logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ಏಷ್ಯನ್ ಗೇಮ್ಸ್‌ ಪದಕಗಳ ಶತಕ, ಕೊಹ್ಲಿ ಶತಕದ ಅರ್ಧಶತಕ; 2023 ಕ್ರೀಡಾಕ್ಷೇತ್ರದಲ್ಲಿ ಭಾರತದ ಟಾಪ್‌ 5 ಸಾಧನೆ

ಏಷ್ಯನ್ ಗೇಮ್ಸ್‌ ಪದಕಗಳ ಶತಕ, ಕೊಹ್ಲಿ ಶತಕದ ಅರ್ಧಶತಕ; 2023 ಕ್ರೀಡಾಕ್ಷೇತ್ರದಲ್ಲಿ ಭಾರತದ ಟಾಪ್‌ 5 ಸಾಧನೆ

Dec 28, 2023 06:00 AM IST

India's greatest sporting achievements in 2023: 2023ರಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಭಾರತದ ಸಾಧನೆ ಏನು? ಈ ಪಟ್ಟಿಯಲ್ಲಿ ಹಲವಾರು ನಿದರ್ಶನಗಳಿವೆ. ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳಲ್ಲಿ ಶತಕ ಸಾಧನೆ ಮಾತ್ರವಲ್ಲದೆ, ಏಕದಿನ ವಿಶ್ವಕಪ್‌ ಫೈನಲ್‌, ವಿರಾಟ್ ಕೊಹ್ಲಿ 50ನೇ ಏಕದಿನ ಶತಕ ಹೀಗೆ ಹಲವಾರು ಉನ್ನತ ಸಾಧನೆಗಳಿವೆ.

  • India's greatest sporting achievements in 2023: 2023ರಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಭಾರತದ ಸಾಧನೆ ಏನು? ಈ ಪಟ್ಟಿಯಲ್ಲಿ ಹಲವಾರು ನಿದರ್ಶನಗಳಿವೆ. ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳಲ್ಲಿ ಶತಕ ಸಾಧನೆ ಮಾತ್ರವಲ್ಲದೆ, ಏಕದಿನ ವಿಶ್ವಕಪ್‌ ಫೈನಲ್‌, ವಿರಾಟ್ ಕೊಹ್ಲಿ 50ನೇ ಏಕದಿನ ಶತಕ ಹೀಗೆ ಹಲವಾರು ಉನ್ನತ ಸಾಧನೆಗಳಿವೆ.
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಅದ್ಭುತ ಯಶಸ್ಸನ್ನು ಸಾಧಿಸಿತು. ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಅತಿ ಹೆಚ್ಚು ಚಿನ್ನ, ಹೆಚ್ಚು ಬೆಳ್ಳಿ ಮತ್ತು ಹೆಚ್ಚು ಕಂಚಿನ ಪದಕಗಳನ್ನು ಗೆದ್ದು ದಾಖಲೆ ಬರೆಯಿತು. ಪದಕ ಗೆಲ್ಲುವ ವಿಚಾರದಲ್ಲಿ ಭಾರತ ತನ್ನ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 28 ಚಿನ್ನ, 38 ಬೆಳ್ಳಿ ಮತ್ತು 41 ಕಂಚು ಸೇರಿದಂತೆ ಒಟ್ಟು 107 ಪದಕಗಳನ್ನು ಗೆದ್ದಿತು. ಇದಕ್ಕೂ ಮುನ್ನ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹೆಚ್ಚು ಪದಕ ಗೆದ್ದ ದಾಖಲೆ 2018ರಲ್ಲಿತ್ತು.
(1 / 6)
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಅದ್ಭುತ ಯಶಸ್ಸನ್ನು ಸಾಧಿಸಿತು. ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಅತಿ ಹೆಚ್ಚು ಚಿನ್ನ, ಹೆಚ್ಚು ಬೆಳ್ಳಿ ಮತ್ತು ಹೆಚ್ಚು ಕಂಚಿನ ಪದಕಗಳನ್ನು ಗೆದ್ದು ದಾಖಲೆ ಬರೆಯಿತು. ಪದಕ ಗೆಲ್ಲುವ ವಿಚಾರದಲ್ಲಿ ಭಾರತ ತನ್ನ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. 2023ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ 28 ಚಿನ್ನ, 38 ಬೆಳ್ಳಿ ಮತ್ತು 41 ಕಂಚು ಸೇರಿದಂತೆ ಒಟ್ಟು 107 ಪದಕಗಳನ್ನು ಗೆದ್ದಿತು. ಇದಕ್ಕೂ ಮುನ್ನ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹೆಚ್ಚು ಪದಕ ಗೆದ್ದ ದಾಖಲೆ 2018ರಲ್ಲಿತ್ತು.(PTI)
ಚಿನ್ನದ ಹುಡುಗ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಸಾಧನೆ ಮಾಡಿದರು. ಇದು ಇತಿಹಾಸ ನಿರ್ಮಿಸಿತು.
(2 / 6)
ಚಿನ್ನದ ಹುಡುಗ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಸಾಧನೆ ಮಾಡಿದರು. ಇದು ಇತಿಹಾಸ ನಿರ್ಮಿಸಿತು.(PTI)
2023ರ ವಿಶ್ವಕಪ್‌ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ವಾಂಖೆಡೆಯಲ್ಲಿ ನಡೆದ ಸೆಮಿಫೈನಲ್‌‌ ಪಂದ್ಯದಲ್ಲಿ ವಿರಾಟ್ 113 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 117 ರನ್‌ ಗಳಿಸಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಅವರ 50ನೇ ಶತಕವಾಗಿದೆ. ವಿರಾಟ್ ಕೊಹ್ಲಿ ಏಕದಿನ ಶತಕಗಳ ಅರ್ಧಶತಕ ಪೂರೈಸಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಭಾರತದ ಕ್ರಿಕೆಟ್‌ ಇತಿಹಾಸದಲ್ಲಿ ಇದು ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ಸಾಧನೆಯಾಗಿದೆ. ಅವರು ಬ್ರೇಕ್‌ ಮಾಡಿದ್ದು, ದಿಗ್ಗಜ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ದಾಖಲೆ.
(3 / 6)
2023ರ ವಿಶ್ವಕಪ್‌ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ವಾಂಖೆಡೆಯಲ್ಲಿ ನಡೆದ ಸೆಮಿಫೈನಲ್‌‌ ಪಂದ್ಯದಲ್ಲಿ ವಿರಾಟ್ 113 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 117 ರನ್‌ ಗಳಿಸಿದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಅವರ 50ನೇ ಶತಕವಾಗಿದೆ. ವಿರಾಟ್ ಕೊಹ್ಲಿ ಏಕದಿನ ಶತಕಗಳ ಅರ್ಧಶತಕ ಪೂರೈಸಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಭಾರತದ ಕ್ರಿಕೆಟ್‌ ಇತಿಹಾಸದಲ್ಲಿ ಇದು ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ಸಾಧನೆಯಾಗಿದೆ. ಅವರು ಬ್ರೇಕ್‌ ಮಾಡಿದ್ದು, ದಿಗ್ಗಜ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ದಾಖಲೆ.(REUTERS)
2023 ರಲ್ಲಿ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ವಿಶ್ವದ ಅತಿ ಹೆಚ್ಚು ಏಕದಿನ ಶತಕಗಳ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದರು.
(4 / 6)
2023 ರಲ್ಲಿ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ವಿಶ್ವದ ಅತಿ ಹೆಚ್ಚು ಏಕದಿನ ಶತಕಗಳ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದರು.(PTI)
ಸ್ಟಾರ್‌ ಬ್ಯಾಡ್ಮಿಂಟನ್‌ ಜೋಡಿಯಾದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ, ಭಾರತೀಯ ಬ್ಯಾಡ್ಮಿಂಟನ್ ರಂಗದ ಧ್ರುವತಾರೆಗಳು. ಶಟ್ಲರ್ ಜೋಡಿ ತಮ್ಮ ಅಮೋಘ ಪ್ರದರ್ಶನದಿಂದ ಮೇಲಿಂದ ಮೇಲೆ ಪ್ರಶಸ್ತಿ ಗೆದ್ದಿದ್ದಾರೆ. BWF ಇತ್ತೀಚೆಗೆ ಬಿಡುಗಡೆಗೊಳಿಸಿದ ಶ್ರೇಯಾಂಕಗಳಲ್ಲಿ ಚಿರಾಗ್-ಸಾತ್ವಿಕ್ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕದಲ್ಲಿದ್ದಾರೆ. ಭಾರತದ ತಾರಾ ಜೋಡಿ ಪ್ರಸ್ತುತ ವಿಶ್ವ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದೆ.
(5 / 6)
ಸ್ಟಾರ್‌ ಬ್ಯಾಡ್ಮಿಂಟನ್‌ ಜೋಡಿಯಾದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ, ಭಾರತೀಯ ಬ್ಯಾಡ್ಮಿಂಟನ್ ರಂಗದ ಧ್ರುವತಾರೆಗಳು. ಶಟ್ಲರ್ ಜೋಡಿ ತಮ್ಮ ಅಮೋಘ ಪ್ರದರ್ಶನದಿಂದ ಮೇಲಿಂದ ಮೇಲೆ ಪ್ರಶಸ್ತಿ ಗೆದ್ದಿದ್ದಾರೆ. BWF ಇತ್ತೀಚೆಗೆ ಬಿಡುಗಡೆಗೊಳಿಸಿದ ಶ್ರೇಯಾಂಕಗಳಲ್ಲಿ ಚಿರಾಗ್-ಸಾತ್ವಿಕ್ ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕದಲ್ಲಿದ್ದಾರೆ. ಭಾರತದ ತಾರಾ ಜೋಡಿ ಪ್ರಸ್ತುತ ವಿಶ್ವ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದೆ.(Hindustan Times)
ರಮೇಶ್ ಬಾಬು ಪ್ರಜ್ಞಾನಂದ ಚೆಸ್‌ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು. ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಜ್ಞಾನಂದ ಅವರು ಚೆಸ್ ವಿಶ್ವಕಪ್‌ನ ಫೈನಲ್‌ನಲ್ಲಿ ಟೈ ಬ್ರೇಕರ್‌ನಲ್ಲಿ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಸೋತರು. ಸಾಕಷ್ಟು ಹೋರಾಟ ನಡೆಸಿದರೂ ಭಾರತೀಯರ ಕನಸು ನನಸಾಗಲಿಲ್ಲ. ವಿಶ್ವದ ನಂಬರ್ ವನ್ ಚೆಸ್ ಆಟಗಾರ ಮತ್ತೆ ಗೆದ್ದರು. ಪ್ರಜ್ಞಾನಂದ ಕೇವಲ 18 ವರ್ಷ ವಯಸ್ಸಿನಲ್ಲೇ ಎರಡನೇ ಭಾರತೀಯರಾಗಿ ಚೆಸ್ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಆಗುವ ಮೂಲಕ ಹೊಸ ಇತಿಹಾಸ ನಿರ್ಮಿಸಿದರು.
(6 / 6)
ರಮೇಶ್ ಬಾಬು ಪ್ರಜ್ಞಾನಂದ ಚೆಸ್‌ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು. ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಜ್ಞಾನಂದ ಅವರು ಚೆಸ್ ವಿಶ್ವಕಪ್‌ನ ಫೈನಲ್‌ನಲ್ಲಿ ಟೈ ಬ್ರೇಕರ್‌ನಲ್ಲಿ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಸೋತರು. ಸಾಕಷ್ಟು ಹೋರಾಟ ನಡೆಸಿದರೂ ಭಾರತೀಯರ ಕನಸು ನನಸಾಗಲಿಲ್ಲ. ವಿಶ್ವದ ನಂಬರ್ ವನ್ ಚೆಸ್ ಆಟಗಾರ ಮತ್ತೆ ಗೆದ್ದರು. ಪ್ರಜ್ಞಾನಂದ ಕೇವಲ 18 ವರ್ಷ ವಯಸ್ಸಿನಲ್ಲೇ ಎರಡನೇ ಭಾರತೀಯರಾಗಿ ಚೆಸ್ ವಿಶ್ವಕಪ್‌ನಲ್ಲಿ ರನ್ನರ್ ಅಪ್ ಆಗುವ ಮೂಲಕ ಹೊಸ ಇತಿಹಾಸ ನಿರ್ಮಿಸಿದರು.

    ಹಂಚಿಕೊಳ್ಳಲು ಲೇಖನಗಳು