logo
ಕನ್ನಡ ಸುದ್ದಿ  /  ಕ್ರಿಕೆಟ್  /  ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ಕುಲ್ದೀಪ್ ಯಾದವ್ ಕೈಬಿಟ್ಟಿದ್ದಕ್ಕೆ ಕಿಡಿಕಾರಿದ ಸುನಿಲ್ ಗವಾಸ್ಕರ್

ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ಕುಲ್ದೀಪ್ ಯಾದವ್ ಕೈಬಿಟ್ಟಿದ್ದಕ್ಕೆ ಕಿಡಿಕಾರಿದ ಸುನಿಲ್ ಗವಾಸ್ಕರ್

Prasanna Kumar P N HT Kannada

Jun 05, 2024 09:12 PM IST

google News

ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ಕುಲ್ದೀಪ್ ಯಾದವ್ ಕೈಬಿಟ್ಟಿದ್ದಕ್ಕೆ ಕಿಡಿಕಾರಿದ ಸುನಿಲ್ ಗವಾಸ್ಕರ್

    • Sunil Gavaskar: ಟಿ20 ವಿಶ್ವಕಪ್​​ 2024 ಟೂರ್ನಿಯಲ್ಲಿ ಐರ್ಲೆಂಡ್ ವಿರುದ್ಧದ ಆರಂಭಿಕ ಪಂದ್ಯದಲ್ಲಿ ಕುಲ್ದೀಪ್ ಯಾದವ್ ಅವರನ್ನು ಭಾರತ ತಂಡದಲ್ಲಿ ಅವಕಾಶ ನೀಡದ್ದಕ್ಕೆ ಸುನಿಲ್ ಗವಾಸ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ಕುಲ್ದೀಪ್ ಯಾದವ್ ಕೈಬಿಟ್ಟಿದ್ದಕ್ಕೆ ಕಿಡಿಕಾರಿದ ಸುನಿಲ್ ಗವಾಸ್ಕರ್
ಐರ್ಲೆಂಡ್ ವಿರುದ್ಧದ ಪಂದ್ಯಕ್ಕೆ ಕುಲ್ದೀಪ್ ಯಾದವ್ ಕೈಬಿಟ್ಟಿದ್ದಕ್ಕೆ ಕಿಡಿಕಾರಿದ ಸುನಿಲ್ ಗವಾಸ್ಕರ್

ನ್ಯೂಯಾರ್ಕ್​​​​ನಲ್ಲಿ ಬುಧವಾರ ಐರ್ಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್​​ನಲ್ಲಿ ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಪ್ರಾರಂಭಿಸಿತು. ಆದಾಗ್ಯೂ, ಫಾರ್ಮ್​​ನಲ್ಲಿರುವ ಸ್ಪಿನ್ನರ್ ಕುಲ್ದೀಪ್ ಯಾದವ್​​​ಗೆ ಅವಕಾಶ ಸಿಗದಿರುವುದು ಅಚ್ಚರಿ ಮೂಡಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಕಾರಣ ಕುಲ್ದೀಪ್ ಅವರನ್ನು ಪ್ರಮುಖ ಸ್ಪಿನ್ನರ್​​ಗಳಲ್ಲಿ ಒಬ್ಬರೆಂದು ಪರಿಗಣಿಸಿ ತಂಡಕ್ಕೆ ಆಯ್ಕೆ ಮಾಡಲಾಗಿತ್ತು. ಆದರೀಗ ಅವರನ್ನೇ ಕೈಬಿಟ್ಟಿದ್ದು ಆಕ್ರೋಶಕ್ಕೆ ಕಾರಣವಾಗಿದೆ. 

ಕುಲ್ದೀಪ್ 2024ರ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ 11 ಪಂದ್ಯಗಳಲ್ಲಿ 16 ವಿಕೆಟ್​ ಉರುಳಿಸಿ ಉತ್ತಮ ಎಕಾನಮಿ ಕಾಪಾಡಿಕೊಂಡಿದ್ದರು. ಬಾಂಗ್ಲಾದೇಶ ವಿರುದ್ಧದ ಟಿ20 ವಿಶ್ವಕಪ್​​ನಲ್ಲಿ ಭಾರತದ ಪರ ಅಭ್ಯಾಸ ಪಂದ್ಯದಲ್ಲೂ ಕಾಣಿಸಿಕೊಂಡಿದ್ದರು. ಆದಾಗ್ಯೂ, ಟೀಮ್ ಮ್ಯಾನೇಜ್ಮೆಂಟ್ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್​ ಸಿಂಗ್ ಮೂವರು ವೇಗದ ದಾಳಿಯನ್ನು ಕಣಕ್ಕಿಳಿಸಿದೆ. ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಇಲೆವೆನ್​​ನಲ್ಲಿ ಇಬ್ಬರು ಸ್ಪಿನ್ನರ್​​ಗಳಾಗಿ ಕಣಕ್ಕಿಳಿದಿದ್ದಾರೆ.

ಸುನಿಲ್ ಗವಾಸ್ಕರ್ ಕೆಂಡ

ಭಾರತದ ಮಾಜಿ ನಾಯಕ ಮತ್ತು ಬ್ಯಾಟಿಂಗ್ ಶ್ರೇಷ್ಠ ಸುನಿಲ್ ಗವಾಸ್ಕರ್ ಅವರು ಕೂಡ ಟೀಮ್ ಮ್ಯಾನೇಜ್​ಮೆಂಟ್ ನಿರ್ಧಾರಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಕುಲ್ದೀಪ್ ಯಾದವ್​ ಐಪಿಎಲ್ ಋತುವಿನಲ್ಲಿ ಪ್ರಭಾವಶಾಲಿ ಪ್ರದರ್ಶನ ನೀಡಿದ್ದರೂ ಅವಕಾಶ ನೀಡದಿರುವುದು ಅಚ್ಚರಿ ಮೂಡಿಸಿದೆ ಎಂದು ಕಿಡಿಕಾರಿದ್ದಾರೆ. ನಿಜವಾಗಲೂ ನನಗೆ ಆಶ್ಚರ್ಯವಾಗಿದೆ. ಐಪಿಎಲ್​​ನಲ್ಲಿ ಕುಲ್ದೀಪ್ ನಿಜವಾಗಿಯೂ ಉತ್ತಮವಾಗಿ ಬೌಲಿಂಗ್ ಮಾಡಿದ್ದರು ಎಂದು ಗವಾಸ್ಕರ್ ನ್ಯೂಯಾರ್ಕ್​ನಲ್ಲಿ ಟಾಸ್ ನಂತರ ಹೇಳಿದ್ದಾರೆ.

ಕುಲ್ದೀಪ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಹೊರಗಿಡುವ ಹಿಂದಿನ ನಿರ್ಧಾರ ಏನೆಂದು ರೋಹಿತ್ ವಿವರಿಸಿಲ್ಲ. ಕಳೆದ ವಾರ ಬಾಂಗ್ಲಾದೇಶ ವಿರುದ್ಧ ಇದೇ ಸ್ಥಳದಲ್ಲಿ ಆಡಿದ ಅಭ್ಯಾಸ ಪಂದ್ಯದ ನಂತರ ತಂಡವು ತನ್ನ ತಂಡದ ಆಯ್ಕೆಯಿಂದ ಪ್ರಯೋಜನ ಪಡೆಯಿತು ಎಂದು ಗವಾಸ್ಕರ್​ ಹೇಳಿದ್ದಾರೆ. ಗವಾಸ್ಕರ್ ಅವರಿಗೆ ಅನೇಕ ಅಭಿಮಾನಿಗಳು ಬೆಂಬಲ ನೀಡಿದ್ದಾರೆ. ಫ್ಯಾನ್ಸ್​​ ಕೂಡ ಆಶ್ಚರ್ಯಚಕಿತರಾಗಿದ್ದಾರೆ.

ರೋಹಿತ್ ಶರ್ಮಾ ಪಡೆ 11 ವರ್ಷಗಳ ಐಸಿಸಿ ಪ್ರಶಸ್ತಿ ಬರ ನೀಗಿಸಲು ಉತ್ಸುಕವಾಗಿದೆ. ಪ್ರಸಕ್ತ ಆವೃತ್ತಿಯ ಗ್ರೂಪ್ ಹಂತದಲ್ಲಿಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯ ಹೊರತುಪಡಿಸಿ ಉಳಿದ ತಂಡಗಳ ವಿರುದ್ದ ಟೀಮ್ ಇಂಡಿಯಾ ಸುಲಭ ಗೆಲುವು ದಾಖಲಿಸುವ ನಿರೀಕ್ಷೆ ಇದೆ. ಪಾಕ್ ಕೊಂಚ ಸ್ಪರ್ಧಾತ್ಮಕ ತೋರಲಿದೆ. 2013ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಭಾರತ ತಂಡ ಕೊನೆಯ ಬಾರಿ ಐಸಿಸಿ ಟ್ರೋಫಿ ಗೆದ್ದಿತ್ತು.

ಭಾರತ ಪ್ಲೇಯಿಂಗ್ XI

ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್​ ಸಿಂಗ್, ಮೊಹಮ್ಮದ್ ಸಿರಾಜ್.

ಐರ್ಲೆಂಡ್ ಪ್ಲೇಯಿಂಗ್ XI

ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಬೆಂಜಮಿನ್ ವೈಟ್.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ