logo
ಕನ್ನಡ ಸುದ್ದಿ  /  ಕ್ರಿಕೆಟ್  /  Pakistan Vs Afghanistan: ಐಸಿಸಿ ಏಕದಿನ ವಿಶ್ವಕಪ್ 2023; ಅಫ್ಘಾನಿಸ್ತಾನ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ

Pakistan vs Afghanistan: ಐಸಿಸಿ ಏಕದಿನ ವಿಶ್ವಕಪ್ 2023; ಅಫ್ಘಾನಿಸ್ತಾನ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ

Raghavendra M Y HT Kannada

Oct 23, 2023 02:09 PM IST

google News

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿದೆ.

  • ಚೆನ್ನೈನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಇದು 22ನೇ ಪಂದ್ಯವಾಗಿದೆ. 

ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿದೆ.
ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿದೆ. (Pakistan Cricket X)

ಚೆನ್ನೈ (ತಮಿಳುನಾಡು): ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ (ICC ODI World Cup 2023) ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ (Pakistan vs Afghanistan) ನಡುವಿನ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಬಾಬರ್ ಅಜಮ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಪಾಕಿಸ್ತಾನ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಶಾದಾಬ್ ಖಾನ್ ತಂಡಕ್ಕೆ ವಾಪಸ್ ಆಗಿದ್ದಾರೆ. ಜ್ವರದಿಂದ ಬಳಲುತ್ತಿರುವ ಮೊಹಮ್ಮದ್ ನವಾಜ್ ತಂಡದಿಂದ ಹೊರಗುಳಿದಿದ್ದಾರೆ.

ಅಫ್ಘಾನಿಸ್ತಾನ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದೆ. ನೂರ್ ಅಹ್ಮದ್ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿದ್ದು, ಫಜ್ಹಲಕ್ ಫಾರೂಕಿ ಅವರನ್ನು ಕೂರಿಸಲಾಗಿದೆ. ಟಾಸ್ ಬಳಿಕ ಮಾತನಾಡಿರುವ ಆಫ್ಘಾನ್ ನಾಯಕ ಹಶ್ಮತುಲ್ಲಾ ಶಾಹಿದಿ, ನಾವು ಕೂಡ ಟಾಸ್ ಗೆದ್ದಿದ್ದರೆ ಮೊದಲು ಬ್ಯಾಟಿಂಗ್ ಅನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದೇವು. ಆದರೆ ಟಾಸ್ ನಮ್ಮ ಪರವಾಗಿ ಬರಲಿಲ್ಲ ಎಂದಿದ್ದಾರೆ.

ಪಾಕಿಸ್ತಾನ ಆಡುವ 11ರ ಬಳಗ

ಅಬ್ದುಲ್ಲಾ ಶಫೀಕ್, ಇಮಾಮ್ ಉಲ್ ಹಕ್, ಬಾಬರ್ ಅಜಮ್ (ನಾಯಕ) ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಫ್ರಿಕರ್ ಅಹ್ಮದ್, ಶಾದಾಬ್ ಖಾನ್, ಉಸಾಮಾ ಮಿರ್, ಶಾಹೀನ್ ಅಫ್ರಿದಿ, ಹಸನ್ ಅಲಿ, ಹ್ಯಾರಿಸ್ ರೌಫ್.

ಅಫ್ಘಾನಿಸ್ತಾನ ಆಡುವ 11ರ ಬಳಗ

ರಹಮಾನುಲ್ಲಾ ಗುರ್ಜಾಬ್, ಇಬ್ರಾಹಿಂ ಝದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮುತುಲ್ಲಾ ಒಮರ್ಜಾಯ್‌, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್ ಉಲ್ ಹಕ್, ನೂರ್ ಅಹ್ಮದ್.

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಪಂದ್ಯದ ವಿವರ

ಪಂದ್ಯ: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ, ಐಸಿಸಿ ಪುರುಷರ ವಿಶ್ವಕಪ್ 2023 22ನೇ ಪಂದ್ಯ

ದಿನಾಂಕ: ಅಕ್ಟೋಬರ್ 23, 2023 ಸೋಮವಾರ

ಸಮಯ: ಮಧ್ಯಾಹ್ನ 2 ಗಂಟೆ (ಭಾರತೀಯ ಕಾಲಮಾನ)

ಸ್ಥಳ: ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ