logo
ಕನ್ನಡ ಸುದ್ದಿ  /  ಕ್ರಿಕೆಟ್  /  ಟೀಂ ಇಂಡಿಯಾದ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಅಹಮದಾಬಾದ್‌ಗೆ ಬರ್ತಾರೆ ಪ್ರಧಾನಿ ನರೇಂದ್ರ ಮೋದಿ; ವರದಿ

ಟೀಂ ಇಂಡಿಯಾದ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಅಹಮದಾಬಾದ್‌ಗೆ ಬರ್ತಾರೆ ಪ್ರಧಾನಿ ನರೇಂದ್ರ ಮೋದಿ; ವರದಿ

Raghavendra M Y HT Kannada

Nov 16, 2023 09:50 PM IST

google News

ಏಕದಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ಗೆ ಬರಲಿದ್ದಾರೆ ಎಂದು ವರದಿಯಾಗಿದೆ.

  • ನವೆಂಬರ್ 19 ರಂದು ನಡೆಯಲಿರುವ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ಗೆ ಬರಲಿದ್ದಾರೆ ಎಂದು ವರದಿಯಾಗಿದೆ.

ಏಕದಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ಗೆ ಬರಲಿದ್ದಾರೆ ಎಂದು ವರದಿಯಾಗಿದೆ.
ಏಕದಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ಗೆ ಬರಲಿದ್ದಾರೆ ಎಂದು ವರದಿಯಾಗಿದೆ.

ಅಹಮದಾಬಾದ್ (ಗುಜರಾಜ್): ಐಸಿಸಿ ವಿಶ್ವಕಪ್ ಫೈನಲ್ (ICC ODI World Cup Final) ಪಂದ್ಯಕ್ಕೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೋಡಿಯಂ (Narendra Modi Stadium) ಸಕಲ ರೀತಿಯಲ್ಲಿ ಸಜ್ಜಾಗಿದೆ. ಮುಂಬೈನ ವಾಂಖೆಡೆಯಲ್ಲಿ ನಡೆದಿದ್ದ ನ್ಯೂಜಿಲೆಂಡ್ (New Zealand) ವಿರುದ್ಧದ ಸೆಮಿ ಫೈನಲ್‌ನಲ್ಲಿ 70 ರನ್‌ಗಳಿಂದ ಗೆದ್ದು ಫೈನಲ್ ಪ್ರವೇಶಿಸಿರುವ ಟೀಂ ಇಂಡಿಯಾ (Team India) ಪ್ರಶಸ್ತಿ ಸುತ್ತಿನಲ್ಲಿ ಆಸ್ಟ್ರೇಲಿಯಾ (Australia) ಅಥವಾ ದಕ್ಷಿಣ ಆಫ್ರಿಕಾ (South Africa) ಎರಡು ತಂಡಗಳ ಪೈಕಿ ಯಾರಾಗಲಿದ್ದಾರೆ ತನ್ನ ಎದುರಾಳಿ ಎಂಬುದನ್ನು ಕಾದು ನೋಡುತ್ತಿದೆ. ನವೆಂಬರ್ 19ರ ಭಾನುವಾರ ಫೈನಲ್ ಹಣಾಹಣಿ ನಡೆಯಲಿದೆ.

ಈ ನಡುವೆ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಸದ್ಯದಲ್ಲೇ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ಹೇಳಲಾಗುತ್ತಿದೆ.

ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಅಭಿನಂದನೆ

ಬುಧವಾರ (ನವೆಂಬರ್ 15) ನಡೆದ ವಿಶ್ವಕಪ್ ಮೊದಲ ಸೆಮಿ ಪೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ರೋಹಿತ್ ಅಂಡ್ ಟೀಂ ಭರ್ಜರಿ ಜಯಗಳಿಸಿತ್ತು. ಟೀಂ ಇಂಡಿಯಾವನ್ನು ಪ್ರಧಾನಿ ಮೋದಿ ಅವರು ಅಭಿನಂದಿಸಿದ್ದರು. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ನಮೋ, ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ಪೂರೈಸಿ ಇತಿಹಾಸ ನಿರ್ಮಿಸಿದ ವಿರಾಟ್ ಕೊಹ್ಲಿ ಅವರನ್ನೂ ಅಭಿನಂದಿಸಿದ್ದಾರೆ. ಅಲ್ಲದೆ, ಅದ್ಭುತ ಬೌಲಿಂಗ್ ಮೂಲಕ 7 ವಿಕೆಟ್ ಪಡೆದ ಮೊಹಮ್ಮದ್ ಶಮಿ ಸಾಧನೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದರು.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿನಯಲ್ಲಿ ಇದೇ ವರ್ಷ ನಡೆದಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ಮೋದಿ ಅವರು ಆಗಮಿಸಿದ್ದರು. ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಕೂಡ ಭಾಗವಹಿಸಿದ್ದರು. ಟೆಸ್ಟ್ ಪಂದ್ಯದ ಮೊದಲ ದಿನದಾಟಕ್ಕೆ ಇಬ್ಬರು ಪ್ರಧಾನಿಗಳು ಸಾಕ್ಷಿಯಾಗಿದ್ದರು.

2ನೇ ಸೆಮಿ ಫೈನಲ್‌ನಲ್ಲಿ ಗೆಲ್ಲುವ ತಂಡ ಟೀಂ ಇಂಡಿಯಾ ವಿರುದ್ಧ ಫೈನಲ್ ಫೈಟ್

ಕೋಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಎರಡನೇ ಸೆಮಿ ಫೈನಲ್ ಪಂದ್ಯ ನಡೆಯುತ್ತಿದ್ದು, ಇಲ್ಲಿ ಗೆಲ್ಲುವ ತಂಡ ಟೀಂ ಇಂಡಿಯಾ ವಿರುದ್ಧ ಸೆಮಿ ಫೈನಲ್ ಪಂದ್ಯವನ್ನು ಆಡಲಿದೆ. 2011ರಲ್ಲಿ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಧೋನಿ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದೀಗ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ವಿಶ್ವಕಪ್ ಮುಡಿಗೇರಿಸಿಕೊಳ್ಳಲಿದೆ ಎಂದು ಕೋಟಿ ಕೋಟಿ ಭಾರತೀಯ ನಿರೀಕ್ಷೆಯಾಗಿದೆ.ನವೆಂಬರ್ 19 ರಂದು ಅಹಮದಾಬಾದ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮಾಜಿ ಕ್ರಿಕೆಟರ್ ಎಂಎಸ್ ಧೋನಿ ಅವರು ಕೂಡ ಸಾಕ್ಷಿಯಾಗಲಿದೆ ಎಂದು ವರದಿಯಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ