logo
ಕನ್ನಡ ಸುದ್ದಿ  /  ಕ್ರಿಕೆಟ್  /  ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ಜೈಂಟ್ಸ್; ಮುಂಬೈ ಇಂಡಿಯನ್ಸ್ ಗೆದ್ದರೆ ಪ್ಲೇಆಫ್​ಗೆ ಲಗ್ಗೆ

ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ಜೈಂಟ್ಸ್; ಮುಂಬೈ ಇಂಡಿಯನ್ಸ್ ಗೆದ್ದರೆ ಪ್ಲೇಆಫ್​ಗೆ ಲಗ್ಗೆ

Prasanna Kumar P N HT Kannada

Mar 09, 2024 07:28 PM IST

ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್

    • MIW vs GGW WPL 2024: ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ಡಬ್ಲ್ಯುಪಿಎಲ್ 16ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 
ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್
ಟಾಸ್ ಜಯಿಸಿ ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್

2ನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್​​ ಲೀಗ್​​​ನ 16ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಉಭಯ ತಂಡಗಳಿಗೂ ಮಹತ್ವವಾಗಿದೆ. ಹರ್ಮನ್ ಪಡೆ ವಿರುದ್ಧ ಕಳೆದ ಪಂದ್ಯದ ಮುಖಾಮುಖಿಯಲ್ಲಿ ಸೋತಿದ್ದ ಗುಜರಾತ್, ಇದೀಗ ಸೇಡಿಗೆ ಸಜ್ಜಾಗಿದೆ.

ಟ್ರೆಂಡಿಂಗ್​ ಸುದ್ದಿ

ಗೆದ್ದು ಅಭಿಯಾನ ಮುಗಿಸಲು ಲಕ್ನೋ-ಮುಂಬೈ ಸಜ್ಜು; ಪ್ಲೇಯಿಂಗ್ XI, ಹವಾಮಾನ ವರದಿ, ಪಿಚ್ ರಿಪೋರ್ಟ್ ಇಲ್ಲಿದೆ

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ಪಾಕಿಸ್ತಾನ ಬಿಟ್ಟು 19 ತಂಡಗಳ ಪಟ್ಟಿ ಪ್ರಕಟ; ಇಲ್ಲಿದೆ ಆಟಗಾರರ ಸಂಪೂರ್ಣ ವಿವರ

Babar Azam: ಜಸ್ಪ್ರೀತ್ ಬುಮ್ರಾ ಅಲ್ವಂತೆ; ನನಗೆ ಈ ಬೌಲರ್ ಎಂದರೆ ಭಯವೆಂದ ಪಾಕಿಸ್ತಾನದ ನಾಯಕ ಬಾಬರ್ ಅಜಮ್

ವಿಶ್ವದ ಅತ್ಯುತ್ತಮ ತಂಡ; ಐರ್ಲೆಂಡ್ ವಿರುದ್ಧ ಪಾಕಿಸ್ತಾನ ಸರಣಿ ಗೆದ್ದ ನಂತರ ತಮ್ಮನ್ನು ತಾವೇ ಹೊಗಳಿಕೊಂಡ ಪಿಸಿಬಿ ಅಧ್ಯಕ್ಷ

ಗುಜರಾತ್​ ತಂಡದಲ್ಲಿ ಎರಡು ಬದಲಾವಣೆ

ಗುಜರಾತ್ ತನ್ನ ತಂಡದಲ್ಲಿ ಎರಡು ಬದಲಾವಣೆ ಮಾಡಿದೆ. ವೇದಾ ಕೃಷ್ಣಮೂರ್ತಿ ಅವರನ್ನು ಈ ಪಂದ್ಯದಿಂದ ಕೈಬಿಡಲಾಗಿದೆ. ಗಾಯಗೊಂಡಿರುವ ಹರ್ಲೀನ್ ಡಿಯೋಲ್ ಬದಲಿಗೆ ಭಾರತಿ ಫುಲ್ಮಾಲಿ ಮತ್ತು ಶಬ್ನಮ್ ಎಂಡಿ ಶಕೀಲ್ ಪ್ಲೇಯಿಂಗ್ ಇಲೆವೆನ್ ಸೇರಿದ್ದಾರೆ. ಆದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.

ಮುಂಬೈ ಗೆದ್ದರೆ ಪ್ಲೇ ಆಫ್​ಗೆ ಲಗ್ಗೆ

ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದರೆ ಪ್ಲೇ ಆಫ್​ಗೆ ಅಧಿಕೃತವಾಗಿ ಪ್ರವೇಶ ಪಡೆಯಲಿದೆ. ಆ ಮೂಲಕ ಎರಡನೇ ಆವೃತ್ತಿಯಲ್ಲೂ ಪ್ಲೇ ಆಫ್​ ಪ್ರವೇಶಿಸಿದ ಮೊದಲ ತಂಡದ ಎನಿಸಿಕೊಳ್ಳಲಿದೆ. ಈಗಾಗಲೇ ಆಡಿದ 6 ಪಂದ್ಯಗಳಲ್ಲಿ 4 ಗೆಲುವು, 2 ಸೋಲು ಕಂಡಿದೆ. ಇನ್ನು ಗುಜರಾತ್ ಈ ಪಂದ್ಯದಲ್ಲೂ ಸೋತರೆ ಅಧಿಕೃತವಾಗಿ ಲೀಗ್​​ನಿಂದ ಹೊರಬೀಳಲಿದೆ. ಜಿಜಿ 5 ಪಂದ್ಯಗಳಲ್ಲಿ 4ರಲ್ಲಿ ಸೋತು, 1ರಲ್ಲಿ ಗೆದ್ದಿದೆ.

ಮೊದಲ ಪಂದ್ಯದ ಫಲಿತಾಂಶ

ಇದೇ ಟೂರ್ನಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ಸಾಧಿಸಿತ್ತು. ಈ ಪಂದ್ಯ ಚಿನ್ನಸ್ವಾಮಿ ಮೈದಾನದಲ್ಲಿ ನಡೆದಿತ್ತು. ಅಂದು ಮೊದಲು ಬ್ಯಾಟಿಂಗ್ ನಡೆಸಿದ್ದ ಗುಜರಾತ್ ಜೈಂಟ್ಸ್ 20 ಓವರ್​​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 129 ರನ್ ಗಳಿಸಿತ್ತು. ಈ ಗುರಿ ಬೆನ್ನಟ್ಟಿದ ಮುಂಬೈ 5 ವಿಕೆಟ್ ನಷ್ಟಕ್ಕೆ 18.1 ಓವರ್​​ಗಳಲ್ಲಿ ಗೆಲುವಿನ ನಗೆ ಬೀರಿತ್ತು.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI)

ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್​), ಹೇಲಿ ಮ್ಯಾಥ್ಯೂಸ್, ನಟಾಲಿ ಸಿವರ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಅಮನ್ಜೋತ್ ಕೌರ್, ಎಸ್ ಸಜನಾ, ಪೂಜಾ ವಸ್ತ್ರಾಕರ್, ಹುಮೈರಾ ಕಾಜಿ, ಶಬ್ನಿಮ್ ಇಸ್ಮಾಯಿಲ್, ಸಾಯಿಕಾ ಇಶಾಕ್.

ಗುಜರಾತ್ ಜೈಂಟ್ಸ್ (ಪ್ಲೇಯಿಂಗ್ XI)

ಲಾರಾ ವೊಲ್ವಾರ್ಡ್ಟ್, ಬೆತ್ ಮೂನಿ (ವಿಕೆಟ್ ಕೀಪರ್​, ನಾಯಕಿ), ಫೋಬೆ ಲಿಚ್‌ಫೀಲ್ಡ್, ಆಶ್ಲೇ ಗಾರ್ಡ್ನರ್, ದಯಾಲನ್ ಹೇಮಲತಾ, ಭಾರತಿ ಫುಲ್ಮಾಲಿ, ಕ್ಯಾಥರಿನ್ ಬ್ರೈಸ್, ಸ್ನೇಹ ರಾಣಾ, ತನುಜಾ ಕನ್ವರ್, ಮೇಘನಾ ಸಿಂಗ್, ಶಬ್ನಮ್ ಎಂಡಿ ಶಕೀಲ್.

ಲೈವ್‌ ಸ್ಟ್ರೀಮಿಂಗ್‌ ವಿವರ

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್‌ ತಂಡಗಳ ನಡುವಿನ ಡಬ್ಲ್ಯೂಪಿಎಲ್‌ ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಇಲ್ಲಿ ಪಂದ್ಯವನ್ನು ಸಂಪೂರ್ಣ ಉಚಿತವಾಗಿ ವೀಕ್ಷಿಸಬಹುದು. ಟಿವಿ ಮೂಲಕ ಸ್ಪೋರ್ಟ್ಸ್ 18 ಚಾನೆಲ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಕ್ರಿಕೆಟ್‌ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

(This copy first appeared in Hindustan Times Kannada website. To read more like this please logon to kannada.hindustantimes.com)

For latest Cricket News, Live Score, IPL stay connected with HT Kannada

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ