ದೆಹಲಿಯಲ್ಲಿ ಟಾಸ್ ಗೆದ್ದ ಮುಂಬೈ ಚೇಸಿಂಗ್ ಆಯ್ಕೆ; ತಂಡಕ್ಕೆ ಮರಳಿದ ನಾಯಕಿ ಕೌರ್, ಹೀಗಿದೆ ಆಡುವ ಬಳಗ
Mar 05, 2024 07:13 PM IST
ದೆಹಲಿಯಲ್ಲಿ ಟಾಸ್ ಗೆದ್ದ ಮುಂಬೈ ಚೇಸಿಂಗ್ ಆಯ್ಕೆ
- DCW vs MIW: ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ವನಿತೆಯರ ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದಲ್ಲಿ ಆತಿಥೇಯ ಮೆಗ್ ಲ್ಯಾನಿಂಗ್ ಪಡೆ ಮೊದಲಿಗೆ ಬ್ಯಾಟಿಂಗ್ ಮಾಡುತ್ತಿದೆ.
ಡಬ್ಲ್ಯೂಪಿಎಲ್ 2024ರ (Womens Premier League 2024) ಎರಡನೇ ಹಂತದ ಪಂದ್ಯಗಳು ಆರಂಭವಾಗಿವೆ. ರಾಷ್ಟ್ರ ರಾಜಧಾನಿ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲನೇ ವಿಮೆನ್ಸ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ (Delhi Capitals Women vs Mumbai Indians Women) ವನಿತೆಯರ ತಂಡಗಳು ಮುಖಾಮುಖಿಯಾಗುತ್ತಿವೆ. ದೆಹಲಿಯಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ನಾಯಕಿ ಹರ್ಮನ್‌ಪ್ರೀತ್ ಕೌರ್ ತಂಡವು ಚೇಸಿಂಗ್ ಆಯ್ಕೆ ಮಾಡಿಕೊಂಡಿದೆ.
ಮುಂಬೈ ತಂಡಕ್ಕೆ ಇಂದು ನಾಯಕಿ ಹರ್ಮನ್‌ಪ್ರೀತ್ ಕೌರ್ ಕಂಬ್ಯಾಕ್ ಮಾಡಿದ್ದಾರೆ. ತಂಡದಲ್ಲಿ ಮತ್ತೊಂದು ಬದಲಾವಣೆ ಮಾಡಲಾಗಿದೆ. ವಾಂಗ್ ಬದಲಿಗೆ ಶಬ್ನಮ್ ಇಸ್ಮಾಯಿಲ್ ತಂಡಕ್ಕೆ ಮರಳಿದ್ದಾರೆ. ಅತ್ತ ಡೆಲ್ಲಿ ತಂಡಕ್ಕೆ ಮರಿಜಾನ್ನೆ ಕಪ್ ಮರಳಿದ್ದಾರೆ.
ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು, ಪ್ರಸಕ್ತ ಆವೃತ್ತಿಯ ವಿಮೆನ್ಸ್ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು. ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ಬಳಗದ ವಿರುದ್ಧ ತಂಡ ಸೋತಿತ್ತು.
ಕ್ರಿಕೆಟ್ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಮುಖಾಮುಖಿ ದಾಖಲೆ
ಡಬ್ಲ್ಯೂಪಿಎಲ್ ಮೊದಲ ಆವೃತ್ತಿಯಲ್ಲಿ ಡೆಲ್ಲಿ ವಿರುದ್ಧದ ಮೊದಲ ಪಂದ್ಯದಲ್ಲಿ ಮುಂಬೈ ಗೆದ್ದಿತ್ತು. ಆದರೆ, ಎರಡನೇ ಮುಖಾಮುಖಿಯಲ್ಲಿ ಕ್ಯಾಪಿಟಲ್ಸ್ ಸೇಡು ತೀರಿಸಿಕೊಂಡಿತು. ಉಭಯ ತಂಡಗಳು ಸೀಸನ್ 1ರ ಫೈನಲ್ ಪಂದ್ಯದಲ್ಲಿ ಮತ್ತೆ ಮುಖಾಮುಖಿಯಾದವು. ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗೆದ್ದ ಮುಂಬೈ ಚಾಂಪಿಯನ್ ಪಟ್ಟ ಅಲಂಕರಿಸಿತು. ಪ್ರಸಕ್ತ ಆವೃತ್ತಿಯ ಮೊದಲ ಪಂದ್ಯದಲ್ಲಿಯೂ ಮುಂಬೈ ಗೆದ್ದಿದೆ.
ಅರುಣ್ ಜೇಟ್ಲಿ ಕ್ರೀಡಾಂಗಣದ ಪಿಚ್ ವರದಿ
ದೆಹಲಿಯ ಅರುಣ್ ಜೇಟ್ಲಿ ಮೈದಾನದ ಪಿಚ್ ತುಲನಾತ್ಮಕವಾಗಿ ಬ್ಯಾಟರ್‌ಗಳಿಗೆ ಹೆಚ್ಚು ನೆರವಾಗುವ ನಿರೀಕ್ಷೆ ಇದೆ. ಹೀಗಾಗಿ ಇಲ್ಲಿಯೂ ರನ್ ನಿರೀಕ್ಷಿಸಬಹುದು. ಆದರೆ, ಇಲ್ಲಿ ವೇಗಿಗಳಿಗಿಂತ ಸ್ಪಿನ್ನರ್‌ಗಳು ಮೇಲುಗೈ ಸಾಧಿಸಲಿದ್ದಾರೆ. ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಪರಿಣಾಮಕಾರಿಯಾಗಲಿದ್ದಾರೆ. ಮೊದಲು ಬ್ಯಾಟಿಂಗ್ ಮಾಡುವ ತಂಡಗಳು 160-170 ರನ್ ಕಲೆ ಹಾಕಿದರೆ, ಚೇಸಿಂಗ್ ತುಂಬಾ ಕಠಿಣವಾಗಲಿದೆ. ಸದ್ಯ ಡಬ್ಲ್ಯೂಪಿಎಲ್‌ಗೆ ಈ ಪಿಚ್ ಹೊಸದಾಗಿದ್ದು, ಇಂದು ಉಭಯ ತಂಡಗಳ ಆಟಗಾರರು ಎಚ್ಚರಿಕೆಯ ಆಟವಾಡಲಿದ್ದಾರೆ.
ಮುಂಬೈ ಇಂಡಿಯನ್ಸ್ ಆಡುವ ಬಳಗ
ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಎಸ್ ಸಜನಾ, ಅಮಂಜೋತ್ ಕೌರ್, ಹುಮೈರಾ ಕಾಜಿ, ಸೈಕಾ ಇಶಾಕ್, ಶಬ್ನಿಮ್ ಇಸ್ಮಾಯಿಲ್.
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ
ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸೆ, ಜೆಮಿಮಾ ರೋಡ್ರಿಗಸ್, ಮರಿಜಾನ್ನೆ ಕಾಪ್, ಜೆಸ್ ಜೊನಾಸೆನ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಟಿಟಾಸ್ ಸಾಧು, ರಾಧಾ ಯಾದವ್, ಶಿಖಾ ಪಾಂಡೆ.
ಮಹಿಳಾ ಪ್ರೀಮಿಯರ್ ಲೀಗ್ ಕುರಿತ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
(This copy first appeared in Hindustan Times Kannada website. To read more like this please logon to kannada.hindustantimes.com)