logo
ಕನ್ನಡ ಸುದ್ದಿ  /  ಕ್ರಿಕೆಟ್  /  Sanju Samson: ಐರ್ಲೆಂಡ್‌ನಲ್ಲಿ 'ಜೈಲರ್' ವಿಶೇಷ ಪ್ರದರ್ಶನ; ಸಂಜು ಸ್ಯಾಮ್ಸನ್ ಮುಖ್ಯ ಅತಿಥಿ

Sanju Samson: ಐರ್ಲೆಂಡ್‌ನಲ್ಲಿ 'ಜೈಲರ್' ವಿಶೇಷ ಪ್ರದರ್ಶನ; ಸಂಜು ಸ್ಯಾಮ್ಸನ್ ಮುಖ್ಯ ಅತಿಥಿ

HT Kannada Desk HT Kannada

Aug 22, 2023 09:34 AM IST

google News

ಸೂಪರ್ ಸ್ಟಾರ್ ರಜಿನಿಕಾಂತ್ ಅವರೊಂದಿಗೆ ಕ್ರಿಕೆಟರ್ ಸಂಜು ಸ್ಯಾಮ್ಸನ್

  • ತಲೈವಾ ರಜನಿಕಾಂತ್ ಅಭಿನಯದ ಜೈಲರ್ ಸಿನಿಮಾ ವಿಶೇಷ ಪ್ರದರ್ಶನವನ್ನು ಈಚೆಗೆ ಐರ್ಲೆಂಡ್‌ನಲ್ಲಿ ಆಯೋಜಿಸಲಾಗಿತ್ತು. ಕ್ರಿಕೆಟರ್ ಸಂಜು ಸ್ಯಾಮ್ಸನ್ ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದರು. 

ಸೂಪರ್ ಸ್ಟಾರ್ ರಜಿನಿಕಾಂತ್ ಅವರೊಂದಿಗೆ ಕ್ರಿಕೆಟರ್ ಸಂಜು ಸ್ಯಾಮ್ಸನ್
ಸೂಪರ್ ಸ್ಟಾರ್ ರಜಿನಿಕಾಂತ್ ಅವರೊಂದಿಗೆ ಕ್ರಿಕೆಟರ್ ಸಂಜು ಸ್ಯಾಮ್ಸನ್

ಮುಂಬೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅವರ ಜೈಲರ್ (Jailer) ಸಿನಿಮಾದ ಕ್ರೇಜ್ ಐರ್ಲೆಂಡ್‌ಗೆ (Ireland) ತಲುಪಿದ್ದು, ಇಲ್ಲಿ ಏರ್ಪಡಿಸಿದ್ದ ವಿಶೇಷ ಪ್ರದರ್ಶನಕ್ಕೆ ಟೀಂ ಇಂಡಿಯಾದ (Team India) ಆಟಗಾರ ಸಂಜು ಸ್ಯಾಮ್ಸನ್ (Sanju Samson) ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ.

ಸಂಜು ಸ್ಯಾಮ್ಸನ್ ಜೈಲರ್ ಸಿನಿಮಾದ ಸ್ಪೆಷಲ್ ಸ್ಕ್ರೀನಿಂಗ್‌ಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಎಂಬ ಮಾಹಿತಿಯನ್ನು ಐರ್ಲೆಂಡ್‌ನ ಮಾಜಿ ಕ್ರಿಕೆಟರ್ ಹಾಗೂ ಕಾಮೆಂಟೇಟರ್ ನೀಲ್ ಒ ಬ್ರಿಯಾನ್ ಅವರು ಬಹಿರಂಗಪಡಿಸಿದ್ದಾರೆ.

ಆಗಸ್ಟ್ 20 ರಂದು ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಟಿ20 ಪಂದ್ಯದ ವೇಳೆ ಸಂಜು ಸ್ಯಾಮ್ಸನ್ ಬ್ಯಾಟಿಂಗ್‌ ಮಾಡಲು ಕ್ರೀಸ್‌ಗೆ ಬಂದಾಗ ಒ ಬ್ರಿಯಾನ್ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ತಲೈವಾ ರಜನಿಕಾಂತ್ ಅವರ ಕಟ್ಟಾ ಫ್ಯಾನ್ ಆಗಿರುವ ಸಂಜು ಸ್ಯಾಮ್ಸನ್ ಇತ್ತೀಚೆಗೆ ಜೈಲರ್ ಸಿನಿಮಾವನ್ನು ನೋಡಿದ್ದಾರೆ. ಐರ್ಲೆಂಡ್‌ನಲ್ಲಿ ಈ ಸಿನಿಮಾದ ವಿಶೇಷ ಪ್ರದರ್ಶನಕ್ಕೆ ಸಂಜು ಸ್ಯಾಮ್ಸನ್ ಮುಖ್ಯ ಅತಿತಿಯಾಗಿ ಭಾಗವಹಿಸಿದ್ದರು ಅಂತ ಹೇಳಿದ್ದಾರೆ.

ನಾನು ರಜಿನಿಕಾಂತ್ ಅವರ ಕಟ್ಟಾ ಅಭಿಮಾನಿ ಅಂತ ಸಂಜು ಸ್ಯಾಮ್ಸನ್ ಈ ಹಿಂದೆ ಹಲವು ಬಾರಿ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸ್ಯಾಮ್ಸನ್, ರಜಿನಿಕಾಂತ್ ಅವರ ಪ್ರತಿಯೊಂದು ಸಿನಿಮಾವನ್ನು ನೋಡುತ್ತೇನೆ ಎಂಬ ಮಾಹಿತಿಯನ್ನು ತಿಳಿಸಿದ್ದರು. ರಜಿನಿಕಾಂತ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ್ದು, ಆ ಫೋಟೋ ಕೂಡ ಸಖತ್ ವೈರಲ್ ಆಗಿತ್ತು.

ಆಗಸ್ಟ್ 10 ರಂದು ಜೈಲರ್ ಸಿನಿಮಾ ಜಗತ್ತಿನಾದ್ಯಂತ ಬಿಡುಗಡೆಯಾಗಿತ್ತು. ಕೇವಲ 11 ದಿನಗಳಲ್ಲಿ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ಈ ಸಿನಿಮಾದಲ್ಲಿ ಮೋಹನ್ ಲಾಲ್, ಶಿವರಾಜ್ ಕುಮಾರ್ ಮತ್ತು ಜಾಕಿ ಶ್ರಾಫ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಮ್ಯಾ ಕೃಷ್ಣ, ತಮನ್ನಾ ಹಾಗೂ ಸುನೀಲ್ ಪ್ರಮುಖ ಪಾತ್ರಗಳಲ್ಲಿ ನಟೆಸಿದ್ದಾರೆ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಿಸಿದ್ದು, ನೆಲ್ಸನ್ ನಿರ್ದೇಶನ ಮಾಡಿದ್ದಾರೆ

ಇನ್ನ ಸಂಜು ಸ್ಯಾಮ್ಸನ್ ಏಷ್ಯಾ ಕಪ್‌ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ. ಆದರೆ ಮೀಸಲು ಆಟಗಾರನಾಗಿ ತಂಡದ ಜೊತೆಯಲ್ಲಿ ಶ್ರೀಲಂಕಾಗೆ ತೆರಳಲಿದ್ದಾರೆ. ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡದಿರುವುದಕ್ಕೆ ಬಿಸಿಸಿಐ ವಿರುದ್ಧ ಅವರ ಅಭಿಮಾನಿಗಳು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ