4ನೇ ಬಾರಿ ಐಸಿಸಿ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾದ ವಿರಾಟ್ ಕೊಹ್ಲಿ; ವಿಶ್ವಕಪ್ ಹೀರೋಗೆ ವಿಶೇಷ ಗೌರವ
Jan 25, 2024 06:55 PM IST
ವಿರಾಟ್ ಕೊಹ್ಲಿ
- Virat Kohli ICC Men's ODI Cricketer of the Year: 2023ನೇ ಸಾಲಿನ ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ. ಇದೇ ವೇಳೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್, ಸರ್ ಗಾರ್ಫೀಲ್ಡ್ ಸೋಬರ್ಸ್ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ.
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಮತ್ತೊಂದು ಗರಿಮೆಗೆ ಪಾತ್ರರಾಗಿದ್ದಾರೆ. 2023ರ ಋತುವಿನ ಐಸಿಸಿ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ (ICC Men's ODI Cricketer of the Year award 2023) ಕಿಂಗ್ ಕೊಹ್ಲಿ ಭಾಜನರಾಗಿದ್ದಾರೆ. 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಅಮೋಘ ಪ್ರದರ್ಶನ ನೀಡಿ, ಸರಣಿ ಶ್ರೇಷ್ಠ ಪ್ರಶಸ್ತಿಯನ್ನೂ ಗೆದ್ದಿದ್ದ ವಿರಾಟ್, ಆತಿಥೇಯ ತಂಡ ಫೈನಲ್ ಪ್ರವೇಶಿಸುವಲ್ಲಿ ನೆರವಾಗಿದ್ದರು. ತವರಿನಲ್ಲಿ ನಡೆದ ಟೂರ್ನಿಯಲ್ಲಿ ಹಲವಾರು ದಾಖಲೆಗಳನ್ನು ನಿರ್ಮಿಸಿದ ಕೊಹ್ಲಿ, ನಾಲ್ಕನೇ ಬಾರಿಗೆ ಐಸಿಸಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಐಸಿಸಿ ವರ್ಷದ ಏಕದಿನ ಕ್ರಿಕೆಟರ್ 2023ರ ಪ್ರಶಸ್ತಿಗೆ ನಾಲ್ವರು ಆಟಗಾರರನ್ನು ನಾಮನಿರ್ದೇಶನ ಮಾಡಲಾಗಿತ್ತು. ಭಾರತದ ವೇಗಿ ವೇಗಿ ಮೊಹಮ್ಮದ್ ಶಮಿ, ಆರಂಭಿಕ ಆಟಗಾರ ಶುಭಮನ್ ಗಿಲ್ ಮತ್ತು ನ್ಯೂಜಿಲ್ಯಾಂಡ್ ತಂಡದ ಡೇರಿಲ್ ಮಿಚೆಲ್ ಅವರನ್ನು ಹಿಂದಿಕ್ಕಿ ಕೊಹ್ಲಿ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
ಭಾರತದ ಪರ 27 ಪಂದ್ಯಗಳಲ್ಲಿ 1377 ರನ್ ಗಳಿಸಿರುವ ಕೊಹ್ಲಿ, 12 ಕ್ಯಾಚ್ ಸಹಿತ 1 ವಿಕೆಟ್ ಕೂಡಾ ಕಬಳಿಸಿದ್ದಾರೆ. 2023ರ ವಿಶ್ವಕಪ್ ಆವೃತ್ತಿಯಲ್ಲಿ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಕೊಹ್ಲಿ ಹೊರಹೊಮ್ಮಿದರು.
ಇದನ್ನೂ ಓದಿ | Video: ಕೋವಿಡ್ ಸೋಂಕಿಗೆ ಒಳಗಾದರೂ ವಿಂಡೀಸ್ ವಿರುದ್ಧ ಆಡಿದ ಕ್ಯಾಮರೂನ್ ಗ್ರೀನ್; ಸಂಭ್ರಮಾಚರಣೆ ವೇಳೆ ಸಾಮಾಜಿಕ ಅಂತರ
ಭಾರತದ ಪರ 27 ಪಂದ್ಯಗಳಲ್ಲಿ 1377 ರನ್ ಗಳಿಸಿರುವ ಕೊಹ್ಲಿ, 12 ಕ್ಯಾಚ್ ಸಹಿತ 1 ವಿಕೆಟ್ ಕೂಡಾ ಕಬಳಿಸಿದ್ದಾರೆ. 2023ರ ವಿಶ್ವಕಪ್ ಆವೃತ್ತಿಯಲ್ಲಿ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಕೊಹ್ಲಿ ಹೊರಹೊಮ್ಮಿದರು.
ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಆಡಿದ ಒಟ್ಟು 11 ಇನ್ನಿಂಗ್ಸ್‌ಗಳಲ್ಲಿ ಒಂಬರಲ್ಲಿ ಕೊಹ್ಲಿ ಅರ್ಧಶತಕಕ್ಕೂ ಅಧಿಕ ರನ್ ಗಳಿಸಿದ್ದಾರೆ. ಅಲ್ಲದೆ ಟೂರ್ನಿಯಲ್ಲಿ ಒಟ್ಟು ಮೂರು ಶತಕ ಸಿಡಿಸಿದರು. ಟೂರ್ನಿಯಲ್ಲಿ ಒಟ್ಟು 765 ರನ್ ಗಳಿಸುವ ಮೂಲಕ, ವಿಶ್ವಕಪ್ ಇತಿಹಾಸದಲ್ಲಿ ಬ್ಯಾಟರ್ ಒಬ್ಬರು ಗಳಿಸಿದ ಗರಿಷ್ಠ ರನ್ ಎಂಬ ದಾಖಲೆ ನಿರ್ಮಿಸಿದರು. ಆ ಮೂಲಕ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದರು. ಏಕದಿನ ಕ್ರಿಕೆಟ್‌ನಲ್ಲಿ 50 ಶತಕಗಳನ್ನು ಬಾರಿಸಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾದರು. ವಿಶ್ವಕಪ್‌ನಲ್ಲಿ ಕೊಹ್ಲಿ ಬರೋಬ್ಬರಿ 95.62 ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದರು.
ಸೂರ್ಯ ಟಿ20 ಕ್ರಿಕೆಟಿಗ
ಚುಟುಕು ಸ್ವರೂಪದ ನಂಬರ್ ವನ್ ಬ್ಯಾಟರ್ ಸೂರ್ಯಕುಮಾರ್ ಯಾದವ್, 2023ರ ಐಸಿಸಿ ಪುರುಷರ ಟಿ20 ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನ್ಯೂಜಿಲ್ಯಾಂಡ್‌ನ ರಚಿನ್ ರವೀಂದ್ರ, ಐಸಿಸಿ ವರ್ಷದ ಉದಯೋನ್ಮುಖ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2023ರ ಋತುವಿನಲ್ಲಿ ಆಸೀಸ್ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿರುವ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್, ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇದನ್ನೂ ಓದಿ | ಆಂಗ್ಲರಿಗೆ ತಿರುಮಂತ್ರವಾದ ಬಜ್‌ಬಾಲ್ ತಂತ್ರ; ಜೈಸ್ವಾಲ್ ಆಕ್ರಮಣಕಾರಿ ಆಟಕ್ಕೆ ಮಂಕಾದ ಇಂಗ್ಲೆಂಡ್, ಮೊದಲ ಟೆಸ್ಟ್‌ನಲ್ಲಿ ಮುನ್ನಡೆ
ಖವಾಜಾ ಟೆಸ್ಟ್ ಕ್ರಿಕೆಟಿಗ
ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಉಸ್ಮಾನ್ ಖವಾಜಾ, ಐಸಿಸಿ 2023ನೇ ಸಾಲಿನ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಟ್ರಾವಿಸ್ ಹೆಡ್, ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮತ್ತು ಇಂಗ್ಲೆಂಡ್‌ನ ಜೋ ರೂಟ್ ಅವರನ್ನು ಹಿಂದಿಕ್ಕಿ ಖವಾಜಾ ಐಸಿಸಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.