logo
ಕನ್ನಡ ಸುದ್ದಿ  /  ಕ್ರಿಕೆಟ್  /  Ind Vs Sa: ನಿರ್ಣಾಯಕ ಪಂದ್ಯದಲ್ಲಿ ಭಾರತ ಬ್ಯಾಟಿಂಗ್; ಏಕದಿನ ಕ್ರಿಕೆಟ್‌ಗೆ ರಜತ್ ಪಾಟೀದಾರ್ ಪದಾರ್ಪಣೆ

IND vs SA: ನಿರ್ಣಾಯಕ ಪಂದ್ಯದಲ್ಲಿ ಭಾರತ ಬ್ಯಾಟಿಂಗ್; ಏಕದಿನ ಕ್ರಿಕೆಟ್‌ಗೆ ರಜತ್ ಪಾಟೀದಾರ್ ಪದಾರ್ಪಣೆ

Jayaraj HT Kannada

Dec 21, 2023 04:36 PM IST

google News

ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ಕೆ

    • India vs South Africa 3rd ODI: ಸೌತ್ ಆಫ್ರಿಕಾ ವಿರುದ್ಧದ ಅಂತಿಮ ಹಾಗೂ ಮೂರನೇ ಏಕದಿನ ಪಂದ್ಯದಲ್ಲಿ ಯುವ ಬ್ಯಾಟರ್‌ ರಜತ್‌ ಪಾಟೀದಾರ್ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ.
ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ಕೆ
ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ಕೆ (Twitter)

ದಕ್ಷಿಣ ಆಫ್ರಿಕಾ ಮತ್ತು ಭಾರತ (South Africa vs India 3rd ODI) ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಉಭಯ ತಂಗಳು ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದ್ದು, ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ.

ಇಂದಿನ ಪಂದ್ಯದ ಮೂಲಕ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಯುವ ಬ್ಯಾಟರ್‌ ರಜತ್‌ ಪಾಟೀದಾರ್ ಪದಾರ್ಪಣೆ ಮಾಡುತ್ತಿದ್ದಾರೆ. ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಮಿಂಚಿದ್ದ ಆರಂಭಿಕ ಆಟಗಾರ, ಇದೀಗ ಟೀಮ್‌ ಇಂಡಿಯಾ ಪರ ಮಿಂಚುವ ಉತ್ಸಾಹದಲ್ಲಿದ್ದಾರೆ.

ಇದನ್ನೂ ಓದಿ | ಅಗ್ರ ಕ್ರಮಾಂಕದಲ್ಲಿ ಶತಕ ಸಿಡಿಸುವ ಅವಕಾಶ ಹೆಚ್ಚು; ಸಾಯಿ ಸುದರ್ಶನ್ ಪ್ರತಿಭೆ ಕುರಿತು ಸುನಿಲ್ ಗವಾಸ್ಕರ್ ಮಾತು

ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡದಲ್ಲಿ‌ ಎರಡು ಪ್ರಮುಖ ಬದಲಾವಣೆ ಮಾಡಲಾಗಿದೆ. ಎರಡನೇ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಬೆರಳಿಗೆ ಗಾಯ ಮಾಡಿಕೊಂಡಿದ್ದ ರುತುರಾಜ್ ಗಾಯಕ್ವಾಡ್, ಮೂರನೇ ಪಂದ್ಯದಿಂದ ಹೊರಬಿದ್ದಿದ್ದಾರೆ. ಅವರು ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ. ಹೀಗಾಗಿ ಪಾಟೀದಾರ್‌ ಪದಾರ್ಪಣೆ ಮಾಡುತ್ತಿದ್ದಾರೆ. ಇದೇ ವೇಳೆ ಪ್ರಮುಖ ಸ್ಪಿನ್ನರ್‌ ವಿಶ್ರಾಂತಿ ಪಡೆದಿದ್ದು, ಅವರ ಬದಲಿಗೆ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ ಆಡುತ್ತಿದ್ದಾರೆ.

ಮೊದಲ ಏಕದಿನ‌‌ ಪಂದ್ಯದಲ್ಲಿ ಭರ್ಜರಿ 8 ವಿಕೆಟ್‌ಗಳ ಗೆಲುವು‌ ಸಾಧಿಸಿದ್ದ ಭಾರತ, ಡಿಸೆಂಬರ್ 19ರಂದು ನಡೆದ 2ನೇ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಸೋಲನುಭವಿಸಿತು. ಇದೀಗ ಮೂರನೇ ಏಕದಿನ ಪಂದ್ಯ ಗೆದ್ದು 2021-22ರ ಸರಣಿ ಸೋಲಿಗೆ ಸೇಡು ತೀರಿಸುವ ಗುರಿ ಇಟ್ಟುಕೊಂಡಿದೆ.

ಗೆಬರ್ಹಾದ ಸೆಂಟ್ ಜಾರ್ಜ್ ಪಾರ್ಕ್‌ನಲ್ಲಿ ನಡೆದ ಎರಡನೇ ಏಕದಿನದಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ, ಸಾಯಿ ಸುದರ್ಶನ್ (62) ಕೆಎಲ್ ರಾಹುಲ್ (56) ಅರ್ಧಶತಕದ ಹೊರತಾಗಿಯೂ 211 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಸೌತ್ ಆಫ್ರಿಕಾ 42.3 ಓವರ್‌ಗಳಲ್ಲಿ ಗೆದ್ದು‌ ಬೀಗಿತು. ಹೀಗಾಗಿ ಸದ್ಯ ಸರಣಿಯು 1-1 ಅಂತರದಲ್ಲಿ ಸಮಬಲಗೊಂಡಿದೆ.

ಇದನ್ನೂ ಓದಿ | ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್​ ಪಂದ್ಯಕ್ಕೆ ಮಹೂರ್ತ ಫಿಕ್ಸ್; ಎಲ್ಲಿ, ಯಾವಾಗ ನಡೆಯಲಿದೆ ಹೈವೋಲ್ಟೇಜ್​ ಕದನ?

ಭಾರತ ಆಡುವ ಬಳಗ

ಸಂಜು ಸ್ಯಾಮ್ಸನ್, ಸಾಯಿ ಸುದರ್ಶನ್, ರಜತ್ ಪಾಟೀದಾರ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್‌ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅ‌ರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ದಕ್ಷಿಣ ಆಫ್ರಿಕಾ ಆಡುವ ಬಳಗ

ರೀಜಾ ಹೆಂಡ್ರಿಕ್ಸ್, ಟೋನಿ ಡಿ ಜೋರ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್‌ ಕೀಪರ್), ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಕೇಶವ್ ಮಹಾರಾಜ್, ನಾಂದ್ರೆ ಬರ್ಗರ್, ಲಿಜಾದ್ ವಿಲಿಯಮ್ಸ್, ಬ್ಯೂರಾನ್ ಹೆಂಡ್ರಿಕ್ಸ್.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ