logo
ಕನ್ನಡ ಸುದ್ದಿ  /  ಕ್ರಿಕೆಟ್  /  ಆರಂಭಿಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಟಾಸ್ ಗೆದ್ದ ಬ್ಯಾಟಿಂಗ್ ಆಯ್ದುಕೊಂಡ ಮುಂಬೈ ಇಂಡಿಯನ್ಸ್; ಪ್ಲೇಯಿಂಗ್ Xi ಹೀಗಿದೆ

ಆರಂಭಿಕ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಟಾಸ್ ಗೆದ್ದ ಬ್ಯಾಟಿಂಗ್ ಆಯ್ದುಕೊಂಡ ಮುಂಬೈ ಇಂಡಿಯನ್ಸ್; ಪ್ಲೇಯಿಂಗ್ XI ಹೀಗಿದೆ

Prasanna Kumar P N HT Kannada

Feb 23, 2024 07:53 PM IST

google News

ಆರಂಭಿಕ ಪಂದ್ಯದಲ್ಲಿ ಟಾಸ್ ಗೆದ್ದ ಬ್ಯಾಟಿಂಗ್ ಆಯ್ದುಕೊಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್

    • MIW vs DCW : ವುಮೆನ್ಸ್ ಪ್ರೀಮಿಯರ್ ಲೀಗ್​ನ ಆರಂಭಿಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಆರಂಭಿಕ ಪಂದ್ಯದಲ್ಲಿ ಟಾಸ್ ಗೆದ್ದ ಬ್ಯಾಟಿಂಗ್ ಆಯ್ದುಕೊಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್
ಆರಂಭಿಕ ಪಂದ್ಯದಲ್ಲಿ ಟಾಸ್ ಗೆದ್ದ ಬ್ಯಾಟಿಂಗ್ ಆಯ್ದುಕೊಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್

ಮಹಿಳಾ ಪ್ರೀಮಿಯರ್ ಲೀಗ್ (WPL 2024)​ ಉದ್ಘಾಟನಾ ಪಂದ್ಯದಲ್ಲಿ ಮೆಗ್​ ಲ್ಯಾನಿಂಗ್​ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದ ವಿರುದ್ಧ ಹರ್ಮನ್​ಪ್ರೀತ್ ಕೌರ್ ಮುಂದಾಳತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಹೈವೋಲ್ಟೇಕ್ ಕಾದಾಟಕ್ಕೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನ ಆತಿಥ್ಯ ವಹಿಸಿದೆ.

ಉದ್ಘಾಟನಾ ಪಂದ್ಯದ ಆರಂಭಕ್ಕೂ ಮುನ್ನ ಬಾಲಿವುಡ್ ಸ್ಟಾರ್​ ನಟರಿಂದ ನೃತ್ಯ ಪ್ರದರ್ಶನ ನಡೆಯಿತು. ಶಾರೂಖ್ ಖಾನ್, ವರುಣ್ ಧವನ್, ಕಾರ್ತಿಕ್ ಆರ್ಯನ್, ಟೈಗರ್​ ಶ್ರಾಫ್, ಸಿದ್ಧಾರ್ಥ್ ಮಲ್ಹೋತ್ರಾ, ಶಾಹಿದ್ ಕಪೂರ್ ಅವರು ಪ್ರದರ್ಶನ ನೀಡಿದರು.

ಪಿಚ್ ವರದಿ

ಚಿನ್ನಸ್ವಾಮಿ ಕ್ರೀಡಾಂಗಣದ ಚಿಕ್ಕ ಬೌಂಡರಿಗಳು ಮತ್ತು ಎತ್ತರದ ಪ್ರದೇಶಗಳು ಸೀಮಿತ-ಓವರ್‌ಗಳ ಸ್ವರೂಪಗಳಲ್ಲಿ ಬ್ಯಾಟರ್‌ಗಳಿಗೆ ಸೂಕ್ತವಾದ ವಾತಾವರಣವನ್ನು ಸೃಷ್ಟಿಸುತ್ತವೆ. ಈ ಮೈದಾನದಲ್ಲಿ ದೊಡ್ಡ ಮೊತ್ತದ ಸ್ಕೋರ್​ ಅನ್ನು ನಿರೀಕ್ಷಿಸಬಹುದಾಗಿದೆ. ಆದರೆ ಬೌಲರ್ಸ್ ವಿಕೆಟ್ ಪಡೆಯಲು ಕೊಂಚ ಕಷ್ಟಪಡಬೇಕಾಗುತ್ತದೆ.

ಹವಾಮಾನ ವರದಿ

ಬೆಂಗಳೂರಿನ ಹವಾಮಾನ ಮುನ್ಸೂಚನೆಯು ಆಹ್ಲಾದಕರವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಯಾವುದೇ ಮಳೆಯಿಲ್ಲ. ಅಕ್ಯುವೆದರ್ ಪ್ರಕಾರ, ಕನಿಷ್ಠ ತಾಪಮಾನ ಸುಮಾರು 22 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಗರಿಷ್ಠ ತಾಪಮಾನವು ಸರಿಸುಮಾರು 32 ಡಿಗ್ರಿ ಸೆಲ್ಸಿಯಸ್ ತಲುಪುತ್ತದೆ.

ಮುಖಾಮುಖಿ ದಾಖಲೆ

ಮುಂಬೈ ಮತ್ತು ಡೆಲ್ಲಿ ಮಹಿಳಾ ತಂಡಗಳು ಒಟ್ಟು 3 ಬಾರಿ ಮುಖಾಮುಖಿಯಾಗಿವೆ. ಆದರೆ ಮುಂಬೈ ಲೀಗ್​ನಲ್ಲಿ 1 ಪಂದ್ಯ, ಫೈನಲ್​ನಲ್ಲಿ ಡೆಲ್ಲಿ ಎದುರು ಗೆದ್ದಿದೆ. ಒಂದು ಪಂದ್ಯದಲ್ಲಿ ಮಾತ್ರ ಮೆಗ್​ ಲ್ಯಾನಿಂಗ್ ಪಡೆ, ಅಂಬಾನಿ ಬ್ರಿಗೇಡ್ ಎದುರು ಜಯಿಸಿದೆ.

ಲೈವ್ ಸ್ಟ್ರೀಮಿಂಗ್ ವಿವರ

ಮಹಿಳಾ ಪ್ರೀಮಿಯರ್ ಲೀಗ್ 2024 ರ ಉದ್ಘಾಟನಾ ಪಂದ್ಯವನ್ನು ಜಿಯೋ ಸಿನಿಮಾ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಸ್ಪೋರ್ಟ್ಸ್ 18 ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಈ ಪಂದ್ಯವನ್ನು ಮಾತ್ರವಲ್ಲ, ಟೂರ್ನಿಯನ್ನು ಜಿಯೋ ಸಿನಿಮಾ ಮತ್ತು ಸ್ಪೋರ್ಟ್ಸ್​ 18ನಲ್ಲಿ ವೀಕ್ಷಿಸಬಹುದು.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನಟಾಲಿ ಸೀವರ್, ಹೇಲಿ ಮ್ಯಾಥ್ಯೂಸ್, ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಪೂಜಾ ವಸ್ತ್ರಾಕರ್, ಶಬ್ನಿಮ್ ಇಸ್ಮಾಯಿಲ್, ಎಸ್​ ಸಜನಾ, ಸಾಯಿಕಾ ಇಶಾಕ್, ಕೀರ್ತನಾ ಬಾಲಕೃಷ್ಣನ್.

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ 11

ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಆಲಿಸ್ ಕ್ಯಾಪ್ಸೆ, ತನಿಯಾ ಭಾಟಿಯಾ (ವಿಕೆಟ್ ಕೀಪರ್), ಮರಿಝನ್ನೆ ಕಪ್, ಶಿಖಾ ಪಾಂಡೆ, ಅನ್ನಾಬೆಲ್ ಸದರ್ಲ್ಯಾಂಡ್, ಅರುಂಧತಿ ರೆಡ್ಡಿ, ಮಿನ್ನು ಮಣಿ, ರಾಧಾ ಯಾದವ್.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ