logo
ಕನ್ನಡ ಸುದ್ದಿ  /  ಕ್ರಿಕೆಟ್  /  Mohammed Siraj: ಪದಾರ್ಪಣೆ ಪಂದ್ಯದಲ್ಲಿ ಕಳಪೆ ಪ್ರದರ್ಶನ; ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದ ಸಿರಾಜ್ ಕಂಬ್ಯಾಕ್ ಮಾಡಿದ್ದೇ ರೋಚಕ

Mohammed Siraj: ಪದಾರ್ಪಣೆ ಪಂದ್ಯದಲ್ಲಿ ಕಳಪೆ ಪ್ರದರ್ಶನ; ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದ ಸಿರಾಜ್ ಕಂಬ್ಯಾಕ್ ಮಾಡಿದ್ದೇ ರೋಚಕ

Raghavendra M Y HT Kannada

Sep 18, 2023 02:25 PM IST

google News

ಶ್ರೀಲಂಕಾ ವಿರುದ್ಧದ ಏಷ್ಯಾಕಪ್‌ ಫೈನಲ್‌ನಲ್ಲಿ ಪ್ರಮುಖ 6 ವಿಕೆಟ್‌ಗಳನ್ನು ಪಡೆದ ಮೊಹಮ್ಮದ್ ಸಿರಾಜ್

  • ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಪದಾರ್ಪಣೆ ಮಾಡಿದ್ದ ಮೊಹಮ್ಮದ್ ಸಿರಾಜ್ ಅಂದು ವಿಕೆಟ್ ಪಡೆಯುವಲ್ಲಿ ವಿಫಲವಾಗಿದ್ದರು. ಆದರೆ ಏಷ್ಯಾಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾದ ಸೂಪರ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ.

ಶ್ರೀಲಂಕಾ ವಿರುದ್ಧದ ಏಷ್ಯಾಕಪ್‌ ಫೈನಲ್‌ನಲ್ಲಿ ಪ್ರಮುಖ 6 ವಿಕೆಟ್‌ಗಳನ್ನು ಪಡೆದ ಮೊಹಮ್ಮದ್ ಸಿರಾಜ್
ಶ್ರೀಲಂಕಾ ವಿರುದ್ಧದ ಏಷ್ಯಾಕಪ್‌ ಫೈನಲ್‌ನಲ್ಲಿ ಪ್ರಮುಖ 6 ವಿಕೆಟ್‌ಗಳನ್ನು ಪಡೆದ ಮೊಹಮ್ಮದ್ ಸಿರಾಜ್ (PTI)

ಮುಂಬೈ: ಏಷ್ಯಾಕಪ್ 2023 ಟೂರ್ನಿಯ ಫೈನಲ್ (Asia Cup Final 2023) ಪಂದ್ಯದಲ್ಲಿ ಟೀಂ ಇಂಡಿಯಾದ (Team India) ಯುವ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ಶ್ರೀಲಂಕಾ ಬ್ಯಾಟರ್‌ಗಳ ಕಣ್ಣಲ್ಲಿ ನೀರು ತರಿಸಿದ್ದರು. ಮಹತ್ವದ ಕದನದಲ್ಲಿ ಸಿರಾಜ್ 6 ವಿಕೆಟ್ ಪಡೆದು ರೋಹಿತ್ ಪಡೆ ಏಷ್ಯಾಕಪ್ ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರವಹಿಸಿದರು. ಅಲ್ಲದೆ, ಪಂದ್ಯ ಶ್ರೇಷ್ಠ ಗೌರವಕ್ಕೂ ಪಾತ್ರರಾಗಿದ್ದಾರೆ.

ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಮೊಹಮ್ಮದ್ ಸಿರಾಜ್ ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ. ಚೊಚ್ಚಲ ಪಂದ್ಯದಲ್ಲಿ ಕಳಪೆ ಬೌಲಿಂಗ್ ಮಾಡಿದ್ದರು. ಆ ಬಳಿಕವೂ ಈ ವೇಗಿಯ ಮೇಲೆ ಅಂದಿನ ನಾಯಕ ವಿರಾಟ್ ಕೊಹ್ಲಿಗೆ ಈತನ ಮೇಲಿದ್ದ ನಂಬಕೆ ಸ್ವಲ್ಪವೂ ಕಡಿಮೆಯಾಗಿರಲಿಲ್ಲ. ಸಿರಾಜ್ ಕೂಡ ಸಿಕ್ಕ ಅವಕಾಶಗಳನ್ನು ಒಂದೊಂದಾಗಿ ಸದುಪಯೋಗಪಡಿಸಿಕೊಳ್ಳುತ್ತಾ ಬಂದರು.

ಟೀಂ ಇಂಡಿಯಾ 2019ರಲ್ಲಿ ಏಕದಿನ ಸರಣಿ ಆಡಲು ಆಸ್ಟ್ರೇಲಿಯಾಗೆ ತೆರಳಿತ್ತು. ಈ ಪ್ರವಾಸದಲ್ಲಿ ಸಿರಾಜ್ ಕೂಡ ಇದ್ದರು. ಅಡಿಲೇಡ್‌ನಲ್ಲಿ ನಡೆದ ಸರಣಿಯ ಎರಡನೇ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಪದಾರ್ಪಣೆ ಮಾಡಿದರು. ಆದರೆ ಈ ಪಂದ್ಯದಲ್ಲಿ ಹೇಳಿಕೊಳ್ಳುವಂತೆ ಸಾಧನೆ ಮಾಡಲು ಸಾಧ್ಯವಾಗಲಿಲ್ಲ.

ಯುವ ವೇಗಿ 10 ಓವರ್‌ಗಳಲ್ಲಿ 76 ರನ್ ಬಿಟ್ಟುಕೊಟ್ಟರು. ಆದರೆ ಒಂದೇ ಒಂದು ವಿಕೆಟ್‌ ಕೂಡ ಪಡೆಯಲು ಸಾಧ್ಯವಾಗಲಿಲ್ಲ. ಇದಾದ ಬಳಿಕ ಏಕದಿನ ತಂಡದಿಂದ ಹೊರಗುಳಿಯಬೇಕಾಯಿತು. ಸಿರಾಜ್ ಇಷ್ಟಕ್ಕೆ ಸುಮ್ಮನಾಗಲಿಲ್ಲ, ಹತಾಶೆಗೊಳ್ಳದೆ ಕಠಿಣ ಪರಿಶ್ರಮವನ್ನು ಹಾಕಿದರು. ಬೌಲಿಂಗ್‌ನಲ್ಲಿ ಚೆನ್ನಾಗಿ ಅಭ್ಯಾಸ ಮಾಡುವ ಮೂಲಕ ಬೆವರು ಹರಿಸಿದರು. ಡೊಮೆಸ್ಟಿಕ್ ಕ್ರಿಕೆಟ್‌ನಲ್ಲಿ ಆಡಿ ಗಮನ ಸೆಳೆದಿರು.

2019ರಲ್ಲಿ ಕಠಿಣ ದಿನಗಳನ್ನು ಎದುರಿಸಿದ ಸಿರಾಜ್

2019ರ ಅವಧಿಯಲ್ಲಿ ಸಿರಾಜ್‌ ತುಂಬಾ ಸವಾಲಿನ ದಿನಗಳನ್ನು ಎದುರಿಸಿದ್ದಾರೆ. 2020ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ, ತಮ್ಮ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲೇ 5 ವಿಕೆಟ್ ಪಡೆದು ಗಮನ ಸೆಳೆದರು. ಇದಾದ ನಂತರ ಅಂದರೆ 2022ರಲ್ಲಿ ವೆಸ್ಟ್ ಇಂಡೀಸ್‌ ವಿರುದ್ಧದ ಏಕದಿನ ಸರಣಿಯಲ್ಲಿ ಅವಕಾಶ ಪಡೆದರು. ಏಕದಿನ ಕ್ರಿಕೆಟ್‌ನಲ್ಲೂ ವಿಕೆಟ್‌ಗಳನ್ನು ಪಡೆಯುವ ಮೂಲಕ ಸಿರಾಜ್ ತಮ್ಮ ಸಾಮರ್ಥ್ಯವನ್ನು ಸಾಬೀತು ಮಾಡಿದರು. ಆ ಬಳಿಕ ಟೀಂ ಇಂಡಿಯಾದ ಪ್ರಮುಖ ಬೌಲರ್ ಆಗಿ ಹೊರಹೊಮ್ಮಿದ್ದಾರೆ.

29 ವರ್ಷದ ಸಿರಾಜ್ ಇದುವರೆಗೆ 29 ಏಕದಿನ ಪಂದ್ಯಗಳಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದು, ಇದರಲ್ಲಿ 53 ವಿಕೆಟ್‌ಗಳನ್ನು ಪಡೆದಿದ್ದಾರೆ. ಅಲ್ಲದೆ, ವೇಗವಾಗಿ 50 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ. ಈವರೆಗೆ 21 ಟೆಸ್ಟ್ ಪಂದ್ಯಗಳಿಂದ 59 ವಿಕೆಟ್ ಕಬಳಿಸಿದ್ದಾರೆ. ವಿಶೇಷ ಎಂದರೆ ವಿರಾಟ್ ಕೊಹ್ಲಿ ನಂತರ ಇದೀಗ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಸಿರಾಜ್ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೊಹಮ್ಮದ್ ಸಿರಾಜ್ ಭಾರತ ತಂಡದ ಪ್ರಮುಖ ಬೌಲರ್ ಎನಿಸಿಕೊಂಡಿದ್ದಾರೆ. ರೋಹಿತ್ ಪಡೆ ಏಷ್ಯಾಕಪ್ ಎತ್ತಿ ಹಿಡಿಯಲು

ತನ್ನ ಸಾಮರ್ಥ್ಯ ಸಾಬೀತುಪಡಿಸುವಲ್ಲಿ ಸಿರಾಜ್ ಯಶಸ್ವಿ

2023ರ ಏಷ್ಯಾಕಪ್‌ನಲ್ಲಿ ಸಿರಾಜ್ ಮತ್ತೊಮ್ಮೆ ತನ್ನನ್ನು ತಾನು ಸಾಬೀತುಪಡಿಸಿದ್ದಾರೆ. ಸಿರಾಜ್ ಇದುವರೆಗೆ 29 ಏಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಇದರಲ್ಲಿ ಅವರು 53 ವಿಕೆಟ್ ಪಡೆದಿದ್ದಾರೆ.

ಇದೇ ವೇಳೆ ಸಿರಾಜ್ 21 ಟೆಸ್ಟ್ ಪಂದ್ಯಗಳಲ್ಲಿ 59 ವಿಕೆಟ್ ಪಡೆದಿದ್ದಾರೆ. ಪ್ರಮುಖ ವಿಷಯವೆಂದರೆ ವಿರಾಟ್ ಕೊಹ್ಲಿ ನಂತರ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಕೂಡ ಸಿರಾಜ್ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೊಹಮ್ಮದ್ ಸಿರಾಜ್ ಭಾರತ ತಂಡದ ಪ್ರಮುಖ ಬೌಲರ್ ಎನಿಸಿಕೊಂಡಿದ್ದಾರೆ. ಏಷ್ಯಾಕಪ್ ಫೈನಲ್‌ನಲ್ಲಿ ಈ ವೇಗಿ ತೋರಿದ ಪ್ರದರ್ಶನ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಇವರದ್ದೇ ಹೆಚ್ಚು ಚರ್ಚೆಯಾಗುತ್ತಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ