logo
ಕನ್ನಡ ಸುದ್ದಿ  /  ಕ್ರಿಕೆಟ್  /  ಹನಿಸಲೂ ಇಲ್ಲ ನೀರು, ಐಪಿಎಲ್​ಗೂ ತಟ್ಟಿದ ಜಲಕಂಟಕ, ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯಗಳು ನಡೆಯೋದೇ ಡೌಟ್

ಹನಿಸಲೂ ಇಲ್ಲ ನೀರು, ಐಪಿಎಲ್​ಗೂ ತಟ್ಟಿದ ಜಲಕಂಟಕ, ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯಗಳು ನಡೆಯೋದೇ ಡೌಟ್

Prasanna Kumar P N HT Kannada

Mar 10, 2024 04:18 PM IST

google News

ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯಗಳು ನಡೆಯೋದೇ ಡೌಟ್

    • Water Crisis in Bengaluru : ಕರ್ನಾಟಕದಲ್ಲಿ ನೀರಿನ ಸಮಸ್ಯೆ ತೀವ್ರವಾಗಿ ತಲೆದೋರಿರುವ ಸಮಯದಲ್ಲಿ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಐಪಿಎಲ್​ನ ಆರ್​ಸಿಬಿ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರ ಮಾಡುವಂತೆ ನೆಟ್ಟಿಗರು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯಗಳು ನಡೆಯೋದೇ ಡೌಟ್
ಬೆಂಗಳೂರಿನಲ್ಲಿ ಆರ್​ಸಿಬಿ ಪಂದ್ಯಗಳು ನಡೆಯೋದೇ ಡೌಟ್

ಸಿಲಿಕಾನ್ ಸಿಟಿ ಬೆಂಗಳೂರು ನಗರವನ್ನು ನೀರಿನ ಸಮಸ್ಯೆ ಹೆಚ್ಚು ಭಾದಿಸತೊಡಗಿದೆ. ಇದು ನಗರಕ್ಕೆ ಮಾತ್ರ ಸೀಮಿತವಾಗಿಲ್ಲ, ಇಡೀ ಕರ್ನಾಟಕವನ್ನೇ ಆವರಿಸಿಕೊಂಡಿದೆ. ಬೇಸಿಗೆಯ ಧಗೆ ಹೆಚ್ಚಾಗಿ ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಇದೀಗ ನೀರಿನ ಸಮಸ್ಯೆಯ ಎಫೆಕ್ಟ್​ ಇಂಡಿಯನ್ ಪ್ರೀಮಿಯರ್​ ಲೀಗ್​-2024 ಮೇಲೂ ಬಿದ್ದಿದೆ.

ರಾಜ್ಯದಲ್ಲಿ ನೀರಿನ ಸಮಸ್ಯೆ ತೀವ್ರವಾಗಿ ತಲೆದೋರಿರುವ ಸಮಯದಲ್ಲಿ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಐಪಿಎಲ್​ನ ಆರ್​ಸಿಬಿ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರ ಮಾಡುವಂತೆ ನೆಟ್ಟಿಗರು ಮತ್ತು ಕನ್ನಡಿಗರು ಸರ್ಕಾಕ್ಕೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಗೊಂಡಿದೆ.

17ನೇ ಆವೃತ್ತಿಯ ಐಪಿಎಲ್​ನ ಮೊದಲ ಹಂತದ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 22ರಿಂದ ಆರಂಭವಾಗಲಿದ್ದು, ಏಪ್ರಿಲ್ 7ರ ತನಕ ನಡೆಯಲಿದೆ. ಲೋಕಸಭಾ ಚುನಾವಣೆ ನಡೆಯುವ ಸಲುವಾಗಿ ಕೇವಲ 21 ಪಂದ್ಯಗಳ ವೇಳಾಪಟ್ಟಿಯನ್ನು ಬಹಿರಂಗಪಡಿಸಲಾಗಿದೆ. ಚುನಾವಣೆ ದಿನಾಂಕ ಘೋಷಿಸಿದ ಬೆನ್ನಲ್ಲೇ ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿ ಪ್ರಕಟವಾಗಲಿದೆ.

ಮೊದಲ ಹಂತದ ವೇಳಾಪಟ್ಟಿ ಪೈಕಿ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೂರು ಪಂದ್ಯಗಳನ್ನಾಡಲಿದೆ. ಮಾರ್ಚ್ 25 ರಂದು, ಮಾರ್ಚ್ 29, ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ. ಪಿಚ್​ ನಿರ್ವಹಣೆಗೆ ಮತ್ತು ಪ್ರತಿ ಪಂದ್ಯಕ್ಕೂ ಸಾವಿರಾರು ಲೀಟರ್​ ನೀರು ಬೇಕಿದೆ.

15 ರಿಂದ 20 ಸಾವಿರ ಲೀಟರ್ ಬೇಕು

ಪಿಚ್​ ನಿರ್ವಹಣೆಗೆ ದಿನಕ್ಕೆ 15 ರಿಂದ 20 ಸಾವಿರ ಲೀಟರ್​​ಗೂ ಅಧಿಕ ನೀರು ಬೇಕಿದೆ. ಈಗಾಗಲೇ ನಗರದಲ್ಲಿ ನೀರಿಗಾಗಿ ಹಾಹಾಕಾರ ಎದುರಾಗಿದೆ. ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಬೇಸಿಗೆ ಆರಂಭಕ್ಕೂ ಮುನ್ನ ಪರಿಸ್ಥಿತಿ ಕೈ ಮೀರಿ ಹೋಗುತ್ತಿದ್ದು, ಮುಂದಿನ ದಿನಗಳಲ್ಲಿ ಸಮಸ್ಯೆಗೆ ಮತ್ತಷ್ಟು ಉಲ್ಭಣಗೊಳ್ಳುತ್ತಿದೆ.

ಹಾಗಾಗಿ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಪಂದ್ಯಗಳನ್ನು ಬೇರೆ ರಾಜ್ಯಗಳಿಗೆ ಸ್ಥಳಾಂತರ ಮಾಡುವಂತೆ ನೆಟ್ಟಿಗರು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರಿಗೆ ಹ್ಯಾಶ್​ಟ್ಯಾಗ್​ ಮಾಡಲಾಗುತ್ತಿದೆ. ನೀರಿನ ಬಿಕ್ಕಟ್ಟಿನಿಂದ ಬೆಂಗಳೂರಿನ ಪಂದ್ಯಗಳನ್ನ ರದ್ದುಗೊಳಿಸಿ ಎಂದಿದ್ದಾರೆ.

ಈ ಹಿಂದೆ ಶಿಫ್ಟ್ ಆಗಿದ್ದವು ಪಂದ್ಯಗಳು

ಈ ಹಿಂದೆ ಮಹಾರಾಷ್ಟ್ರದಲ್ಲಿ ಮುಂಬೈ ಇಂಡಿಯನ್ಸ್ ಪಂದ್ಯಗಳು ಬೇರಡೆ ಸ್ಥಳಾಂತರಗೊಂಡಿದ್ದವು. 2016ರಲ್ಲಿ ಮಹಾರಾಷ್ಟ್ರದಲ್ಲಿ ಭೀಕರ ಬರಗಾಲ ಬಂದಿತ್ತು. ಆಗ ಹೈಕೋರ್ಟ್ ಬೇರೆಡೆಗೆ ಸ್ಥಳಾಂತರ ಮಾಡುವಂತೆ ಆದೇಶ ಹೊರಡಿಸಿತ್ತು. ಹಾಗಾಗಿ 7 ಪಂದ್ಯಗಳನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು. ಇದೀಗ ಬೆಂಗಳೂರಿನ ಆರ್​ಸಿಬಿ ಪಂದ್ಯಗಳನ್ನು ಶಿಫ್ಟ್ ಮಾಡಿದರೂ ಅಚ್ಚರಿ ಇಲ್ಲ.

ಕೆಆರ್‌ಎಸ್‌ನಿಂದ ಹರಿಯುತಿದೆ ಭಾರೀ ನೀರು

ಮಂಡ್ಯ: ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಹಾಹಾಕಾರ ಮಾರ್ಚ್‌ನಲ್ಲಿಯೇ ಶುರುವಾಗಿದೆ. ಹಲವು ಬಡಾವಣೆಗಳಲ್ಲಿ ಸರಿಯಾಗಿ ನೀರು ಬರುತ್ತಿಲ್ಲ ಎನ್ನುವ ಆಕ್ರೋಶದ ದನಿ, ಟ್ಯಾಂಕರ್‌ಗಳನ್ನು ನಿಲ್ಲಿಸಿ ನೀರು ಹರಿಸಿಕೊಳ್ಳುವಂತಹ ಸನ್ನಿವೇಶವೂ ಕಂಡು ಬಂದಿದೆ. ಈ ಕಾರಣದಿಂದಲೇ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದಿಂದ ಬೆಂಗಳೂರು ನಗರದ ಕುಡಿಯುವ ನೀರಿನ ಸರಬರಾಜಿಗೆಂದೇ ಶನಿವಾರದಿಂದಲೇ ನೀರು ಹರಿಸಲಾಗುತ್ತಿದೆ. ಈ ಕುರಿತ ಸಂಪೂರ್ಣ ಸುದ್ದಿಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

 

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ