗಿ 7 ವರ್ಷಗಳ ನಂತರ ಪಾಕಿಸ್ತಾನ ಕ್ರಿಕೆಟ್ ತಂಡ (Pakistan Cricket Team) ನಿನ್ನೆ (ಸೆಪ್ಟೆಂಬರ್ 27, ಬುಧವಾರ) ಹೈದರಾಬಾದ್‌ಗೆ ಬಂದಿಳಿದಿದೆ.

ಪಾಕಿಸ್ತಾನ ತಂಡ ತನ್ನ ಎರಡು ಅಭ್ಯಾಸ ಪಂದ್ಯಗಳನ್ನು ಹೈದರಾಬಾದ್‌ನಲ್ಲಿ ಆಡಳಿದೆ. ವಿಶ್ವಕಪ್ ಅಬ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3ರವರೆಗೆ ನಡೆಯಲಿದೆ. ಅಕ್ಟೋಬರ್ ಮೂರರ ಒಂದೇ ದಿನ ಮೂರು ಅಭ್ಯಾಸ ಪಂದ್ಯಗಳು ನಡೆಯಲಿವೆ. ಇದಾದ ಎರಡು ದಿನಗಳ ಬಿಡುವಿನ ನಂತರ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ವಿಶ್ವಕಪ್ ಪಂದ್ಯಗಳು ನಡೆಯಲಿದೆ. ಈ ಅಭ್ಯಾಸ ಪಂದ್ಯಗಳು ಹೈದರಾಬಾದ್‌ನ ಉಪ್ಪಲ್ ಸ್ಟೇಡಿಯಂ, ಗುವಾಹಟಿ ಹಾಗೂ ತಿರುವನಂತಪುರಂನಲ್ಲಿ ನಡೆಯಲಿದೆ.

ಐಸಿಸಿ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳ ಪಟ್ಟಿ ಹೀಗಿದೆ

ಸೆಪ್ಟೆಂಬರ್ 29, ಶುಕ್ರವಾರ

ಪಾಕಿಸ್ತಾನ vs ನ್ಯೂಜಿಲೆಂಡ್: ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಂ, ಹೈದರಾಬಾದ್

ಬಾಂಗ್ಲಾದೇಶ vs ಶ್ರೀಲಂಕಾ, ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ

ದಕ್ಷಿಣ ಆಫ್ರಿಕಾ ವಿರುದ್ಧ ಅಫ್ಘಾನಿಸ್ತಾನ, ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ

ಸೆಪ್ಟೆಂಬರ್ 30, ಶನಿವಾರ

ಭಾರತ vs ಇಂಗ್ಲೆಂಡ್, ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ

ಆಸ್ಟ್ರೇಲಿಯಾ vs ನೆದರ್ಲ್ಯಾಂಡ್ಸ್, ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ

ಅಕ್ಟೋಬರ್ 2 - ಸೋಮವಾರ

ಇಂಗ್ಲೆಂಡ್ vs ಬಾಂಗ್ಲಾದೇಶ, ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ

ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ, ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣ, ತಿರುವನಂತಪುರಂ

ಅಕ್ಟೋಬರ್ 3 - ಮಂಗಳವಾರ

ಪಾಕಿಸ್ತಾನ vs ಆಸ್ಟ್ರೇಲಿಯಾ - ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣ, ಹೈದರಾಬಾದ್

ಅಫ್ಘಾನಿಸ್ತಾನ vs ಶ್ರೀಲಂಕಾ, ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ, ಗುವಾಹಟಿ

ಭಾರತ vs ನೆದರ್‌ಲ್ಯಾಂಡ್, ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂ, ತಿರುವನಂತಪುರಂ

ಅಭ್ಯಾಸ ಪಂದ್ಯಗಳು ಯಾವಾಗ? ಎಲ್ಲಿ ನೋಡುವುದು?

ವಿಶ್ವಕಪ್ ಅಭ್ಯಾಸ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಈ ಎಲ್ಲಾ ಪಂದ್ಯಗಳು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ.

ಈ ಎಲ್ಲಾ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ. ಜೊತೆಗೆ ನೀವು ಈ ಅಭ್ಯಾಸ ಪಂದ್ಯಗಳನ್ನು ಹಾಟ್‌ಸ್ಟಾರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಆ ಬಳಿಕ ಅಕ್ಟೋಬರ್ 5 ರಿಂದ ಆರಂಭವಾಗಲಿರುವ ವಿಶ್ವಕಪ್‌ ಪಂದ್ಯಗಳನ್ನೂ ಉಚಿತವಾಗಿ ವೀಕ್ಷಿಸುವ ಅವಕಾಶವನ್ನೂ ಹಾಟ್‌ಸ್ಟಾರ್ ಕಲ್ಪಿಸಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ