logo
ಕನ್ನಡ ಸುದ್ದಿ  /  ಕ್ರಿಕೆಟ್  /  ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವ ಸಾಧ್ಯತೆ ಇಲ್ಲ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವ ಸಾಧ್ಯತೆ ಇಲ್ಲ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

Jayaraj HT Kannada

Nov 29, 2024 06:19 PM IST

google News

ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವ ಸಾಧ್ಯತೆ ಇಲ್ಲ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

    • ICC Champions Trophy 2025: ಭದ್ರತಾ ಕಾರಣಗಳಿಂದಾಗಿ ಭಾರತ ತಂಡವು ಗಡಿ ದಾಟಿ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಸಾಧ್ಯತೆಯಿಲ್ಲ ಎಂದು ಬಿಸಿಸಿಐ ಹೇಳಿದೆ. ಇದೀಗ ಬಿಸಿಸಿಐ ಹೇಳಿಕೆಯನ್ನು ಭಾರತೀಯ ವಿದೇಶಾಂಗ ಸಚಿವಾಲಯ ಕೂಡಾ ಉದ್ಘರಿಸಿದೆ.
ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವ ಸಾಧ್ಯತೆ ಇಲ್ಲ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ
ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವ ಸಾಧ್ಯತೆ ಇಲ್ಲ; ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ಪಾಕಿಸ್ತಾನದಲ್ಲಿ ಮುಂದಿನ ವರ್ಷ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಕ್ರಿಕೆಟ್ ತಂಡ ಆಡಲ್ಲ. ಪಾಕ್‌ಗೆ ಭಾರತ ಪ್ರಯಾಣಿಸುವ ಸಾಧ್ಯತೆ ಇಲ್ಲ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ (ನವೆಂಬರ್‌ 29) ತಿಳಿಸಿದೆ. ಅತ್ತ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಆತಿಥ್ಯದ ಕುರಿತು ಐಸಿಸಿ ಇಂದು ನಡೆಸಬೇಕಿದ್ದ ಸಭೆಯು ನಾಳೆಗೆ ಮುಂದೂಡಲಾಗಿದೆ. ಬಿಸಿಸಿಐ ಮತ್ತು ಭಾರತ ಸರ್ಕಾರದ ಹಿತಾಸಕ್ತಿಗೆ ಅನುಗುಣವಾಗಿ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಬಾರದು ಎಂದು ಪಿಸಿಬಿ ಬೇಡಿಕೆ ಇಟ್ಟಿದೆ. ಅಲ್ಲದೆ ಐಸಿಸಿ ಪಂದ್ಯಾವಳಿಯನ್ನು ಹೈಬ್ರಿಡ್ ಸ್ವರೂಪದಲ್ಲಿ ನಡೆಸಬಾರದು ಎಂದು ಅದು ಹೇಳಿದೆ.

ನಿರೀಕ್ಷೆಯ ಪ್ರಕಾರ, ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಸ್ಥಳವನ್ನು ನಿರ್ಧರಿಸಲು ಇಂದು ಐಸಿಸಿ ಬೋರ್ಡ್ ಸಭೆ ನಿರ್ಣಯವಾಗಿತ್ತು. ಆದರೆ, ಸಭೆಯನ್ನು ಮುಂದೂಡಲಾಗಿದೆ. ಕ್ರಿಕ್‌ಬಜ್ ವರದಿ ಪ್ರಕಾರ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ತನ್ನ ನಿಲುವಿನಲ್ಲಿ ದೃಢವಾಗಿದೆ. ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲೇ ಆಯೋಜಿಸುವ ಇರಾದೆಯಲ್ಲಿರುವ ಪಾಕ್‌, ಹೈಬ್ರಿಡ್ ಮಾದರಿಯನ್ನು ತಿರಸ್ಕರಿಸಿದೆ. ಹೈಬ್ರಿಡ್‌ ಮಾದರಿಯಲ್ಲಿ ನಡೆಸುವುದಾದರೆ, ತಾನು ಭಾಗಿಯಾಗಲ್ಲ ಎಂದು ಹೇಳಿದೆ.

ಭಾರತ ಮತ್ತು ಪಾಕಿಸ್ತಾನದ ದೇಶಗಳ ನಡುವಿನ ರಾಜಕೀಯ ಸಂಬಂಧಗಳು ಹದಗೆಟ್ಟ ಕಾರಣ, ಭಾರತವು 2008ರಲ್ಲಿ ಏಷ್ಯಾಕಪ್‌ನಲ್ಲಿ ಭಾಗವಹಿಸಿದ ನಂತರ ಪಾಕಿಸ್ತಾನ ಪ್ರವಾಸ ಕೈಗೊಂಡಿಲ್ಲ. ಸಾಂಪ್ರದಾಯಿಕ ಎದುರಾಳಿಗಳು ಕೊನೆಯ ಬಾರಿಗೆ 2012-13ರಲ್ಲಿ ಭಾರತದಲ್ಲಿ ನಡೆದ ವೈಟ್ ಬಾಲ್ ದ್ವಿಪಕ್ಷೀಯ ಸರಣಿಯಲ್ಲಿ ಆಡಿದ್ದವು. ಅದರ ನಂತರ, ಭಾರತ ಮತ್ತು ಪಾಕಿಸ್ತಾನ ದೇಶಗಳು ಐಸಿಸಿ ಪಂದ್ಯಾವಳಿ ಮತ್ತು ಏಷ್ಯಾ ಕಪ್‌ಗಳಲ್ಲಿ ತಟಸ್ಥ ಸ್ಥಳಗಳಲ್ಲಿ ಮಾತ್ರ ಮುಖಾಮುಖಿಯಾಗಿವೆ. ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ಆಡಲು ಪಾಕಿಸ್ತಾನ ದಶಕದ ಬಳಿಕ ಭಾರತಕ್ಕೆ ಬಂದಿತ್ತು.

ಬಿಸಿಸಿಐ ಹೇಳಿಕೆ ಉಲ್ಲೇಖಿಸಿದ ವಿದೇಶಾಂಗ ಸಚಿವಾಲಯ

ಪಾಕಿಸ್ತಾನದಲ್ಲಿ ಭದ್ರತಾ ಕಾರಣಗಳಿಂದಾಗಿ ಭಾರತ ತಂಡವು ಗಡಿ ದಾಟಿ ಪಾಕಿಸ್ತಾನದಲ್ಲಿ ನಡೆಯಲಿರುವ ಪ್ರಮುಖ ಟೂರ್ನಿಯಲ್ಲಿ ಆಡುವ ಸಾಧ್ಯತೆಯಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿದೆ. ಇದೀಗ, ಬಿಸಿಸಿಐ ಹೇಳಿಕೆಯನ್ನು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಉಲ್ಲೇಖಿಸಿದ್ದಾರೆ.

“ಬಿಸಿಸಿಐ ಈ ಬಗ್ಗೆ ಹೇಳಿಕೆ ನೀಡಿದೆ. ಅಲ್ಲಿ ಭದ್ರತಾ ಕಾಳಜಿಗಳಿವೆ ಎಂದು ಹೇಳಿದ್ದಾರೆ. ಹೀಗಾಗಿ ಭಾರತ ಕ್ರಿಕೆಟ್‌ ತಂಡವು ಅಲ್ಲಿಗೆ ಹೋಗುವ ಸಾಧ್ಯತೆಯಿಲ್ಲ” ಎಂದು ರಣಧೀರ್ ಜೈಸ್ವಾಲ್ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಪಾಕಿಸ್ತಾನದ ಹಠ

ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂಬ ತನ್ನ ನಿಲುವನ್ನು ಭಾರತ ದೃಢವಾಗಿ ಹಿಡಿದಿದೆ. ಭಾರತ ಸರ್ಕಾರ ಹೊರಡಿಸಿದ ನಿರ್ದೇಶನಗಳನ್ನು ಮಂಡಳಿ ಕಟ್ಟುನಿಟ್ಟಾಗಿ ಪಾಲಿಸುತ್ತದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ನಿರಂತರವಾಗಿ ಹೇಳುತ್ತಾ ಬಂದಿದ್ದಾರೆ. ಐಸಿಸಿ ಪಂದ್ಯಾವಳಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸದಿರುವ ಬಗ್ಗೆ ಭಾರತ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದರೂ, ಪಾಕಿಸ್ತಾನವು ತನ್ನ ನಿಲುವಿನಲ್ಲಿ ಹಠಮಾರಿ ಧೋರಣೆ ತೋರುತ್ತಿದೆ. ಹೀಗಾಗಿ ಪಂದ್ಯಾವಳಿಯ ಆತಿಥ್ಯ ಸ್ಥಳ ಇನ್ನೂ ಖಚಿತವಾಗಿಲ್ಲ.

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸುವ ಆಲೋಚನೆಯನ್ನು ತಳ್ಳಿಹಾಕಿದ್ದರು. ಇತ್ತೀಚೆಗೆ, ಪಾಕಿಸ್ತಾನ ಕ್ರಿಕೆಟ್ಗೆ ಉತ್ತಮವಾದದ್ದನ್ನು ಮಾಡಲು ಮಂಡಳಿ ಪ್ರಯತ್ನಿಸುತ್ತಿದೆ ಎಂದು ಅವರು ಭರವಸೆ ನೀಡಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ