ಕನ್ನಡ ಸುದ್ದಿ  /  ಕ್ರಿಕೆಟ್  /  Team India: ಟೀಂ ಇಂಡಿಯಾ ಚೊಚ್ಚಲ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟಕ್ಕೆ 16 ವರ್ಷ; ಎಂಎಸ್ ಧೋನಿ ನಾಯಕತ್ವದ ಅವಿಸ್ಮರಣೀಯ ಗೆಲುವು ಹೀಗಿತ್ತು

Team India: ಟೀಂ ಇಂಡಿಯಾ ಚೊಚ್ಚಲ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟಕ್ಕೆ 16 ವರ್ಷ; ಎಂಎಸ್ ಧೋನಿ ನಾಯಕತ್ವದ ಅವಿಸ್ಮರಣೀಯ ಗೆಲುವು ಹೀಗಿತ್ತು

Raghavendra M Y HT Kannada

Sep 24, 2023 12:33 PM IST

ಟೀಂ ಇಂಡಿಯಾ ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟಕ್ಕೆ 16 ವರ್ಷ. (ಬಿಸಿಸಿಐ)

  • ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ ಚೊಚ್ಚಲ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡು ಇಂದಿಗೆ 16 ವರ್ಷ. ಕ್ರಿಕೆಟ್ ಇತಿಹಾಸದಲ್ಲಿ 2007ರ ಸೆಪ್ಟೆಂಬರ್ 24 ಎಂದೂ ಮರೆಯಲಾರದ ಅವಿಸ್ಮರಣೀಯ ದಿನ.

ಟೀಂ ಇಂಡಿಯಾ ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟಕ್ಕೆ 16 ವರ್ಷ. (ಬಿಸಿಸಿಐ)
ಟೀಂ ಇಂಡಿಯಾ ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟಕ್ಕೆ 16 ವರ್ಷ. (ಬಿಸಿಸಿಐ)

ಬೆಂಗಳೂರು: ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ (MS Dhoni) ನಾಯಕತ್ವದಲ್ಲಿ ಟೀಂ ಇಂಡಿಯಾ (Team India) ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ (ICC T20 World Cup 2007) ಮುಡಿಗೇರಿಸಿಕೊಂಡು ಇಂದಿಗೆ 16 ವರ್ಷಗಳು.

ಟ್ರೆಂಡಿಂಗ್​ ಸುದ್ದಿ

ಐಪಿಎಲ್ ಪ್ಲೇಆಫ್ ರೇಸ್‌ನಿಂದ ಗುಜರಾತ್ ಔಟ್; ಸಿಎಸ್‌ಕೆ ಅಥವಾ ಆರ್‌ಸಿಬಿ, ಮಳೆಯಿಂದ ಲಾಭ ಯಾರಿಗೆ?

ಐಪಿಎಲ್‌ ತೊರೆದು ತವರಿಗೆ ಮರಳಿದ ವಿಲ್ ಜ್ಯಾಕ್ಸ್, ಬಟ್ಲರ್; ಪ್ಲೇಆಫ್‌ಗೂ ಮುನ್ನ ಆರ್‌ಸಿಬಿ-ರಾಜಸ್ಥಾನಕ್ಕೆ ಭಾರಿ ಹೊಡೆತ

ಡೆಲ್ಲಿ ಕ್ಯಾಪಿಟಲ್ಸ್‌ vs ಲಕ್ನೋ ಸೂಪರ್‌ ಜೈಂಟ್ಸ್‌ ಮಾಡು ಇಲ್ಲವೇ ಮಡಿ ಪಂದ್ಯ: ಸಂಭಾವ್ಯ ತಂಡ, ಡೆಲ್ಲಿ ಪಿಚ್ ಹಾಗೂ ಹವಾಮಾನ ವರದಿ

ವಿಶ್ವಕಪ್ ಬಳಿಕ ಟಿ20 ಸ್ವರೂಪಕ್ಕೆ ರೋಹಿತ್ ಶರ್ಮಾ ವಿದಾಯ; ಹಾರ್ದಿಕ್ ಆಯ್ಕೆಗೆ ಅಚ್ಚರಿಯ ಕಾರಣ ತಿಳಿಸಿದ ವರದಿ

2007ರ ಸೆಪ್ಟೆಂಬರ್ 24 ರಂದು ಐಸಿಸಿ ಟಿ20 ಚೊಚ್ಚಲ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು (Pakistan) 5 ರನ್‌ಗಳಿಂದ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ಮಹೇಂದ್ರ ಸಿಂಗ್ ಧೋನಿ ತಂಡವನ್ನು ಮುನ್ನಡಸಿದರೆ, ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ಯುವರಾಜ್ ಸಿಂಗ್ ಹಾಗೂ ಹರ್ಭಜನ್ ಸಿಂಗ್ ಅವರಂತಹ ಸ್ಟಾರ್ ಆಟಗಾರರು ತಂಡದಲ್ಲಿ ಇದ್ದರು.

ಟೀಂ ಇಂಡಿಯಾದ ಸಾಧನೆಯನ್ನು ಸ್ಮರಿಸಿ ಬಿಸಿಸಿಐ ಪೋಸ್ಟ್

2007ರ ಸೆಪ್ಟೆಂಬರ್ 24 ರಂದು ಭಾರತ ತಂಡವು ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆದ್ದಿತು. ತಮ್ಮ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 5 ರನ್‌ಗಳ ರೋಚಕ ಗೆಲುವು ಸಂಭ್ರಮಿಸಿತು. ಅಲ್ಲದೆ ಚೊಚ್ಚಲ ಟಿ20 ವಿಶ್ವಕಪ್ ಗೆದ್ದ ತಂಡ ಎಂಬ ವಿಶ್ವ ದಾಖಲೆಯನ್ನು ಬರೆಯಿತು.

16 ವರ್ಷಗಳ ಹಿಂದೆ ಸಂಭವಿಸಿದ ಕ್ಷಣವನ್ನು ಆಚರಿಸಲು ಬಿಸಿಸಿಐ, ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ 2007 ಚಾಂಪಿಯನ್ಸ್ ಫೋಟೋ ಪೋಸ್ಟ್ ಮಾಡಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ಕ್ರಿಕೆಟ್ ತಂಡ ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದೆ ಎಂದು ಬರೆದುಕೊಂಡಿದ್ದಾರೆ.

5 ರನ್‌ಗಳ ರೋಚಕ ಗೆಲುವು

ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದ ವಿವರಗಳನ್ನು ನೋಡವುದಾದರೆ ಭಾರತವು ಪಾಕಿಸ್ತಾನವನ್ನು 5 ರನ್‌ಗಳಿಂದ ಸೋಲಿಸಿತು. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಭಾರತ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು.

ಈ ಮಹತ್ವದ ಪಂದ್ಯದಲ್ಲಿ ಗೌತಮ್ ಗಂಭೀರ್ ಅರ್ಧ ಶತಕ ಗಳಿಸಿ ಮಿಂಚಿದರು. 54 ಎಸೆತಗಳನ್ನು ಎದುರಿಸಿದ ಗಂಭೀರ್ 8 ಬೌಂಡರಿ ಹಾಗೂ 2 ಸಿಕ್ಸರ್‌ ಸೇರಿ 75 ರನ್ ಸಿಡಿಸಿ ತಂಡದ ಪರ ಅಗ್ರ ಸ್ಕೋರರ್ ಎನಿಸಿದರು. ಯೂಸಫ್ ಪಠಾಣ್ 15, ರಾಬಿನ್ ಉತ್ತಪ್ಪ 8, ಯುವರಾಜ್ ಸಿಂಗ್ 14, ನಾಯಕ ಧೋನಿ 6, ರೋಹಿತ್ ಶರ್ಮಾ ಔಟಾಗದೆ 30 ಹಾಗೂ ಇರ್ಫಾನ್ ಪಠಾಣ್ ಔಟಾಗದೆ 3 ರನ್ ಗಳಿಸಿದ್ದರು.

ಟೀಂ ಇಂಡಿಯಾ ನೀಡಿದ 158 ರನ್‌ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ 19.3 ಓವರ್‌ಗಳಲ್ಲಿ 152 ರನ್‌ಗಳಿಗೆ ಆಲೌಟ್ ಮಾಡಿತು. ಇರ್ಫಾನ್ ಪಠಾಣ್ 16 ರನ್ ನೀಡಿ ಮೂರು ವಿಕೆಟ್ ಪಡೆದರೆ, ಹರ್ಭಜನ್ ಸಿಂಗ್ 26 ರನ್ ನೀಡಿ 3 ವಿಕೆಟ್ ಪಡೆದರು. ಇರ್ಫಾನ್ ಪಠಾಣ್ ಪಂದ್ಯ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರೆ, ಪಾಕಿಸ್ತಾನದ ಶಾಹೀದ್ ಅಫ್ರಿದಿ ಟೂರ್ಣಿಯ ಶ್ರೇಷ್ಟ ಆಟಗಾರ ಎನಿಸಿದರು.

ಪಂದ್ಯಾವಳಿಯಲ್ಲಿ 10 ತಂಡಗಳು

ಐಸಿಸಿ ಟಿ20 ವಿಶ್ವಕಪ್ 9 ದಿನಗಳ ಕಾಲ ನಡೆಯಿತು. ಈ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಿದ್ದವು. ಈ ಎಲ್ಲಾ ತಂಡಗಳು ವಿಶ್ವಕಪ್‌ನ ಟೂರ್ನಮೆಂಟ್‌ನಲ್ಲಿ ವಿಜೇತರು ಮತ್ತು ರನ್ನರ್ ಅಪ್ ಆಗಿವೆ. ಭಾರತವು ಪ್ರಸ್ತುತ ಐಸಿಸಿ ಟಿ20 ವಿಶ್ವಕಪ್ ಗೆದ್ದ 16 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಫೈನಲ್ ಹಣಾಹಣಿಯಲ್ಲಿ ವಿಶೇಷವಾಗಿ ಪಾಕಿಸ್ತಾನವನ್ನು ಮಣಿಸಿದ್ದನ್ನು ಯಾರೂ ಮರೆಯುವಂತಿಲ್ಲ.

For latest Cricket News, Live Score, IPL stay connected with HT Kannada

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ