ಪೂರ್ಣ ಪ್ರಮಾಣದ ಐಪಿಎಲ್ ವೇಳಾಪಟ್ಟಿ ಪ್ರಕಟಿಸಿಲ್ಲವೇಕೆ ಬಿಸಿಸಿಐ; ಉಳಿದ ಪಂದ್ಯಗಳ ಶೆಡ್ಯೂಲ್ ಯಾವಾಗ ನಿರೀಕ್ಷಿಸಬಹುದು?
Feb 22, 2024 11:18 PM IST
ಪೂರ್ಣ ಪ್ರಮಾಣದ ಐಪಿಎಲ್ ವೇಳಾಪಟ್ಟಿ ಪ್ರಕಟಿಸಿಲ್ಲವೇಕೆ ಬಿಸಿಸಿಐ
- IPL 2024 : ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಆದರೆ ಬಿಸಿಸಿಐ ಟೂರ್ನಿಯ ಮೊದಲ 21 ಪಂದ್ಯಗಳ ವೇಳಾಪಟ್ಟಿ ಮಾತ್ರ ಬಹಿರಂಗಪಡಿಸಿದೆ. ಏಕೆ? ಇಲ್ಲಿದೆ ಮಾಹಿತಿ.
2024ರ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League 2024) ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ಮಾರ್ಚ್ 22ರಿಂದ ಟೂರ್ನಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆಯಲಿದೆ. ಆರಂಭಿಕ ಪಂದ್ಯಕ್ಕೆ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣವು (ಚೆಪಾಕ್) ಆತಿಥ್ಯ ವಹಿಸಲಿದೆ.
ಆದರೆ, ಬಿಸಿಸಿಐ ಟೂರ್ನಿಯ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಹಿರಂಗಪಡಿಸಿದ್ದು, ಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. ಪ್ಲೇಆಫ್‌ಗಳು, ಫೈನಲ್ ಸೇರಿದಂತೆ ಒಟ್ಟು 74 ಪಂದ್ಯಗಳು ಟೂರ್ನಿಯಲ್ಲಿ ನಡೆಯಲಿವೆ. ಆದರೆ ಮೊದಲ 15 ದಿನಗಳ 21 ಪಂದ್ಯಗಳನ್ನು ಮಾತ್ರ ಪ್ರಕಟಿಸಲಾಗಿದೆ. ಉಳಿದ ಪಂದ್ಯಗಳ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಬಿಸಿಸಿಐ ತಿಳಿಸಿದೆ. ಹಾಗಾದರೆ ಏಕೆ ಪೂರ್ಣ ಐಪಿಎಲ್ 2024 ವೇಳಾಪಟ್ಟಿಯನ್ನು ಪ್ರಕಟಿಸಲಾಗಿಲ್ಲ? ಇಲ್ಲಿದೆ ವಿವರ
ಪೂರ್ಣ ವೇಳಾಪಟ್ಟಿ ಪ್ರಕಟಿಸದಿರಲು ಕಾರಣ ಏನು?
ಏಪ್ರಿಲ್ ಮತ್ತು ಮೇನಲ್ಲಿ ಹಂತ ಹಂತವಾಗಿ ಭಾರತೀಯ ಸಾರ್ವತ್ರಿಕ ಚುನಾವಣೆಗಳು ನಡೆಯುವ ಕಾರಣ, ಆ ದಿನಾಂಕಗಳನ್ನು ನೋಡಿಕೊಂಡು ಉಳಿದ ವೇಳಾಪಟ್ಟಿ ಪ್ರಕಟಿಸಲು ನಿರ್ಧರಿಸಿದೆ. ಭಾರತೀಯ ಚುನಾವಣಾ ಆಯೋಗ ಇನ್ನೂ ಲೋಕಸಭೆ ಚುನಾವಣೆಗೆ ದಿನಾಂಕ ಅಂತಿಮಗೊಳಿಸಿಲ್ಲ. ಚುನಾವಣೆ ದಿನಾಂಕ ಘೋಷಿಸಿದ ಬಳಿಕ ಐಪಿಎಲ್‌ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಲು ತೀರ್ಮಾನಿಸಿದೆ.
ಚುನಾವಣಾ ಆಯೋಗ ಮಾರ್ಚ್ ಮಧ್ಯದಲ್ಲಿ ಮತದಾನದ ದಿನಾಂಕ ಪ್ರಕಟಿಸುವ ನಿರೀಕ್ಷೆಯಿದೆ. ಬಿಸಿಸಿಐ ಈ ರೀತಿಯ ಕ್ರಮ ಕೈಗೊಂಡಿರುವುದು ಇದೇ ಮೊದಲಲ್ಲ. 2019ರಲ್ಲಿ ಭಾರತದಲ್ಲಿ ಸಾರ್ವತ್ರಿಕ ಚುನಾವಣೆಯನ್ನು ಏಳು ಹಂತಗಳಲ್ಲಿ ನಡೆಸಲಾಗಿತ್ತು. ಅಂದು ಸಹ ಬಿಸಿಸಿಐ ಎರಡು ಹಂತಗಳಲ್ಲಿ ಐಪಿಎಲ್ ನಡೆಸಿತ್ತು. ಚುನಾವಣಾ ದಿನಾಂಕ ಘೋಷಣೆಯ ಬಳಿಕ ಎರಡನೇ ಹಂತದ ಐಪಿಎಲ್ ನಡೆದಿತ್ತು.
ಭಾರತದಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಅಗತ್ಯ ಪ್ರೋಟೋಕಾಲ್‌ಗಳು ಮತ್ತು ಸಲಹೆಗಳನ್ನು ಅನುಸರಿಸಿ, ಸರ್ಕಾರ ಮತ್ತು ಭದ್ರತಾ ಏಜೆನ್ಸಿಗಳೊಂದಿಗೆ ನಿಕಟವಾಗಿ ಬಿಸಿಸಿಐ ಕೆಲಸ ಮಾಡುತ್ತಿದೆ. 18ನೇ ಲೋಕಸಭೆ ಚುನಾವಣೆಯ ದಿನಾಂಕ ಘೋಷಿಸಿದ ನಂತರ ಮಂಡಳಿ ಮುಂದಿನ ನಿರ್ಧಾರ ಕೈಗೊಳ್ಳುತ್ತದೆ ಎಂದು ಬಿಸಿಸಿಐ ಪ್ರಕಟಣೆ ಹೊರಡಿಸಿದೆ. ಮುಂಬರುವ ಸಾರ್ವತ್ರಿಕ ಚುನಾವಣೆಗಳ ಹೊರತಾಗಿಯೂ ಪಂದ್ಯಾವಳಿಯನ್ನು ಸ್ಥಳಾಂತರಿಸುವ ಯಾವುದೇ ಉದ್ದೇಶವಿಲ್ಲ ಎಂದು ಹೇಳಿದೆ.
ಐಪಿಎಲ್ ಮೊದಲ ಹಂತದ ವೇಳಾಪಟ್ಟಿ
1. ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು - ಮಾರ್ಚ್ 22 ಚೆನ್ನೈ, ಸಂಜೆ 7:30ಕ್ಕೆ
2. ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 23, ಮೊಹಾಲಿ, ಮಧ್ಯಾಹ್ನ 3:30ಕ್ಕೆ
3. ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ರೈಸರ್ಸ್ ಹೈದರಾಬಾದ್, ಮಾರ್ಚ್ 23, ಕೋಲ್ಕತ್ತಾ, ಸಂಜೆ 7:30ಕ್ಕೆ
4. ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಮಾರ್ಚ್ 24, ಜೈಪುರ ಮಧ್ಯಾಹ್ನ 3:30ಕ್ಕೆ
5. ಗುಜರಾತ್ ಟೈಟಾನ್ಸ್ vs ಮುಂಬೈ ಇಂಡಿಯನ್ಸ್, ಮಾರ್ಚ್ 24, ಅಹಮದಾಬಾದ್, ಸಂಜೆ 7:30ಕ್ಕೆ
6. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್, ಮಾರ್ಚ್ 25, ಬೆಂಗಳೂರು, ಸಂಜೆ 7:30ಕ್ಕೆ
7. ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್, ಮಾರ್ಚ್ 26 ಚೆನ್ನೈ ಸಂಜೆ 7:30ಕ್ಕೆ
8. ಸನ್ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್, ಮಾರ್ಚ್ 27, ಹೈದರಾಬಾದ್, ಸಂಜೆ 7:30ಕ್ಕೆ
9. ಆರ್ಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್, ಮಾರ್ಚ್ 28 ಜೈಪುರ ಸಂಜೆ 7:30ಕ್ಕೆ
10. ರಾಯಲ್ ಚಾಲೆಂಜರ್ಸ್ ಬೆಂಗಳೂರು, vs ಕೋಲ್ಕತ್ತಾ ನೈಟ್ ರೈಡರ್ಸ್, ಮಾರ್ಚ್ 29 ಬೆಂಗಳೂರು ಸಂಜೆ 7:30ಕ್ಕೆ
11. ಲಕ್ನೋ ಸೂಪರ್ ಜೈಂಟ್ಸ್ vs ಪಂಜಾಬ್ ಕಿಂಗ್ಸ್, ಮಾರ್ಚ್ 30, ಲಕ್ನೋ, ಸಂಜೆ 7:30ಕ್ಕೆ
12. ಗುಜರಾತ್ ಟೈಟಾನ್ಸ್ vs ಸನ್ರೈಸರ್ಸ್ ಹೈದರಾಬಾದ್, ಮಾರ್ಚ್ 31, ಅಹಮದಾಬಾದ್, ಮಧ್ಯಾಹ್ನ 3:30ಕ್ಕೆ
13. ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಮಾರ್ಚ್ 31, ವಿಶಾಖಪಟ್ಟಣಂ, ಸಂಜೆ 7:30ಕ್ಕೆ
14. ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್, ಏಪ್ರಿಲ್ 1, ಮುಂಬೈ, ಸಂಜೆ 7:30ಕ್ಕೆ
15. ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ ಜೈಂಟ್ಸ್, ಏಪ್ರಿಲ್ 2 ಬೆಂಗಳೂರು ಸಂಜೆ 7:30ಕ್ಕೆ
16. ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಏಪ್ರಿಲ್ 3, ವಿಶಾಖಪಟ್ಟಣಂ ಸಂಜೆ 7:30ಕ್ಕೆ
17. ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್, ಏಪ್ರಿಲ್ 4 ಅಹಮದಾಬಾದ್ ಸಂಜೆ 7:30ಕ್ಕೆ
18. ಸನ್ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್, ಏಪ್ರಿಲ್ 5 ಹೈದರಾಬಾದ್ ಸಂಜೆ 7:30ಕ್ಕೆ
19. ರಾಜಸ್ಥಾನ್ ರಾಯಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಏಪ್ರಿಲ್ 6 ಜೈಪುರ ಸಂಜೆ 7:30ಕ್ಕೆ
20. ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್, ಏಪ್ರಿಲ್ 7 ಮುಂಬೈ, ಮಧ್ಯಾಹ್ನ 3:30ಕ್ಕೆ
21. ಲಕ್ನೋ ಸೂಪರ್ ಜೈಂಟ್ಸ್ vs ಗುಜರಾತ್ ಟೈಟಾನ್ಸ್, ಏಪ್ರಿಲ್ 7 ಲಕ್ನೋ ಸಂಜೆ 7:30ಕ್ಕೆ