ಇಲ್ಲಿದೆ ಏಕದಿನ ವಿಶ್ವಕಪ್ ಪರಿಷ್ಕೃತ ವೇಳಾಪಟ್ಟಿ; ದಿನಾಂಕ, ಸಮಯ ಹಾಗೂ ಆತಿಥ್ಯ ಸ್ಥಳ ಸಹಿತ ಸಂಪೂರ್ಣ ವಿವರ
Sep 23, 2023 03:39 PM IST
ಏಕದಿನ ವಿಶ್ವಕಪ್ 2023 ವೇಳಾಪಟ್ಟಿ
- ICC ODI World Cup 2023 Schedule: ಐಸಿಸಿ ಏಕದಿನ ವಿಶ್ವಕಪ್‌ಗೆ ಜಗತ್ತಿನ 10 ಬಲಿಷ್ಠ ತಂಡಗಳು ಸಜ್ಜಾಗಿವೆ. ಪಂದ್ಯಾವಳಿ ಆರಂಭಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಅದಕ್ಕೂ ಮುನ್ನ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನೊಮ್ಮೆ ನೋಡಿಕೊಳ್ಳಿ.
ಭಾರತದ ಆತಿಥ್ಯದಲ್ಲಿ ನಡೆಯಲಿರುವ 2023ರ ಏಕದಿನ ಕ್ರಿಕೆಟ್ ವಿಶ್ವಕಪ್‌ಗೆ (ICC World Cup 2023)ಗೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 5ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಕಳೆದ ಆವೃತ್ತಿಯ ರನ್ನರ್ ಅಪ್ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ.
ಕಳೆದ ಜುಲೈ 27ರಂದು ಐಸಿಸಿಯು ವಿಶ್ವಕಪ್ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಆ ಬಳಿಕ ವೇಳಾಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದೆ. ವಿಶ್ವಕಪ್‌ನ ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ. ತಂಡಗಳು, ಪಂದ್ಯ ದಿನಾಂಕ, ಸಮಯ ಹಾಗೂ ಸ್ಥಳದ ವಿವರ ಈ ಕೆಳಗಿನಂತಿವೆ.
2023ರ ಏಕದಿನ ವಿಶ್ವಕಪ್ ಸಂಪೂರ್ಣ ವೇಳಾಪಟ್ಟಿ
ಭಾರತದ ಪಂದ್ಯಗಳು ಎಲ್ಲಿಲ್ಲಿ ನಡೆಯಲಿವೆ?
ಭಾರತ ತನ್ನ ಪಂದ್ಯಗಳನ್ನು ಚೆನ್ನೈ, ದೆಹಲಿ, ಅಹಮದಾಬಾದ್, ಪುಣೆ, ಧರ್ಮಶಾಲಾ, ಲಖನೌ, ಮುಂಬೈ, ಕೋಲ್ಕತ್ತಾ, ಬೆಂಗಳೂರು ಮತ್ತು ಅಹಮದಾಬಾದ್ ಮೈದಾನಗಳಲ್ಲಿ ಆಡಲಿದೆ. ಏಕದಿನ ವಿಶ್ವಕಪ್‌ನಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿವೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಬಾರಿಯ ಏಕದಿನ ವಿಶ್ವಕಪ್ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಕಳೆದ ಆವೃತ್ತಿಯ ಫೈನಲಿಸ್ಟ್‌ಗಳಾದ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಭಾಗವಹಿಸಲಿರುವ ಎಲ್ಲಾ 10 ತಂಡಗಳು ಅಂತಿಮ ಹಂತದ ತಯಾರಿ ನಡೆಸುತ್ತಿವೆ. ಟೂರ್ನಿಯ ಫೈನಲ್ ಪಂದ್ಯವು ನವೆಂಬರ್ 19ರಂದು ನಡೆಯಲಿದೆ.