logo
ಕನ್ನಡ ಸುದ್ದಿ  /  ಕ್ರಿಕೆಟ್  /  Mohammed Shami: ಆಸ್ಟ್ರೇಲಿಯಾ ವಿರುದ್ಧ ಇತಿಹಾಸ ನಿರ್ಮಿಸಿದ ಮೊಹಮ್ಮದ್ ಶಮಿ; 16 ವರ್ಷಗಳ ನಂತರ ಈ ಸಾಧನೆ

Mohammed Shami: ಆಸ್ಟ್ರೇಲಿಯಾ ವಿರುದ್ಧ ಇತಿಹಾಸ ನಿರ್ಮಿಸಿದ ಮೊಹಮ್ಮದ್ ಶಮಿ; 16 ವರ್ಷಗಳ ನಂತರ ಈ ಸಾಧನೆ

Raghavendra M Y HT Kannada

Sep 22, 2023 09:54 PM IST

google News

ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 5 ವಿಕೆಟ್ ಪಡೆದು ಹೊಸ ದಾಖಲೆ ಬರದೆ ಮೊಹಮ್ಮದ ಶಮಿ

  • ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ಮೊಹಾಲಿಯಲ್ಲಿನ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ಓವರ್‌ಗಳಲ್ಲಿ 51 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ. ಈ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ.

ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 5 ವಿಕೆಟ್ ಪಡೆದು ಹೊಸ ದಾಖಲೆ ಬರದೆ ಮೊಹಮ್ಮದ ಶಮಿ
ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 5 ವಿಕೆಟ್ ಪಡೆದು ಹೊಸ ದಾಖಲೆ ಬರದೆ ಮೊಹಮ್ಮದ ಶಮಿ (PTI)

ಮೊಹಾಲಿಯಲ್ಲಿನ (Mohali) ಆಸ್ಟ್ರೇಲಿಯಾ (Australia) ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾd (Team India) ವೇಗದ ಬೌಲರ್ ಮೊಹಮ್ಮದ್ ಶಮಿ (Mohammed Shami) ಅದ್ಭುತ ಪ್ರದರ್ಶನ ನೀಡಿದ್ದಾರೆ.

ಶಮಿ ತಮ್ಮ ಮಾರಕ ಬೌಲಿಂಗ್‌ನಿಂದ ಆಸ್ಟ್ರೇಲಿಯಾದ ಬ್ಯಾಟ್ಸಮನ್‌ಗಳನ್ನು ಕಟ್ಟಿಹಾಕಿದ್ದಾರೆ. ಮೊಹಾಲಿಯಲ್ಲಿ ಶಮಿ 10 ಓವರ್‌ಗಳಲ್ಲಿ 51 ರನ್ ನೀಡಿ 5 ವಿಕೆಟ್ ಪಡೆದು ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. 16 ವರ್ಷಗಳ ನಂತರ ಭಾರತದ ವೇಗದ ಬೌಲರ್ ತವರು ನೆಲದಲ್ಲಿ ಏಕದಿನ ಕ್ರಿಕೆಟ್ 5 ವಿಕೆಟ್‌ಗಳ ಸಾಧನೆ ಮಾಡಿದ್ದಾರೆ.

ಆಸೀಸ್ ಆಟಗಾರರ ಪೆವಿಲಿಯನ್ ಪೆರೇಡ್

ಮೊಹಾಲಿ ಏಕದಿನ ಪಂದ್ಯದಿಂದ ಟೀಂ ಇಂಡಿಯಾದ ಹಲವು ಸ್ಟಾರ್ ಆಟಗಾರರು ಔಟ್ ಆಗಿದ್ದಾರೆ. ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈ ಪಂದ್ಯದಲ್ಲಿ ವಿಶ್ವದ ನಂಬರ್ ಒನ್ ಬೌಲರ್ ಮೊಹಮ್ಮದ್ ಸಿರಾಜ್ ಆಡುವ 11ರ ಬಳಗದಲ್ಲಿ ಸ್ಥಾನ ಪಡೆದಿರಲಿಲ್ಲ. ಸಿರಾಜ್ ಬದಲಾಗಿ ಕಣಕ್ಕಿಳಿದಿದ್ದ ವೇಗಿ ಮೊಹಮ್ಮದ್ ಶಮಿ ಮಾರಕ ದಾಳಿ ನಡೆಸಿದ್ದಾರೆ. ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ಶಾರ್ಟ್ ಮತ್ತು ಶಾನ್ ಅಬಾಟ್ ಅವರನ್ನು ಪಿವಿಲಿಯನ್ ಪೆರೇಡ್ ನಡೆಸುವಂತೆ ಮಾಡಿದರು.

ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ 2ನೇ ಆಟಗಾರ

ಮೊಹಾಲಿಯಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಶಮಿ ಇತಿಹಾಸ ನಿರ್ಮಿಸಿದ್ದಾರೆ. ಶಮಿ ಈಗ ಆಸ್ಟ್ರೇಲಿಯಾ ವಿರುದ್ಧ 37 ಏಕದಿನ ವಿಕೆಟ್‌ಗಳನ್ನು ಪಡೆದಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಪಿಲ್ ದೇವ್ 45 ವಿಕೆಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಮೊಹಮ್ಮದ್ ಶಮಿ ಅವರ ವೃತ್ತಿಜೀವನದ ಅತ್ಯುತ್ತಮ ಸಾಧನೆ

ಮೊಹಮ್ಮದ್ ಶಮಿ ಏಕದಿನ ಕ್ರಿಕೆಟ್‌ನಲ್ಲಿ ಎರಡನೇ ಬಾರಿಗೆ 5 ವಿಕೆಟ್ ಸಾಧನೆ ಮಾಡಿದ್ದಾರೆ. ಈ ಮಾದರಿಯಲ್ಲಿ ಇದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಇದಕ್ಕೂ ಮುನ್ನ 2019ರಲ್ಲಿ ಶಮಿ 69 ರನ್ ನೀಡಿ 5 ವಿಕೆಟ್ ಪಡೆದಿದ್ದರು. ಶಮಿ ಈಗ 93 ಏಕದಿನ ಪಂದ್ಯಗಳಲ್ಲಿ 170 ವಿಕೆಟ್ ಪಡೆದಿದ್ದಾರೆ.

ಟೀಂ ಇಂಡಿಯಾಗೆ 5 ವಿಕೆಟ್‌ಗಳ ಗೆಲುವು

ವಿಶ್ವಕಪ್ 2023ರ ಮಹಾ ಟೂರ್ನಿಗೂ ಮುನ್ನ ಅಂತಿಮ ಕಸರತ್ತು ಎನಿಸಿರುವ ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪ್ಯಾಟ್ ಕಮಿನ್ಸ್ ಪಡೆ 50 ಓವರ್‌ಗಳಲ್ಲಿ 276 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಪಂದ್ಯದಲ್ಲಿ ಶಮಿ 5 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ, ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.

277 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ 48.4 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 281 ರನ್ ಗಳಿಸಿತು. ನಾಯಕ ಕೆಎಲ್ ರಾಹುಲ್ ಗೆಲುವಿನ ಸಿಕ್ಸ್ ಬಾರಿಸಿದರು. ಆರಂಭಿಕರಾದ ರುತುರಾಜ್ ಗಾಯಕ್ವಾಡ್ (71), ಶುಭ್ಮನ್ ಗಿಲ್ (74) ಮುರಿಯದ ಮೊದಲ ವಿಕೆಟ್‌ಗೆ 142 ರನ್‌ಗಳ ಜೊತೆಯಾಟ ನೀಡಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು. ನಾಯಕ ಕೆಎಲ್ ರಾಹುಲ್ 63 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸೇರಿ 58 ರನ್ ಗಳಿಸಿ ಔಟಾಗದೆ ಉಳಿದರು. ಸೂರ್ಯಕುಮಾರ್ ಯಾದವ್ 50 ರನ್ ಗಳಿಸಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ