logo
ಕನ್ನಡ ಸುದ್ದಿ  /  ಫೋಟೋ ಗ್ಯಾಲರಿ  /  ವಿವಿಧ ನಗರಗಳಲ್ಲಿ ಡಬ್ಲ್ಯೂಪಿಎಲ್ ಆಯೋಜನೆಗೆ ಚಿಂತನೆ; ಮುಂಬೈ ಜೊತೆಗೆ ಬೆಂಗಳೂರು ಫೇವರೆಟ್ ತಾಣ

ವಿವಿಧ ನಗರಗಳಲ್ಲಿ ಡಬ್ಲ್ಯೂಪಿಎಲ್ ಆಯೋಜನೆಗೆ ಚಿಂತನೆ; ಮುಂಬೈ ಜೊತೆಗೆ ಬೆಂಗಳೂರು ಫೇವರೆಟ್ ತಾಣ

Dec 07, 2023 12:52 PM IST

WPL 2024: ವಿಮೆನ್ಸ್ ಪ್ರೀಮಿಯರ್ ಲೀಗ್ (WPL)ನ ಎರಡನೇ ಆವೃತ್ತಿಯನ್ನು ಐಪಿಎಲ್‌ ಮಾದರಿಯಲ್ಲಿಯೇ ಒಂದಕ್ಕಿಂತ ಹೆಚ್ಚು ನಗರಗಳಲ್ಲಿ ನಡೆಸುವ ಸಾಧ್ಯತೆಯಿದೆ. ವಿವಿಧ ನಗರಗಳಲ್ಲಿ ಪಂದ್ಯಗಳನ್ನು ಆಯೋಜಿಸುವಂತೆ ಬಿಸಿಸಿಐಗೆ ಒತ್ತಾಯ ಮಾಡಲಾಗುತ್ತಿದೆ. ಅದರಂತೆಯೇ ಮುಂಬೈ ಜೊತೆಗೆ ಬೆಂಗಳೂರಿನಲ್ಲೂ ಪಂದ್ಯಗಳನ್ನು ನಡೆಸುವ ಸಾಧ್ಯತೆ ಇದೆ.

  • WPL 2024: ವಿಮೆನ್ಸ್ ಪ್ರೀಮಿಯರ್ ಲೀಗ್ (WPL)ನ ಎರಡನೇ ಆವೃತ್ತಿಯನ್ನು ಐಪಿಎಲ್‌ ಮಾದರಿಯಲ್ಲಿಯೇ ಒಂದಕ್ಕಿಂತ ಹೆಚ್ಚು ನಗರಗಳಲ್ಲಿ ನಡೆಸುವ ಸಾಧ್ಯತೆಯಿದೆ. ವಿವಿಧ ನಗರಗಳಲ್ಲಿ ಪಂದ್ಯಗಳನ್ನು ಆಯೋಜಿಸುವಂತೆ ಬಿಸಿಸಿಐಗೆ ಒತ್ತಾಯ ಮಾಡಲಾಗುತ್ತಿದೆ. ಅದರಂತೆಯೇ ಮುಂಬೈ ಜೊತೆಗೆ ಬೆಂಗಳೂರಿನಲ್ಲೂ ಪಂದ್ಯಗಳನ್ನು ನಡೆಸುವ ಸಾಧ್ಯತೆ ಇದೆ.
ಮಹಿಳಾ ಪ್ರೀಮಿಯರ್ ಲೀಗ್ (WPL) ನ ಎರಡನೇ ಆವೃತ್ತಿಯನ್ನು ಐಪಿಎಲ್‌ನಂತೆಯೇ ಮಲ್ಟಿ ಸಿಟಿ (ಒಂದಕ್ಕಿಂತ ಹೆಚ್ಚು ನಗರ) ಸ್ವರೂಪದಲ್ಲಿ ಆಯೋಜಿಸುವ ಸಾಧ್ಯತೆಯಿದೆ. ಪಂದ್ಯಗಳನ್ನು ಮುಂಬೈ ಮತ್ತು ಬೆಂಗಳೂರಿನಾದ್ಯಂತ ಆಡಿಸುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ.
(1 / 9)
ಮಹಿಳಾ ಪ್ರೀಮಿಯರ್ ಲೀಗ್ (WPL) ನ ಎರಡನೇ ಆವೃತ್ತಿಯನ್ನು ಐಪಿಎಲ್‌ನಂತೆಯೇ ಮಲ್ಟಿ ಸಿಟಿ (ಒಂದಕ್ಕಿಂತ ಹೆಚ್ಚು ನಗರ) ಸ್ವರೂಪದಲ್ಲಿ ಆಯೋಜಿಸುವ ಸಾಧ್ಯತೆಯಿದೆ. ಪಂದ್ಯಗಳನ್ನು ಮುಂಬೈ ಮತ್ತು ಬೆಂಗಳೂರಿನಾದ್ಯಂತ ಆಡಿಸುವ ಕುರಿತು ಬಿಸಿಸಿಐ ಚಿಂತನೆ ನಡೆಸಿದೆ.(AFP)
ಚೊಚ್ಚಲ ಆವೃತ್ತಿಯ ಡಬ್ಲ್ಯೂಪಿಲ್‌ ಪಂದ್ಯಾವಳಿಯನ್ನು ಮುಂಬೈನಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಈ ವರ್ಷದ ಆರಂಭದಲ್ಲಿ ಮಾರ್ಚ್ 4ರಿಂದ 26ರವರೆಗೆ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಬ್ರಬೋರ್ನ್ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ನಡೆಸಲಾಗಿತ್ತು. ಇದೀಗ ಎರಡನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ.
(2 / 9)
ಚೊಚ್ಚಲ ಆವೃತ್ತಿಯ ಡಬ್ಲ್ಯೂಪಿಲ್‌ ಪಂದ್ಯಾವಳಿಯನ್ನು ಮುಂಬೈನಲ್ಲಿ ಯಶಸ್ವಿಯಾಗಿ ನಡೆಸಲಾಗಿತ್ತು. ಈ ವರ್ಷದ ಆರಂಭದಲ್ಲಿ ಮಾರ್ಚ್ 4ರಿಂದ 26ರವರೆಗೆ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಬ್ರಬೋರ್ನ್ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ನಡೆಸಲಾಗಿತ್ತು. ಇದೀಗ ಎರಡನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ.(AFP)
ಸದ್ಯ, ಮುಂಬೈ ಹೊರತಾಗಿ ಬೇರೆ ನಗರಗಳಲ್ಲಿಯೂ ಪಂದ್ಯಾವಳಿಯ ಆಯೋಜನೆಗೆ ಒತ್ತಾಯ ಕೇಳಿಬಂದಿದೆ. ಆದರೆ, ಈ ಕುರಿತು ಇನ್ನೂ ಅಂತಿಮ ನಿರ್ಧಾರ ಪ್ರಕಟವಾಗಿಲ್ಲ.
(3 / 9)
ಸದ್ಯ, ಮುಂಬೈ ಹೊರತಾಗಿ ಬೇರೆ ನಗರಗಳಲ್ಲಿಯೂ ಪಂದ್ಯಾವಳಿಯ ಆಯೋಜನೆಗೆ ಒತ್ತಾಯ ಕೇಳಿಬಂದಿದೆ. ಆದರೆ, ಈ ಕುರಿತು ಇನ್ನೂ ಅಂತಿಮ ನಿರ್ಧಾರ ಪ್ರಕಟವಾಗಿಲ್ಲ.(AFP)
ಡಿಸೆಂಬರ್ 9ರಂದು ಡಬ್ಲ್ಯುಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಅದೇ ದಿನ ಪಂದ್ಯಾವಳಿಯ ಆತಿಥ್ಯ ಸ್ಥಳಗಳನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ.
(4 / 9)
ಡಿಸೆಂಬರ್ 9ರಂದು ಡಬ್ಲ್ಯುಪಿಎಲ್ ಹರಾಜು ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಅದೇ ದಿನ ಪಂದ್ಯಾವಳಿಯ ಆತಿಥ್ಯ ಸ್ಥಳಗಳನ್ನು ಬಹಿರಂಗಪಡಿಸುವ ಸಾಧ್ಯತೆ ಇದೆ.(AFP)
ಪಂದ್ಯಾವಳಿಗೆ ಆತಿಥ್ಯ ವಹಿಸಲು ಮುಂಬೈ ಮತ್ತು ಬೆಂಗಳೂರು ನಗರಗಳು ಮುಂಚೂಣಿಯಲ್ಲಿವೆ. ಹೀಗಾಗಿ ಈ ಎರಡು ನಗರಗಳಲ್ಲಿ ಟೂರ್ನಿ ಆಯೋಜಿಸುವ ಸಾಧ್ಯತೆ ಇದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. 
(5 / 9)
ಪಂದ್ಯಾವಳಿಗೆ ಆತಿಥ್ಯ ವಹಿಸಲು ಮುಂಬೈ ಮತ್ತು ಬೆಂಗಳೂರು ನಗರಗಳು ಮುಂಚೂಣಿಯಲ್ಲಿವೆ. ಹೀಗಾಗಿ ಈ ಎರಡು ನಗರಗಳಲ್ಲಿ ಟೂರ್ನಿ ಆಯೋಜಿಸುವ ಸಾಧ್ಯತೆ ಇದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. (REUTERS)
ಆರಂಭಿಕ ಆವೃತ್ತಿಯ ಡಬ್ಲ್ಯುಪಿಎಲ್‌ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಹೀಗಾಗಿ ಟೂರ್ನಿಯನ್ನು ವಿವಿಧ ನಗರಗಳಿಗೆ ವಿಸ್ತರಿಸಲು ಇದು ಸೂಕ್ತ ಸಮಯ. ಮಹಿಳಾ ಕ್ರಿಕೆಟ್‌ಗೆ ಬೆಂಗಳೂರು ಉತ್ತಮ ಸ್ಥಳ. ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಪಂದ್ಯಕ್ಕೆ ಹಾಜರಾಗುವ ನಿರೀಕ್ಷೆ ಇದೆ. ಮುಂಬೈ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳು ಸಹ ಪಂದ್ಯಗಳನ್ನು ಆಯೋಜಿಸಲು ಸಿದ್ಧರಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. 
(6 / 9)
ಆರಂಭಿಕ ಆವೃತ್ತಿಯ ಡಬ್ಲ್ಯುಪಿಎಲ್‌ಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಹೀಗಾಗಿ ಟೂರ್ನಿಯನ್ನು ವಿವಿಧ ನಗರಗಳಿಗೆ ವಿಸ್ತರಿಸಲು ಇದು ಸೂಕ್ತ ಸಮಯ. ಮಹಿಳಾ ಕ್ರಿಕೆಟ್‌ಗೆ ಬೆಂಗಳೂರು ಉತ್ತಮ ಸ್ಥಳ. ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಪಂದ್ಯಕ್ಕೆ ಹಾಜರಾಗುವ ನಿರೀಕ್ಷೆ ಇದೆ. ಮುಂಬೈ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳು ಸಹ ಪಂದ್ಯಗಳನ್ನು ಆಯೋಜಿಸಲು ಸಿದ್ಧರಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. (Delhi Capitals Twitter)
ಇತ್ತೀಚೆಗಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ಕೂಡ, ವಿವಿಧ ನಗರಗಳಲ್ಲಿ ಪಂದ್ಯಾವಳಿಯನ್ನು ಆಯೋಜಿಸಬೇಕೆಂಬ ಇರಾದೆ ವ್ಯಕ್ತಪಡಿಸಿದ್ದರು. ಅಲ್ಲದೆ ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಪ್ರೇಕ್ಷಕರ ಮುಂದೆ ಪಂದ್ಯಗಳನ್ನಾಡುವ ಬಯಕೆ ಬಗ್ಗೆ ಹೇಳಿಕೊಂಡಿದ್ದರು.
(7 / 9)
ಇತ್ತೀಚೆಗಷ್ಟೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ ಕೂಡ, ವಿವಿಧ ನಗರಗಳಲ್ಲಿ ಪಂದ್ಯಾವಳಿಯನ್ನು ಆಯೋಜಿಸಬೇಕೆಂಬ ಇರಾದೆ ವ್ಯಕ್ತಪಡಿಸಿದ್ದರು. ಅಲ್ಲದೆ ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಪ್ರೇಕ್ಷಕರ ಮುಂದೆ ಪಂದ್ಯಗಳನ್ನಾಡುವ ಬಯಕೆ ಬಗ್ಗೆ ಹೇಳಿಕೊಂಡಿದ್ದರು.(AFP)
ಎರಡನೇ ಆವೃತ್ತಿಯ ಡಬ್ಲ್ಯೂಪಿಎಲ್‌ಗೆ ಆಟಗಾರ್ತಿಯರ ಹರಾಜು ಪ್ರಕ್ರಿಯೆಯು ಡಿಸೆಂಬರ್‌ 9ರ ಶನಿವಾರದಂದು ಮುಂಬೈನಲ್ಲಿ ನಡೆಯಲಿದೆ. ಮಧ್ಯಾಹ್ನ 3ರಿಂದ ಪ್ರಕ್ರಿಯೆ ಆರಂಭವಾಗಲಿದೆ.
(8 / 9)
ಎರಡನೇ ಆವೃತ್ತಿಯ ಡಬ್ಲ್ಯೂಪಿಎಲ್‌ಗೆ ಆಟಗಾರ್ತಿಯರ ಹರಾಜು ಪ್ರಕ್ರಿಯೆಯು ಡಿಸೆಂಬರ್‌ 9ರ ಶನಿವಾರದಂದು ಮುಂಬೈನಲ್ಲಿ ನಡೆಯಲಿದೆ. ಮಧ್ಯಾಹ್ನ 3ರಿಂದ ಪ್ರಕ್ರಿಯೆ ಆರಂಭವಾಗಲಿದೆ.(AP)
ಚೊಚ್ಚಲ ಆವೃತ್ತಿಯ ವಿಮೆನ್ಸ್‌ ಪ್ರೀಮಿಯರ್‌ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್‌ ವನಿತೆಯರ ತಂಡ ಚಾಂಪಿಯನ್‌ ಪಟ್ಟ ಅಲಂಕರಿಸಿತು. ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮಣಿಸಿದ ಹರ್ಮನ್‌ ಪ್ರೀತ್‌ ಕೌರ್‌ ಪಡೆ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
(9 / 9)
ಚೊಚ್ಚಲ ಆವೃತ್ತಿಯ ವಿಮೆನ್ಸ್‌ ಪ್ರೀಮಿಯರ್‌ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್‌ ವನಿತೆಯರ ತಂಡ ಚಾಂಪಿಯನ್‌ ಪಟ್ಟ ಅಲಂಕರಿಸಿತು. ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮಣಿಸಿದ ಹರ್ಮನ್‌ ಪ್ರೀತ್‌ ಕೌರ್‌ ಪಡೆ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿತು.(REUTERS)

    ಹಂಚಿಕೊಳ್ಳಲು ಲೇಖನಗಳು