logo
ಕನ್ನಡ ಸುದ್ದಿ  /  ಕ್ರಿಕೆಟ್  /  ಶುಭ್ಮನ್ ಗಿಲ್ ಔಟ್; ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್​ಗೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11

ಶುಭ್ಮನ್ ಗಿಲ್ ಔಟ್; ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್​ಗೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11

Prasanna Kumar P N HT Kannada

Dec 20, 2024 02:15 PM IST

google News

ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್​ಗೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11

    • India Playing xi vs Australia: ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್​ಗೆ ಭಾರತ ತಂಡದ ಪ್ಲೇಯಿಂಗ್​ 11ನಲ್ಲಿ ಪ್ರಮುಖ ಬದಲಾವಣೆ ಕಾಣುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್​ಗೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11
ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್​ಗೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11

IND vs AUS 4th Test Playing XI: ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಮೆಲ್ಬೋರ್ನ್‌ನಲ್ಲಿ ನಡೆಯಲಿದೆ. 1-1ರಲ್ಲಿ ಸಮಬಲಗೊಂಡಿರುವ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಎರಡು ತಂಡಗಳು ಭರ್ಜರಿ ಕಸರತ್ತು ನಡೆಸುತ್ತಿವೆ. ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ (WTC Final) ತಲುಪಲು ಉಳಿದಿರುವ 2 ಪಂದ್ಯ ಗೆಲ್ಲಲು ಎರಡೂ ತಂಡಗಳಿಗೆ ಅನಿವಾರ್ಯ. ಅದಕ್ಕಾಗಿ ಭಾರತ ತಂಡದ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ ಇದೆ.

ಡಬ್ಲ್ಯುಟಿಸಿ ಫೈನಲ್ ಪ್ರವೇಶಿಸಬೇಕು ಎಂದರೆ, ಟೀಮ್ ಇಂಡಿಯಾ (Team India) ಸಂಪೂರ್ಣ ವಿಫಲವಾದ ತನ್ನ ಬ್ಯಾಟಿಂಗ್‌ನತ್ತ ಗಮನ ಹರಿಸಬೇಕು. ಮೊದಲ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ಜೈಸ್ವಾಲ್ ಶತಕ ಸಿಡಿಸಿ ಗಮನ ಸೆಳೆದರೂ ಉಳಿದ ಪಂದ್ಯಗಳಲ್ಲಿ ಭಾರಿ ನಿರಾಸೆ ಮೂಡಿಸಿದ್ದಾರೆ. ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಕೆಎಲ್ ರಾಹುಲ್, ರವೀಂದ್ರ ಜಡೇಜಾ ಬಿಟ್ಟರೆ ಉಳಿದ ಆಟಗಾರರು ರನ್ ಗಳಿಸಲು ಪರದಾಡುವಂತಾಯಿತು. ಇಂತಹ ಪರಿಸ್ಥಿತಿಯಲ್ಲಿ ಟೀಮ್ ಮ್ಯಾನೇಜ್‌ಮೆಂಟ್, ರೋಹಿತ್‌ಗೆ 4ನೇ ಟೆಸ್ಟ್​ಗೆ ನಲ್ಲಿ ಪ್ಲೇಯಿಂಗ್ ಇಲೆವೆನ್ ಆಯ್ಕೆ ಮಾಡುವುದು ದೊಡ್ಡ ಸವಾಲು.

ಶುಭ್ಮನ್ ಗಿಲ್ ಔಟ್, ಸರ್ಫರಾಜ್/ಧ್ರುವ್ ಜುರೆಲ್ ಇನ್

ಭಾರತದ ಅಗ್ರ ಕ್ರಮಾಂಕ ಹೆಣಗಾಡುತ್ತಿದೆ. ಅದರಲ್ಲೂ ಶುಭ್ಮನ್ ಗಿಲ್ ರನ್ ಗಳಿಸಲು ಪರದಾಡುತ್ತಿದ್ದಾರೆ. 2 ಪಂದ್ಯಗಳಲ್ಲಿ ಕೇವಲ 60 ರನ್ ಸಿಡಿಸಿದ್ದಾರೆ. ಹೀಗಾಗಿ ಅವರನ್ನು ಮುಂದಿನ ಟೆಸ್ಟ್ ಪಂದ್ಯಕ್ಕೆ ಕೈಬಿಡಲು ಮ್ಯಾನೇಜ್​ಮೆಂಟ್ ಚಿಂತಿಸಿದೆ. ಆದರೆ ಆರಂಭಿಕ ಸ್ಥಾನದಿಂದ ಕೆಎಲ್ ರಾಹುಲ್ 3ನೇ ಕ್ರಮಾಂಕಕ್ಕೆ ಕುಸಿಯುವ ಸಾಧ್ಯತೆ ಹೆಚ್ಚಿದೆ. ರೋಹಿತ್​ ಶರ್ಮಾ ಅವರು ಮಧ್ಯಮ ಕ್ರಮಾಂಕದಿಂದ ಅಗ್ರಸ್ಥಾನಕ್ಕೆ ಮರಳಲಿದ್ದಾರೆ ಎನ್ನಲಾಗಿದೆ. ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್​ ಮತ್ತೆ ಇನ್ನಿಂಗ್ಸ್​ ಆರಂಭಿಸಲಿದ್ದಾರೆ. ಆದರೆ ಮಧ್ಯಮ ಕ್ರಮಾಂಕಕ್ಕೆ ಮತ್ತೊಬ್ಬರನ್ನು ಆಯ್ಕೆಯಾಗಲಿದ್ದಾರೆ.

ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಯಾಗಲಿದ್ದರೂ ಶುಭ್ಮನ್ ಗಿಲ್ ಅವರನ್ನು ತಂಡದಿಂದ ಕೈಬಿಡುವುದು ಖಚಿತ ಎಂದು ಹೇಳಲಾಗುತ್ತಿದೆ. ಗಿಲ್ ಬದಲಿಗೆ ಸರ್ಫರಾಜ್ ಖಾನ್ ಅಥವಾ ಧ್ರುವ್ ಜುರೆಲ್ ಆಡುವ 11 ರಲ್ಲಿ ಪ್ರವೇಶಿಸಬಹುದು. ರೋಹಿತ್​ 6ನೇ ಸ್ಥಾನದಲ್ಲಿ ಕೆಟ್ಟ ಪ್ರದರ್ಶನ ನೀಡಿದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಲಾಗಿದೆ. ಉಳಿದಂತೆ ಬದಲಾವಣೆ ಇರುವುದಿಲ್ಲ. ಬೌಲಿಂಗ್ ವಿಭಾಗದಲ್ಲಿ ಸಹ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ ಕಣಕ್ಕಿಳಿಯಲಿದ್ದಾರೆ. ಹಾಗೆ ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ ಆಲ್​ರೌಂಡರ್​​ಗಳಾಗಿ ಕಣಕ್ಕಿಳಿಯಲಿದ್ದಾರೆ.

4ನೇ ಟೆಸ್ಟ್​ಗೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ವಿರಾಚ್ ಕೊಹ್ಲಿ, ರಿಷಭ್ ಪಂತ್, ಸರ್ಫರಾಜ್ ಖಾನ್/ಧ್ರುವ ಜುರೆಲ್, ರವೀಂದ್ರ ಜಡೇಜಾ, ನಿತೀಶ್ ರೆಡ್ಡಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ