ಟಿ20 ವಿಶ್ವಕಪ್‌ಗಾಗಿ ಅಮೆರಿಕ ಹಾರಿದ ವಿರಾಟ್ ಕೊಹ್ಲಿ; ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಲಭ್ಯ
May 31, 2024 10:54 AM IST
ಟಿ20 ವಿಶ್ವಕಪ್‌ಗಾಗಿ ಅಮೆರಿಕ ಹಾರಿದ ವಿರಾಟ್ ಕೊಹ್ಲಿ
- ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಮೆರಿಕಕ್ಕೆ ತೆರಳಿದ್ದಾರೆ. ಇದರೊಂದಿಗೆ ವಿಶ್ವಕಪ್‌ನ ಎಲ್ಲಾ ಪಂದ್ಯಗಳಿಗೆ ಲಭ್ಯವಿರುವ ಸುಳಿವು ನೀಡಿದ್ದಾರೆ.
ಐಸಿಸಿ ಟಿ20 ವಿಶ್ವಕಪ್ (ICC T20 World Cup 2024) ಪಂದ್ಯಾವಳಿಯಲ್ಲಿ ಭಾಗಿಯಾಗಲು ಭಾರತೀಯ ಕ್ರಿಕೆಟ್ ತಂಡದ ಮೊದಲ ಬ್ಯಾಟ್ ಕೆಲವು ದಿನಗಳ ಹಿಂದೆಯೇ ಅಮೆರಿಕಕ್ಕೆ ಹಾರಿತ್ತು. ಭಾರತ ತಂಡದೊಂದಿಗೆ ಆಗ ವಿರಾಟ್ ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ತುಸು ಹೆಚ್ಚುವರಿ ವಿರಾಮ ಪಡೆದಿದ್ದ ಅವರು, ಕೊನೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ಆರ್‌ಸಿಬಿ ಆಟಗಾರ, ಇದೀಗ ತಡವಾಗಿ ಯುನೈಟೆಡ್ ಸ್ಟೇಟ್ಸ್‌ಗೆ ತೆರಳಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಮುಂಚಿತವಾಗಿಯೇ ವಿರಾಟ್ ಟೀಮ್ ಇಂಡಿಯಾ ಸೇರಿಕೊಳ್ಳುವ ಸಾಧ್ಯತೆ ಇದೆ. ಅಮೆರಿಕ ಹಾರುವ ಮೊದಲು ಕೊಹ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.
ಐಪಿಎಲ್ 2024ರಲ್ಲಿ ಆಡಿದ 15 ಪಂದ್ಯಗಳಲ್ಲಿ ಕೊಹ್ಲಿ 741 ರನ್ ಗಳಿಸಿದ್ದರು. ಆರ್‌ಸಿಬಿ ತಂಡವು ಟೂರ್ನಿಯ ಪ್ಲೇಆಫ್ ಹಂತಕ್ಕೆ ಪ್ರವೇಶಿಸಿತ್ತು. ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತ ಪಂದ್ಯದಲ್ಲಿ ಕಿಂಗ್ 33 ರನ್ ಗಳಿಸಿದ್ದರು. ಇದರೊದಿಗೆ ಕೊಹ್ಲಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಎರಡನೇ ಬಾರಿಗೆ ಆರೆಂಜ್ ಕ್ಯಾಪ್ ಪಡೆದರು. ಅದಾದ ಬಳಿಕ ಬಿಸಿಸಿಐ ಅನುಮತಿಯೊಂದಿಗೆ ವಿರಾಮ ಪಡೆದು ತಡವಾಗಿ ತಂಡ ಸೇರುವುದಾಗಿ ಹೇಳಿದ್ದರು.
ಟಿ20 ವಿಶ್ವಕಪ್‌ಗಾಗಿ ಈಗಾಗಲೇ ಭಾರತ ತಂಡದ ಎಲ್ಲಾ ಆಟಗಾರರು ನ್ಯೂಯಾರ್ಕ್‌ನಲ್ಲಿ ಸೇರಿದ್ದಾರೆ. ಮೊದಲ ಬ್ಯಾಚ್‌ನಲ್ಲಿ ಅಮೆರಿಕ ಹೋಗದ ಹಾರ್ದಿಕ್ ಪಾಂಡ್ಯ ಕೂಡಾ, ಗುರುವಾರ ಕ್ಯಾಂಪ್ ಸೇರಿಕೊಂಡಿದ್ದರು. ಇದೀಗ ಭಾರತೀಯ ಶಿಬಿರವನ್ನು ಸೇರಲಿರುವ ಕೊನೆಯ ಆಟಗಾರ ಕೊಹ್ಲಿ.
ಈ ವಾರದ ಆರಂಭದಲ್ಲಿ ತೆರಳಿದ ಮೊದಲ ಬ್ಯಾಚ್‌ನಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಕೊಹ್ಲಿ ಕಾಣಿಸಿಕೊಂಡಿರಲಿಲ್ಲ. ಉಳಿದಂತೆ ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಶಿವಂ ದುಬೆ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ಭಾನುವಾರ ನ್ಯೂಯಾರ್ಕ್ ತಲುಪಿದ್ದರು.
ನ್ಯೂಯಾರ್ಕ್‌ನಲ್ಲಿ ಹೊಸದಾಗಿ ನಿರ್ಮಾಣಗೊಂಡ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ಬಾಂಗ್ಲಾದೇಶ ವಿರುದ್ಧ ಭಾರತವು ಏಕೈಕ ಅಭ್ಯಾಸ ಪಂದ್ಯವನ್ನು ಆಡಲಿದೆ. ಈ ತಾತ್ಕಾಲಿಕ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದೆ. ಹೀಗಾಗಿ ಪಂದ್ಯಕ್ಕೂ ಮುನ್ನ ವಿರಾಟ್ ಅಮೆರಿಕ ತಲುಪುವ ನಿರೀಕ್ಷೆ ಇದೆ.
2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತವು ಗೆಲುವಿನ ಗುರಿ ಹಾಕಿಕೊಂಡಿದೆ. ಹಿರಿಯ ಹಾಗೂ ಅನುಭವಿ ಆಟಗಾರರಾದ ಕೊಹ್ಲಿ ಮತ್ತು ರೋಹಿತ್ ಪಾಲಿಗೆ ಈ ಟೂರ್ನಿ ಪ್ರಮುಖವಾಗಿದೆ. ಐಸಿಸಿ ಟೂರ್ನಿಗಳಲ್ಲಿ ಭಾರತದ ಪ್ರಶಸ್ತಿ ಬರವನ್ನು ನೀಗಿಸಲು ಇವರಿಬ್ಬರಿಗೂ ಬಹುತೇಕ ಕೊನೆಯ ಅವಕಾಶವಾಗಿದೆ. ಮುಂದಿನ ಟಿ20 ವಿಶ್ವಕಪ್ 2026ರಲ್ಲಿ ನಡೆಯಲಿದ್ದು, ಟೂರ್ನಿಗೆ ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆತಿಥ್ಯ ವಹಿಸಲಿವೆ. ಆ ಸಮಯಕ್ಕೆ ನಾಯಕ ರೋಹಿತ್ ಶರ್ಮಾಗೆ 40 ಮತ್ತು ಕೊಹ್ಲಿಗೆ 38 ವರ್ಷ ವಯಸ್ಸಾಗಲಿದೆ.
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)